ದಾನಿಯೇಲ 2:9 - ಕನ್ನಡ ಸಮಕಾಲಿಕ ಅನುವಾದ9 ನೀವು ಕನಸನ್ನು ನನಗೆ ಹೇಳದಿದ್ದರೆ, ನಿಮಗೆ ಒಂದೇ ಒಂದು ಶಿಕ್ಷೆಯಿದೆ. ತಪ್ಪು ಮಾರ್ಗಕ್ಕೆ ನಡೆಸುವ ಹಾಗೂ ಕೆಟ್ಟ ಸಂಗತಿಗಳನ್ನು ನನಗೆ ಹೇಳಿ, ಪರಿಸ್ಥಿತಿಯನ್ನು ನೀವು ನನಗೆ ವಿರೋಧವಾಗಿ ಒಪ್ಪಂದ ಮಾಡಿಕೊಂಡಿದ್ದೀರಿ, ಬದಲಾವಣೆಯನ್ನು ನಿರೀಕ್ಷಿಸುವಂತೆ. ಆದ್ದರಿಂದ ಕನಸನ್ನು ನನಗೆ ಹೇಳಲೇಬೇಕು. ಆಗ ಅದನ್ನು ವ್ಯಾಖ್ಯಾನ ಮಾಡಿ, ವಿವರಿಸುವಿರೆಂದು ನಾನು ತಿಳಿಯುವೆನು,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಕಾಲಾಂತರವನ್ನು ನಿರೀಕ್ಷಿಸಿಕೊಂಡೇ ನನ್ನ ಮುಂದೆ ಕೆಟ್ಟ ಸುಳ್ಳುಗಳನ್ನು ಆಡುತ್ತಿರಬೇಕೆಂದು ಒಪ್ಪಂದ ಮಾಡಿಕೊಂಡಿದ್ದೀರಿ; ಅಂತು ಆ ಕನಸನ್ನು ತಿಳಿಸಬೇಕು; ಆದುದರಿಂದ ನೀವು ಅದರ ಅರ್ಥವನ್ನೂ ವಿವರಿಸಬಲ್ಲಿರೆಂದು ತಿಳಿದುಕೊಳ್ಳುವೆನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಕಾಲ ಬದಲಾಗುತ್ತಿರುತ್ತದೆ ಎಂದುಕೊಂಡೇ ನನ್ನ ಮುಂದೆ ಇಲ್ಲಸಲ್ಲದ್ದನ್ನು ಆಡಲು ಒಪ್ಪಂದ ಮಾಡಿಕೊಂಡಿದ್ದೀರಿ. ಅಂತು ಆ ಕನಸನ್ನು ನೀವು ನನಗೆ ತಿಳಿಸಲೇಬೇಕು. ಆಗ ಅದರ ಉದ್ದೇಶವನ್ನು ವಿವರಿಸಬಲ್ಲಿರೆಂದು ನಾನು ತಿಳಿದುಕೊಳ್ಳುವೆನು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಕಾಲಾಂತರವನ್ನು ನಿರೀಕ್ಷಿಸಿಕೊಂಡೇ ನನ್ನ ಮುಂದೆ ಕೆಟ್ಟ ಸುಳ್ಳುಗಳನ್ನು ಆಡುತ್ತಿರಬೇಕೆಂದು ಕಟ್ಟುಮಾಡಿಕೊಂಡಿದ್ದೀರಿ; ಅಂತು ಆ ಕನಸನ್ನು ತಿಳಿಸಬೇಕು; ಅದರಿಂದ ನೀವು ಅದರ ಅಭಿಪ್ರಾಯವನ್ನೂ ವಿವರಿಸಬಲ್ಲಿರೆಂದು ತಿಳಿದುಕೊಳ್ಳುವೆನು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ನೀವು ನನಗೆ ನನ್ನ ಕನಸಿನ ಬಗ್ಗೆ ಹೇಳದಿದ್ದರೆ ನಿಮಗೆ ಶಿಕ್ಷೆಯಾಗುವದೆಂದು ನೀವು ಬಲ್ಲಿರಿ. ನೀವೆಲ್ಲ ನನಗೆ ಸುಳ್ಳು ಹೇಳಬೇಕೆಂದು ನಿರ್ಧರಿಸಿಕೊಂಡಿದ್ದೀರಿ. ನೀವು ಹೆಚ್ಚಿನ ಸಮಯವನ್ನು ಪಡೆಯಲಿಚ್ಛಿಸುತ್ತಿದ್ದೀರಿ. ನಿಮಗೆ ಹೇಳಿದ್ದನ್ನು ನಾನು ಮರೆತುಬಿಡಬಹುದೆಂದು ನೀವು ಭಾವಿಸುತ್ತಿರುವಿರಿ. ಈಗ ನನ್ನ ಕನಸನ್ನು ತಿಳಿಸಿರಿ. ನೀವು ಕನಸನ್ನು ತಿಳಿಸಿದರೆ ಅದರ ನಿಜವಾದ ಅರ್ಥವನ್ನೂ ಹೇಳಬಲ್ಲಿರಿ” ಎಂದು ಅವರಿಗೆ ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿ |
“ಅರಸನು ಹೇಳಿಕಳುಹಿಸದೆ ಅರಸನ ಬಳಿಗೆ ಅರಮನೆಯ ಒಳಾಂಗಣಕ್ಕೆ ಹೋಗುವ ಗಂಡಸರಿಗಾಗಲಿ, ಹೆಂಗಸರಿಗಾಗಲಿ ಮರಣದಂಡನೆಯಾಗುವುದು. ಒಂದು ವೇಳೆ ಒಳಗೆ ಬಂದ ವ್ಯಕ್ತಿಯ ಕಡೆಗೆ ಅರಸನು ತನ್ನ ಸ್ವರ್ಣದಂಡವನ್ನು ಚಾಚಿದರೆ ಅವನಿಗೆ ಮಾತ್ರ ಮರಣದಂಡನೆಯಾಗದೆ ಜೀವದಿಂದ ಉಳಿಯುವರು. ಈ ರಾಜಾಜ್ಞೆಯನ್ನು ಅರಸನ ಸಮಸ್ತ ಸೇವಕರೂ ಅರಸನ ಪ್ರಾಂತಗಳ ಜನರೂ ತಿಳಿದಿದ್ದಾರೆ. ಆದರೆ ಕಳೆದ ಮೂವತ್ತು ದಿನಗಳಿಂದ ಅರಸನ ಬಳಿಗೆ ಹೋಗುವುದಕ್ಕೆ ನನಗೆ ಆಮಂತ್ರಣವೇ ಬರಲಿಲ್ಲ,” ಎಂದು ತಿಳಿಸುವಂತೆ ಹೇಳಿದಳು.