Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 3:17 - ಕನ್ನಡ ಸಮಕಾಲಿಕ ಅನುವಾದ

17 ಒಂದು ವೇಳೆ ಹಾಗೆ ಇದ್ದರೆ, ನಿಶ್ಚಯವಾಗಿ ನಾವು ಆರಾಧಿಸುವ ನಮ್ಮ ದೇವರು ಉರಿಯುವ ಬೆಂಕಿಯ ಕುಲುಮೆಯೊಳಗಿಂದ ನಮ್ಮನ್ನು ತಪ್ಪಿಸಲು ಸಮರ್ಥರಾಗಿದ್ದಾರೆ. ಅರಸನೇ, ನಿನ್ನ ಕೈಯಿಂದಲೂ ನಮ್ಮನ್ನು ತಪ್ಪಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ‘ಅರಸನೇ, ನಾವು ಆರಾಧಿಸುವ ದೇವರಿಗೆ ಚಿತ್ತವಿದ್ದರೆ ಆತನು ಧಗಧಗನೆ ಉರಿಯುವ ಬೆಂಕಿಯೊಳಗಿಂದ ನಮ್ಮನ್ನು ಬಿಡಿಸಬಲ್ಲನು; ಹೇಗೂ ನಿನ್ನ ಕೈಯಿಂದ ನಮ್ಮನ್ನು ಬಿಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ನಾವು ಸೇವೆಮಾಡುವ ದೇವರಿಗೆ ಚಿತ್ತವಿದ್ದರೆ ಅವರೇ ಧಗಧಗನೆ ಉರಿಯುವ ಆವಿಗೆಯೊಳಗಿಂದಲೂ ನಮ್ಮನ್ನು ಕಾಪಾಡಬಲ್ಲರು. ಅವರೇ ನಮ್ಮನ್ನು ನಿಮ್ಮ ಕೈಯಿಂದಲೂ ಬಿಡಿಸಬಲ್ಲರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅರಸೇ, ನಾವು ಸೇವಿಸುವ ದೇವರಿಗೆ ಚಿತ್ತವಿದ್ದರೆ ಆತನು ಧಗಧಗನೆ ಉರಿಯುವ ಆವಿಗೆಯೊಳಗಿಂದ, ನಮ್ಮನ್ನು ಬಿಡಿಸಬಲ್ಲನು; ಹೇಗೂ ನಿನ್ನ ಕೈಯಿಂದ ನಮ್ಮನ್ನು ಬಿಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನೀನು ನಮ್ಮನ್ನು ಉರಿಯುವ ಕೊಂಡದಲ್ಲಿ ಎಸೆದರೆ ನಾವು ಆರಾಧಿಸುವ ದೇವರು ನಮ್ಮನ್ನು ರಕ್ಷಿಸಬಲ್ಲನು. ಆತನು ಇಚ್ಛಿಸಿದರೆ ನಮ್ಮನ್ನು ನಿನ್ನ ಕೈಯಿಂದ ಬಿಡಿಸಬಲ್ಲನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 3:17
34 ತಿಳಿವುಗಳ ಹೋಲಿಕೆ  

ಹಾಗಾದರೆ, ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಪರವಾಗಿ ಇದ್ದರೆ ನಮ್ಮನ್ನು ವಿರೋಧಿಸುವವರು ಯಾರು?


ದೇವರಿಂದ ಬರುವ ಯಾವ ತಕ್ಕ ಮಾತು ಎಂದಿಗೂ ಅಸಾಧ್ಯವಾಗಿರುವುದಿಲ್ಲ,” ಎಂದು ಹೇಳಿದನು.


ಇದಲ್ಲದೆ ಯೇಸು ತಮ್ಮ ಮೂಲಕ ದೇವರ ಕಡೆ ಬರುವವರನ್ನು ಪರಿಪೂರ್ಣವಾಗಿ ರಕ್ಷಿಸುವುದಕ್ಕೆ ಶಕ್ತರಾಗಿದ್ದಾರೆ. ಏಕೆಂದರೆ ಅವರಿಗೋಸ್ಕರ ಯೇಸು ವಿಜ್ಞಾಪನೆ ಮಾಡುವುದಕ್ಕಾಗಿ ಯಾವಾಗಲೂ ಬದುಕುವವರಾಗಿದ್ದಾರೆ.


ಅವರಿಗೆ ಭಯಪಡಬೇಡ. ಏಕೆಂದರೆ ನಿನ್ನನ್ನು ತಪ್ಪಿಸುವುದಕ್ಕೆ ನಾನೇ ನಿನ್ನ ಸಂಗಡ ಇದ್ದೇನೆ,” ಎಂದು ಯೆಹೋವ ದೇವರಾದ ನಾನು ಹೇಳುತ್ತೇನೆ.


ಆಗ ಪೌಲನು, “ನೀವೇಕೆ ಅತ್ತು ನನ್ನ ಹೃದಯ ಒಡೆಯುತ್ತೀರಿ? ಬಂಧಿತನಾಗಲಷ್ಟೇ ಅಲ್ಲ, ನಮ್ಮ ಕರ್ತ ಯೇಸುವಿನ ಹೆಸರಿನ ನಿಮಿತ್ತ ಯೆರೂಸಲೇಮಿನಲ್ಲಿ ನಾನು ಸಾಯಲಿಕ್ಕೂ ಸಿದ್ಧನಾಗಿದ್ದೇನೆ,” ಎಂದನು.


ದೇವರು ಆರು ಇಕ್ಕಟ್ಟುಗಳಿಂದ ನಿನ್ನನ್ನು ತಪ್ಪಿಸುವರು; ಹೌದು, ಏಳರಲ್ಲಿಯೂ ಕೇಡು ನಿನ್ನನ್ನು ಮುಟ್ಟದು.


ನಿಜವಾಗಿಯೂ ದೇವರೇ ನನಗೆ ರಕ್ಷಣೆಯು, ನಾನು ಭರವಸವಿಡುವೆನು ಮತ್ತು ಭಯಪಡೆನು. ಕರ್ತರಾದ ಯೆಹೋವ ದೇವರೇ ನನ್ನ ಬಲವೂ ನನ್ನ ಕೀರ್ತನೆಯೂ, ಅವರೇ ನನಗೆ ರಕ್ಷಣೆಯೂ ಆಗಿದ್ದಾರೆ.”


ನಮ್ಮ ದೇವರು ಪರಲೋಕದಲ್ಲಿದ್ದಾರೆ; ಅವರು ಇಚ್ಛಿಸುವುದನ್ನೆಲ್ಲಾ ಮಾಡುತ್ತಾರೆ.


ಆದರೂ ನನ್ನ ಪ್ರಾಣ ನನಗೆ ಅಮೂಲ್ಯವೆಂದು ನಾನು ಎಣಿಸುವುದಿಲ್ಲ. ಕರ್ತ ಯೇಸು ನನಗೆ ಕೊಟ್ಟ, ದೇವರ ಕೃಪೆಯ ಸುವಾರ್ತೆಗೆ ಸಾಕ್ಷಿ ಕೊಡುವ ಸೇವೆಯ ಓಟವನ್ನು ಓಡಿ ಮುಗಿಸುವುದೇ ನನ್ನ ಬಾಳಿನ ಒಂದೇ ಗುರಿಯಾಗಿದೆ.


ಅವರೇ ಉದ್ಧರಿಸುವವರೂ ರಕ್ಷಿಸುವವರೂ ಆಗಿದ್ದು, ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಅದ್ಭುತ ಮಹತ್ತುಗಳನ್ನು ನಡೆಸುತ್ತಾರೆ. ದಾನಿಯೇಲನನ್ನು ಸಿಂಹಗಳ ಸಾಮರ್ಥ್ಯದಿಂದ ಬಿಡಿಸಿದವರೂ ಅವರೇ!”


ದೇವರ ದೃಷ್ಟಿಯಲ್ಲಿ ಭೂನಿವಾಸಿಗಳೆಲ್ಲರೂ ಯಾವ ಮಹತ್ವವಿಲ್ಲದೆ ಶೂನ್ಯರಾಗಿದ್ದಾರೆ. ದೇವರು ಪರಲೋಕದ ಸೈನ್ಯದಲ್ಲಿಯೂ, ಭೂನಿವಾಸಿಗಳಲ್ಲಿಯೂ ತಮ್ಮ ಚಿತ್ತದ ಪ್ರಕಾರವೇ ಮಾಡುತ್ತಾರೆ. ಯಾರೂ ಅವರ ಹಸ್ತವನ್ನು ಹಿಂತೆಗೆಯಲಾರರು. “ನೀವು ಏನು ಮಾಡುತ್ತಿರುವಿರಿ?” ಎಂದು ದೇವರನ್ನು ಯಾರೂ ಕೇಳಲಾರರು.


ಯೆಹೋವ ದೇವರು ನಿನ್ನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಡುವರು; ನಾನು ನಿನ್ನನ್ನು ಹೊಡೆದುಬಿಟ್ಟು, ನಿನ್ನ ತಲೆಯನ್ನು ನಿನ್ನಿಂದ ತೆಗೆದುಹಾಕಿ, ಫಿಲಿಷ್ಟಿಯರ ದಂಡಿನ ಹೆಣಗಳನ್ನು ಈ ದಿನ ಆಕಾಶದ ಪಕ್ಷಿಗಳಿಗೂ ಕಾಡುಮೃಗಗಳಿಗೂ ಆಹಾರವಾಗಿ ಕೊಡುವೆನು. ಈ ದಿನ ಇಸ್ರಾಯೇಲರಲ್ಲಿ ದೇವರು ಇದ್ದಾರೆಂದು ಭೂಲೋಕದವರೆಲ್ಲರೂ ತಿಳಿಯುವರು.


ಇದಲ್ಲದೆ ದಾವೀದನು, “ನನ್ನನ್ನು ಸಿಂಹದ ಕೈಗೂ, ಕರಡಿಯ ಕೈಗೂ ತಪ್ಪಿಸಿಬಿಟ್ಟ ಯೆಹೋವ ದೇವರು, ಈ ಫಿಲಿಷ್ಟಿಯನ ಕೈಗೂ ನನ್ನನ್ನು ತಪ್ಪಿಸಿಬಿಡುವರು,” ಎಂದನು. ಆಗ ಸೌಲನು ದಾವೀದನಿಗೆ, “ನೀನು ಹೋಗು, ಯೆಹೋವ ದೇವರು ನಿನ್ನ ಸಂಗಡ ಇರಲಿ,” ಎಂದನು.


ಯೆಹೋವ ದೇವರಿಗೆ ಅಸಾಧ್ಯವಾದದ್ದು ಯಾವುದಾದರೂ ಇದೆಯೋ? ಬರುವ ವರ್ಷ ಇದೇ ಸಮಯದಲ್ಲಿ ನಾನು ತಿರುಗಿ ನಿನ್ನ ಬಳಿಗೆ ಬರುವೆನು. ಆಗ ಸಾರಳಿಗೆ ಒಬ್ಬ ಮಗನಿರುವನು,” ಎಂದರು.


ನೀನು ನೀತಿಯಲ್ಲಿ ನೆಲೆಗೊಂಡಿರುವೆ. ಬಾಧೆಯಿಂದ ದೂರವಾಗಿರುವೆ. ನೀನು ಭೀತಿಯಿಂದ ಭಯಪಡುವುದಿಲ್ಲ, ಏಕೆಂದರೆ ಅದು ನಿನ್ನ ಸಮೀಪಕ್ಕೆ ಬಾರದು.


ಆದರೆ ದೇವರು ಸುಮ್ಮನಿದ್ದರೆ ಅವರ ಮೇಲೆ, ತಪ್ಪುಹೊರಿಸುವವರು ಯಾರು? ದೇವರು ತಮ್ಮ ಮುಖವನ್ನು ವ್ಯಕ್ತಿಗಾಗಲಿ, ದೇಶಕ್ಕಾಗಲಿ ಮರೆಮಾಡಿದರೆ, ದೇವದರ್ಶನ ಪಡೆಯಬಲ್ಲವರು ಯಾರು?


ಅವರು ನಿದ್ದೆಯಿಂದ ಎಚ್ಚರಗೊಂಡ ಕನಸಿನಂತೆ ಇರುತ್ತಾರೆ. ಯೆಹೋವ ದೇವರೇ, ನಿಮ್ಮ ದೃಷ್ಟಿಯಲ್ಲಿ ಅವರು ಅಲ್ಪರಾಗಿರಲಿ.


ಅಬ್ರಾಮನು ತೊಂಬತ್ತೊಂಬತ್ತು ವರ್ಷದವನಾದಾಗ, ಯೆಹೋವ ದೇವರು ಅಬ್ರಾಮನಿಗೆ ಕಾಣಿಸಿಕೊಂಡು, “ನಾನೇ ಸರ್ವಶಕ್ತ ದೇವರು. ನೀನು ನನ್ನ ಸನ್ನಿಧಿಯಲ್ಲಿಯೇ ನಡೆಯುತ್ತಾ ದೋಷವಿಲ್ಲದವನಾಗಿರು.


ನಾವು ಭರವಸೆಯಿಟ್ಟ ದೇವರು ಅಂಥಾ ಮರಣಕರ ಅಪಾಯದಿಂದ ನಮ್ಮನ್ನು ತಪ್ಪಿಸಿದ್ದಾರೆ ಮತ್ತು ಮುಂದೆಯೂ ಅಪಾಯಗಳಿಂದ ನಮ್ಮನ್ನು ಪಾರುಮಾಡುವರು.


ಯೆಹೋವ ದೇವರು ಅವರಿಗೆ ಸಹಾಯಮಾಡಿ ಅವರನ್ನು ಬಿಡಿಸುವರು. ದುಷ್ಟರಿಂದ ಅವರನ್ನು ತಪ್ಪಿಸಿ ಬಿಡಿಸುವರು. ಏಕೆಂದರೆ ಅವರು ದೇವರಲ್ಲಿ ಆಶ್ರಯ ಪಡೆದಿದ್ದಾರೆ.


ಇದಲ್ಲದೆ ನಾನು ನಿನ್ನನ್ನು ಈ ಜನಕ್ಕೆ ಬಲವಾದ ಕಂಚಿನ ಗೋಡೆಯಾಗಿ ಮಾಡುತ್ತೇನೆ. ನಿನಗೆ ವಿರೋಧವಾಗಿ ಯುದ್ಧಮಾಡುವರು. ಆದರೆ ನಿನ್ನನ್ನು ಜಯಿಸಲಾರರು. ಏಕೆಂದರೆ ನಾನೇ ನಿನ್ನನ್ನು ರಕ್ಷಿಸುವುದಕ್ಕೂ, ನಿನ್ನನ್ನು ತಪ್ಪಿಸುವುದಕ್ಕೂ ನಿನ್ನ ಸಂಗಡ ಇದ್ದೇನೆ, ಎಂದು ಯೆಹೋವ ದೇವರು ಹೇಳುತ್ತಾರೆ.


“ಕೆಟ್ಟವರ ಕೈಯೊಳಗಿಂದ ನಿನ್ನನ್ನು ತಪ್ಪಿಸುತ್ತೇನೆ, ದುಷ್ಟರ ಕೈಯೊಳಗಿಂದ ನಿನ್ನನ್ನು ವಿಮೋಚಿಸುತ್ತೇನೆ.”


ಆಗ ನೆಬೂಕದ್ನೆಚ್ಚರನು ಧಗಧಗನೆ ಉರಿಯುತ್ತಿರುವ ಬೆಂಕಿಯ ಕುಲುಮೆಯ ಬಾಯಿಯ ಸಮೀಪಕ್ಕೆ ಬಂದು, “ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬವರೇ, ಮಹೋನ್ನತ ದೇವರ ಸೇವಕರೇ, ಹೊರಗೆ ಬನ್ನಿರಿ,” ಎಂದನು. ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬವರು ಬೆಂಕಿಯೊಳಗಿಂದ ಹೊರಗೆ ಬಂದರು.


ಆಗ ರಾಜನು ಆಜ್ಞಾಪಿಸಲು, ಅವರು ದಾನಿಯೇಲನನ್ನು ತಂದು ಸಿಂಹದ ಗುಹೆಯಲ್ಲಿ ಹಾಕಿದರು. ಅರಸನು ದಾನಿಯೇಲನಿಗೆ, “ನೀನು ಯಾವಾಗಲೂ ಸೇವಿಸುವ ನಿನ್ನ ದೇವರು ನಿನ್ನನ್ನು ಕಾಪಾಡಲಿ!” ಎಂದು ಹೇಳಿದನು.


ಆಗ ಅರಸನು ಅವನ ವಿಷಯದಲ್ಲಿ ಬಹಳ ಸಂತೋಷಪಟ್ಟು, ದಾನಿಯೇಲನನ್ನು ಗುಹೆಯೊಳಗಿಂದ ಮೇಲಕ್ಕೆತ್ತಬೇಕೆಂದು ಆಜ್ಞೆಮಾಡಿದನು. ದಾನಿಯೇಲನನ್ನು ಗುಹೆಯೊಳಗಿಂದ ಮೇಲಕ್ಕೆತ್ತಿದರು. ಅವನು ತನ್ನ ದೇವರಲ್ಲಿ ಅವನು ದೃಢವಾದ ಭರವಸೆ ಇಟ್ಟಿದ್ದರಿಂದ ಯಾವ ಹಾನಿಯೂ ಆಗಿರಲಿಲ್ಲ.


ಆದರೆ ನಾನು ಯೆಹೋವ ದೇವರನ್ನು ಎದುರು ನೋಡುವೆನು. ನನ್ನ ರಕ್ಷಣೆಯ ದೇವರಿಗೋಸ್ಕರ ಕಾದುಕೊಳ್ಳುವೆನು. ನನ್ನ ದೇವರು ನನ್ನ ಕಡೆಗೆ ಕಿವಿಗೊಡುವರು.


ನೀತಿವಂತರ ರಕ್ಷಣೆಯು ಯೆಹೋವ ದೇವರಿಂದಲೇ; ಇಕ್ಕಟ್ಟಿನ ಕಾಲದಲ್ಲಿ ದೇವರೇ ಅವರ ಕೋಟೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು