Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 3:14 - ಕನ್ನಡ ಸಮಕಾಲಿಕ ಅನುವಾದ

14 ಆಗ ನೆಬೂಕದ್ನೆಚ್ಚರನು ಮಾತನಾಡಿ ಅವರಿಗೆ, “ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬವರೇ, ನೀವು ಬೇಕೆಂದು ನನ್ನ ದೇವರನ್ನು ಸೇವಿಸದೆ ನಾನು ನಿಲ್ಲಿಸಿರುವ ಬಂಗಾರದ ಪ್ರತಿಮೆಯನ್ನು ಆರಾಧಿಸದೆ ಇದ್ದೀರಿ ಎಂಬ ಮಾತು ನಿಜವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಹಾಗೆ ಅವರನ್ನು ಹಿಡಿದು ತರಲು ನೆಬೂಕದ್ನೆಚ್ಚರನು ಅವರಿಗೆ, “ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರೇ, ನೀವು ನನ್ನ ದೇವರನ್ನು ಸೇವಿಸದೆ, ನಾನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಪೂಜಿಸದೆ ಇರುವುದು ಬೇಕೆಂದೇ ಮಾಡಿದ್ದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅದರಂತೆಯೇ ಅವರನ್ನು ಹಿಡಿದುತರಲಾಯಿತು. ನೆಬೂಕದ್ನೆಚ್ಚರನು ಅವರಿಗೆ, “ಶದ್ರಕ್, ಮೇಶಕ್, ಹಾಗು ಅಬೇದ್‍ನೆಗೋ ಎಂಬವರೇ, ನೀವು ಬೇಕುಬೇಕೆಂದು, ನನ್ನ ದೇವರಿಗೆ ಸೇವೆಮಾಡದೆ, ನಾನು ಸ್ಥಾಪಿಸಿದ ಬಂಗಾರದ ಪ್ರತಿಮೆಯನ್ನು ಆರಾಧಿಸದೆ ಇರುವಿರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಹಾಗೆ ಅವರನ್ನು ಹಿಡತರಲು ನೆಬೂಕದ್ನೆಚ್ಚರನು ಅವರಿಗೆ - ಶದ್ರಕ್ ಮೇಶಕ್ ಅಬೇದ್‍ನೆಗೋ ಎಂಬವರೇ, ನೀವು ನನ್ನ ದೇವರನ್ನು ಸೇವಿಸದೆ ನಾನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಪೂಜಿಸದೆ ಇರುವದು ಬೇಕೆಂದೇ ಮಾಡಿದ್ದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನೆಬೂಕದ್ನೆಚ್ಚರನು ಅವರಿಗೆ, “ಶದ್ರಕ್, ಮೇಶಕ್, ಅಬೆದ್‌ನೆಗೋ, ನೀವು ನನ್ನ ದೇವರುಗಳನ್ನು ಪೂಜಿಸುವುದಿಲ್ಲವಂತೆ, ಇದು ನಿಜವೇ? ನಾನು ನಿಲ್ಲಿಸಿದ ಬಂಗಾರದ ವಿಗ್ರಹವನ್ನು ನೀವು ಅಡ್ಡಬಿದ್ದು ಪೂಜಿಸಲಿಲ್ಲವಂತೆ, ಇದು ನಿಜವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 3:14
5 ತಿಳಿವುಗಳ ಹೋಲಿಕೆ  

“ಜನಾಂಗಗಳಲ್ಲಿ ಪ್ರಚುರಪಡಿಸಿರಿ, ಧ್ವಜವನ್ನೆತ್ತಿ ಪ್ರಕಟಿಸಿರಿ; ಮರೆಮಾಡದೇ ಹೀಗೆ ಸಾರಿರಿ, ‘ಬಾಬಿಲೋನ್ ಶತ್ರುವಶವಾಯಿತು; ಬೇಲ್ ದೇವತೆಗೆ ನಾಚಿಕೆಯಾಯಿತು; ಮೆರೋದಾಕ್ ತುಂಡುತುಂಡಾಗಿ ಮುರಿದು ಹೋದನು. ಅವಳ ವಿಗ್ರಹಗಳಿಗೆ ನಾಚಿಕೆಯಾಯಿತು. ಮತ್ತು ಅವಳ ವಿಗ್ರಹಗಳು ಭಯದಿಂದ ತುಂಬಿವೆ.’


ಅರಸನಾದ ನೆಬೂಕದ್ನೆಚ್ಚರನು ಸುಮಾರು 27 ಮೀಟರ್ ಎತ್ತರ ಮತ್ತು ಸುಮಾರು ಎರಡೂವರೆ ಮೀಟರ್ ಅಗಲ ಇರುವ ಒಂದು ಬಂಗಾರದ ಪ್ರತಿಮೆಯನ್ನು ಮಾಡಿಸಿ, ಬಾಬಿಲೋನ್ ಪ್ರಾಂತದಲ್ಲಿರುವ ದೂರಾ ಎಂಬ ಬಯಲಿನಲ್ಲಿ ನಿಲ್ಲಿಸಿದನು.


ಬೇಲ್ ದೇವತೆಯು ತಗ್ಗಿದೆ, ನೆಬೋ ದೇವತೆಯು ಕುಗ್ಗಿದೆ. ಅವರ ವಿಗ್ರಹಗಳು ಮೃಗಗಳ ಮತ್ತು ಪಶುಗಳ ಮೇಲೆ ಇದ್ದವು. ನೀವು ಹೊರುತ್ತಿದ್ದವುಗಳು ಭಾರವಾದ ಹೊರೆಯಾಗಿದ್ದವು. ಆಯಾಸವುಳ್ಳ ಮೃಗಗಳಿಗೆ ಅವು ಭಾರವಾದವು.


ಕೊನೆಗೆ ದಾನಿಯೇಲನು ನನ್ನ ಬಳಿಗೆ ಬಂದನು. ಅವನು ನನ್ನ ದೇವರ ಹೆಸರು ಸೇರಿರುವ ಬೇಲ್ತೆಶಚ್ಚರ್ ಎಂಬ ಅಡ್ಡಹೆಸರನ್ನು ಹೊಂದಿದ್ದನು. ಪರಿಶುದ್ಧ ದೇವರುಗಳ ಆತ್ಮವು ಅವನಲ್ಲಿತ್ತು. ಅವನಿಗೆ ನನ್ನ ಕನಸನ್ನು ಹೀಗೆ ತಿಳಿಸಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು