Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 3:15 - ಕನ್ನಡ ಸಮಕಾಲಿಕ ಅನುವಾದ

15 ಈಗ ನೀವು ಸಿದ್ಧವಾಗಿದ್ದು ತುತೂರಿ, ಕೊಳಲು, ತಂಬೂರಿ, ವೀಣೆ, ಕಿನ್ನರಿ, ನಾದಸ್ವರ ಎಲ್ಲಾ ವಿಧವಾದ ವಾದ್ಯಗಳ ಶಬ್ದವನ್ನು ಕೇಳುವ ಸಮಯದಲ್ಲಿ ನಾನು ಮಾಡಿಸಿದ ಪ್ರತಿಮೆಯನ್ನು ಆರಾಧಿಸಿದರೆ ಸರಿ, ಆರಾಧಿಸದಿದ್ದರೆ ಅದೇ ಗಳಿಗೆಯಲ್ಲಿ ಉರಿಯುವ ಬೆಂಕಿಯ ಕುಲುಮೆಯ ಮಧ್ಯದಲ್ಲಿ ಹಾಕಲಾಗುವಿರಿ. ನನ್ನ ಕೈಯಿಂದ ನಿಮ್ಮನ್ನು ಬಿಡಿಸುವ ಆ ದೇವರು ಯಾರು?” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 “ಈಗಲಾದರೂ ನೀವು ಸಿದ್ಧವಾಗಿದ್ದು ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಅಡ್ಡಬಿದ್ದು, ನಾನು ನಿಲ್ಲಿಸಿದ ಪ್ರತಿಮೆಯನ್ನು ಪೂಜಿಸಿದರೆ ಸರಿ; ಇಲ್ಲವಾದರೆ ತಕ್ಷಣವೇ ಧಗಧಗನೆ ಉರಿಯುವ ಬೆಂಕಿಯೊಳಗೆ ಹಾಕಲ್ಪಡುವಿರಿ; ನಿಮ್ಮನ್ನು ನನ್ನ ಕೈಯೊಳಗಿಂದ ಬಿಡಿಸಬಲ್ಲ ದೇವರು ಯಾರು?” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಈಗಲಾದರು ನೀವು ಸಿದ್ಧರಾಗಿದ್ದು ತುತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ಓಲಗ ಮುಂತಾದ ಸಕಲ ವಾದ್ಯಗಳ ಧ್ವನಿ ಕೇಳಿದ ಕೂಡಲೆ ಅಡ್ಡಬಿದ್ದು ನಾನು ಸ್ಥಾಪಿಸಿದ ಪ್ರತಿಮೆಯನ್ನು ಆರಾಧಿಸಿದರೆ ಸರಿ, ಇಲ್ಲವಾದರೆ ಈ ಗಳಿಗೆಯಲ್ಲೆ ನಿಮ್ಮನ್ನು ಧಗಧಗನೆ ಉರಿಯುವ ಆವಿಗೆಯೊಳಗೆ ಹಾಕಲಾಗುವುದು. ನಿಮ್ಮನ್ನು ನನ್ನ ಕೈಯಿಂದ ಬಿಡಿಸಬಲ್ಲ ದೇವರು ಯಾರಿದ್ದಾನೆ?” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಈಗಲಾದರೂ ನೀವು ಸಿದ್ಧವಾಗಿದ್ದು ತುತೂರಿ ಕೊಳಲು ಕಿನ್ನರಿ ತಂಬೂರಿ ವೀಣೆ ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಅಡ್ಡಬಿದ್ದು ನಾನು ನಿಲ್ಲಿಸಿದ ಪ್ರತಿಮೆಯನ್ನು ಪೂಜಿಸಿದರೆ ಸರಿ; ಇಲ್ಲವಾದರೆ ತಕ್ಷಣವೇ ಧಗಧಗನೆ ಉರಿಯುವ ಆವಿಗೆಯೊಳಗೆ ಹಾಕಲ್ಪಡುವಿರಿ; ನಿಮ್ಮನ್ನು ನನ್ನ ಕೈಯೊಳಗಿಂದ ಬಿಡಿಸಬಲ್ಲ ದೇವರು ಯಾರು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಈಗಲಾದರೋ ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ನೀವು ಅಡ್ಡಬಿದ್ದು ಚಿನ್ನದ ವಿಗ್ರಹವನ್ನು ಪೂಜಿಸಬೇಕು. ನಾನು ಮಾಡಿಸಿದ ಈ ವಿಗ್ರಹವನ್ನು ಪೂಜಿಸಲು ನೀವು ಸಿದ್ಧರಾಗಿದ್ದರೆ ಸರಿ. ನೀವು ಅದನ್ನು ಪೂಜಿಸದಿದ್ದರೆ ತಕ್ಷಣ ನಿಮ್ಮನ್ನು ಉರಿಯುವ ಕೊಂಡದಲ್ಲಿ ಎಸೆಯಲಾಗುವುದು. ಆಗ ನನ್ನ ಕೈಯಿಂದ ನಿಮ್ಮನ್ನು ಬಿಡಿಸುವುದು ಯಾವ ದೇವರಿಗೂ ಸಾಧ್ಯವಾಗಲಾರದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 3:15
25 ತಿಳಿವುಗಳ ಹೋಲಿಕೆ  

ಪೇತ್ರ ಮತ್ತು ಇತರ ಅಪೊಸ್ತಲರು ಉತ್ತರವಾಗಿ, “ನಾವು ಮನುಷ್ಯರಿಗೆ ವಿಧೇಯರಾಗಿರುವುದಕ್ಕಿಂತ ದೇವರಿಗೆ ವಿಧೇಯರಾಗಿರಬೇಕಲ್ಲ!


ಒಂದು ವೇಳೆ ಹಾಗೆ ಇದ್ದರೆ, ನಿಶ್ಚಯವಾಗಿ ನಾವು ಆರಾಧಿಸುವ ನಮ್ಮ ದೇವರು ಉರಿಯುವ ಬೆಂಕಿಯ ಕುಲುಮೆಯೊಳಗಿಂದ ನಮ್ಮನ್ನು ತಪ್ಪಿಸಲು ಸಮರ್ಥರಾಗಿದ್ದಾರೆ. ಅರಸನೇ, ನಿನ್ನ ಕೈಯಿಂದಲೂ ನಮ್ಮನ್ನು ತಪ್ಪಿಸುವರು.


ಈ ದೇಶಗಳ ಸಮಸ್ತ ದೇವರುಗಳಲ್ಲಿ ಯಾರೂ ತಮ್ಮ ದೇಶವನ್ನು ನನ್ನ ಕೈಯಿಂದ ಬಿಡಿಸಲಾರದ ಮೇಲೆ, ಯೆಹೋವ ದೇವರು ಯೆರೂಸಲೇಮನ್ನು ನನ್ನ ಕೈಗೆ ಸಿಗದಂತೆ ತಪ್ಪಿಸಿ ಕಾಪಾಡುವನೋ?” ಎಂದು ಹೇಳಿದನು.


ಆಗ ಫರೋಹನು, “ನಾನು ಆತನ ಮಾತಿಗೆ ವಿಧೇಯನಾಗಿ ಇಸ್ರಾಯೇಲರನ್ನು ಕಳುಹಿಸಿಬಿಡುವಂತೆ ಆ ಯೆಹೋವ ಯಾರು? ಆ ಯೆಹೋವ ದೇವರನ್ನು ನಾನರಿಯೆನು. ಇಸ್ರಾಯೇಲರನ್ನೂ ಕಳುಹಿಸುವುದಿಲ್ಲ,” ಎಂದನು.


ಆದರೆ ಪೇತ್ರ ಮತ್ತು ಯೋಹಾನರು, “ದೇವರಿಗಿಂತ ಹೆಚ್ಚಾಗಿ ನಿಮಗೆ ಕಿವಿಗೊಡುವುದು ದೇವರ ದೃಷ್ಟಿಯಲ್ಲಿ ಸರಿಯಾದದ್ದೋ? ಎಂಬುದರ ಬಗ್ಗೆ ನೀವೇ ತೀರ್ಮಾನ ಮಾಡಿಕೊಳ್ಳಿರಿ.


ಅವರು ನಿಮ್ಮನ್ನು ಬಂಧಿಸಿ ಒಪ್ಪಿಸುವುದಕ್ಕಾಗಿ ತೆಗೆದುಕೊಂಡು ಹೋಗುವಾಗ ನೀವು ಏನು ಮಾತನಾಡಬೇಕೆಂಬುದನ್ನು ಮುಂಚಿತವಾಗಿಯೇ ಚಿಂತಿಸಬೇಡಿರಿ. ಆ ಗಳಿಗೆಯಲ್ಲಿ ನಿಮ್ಮ ಮನಸ್ಸಿನಲ್ಲಿ ನಿಮಗೆ ಯಾವುದು ಕೊಡಲಾಗುವುದೋ ಅದನ್ನೇ ಮಾತನಾಡಿರಿ. ಏಕೆಂದರೆ ಮಾತನಾಡುವವರು ನೀವಲ್ಲ, ಪವಿತ್ರಾತ್ಮನೇ.


ಆಗ ರಾಜನು ಆಜ್ಞಾಪಿಸಲು, ಅವರು ದಾನಿಯೇಲನನ್ನು ತಂದು ಸಿಂಹದ ಗುಹೆಯಲ್ಲಿ ಹಾಕಿದರು. ಅರಸನು ದಾನಿಯೇಲನಿಗೆ, “ನೀನು ಯಾವಾಗಲೂ ಸೇವಿಸುವ ನಿನ್ನ ದೇವರು ನಿನ್ನನ್ನು ಕಾಪಾಡಲಿ!” ಎಂದು ಹೇಳಿದನು.


ನ್ಯಾಯಸಭೆಯಲ್ಲಿ ಕುಳಿತುಕೊಂಡಿದ್ದವರೆಲ್ಲರೂ ಸ್ತೆಫನನ ಮುಖವನ್ನೇ ದಿಟ್ಟಿಸಿ ನೋಡುತ್ತಿದ್ದರು. ಅವನ ಮುಖವು ದೇವದೂತನ ಮುಖದಂತೆ ಕಾಣಿಸುತ್ತಿತ್ತು.


ಮುಂದಿನ ವರ್ಷ ಇದು ಫಲ ಫಲಿಸಿದರೆ, ಸರಿ! ಇಲ್ಲವಾದರೆ, ನೀನು ಇದನ್ನು ಕಡಿದುಹಾಕು, ಎಂದನು.’ ”


“ಜನರು ನಿಮ್ಮನ್ನು ಸಭಾಮಂದಿರಗಳಿಗೂ ಆಳುವವರ ಮುಂದೆಯೂ ಅಧಿಕಾರಿಗಳ ಮುಂದೆಯೂ ತಂದಾಗ ಹೇಗೆ ಇಲ್ಲವೆ ಯಾವುದನ್ನು ಕುರಿತು ಉತ್ತರಕೊಡಬೇಕೆಂದು, ಇಲ್ಲವೆ ಏನು ಹೇಳಬೇಕೆಂದು ಚಿಂತಿಸಬೇಡಿರಿ,


ಅವನು ಗವಿಯ ಹತ್ತಿರ ಬಂದಾಗ, ದುಃಖದ ಧ್ವನಿಯಲ್ಲಿ ದಾನಿಯೇಲನನ್ನು ಕೂಗಿದನು. ಅರಸನು ಮಾತನಾಡಿ ದಾನಿಯೇಲನಿಗೆ, “ಜೀವಸ್ವರೂಪರಾದ ದೇವರ ಸೇವಕನಾದ ದಾನಿಯೇಲನೇ, ನೀನು ಯಾವಾಗಲೂ ಸೇವಿಸುವ ಆ ನಿನ್ನ ದೇವರು ನಿನ್ನನ್ನು ಸಿಂಹಗಳಿಂದ ಬಿಡಿಸಿ ಕಾಪಾಡಲು ಸಮರ್ಥರಾಗಿದ್ದಾರೆಯೇ?” ಎಂದು ಕೇಳಿದನು.


ನೀನು ಯಾರನ್ನು ನಿಂದಿಸಿ ಯಾರನ್ನು ದೂಷಿಸಿದೆ? ಯಾರಿಗೆ ವಿರೋಧವಾಗಿ ನಿನ್ನ ಧ್ವನಿಯನ್ನು ಎತ್ತಿದ್ದೀ? ನಿನ್ನ ಕಣ್ಣುಗಳು ಗರ್ವದಿಂದ ನೋಡಿದ್ದು ಯಾರನ್ನು? ಇಸ್ರಾಯೇಲಿನ ಪರಿಶುದ್ಧ ದೇವರಿಗೆ ವಿರೋಧವಾಗಿಯಲ್ಲವೇ?


ಆದರೂ ಈಗ ನೀವು ಅವರ ಪಾಪವನ್ನು ಕ್ಷಮಿಸಬೇಕು. ಇಲ್ಲವಾದರೆ ನೀವು ಬರೆದ ಗ್ರಂಥದಿಂದ ನನ್ನ ಹೆಸರನ್ನು ಅಳಿಸಿಬಿಡಿ,” ಎಂದು ಬೇಡಿಕೊಂಡನು.


ಈತನು ದೇವರಲ್ಲಿ ಭರವಸೆ ಇಟ್ಟಿದ್ದಾನೆ. ದೇವರಿಗೆ ಈತನಲ್ಲಿ ಇಷ್ಟವಿದ್ದರೆ, ದೇವರೇ ಈತನನ್ನು ಈಗ ಬಿಡಿಸಲಿ, ಏಕೆಂದರೆ ಈತನು, ‘ನಾನು ದೇವಪುತ್ರನು’ ಎಂದು ಹೇಳಿದ್ದಾನೆ,” ಎಂದರು.


ಆದರೆ ಅವರು ನಿಮ್ಮನ್ನು ಬಂಧಿಸುವಾಗ, ನೀವು ಹೇಗೆ ಇಲ್ಲವೆ ಏನು ಮಾತನಾಡಬೇಕೆಂದು ಯೋಚಿಸಬೇಡಿರಿ. ನೀವು ಏನು ಮಾತನಾಡಬೇಕೆಂಬುದು ಆ ಗಳಿಗೆಯಲ್ಲೇ ನಿಮಗೆ ತಿಳಿಸಲಾಗುವುದು,


ನೀವು ಕನಸನ್ನು ನನಗೆ ಹೇಳದಿದ್ದರೆ, ನಿಮಗೆ ಒಂದೇ ಒಂದು ಶಿಕ್ಷೆಯಿದೆ. ತಪ್ಪು ಮಾರ್ಗಕ್ಕೆ ನಡೆಸುವ ಹಾಗೂ ಕೆಟ್ಟ ಸಂಗತಿಗಳನ್ನು ನನಗೆ ಹೇಳಿ, ಪರಿಸ್ಥಿತಿಯನ್ನು ನೀವು ನನಗೆ ವಿರೋಧವಾಗಿ ಒಪ್ಪಂದ ಮಾಡಿಕೊಂಡಿದ್ದೀರಿ, ಬದಲಾವಣೆಯನ್ನು ನಿರೀಕ್ಷಿಸುವಂತೆ. ಆದ್ದರಿಂದ ಕನಸನ್ನು ನನಗೆ ಹೇಳಲೇಬೇಕು. ಆಗ ಅದನ್ನು ವ್ಯಾಖ್ಯಾನ ಮಾಡಿ, ವಿವರಿಸುವಿರೆಂದು ನಾನು ತಿಳಿಯುವೆನು,” ಎಂದನು.


ಅರಸನು ದಾನಿಯೇಲನಿಗೆ ಉತ್ತರವಾಗಿ, “ನೀನು ಈ ರಹಸ್ಯವನ್ನು ಪ್ರಕಟಮಾಡಲು ಸಮರ್ಥನಾದ್ದರಿಂದ ನಿಶ್ಚಯವಾಗಿ ನಿಮ್ಮ ದೇವರು ದೇವರುಗಳಿಗೆ ದೇವರಾಗಿಯೂ, ಅರಸುಗಳ ಒಡೆಯರಾಗಿಯೂ, ರಹಸ್ಯಗಳನ್ನು ಪ್ರಕಟ ಮಾಡುವವರಾಗಿಯೂ ಇದ್ದಾರೆ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು