ದಾನಿಯೇಲ 3:30 - ಕನ್ನಡ ಸಮಕಾಲಿಕ ಅನುವಾದ30 ಆಗ ಅರಸನು ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವರನ್ನು ಬಾಬಿಲೋನ್ ಪ್ರಾಂತದಲ್ಲಿ ಉನ್ನತ ಪದವಿಗೆ ತಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಬಳಿಕ ರಾಜನು ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರನ್ನು ಬಾಬೆಲ್ ಸಂಸ್ಥಾನದಲ್ಲಿ ಉನ್ನತ ಪದವಿ ನೀಡಿ ಗೌರವಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಇದಾದ ಬಳಿಕ ರಾಜನು ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವರನ್ನು ಸಂಸ್ಥಾನದಲ್ಲಿ ಉನ್ನತಪದವಿಗೆ ಏರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಬಳಿಕ ರಾಜನು ಶದ್ರಕ್ ಮೇಶಕ್ ಅಬೇದ್‍ನೆಗೋ ಎಂಬವರನ್ನು ಬಾಬೆಲ್ ಸಂಸ್ಥಾನದಲ್ಲಿ ಉನ್ನತಪದವಿಗೆ ತಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಬಳಿಕ ರಾಜನು ಶದ್ರಕ್, ಮೇಶಕ್ ಮತ್ತು ಅಬೇದ್‌ನೆಗೋ ಈ ಮೂವರಿಗೆ ಬಾಬಿಲೋನ್ ಸಂಸ್ಥಾನದಲ್ಲಿ ಹೆಚ್ಚು ಮಹತ್ವದ ಪದವಿಗಳನ್ನು ಕೊಟ್ಟನು. ಅಧ್ಯಾಯವನ್ನು ನೋಡಿ |
“ಆದ್ದರಿಂದ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ, ‘ನಿನ್ನ ಮನೆಯವರೂ ನಿನ್ನ ತಂದೆಯ ಮನೆಯವರೂ ಎಂದೆಂದಿಗೂ ನನ್ನ ಸನ್ನಿಧಿಯಲ್ಲಿ ನಡೆದುಕೊಳ್ಳುವರೆಂದು ನಾನು ನಿಜವಾಗಿ ಹೇಳಿದ್ದೆನು. ಆದರೆ ಈಗ ಯೆಹೋವ ದೇವರು ಹೇಳುವುದೇನೆಂದರೆ: ನನಗೆ ಅದು ದೂರವಾಗಿರಲಿ. ಏಕೆಂದರೆ ನನ್ನನ್ನು ಸನ್ಮಾನಿಸುವವರನ್ನು ನಾನು ಸನ್ಮಾನಿಸುವೆನು. ನನ್ನನ್ನು ತಿರಸ್ಕರಿಸುವವರನ್ನು ನಾನು ತಿರಸ್ಕರಿಸುವೆನು.