ದಾನಿಯೇಲ 3:19 - ಕನ್ನಡ ಸಮಕಾಲಿಕ ಅನುವಾದ19 ಆಗ ನೆಬೂಕದ್ನೆಚ್ಚರನು ಉಗ್ರದಿಂದ ತುಂಬಿದವನಾಗಿ, ಅವನ ಮುಖಭಾವವು ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬವರಿಗೆ ವಿರೋಧವಾಗಿ ಬೇರೆಯಾಯಿತು. ಆಗ ಅವನು ಆ ಕುಲುಮೆಯನ್ನು ಸಾಧಾರಣವಾದ ಉರಿಗಿಂತ ಏಳರಷ್ಟು ಹೆಚ್ಚಾಗಿ ಉರಿ ಹಾಕಬೇಕೆಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಆಗ ನೆಬೂಕದ್ನೆಚ್ಚರನು ಕೋಪೋದ್ರೇಕದಿಂದ ಮುಖಭಾವವನ್ನು ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರ ಕಡೆಗೆ ತಿರುಗಿಸಿಕೊಂಡು ಬೆಂಕಿಯನ್ನು ನಿತ್ಯಕ್ಕಿಂತ ಏಳರಷ್ಟು ಹೆಚ್ಚಾಗಿ ಉರಿಸಬೇಕು ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಆಗ ನೆಬೂಕದ್ನೆಚ್ಚರನು ಕೋಪೋದ್ರೇಕಗೊಂಡನು. ಶದ್ರಕ್, ಮೇಶಕ್ ಮತ್ತು ಅಬೇದ್‍ನೆಗೋ ಅವರ ಬಗ್ಗೆ ಅವನ ಮುಖಚರ್ಯೆ ಬದಲಾಯಿತು. ಆವಿಗೆಯನ್ನು ವಾಡಿಕೆಗಿಂತ ಏಳರಷ್ಟು ಹೆಚ್ಚಾಗಿ ಉರಿಸಬೇಕೆಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಆಗ ನೆಬೂಕದ್ನೆಚ್ಚರನು ಕೋಪೋದ್ರೇಕದಿಂದ ಮುಖಭಾವವನ್ನು ಶದ್ರಕ್ ಮೇಶಕ್ ಅಬೇದ್‍ನೆಗೋ ಎಂಬವರ ಕಡೆಗೆ ಬೇರೆಮಾಡಿಕೊಂಡು ಆವಿಗೆಯನ್ನು ನಿತ್ಯಕ್ಕಿಂತ ಏಳರಷ್ಟು ಹೆಚ್ಚಾಗಿ ಉರಿಸಬೇಕೆಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಆಗ ನೆಬೂಕದ್ನೆಚ್ಚರನಿಗೆ ಬಹಳ ಕೋಪ ಬಂತು. ಶದ್ರಕ್, ಮೇಶಕ್, ಅಬೇದ್‌ನೆಗೋ ಅವರ ವಿರುದ್ಧವಾಗಿ ಅವನ ಮುಖಭಾವವು ಕೆರಳಿತು. ಕುಲುಮೆಯನ್ನು ಏಳರಷ್ಟು ಹೆಚ್ಚಾಗಿ ಉರಿಸಬೇಕೆಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿ |