ದಾನಿಯೇಲ 3:29 - ಕನ್ನಡ ಸಮಕಾಲಿಕ ಅನುವಾದ29 ಆದ್ದರಿಂದ ಸಕಲ ಪ್ರಜೆ, ಜನಾಂಗ, ಭಾಷೆಗಳಲ್ಲಿ ಯಾರು ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬುವರ ದೇವರಿಗೆ ವಿರೋಧವಾಗಿ ದೂಷಣೆ ಮಾಡುವರೋ, ಅವರನ್ನು ತುಂಡುತುಂಡಾಗಿ ಮಾಡಿರಿ, ಅವರ ಮನೆಗಳು ತಿಪ್ಪೆ ಗುಂಡಿಗಳಾಗಿ ಮಾಡಿರಿ, ಎಂದು ನಾನು ರಾಜಾಜ್ಞೆಯನ್ನು ವಿಧಿಸುತ್ತೇನೆ. ಏಕೆಂದರೆ ಈ ವಿಧವಾಗಿ ರಕ್ಷಿಸುವ ದೇವರು ಇನ್ಯಾರೂ ಇರುವುದಿಲ್ಲ,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಸಕಲ ಜನಾಂಗ, ಕುಲ, ಭಾಷೆಗಳವರಲ್ಲಿ ಯಾರಾದರೂ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರ ದೇವರ ವಿಷಯದಲ್ಲಿ ಅಲ್ಲ ಸಲ್ಲದ ಮಾತುಗಳನ್ನಾಡಿದರೆ ಅವರನ್ನು ತುಂಡುತುಂಡಾಗಿ ಕತ್ತರಿಸಿ, ಅವರ ಮನೆಗಳನ್ನು ತಿಪ್ಪೆಯನ್ನಾಗಿ ಮಾಡಬೇಕೆಂಬ ಆಜ್ಞೆಯನ್ನು ವಿಧಿಸುತ್ತೇನೆ; ಹೀಗೆ ಉದ್ಧರಿಸಲು ಸಮರ್ಥನಾದ ಇನ್ಯಾವ ದೇವರೂ ಇಲ್ಲವಲ್ಲಾ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಸಕಲ ದೇಶ-ಕುಲ-ಭಾಷೆಗಳವರಲ್ಲಿ ಯಾರಾದರು ಶದ್ರಕ್, ಮೇಶಕ್ ಹಾಗು ಅಬೇದ್‍ನೆಗೋ ಎಂಬುವರ ದೇವರ ವಿಷಯದಲ್ಲಿ ಅಲ್ಲಸಲ್ಲದ ಮಾತನಾಡಿದರೆ ಅಂಥವರನ್ನು ತುಂಡುತುಂಡಾಗಿ ಕತ್ತರಿಸಿ ಅವರ ಮನೆಗಳನ್ನು ತಿಪ್ಪೆಗುಂಡಿಯನ್ನಾಗಿಸಬೇಕೆಂದು ಆಜ್ಞೆ ವಿಧಿಸುತ್ತೇನೆ. ಹೀಗೆ ರಕ್ಷಿಸಲು ಸಮರ್ಥನಾದ ಇನ್ನಾವ ದೇವರೂ ಇಲ್ಲವೇ ಇಲ್ಲ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಸಕಲ ಜನಾಂಗಕುಲಭಾಷೆಗಳವರಲ್ಲಿ ಯಾರಾದರೂ ಶದ್ರಕ್ ಮೇಶಕ್ ಅಬೇದ್‍ನೆಗೋ ಎಂಬವರ ದೇವರ ವಿಷಯದಲ್ಲಿ ಅಲ್ಲದ ಮಾತನ್ನಾಡಿದರೆ ಅವರನ್ನು ಚೂರುಚೂರಾಗಿ ಕತ್ತರಿಸಿ ಅವರ ಮನೆಗಳನ್ನು ತಿಪ್ಪೆಯನ್ನಾಗಿ ಮಾಡಬೇಕೆಂಬ ಆಜ್ಞೆಯನ್ನು ವಿಧಿಸುತ್ತೇನೆ; ಹೀಗೆ ಉದ್ಧರಿಸಲು ಸಮರ್ಥನಾದ ಇನ್ನಾವ ದೇವರೂ ಇಲ್ಲವಲ್ಲಾ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ನಾನು ಈಗ ಸಕಲ ಜನಾಂಗ, ಕುಲ, ಭಾಷೆಗಳ ಜನರಲ್ಲಿ ಯಾರಾದರೂ ಶದ್ರಕ್, ಮೇಶಕ್, ಅಬೇದ್‌ನೆಗೋ ಇವರ ದೇವರ ವಿರುದ್ಧವಾಗಿ ಮಾತನಾಡಿದರೆ ಅವರನ್ನು ತುಂಡುತುಂಡಾಗಿ ಕತ್ತರಿಸಿ ಅವರ ಮನೆಗಳನ್ನು ತಿಪ್ಪೆಯನ್ನಾಗಿ ಮಾಡಬೇಕೆಂಬ ಆಜ್ಞೆಯನ್ನು ವಿಧಿಸುತ್ತೇನೆ. ಬೇರೆ ಯಾವ ದೇವರೂ ತನ್ನ ಭಕ್ತರನ್ನು ಈ ರೀತಿ ರಕ್ಷಿಸಲಾರನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |