Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 3:21 - ಕನ್ನಡ ಸಮಕಾಲಿಕ ಅನುವಾದ

21 ಆಗ ಆ ಮನುಷ್ಯರು ತಮ್ಮ ಶಲ್ಯ, ಇಜಾರು, ಮುಂಡಾಸ ಮುಂತಾದ ವಸ್ತ್ರಗಳನ್ನು ಧರಿಸಿಕೊಂಡವರಾಗಿರುವಾಗ, ಧಗಧಗನೆ ಉರಿಯುವ ಬೆಂಕಿಯ ಕುಲುಮೆಯಲ್ಲಿ ಅವರನ್ನು ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅದರಂತೆ ಶಲ್ಯ, ಇಜಾರು, ಮುಂಡಾಸ ಮೊದಲಾದ ಉಡುಪನ್ನು ಧರಿಸಿಕೊಂಡಿದ್ದ ಹಾಗೆಯೇ ಅವರನ್ನು ಕಟ್ಟಿ ಧಗಧಗನೆ ಉರಿಯುವ ಬೆಂಕಿಯೊಳಗೆ ಹಾಕಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಅದರಂತೆಯೇ ಉಡಿಗೆತೊಡಿಗೆ, ಪೇಟ ಮುಂತಾದ ಬಟ್ಟೆಬರೆಗಳನ್ನು ಧರಿಸಿಕೊಂಡಿದ್ದ ಹಾಗೆಯೇ ಅವರನ್ನು ಕಟ್ಟಿ ಧಗಧಗನೆ ಉರಿಯುವ ಆವಿಗೆಯೊಳಗೆ ಹಾಕಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅದರಂತೆ ಶಲ್ಯ ಇಜಾರು ಮುಂಡಾಸ ಮೊದಲಾದ ಉಡುಪನ್ನು ಧರಿಸಿಕೊಂಡಿದ್ದ ಹಾಗೆಯೇ ಅವರನ್ನು ಕಟ್ಟಿ ಧಗಧಗನೆ ಉರಿಯುವ ಆವಿಗೆಯೊಳಗೆ ಹಾಕಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಅವರು ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬವರನ್ನು ಚೆನ್ನಾಗಿ ಬಿಗಿದುಕಟ್ಟಿ ಉರಿಯುವ ಕೊಂಡದಲ್ಲಿ ಎಸೆದರು. ಅವರು ತಮ್ಮ ಶಲ್ಯ, ಇಜಾರು, ಟೊಪ್ಪಿಗೆ ಮೊದಲಾದ ಉಡುಪನ್ನು ಧರಿಸಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 3:21
6 ತಿಳಿವುಗಳ ಹೋಲಿಕೆ  

ಬಾಬಿಲೋನಿನಲ್ಲಿರುವ ಯೆಹೂದದ ಸೆರೆಯವರೆಲ್ಲರು ಅವರಿಂದ ಶಾಪವನ್ನು ತೆಗೆದುಕೊಂಡು, ‘ಬಾಬಿಲೋನಿನ ಅರಸನು ಬೆಂಕಿಯಲ್ಲಿ ಸುಟ್ಟುಬಿಟ್ಟ ಚಿದ್ಕೀಯನ ಹಾಗೆಯೂ, ಅಹಾಬನ ಹಾಗೆಯೂ ಯೆಹೋವ ದೇವರು ನಿನಗೆ ಮಾಡಲಿ,’ ಎಂದು ಹೇಳುವರು.


ಇದಲ್ಲದೆ ತನ್ನ ಸೈನ್ಯದಲ್ಲಿರುವ ಅತ್ಯಂತ ಬಲಿಷ್ಠರಾದವರಿಗೆ ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬವರನ್ನು ಕಟ್ಟಿ, ಉರಿಯುವ ಬೆಂಕಿಯ ಕುಲುಮೆಯಲ್ಲಿ ಹಾಕಬೇಕೆಂದು ಆಜ್ಞಾಪಿಸಿದನು.


ಆಗ ಉಪರಾಜರು, ರಾಜ್ಯಪಾಲರು, ಅಧಿಪತಿಗಳು, ಅರಸನ ಆಲೋಚನಾಗಾರರು, ಎಲ್ಲರೂ ಒಟ್ಟುಗೂಡಿ ಅವರನ್ನು ಸುತ್ತುವರಿದು, ಅವರ ಶರೀರದ ಮೇಲೆ ಬೆಂಕಿಯಿಂದ ಯಾವ ಅಪಾಯವಾಗಿರದೇ ಇರುವುದನ್ನೂ, ಅವರ ತಲೆಗೂದಲುಗಳಲ್ಲಿ ಒಂದಾದರೂ ಸುಡದಿರುವುದನ್ನೂ, ಅವರ ಅಂಗಿಗಳು ನಾಶವಾಗದಿರುವುದನ್ನೂ, ಬೆಂಕಿಯ ವಾಸನೆಯೂ ಸಹ ಅವರನ್ನು ಮುಟ್ಟದಿರುವುದನ್ನೂ ಕಂಡರು.


ಆಗ ಯೋಸೇಫನ ಯಜಮಾನನು ಅವನನ್ನು ಹಿಡಿದುಕೊಂಡು, ರಾಜನ ಕೈದಿಗಳನ್ನಿಡುವ ಸೆರೆಮನೆಯಲ್ಲಿ ಹಾಕಿದನು. ಯೋಸೇಫನು ಆ ಸೆರೆಮನೆಯಲ್ಲಿದ್ದನು.


ಯಾರು ಅಡ್ಡಬೀಳದೆ, ನಮಸ್ಕರಿಸದೆ ಇರುವರೋ ಅಂಥವರನ್ನು ಅದೇ ಗಳಿಗೆಯಲ್ಲಿ ಉರಿಯುವ ಬೆಂಕಿಯ ಕುಲುಮೆಯಲ್ಲಿ ಹಾಕಲಾಗುವುದು. ಇದು ರಾಜಾಜ್ಞೆ,” ಎಂದನು.


ದೂತರು ಅವರನ್ನು ಅಗ್ನಿಕುಂಡದಲ್ಲಿ ಹಾಕುವರು. ಅಲ್ಲಿ ಗೋಳಾಟವೂ ಹಲ್ಲು ಕಡಿಯುವಿಕೆಯೂ ಇರುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು