ದಾನಿಯೇಲ 4:1 - ಕನ್ನಡ ಸಮಕಾಲಿಕ ಅನುವಾದ1 ಅರಸನಾದ ನೆಬೂಕದ್ನೆಚ್ಚರನು, ಭೂಲೋಕದಲ್ಲೆಲ್ಲಾ ವಾಸಮಾಡುವ ಎಲ್ಲಾ ಪ್ರಜೆಗಳಿಗೂ, ಜನಾಂಗಗಳಿಗೂ, ಭಾಷೆಯವರಿಗೂ, ನಿಮಗೆ ಶಾಂತಿಯು ಹೆಚ್ಚಾಗಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಲೋಕದಲ್ಲೆಲ್ಲಾ ವಾಸಿಸುವ ಸಕಲ ಜನಾಂಗ, ಕುಲ ಭಾಷೆಗಳವರಿಗೆ ರಾಜನಾದ ನೆಬೂಕದ್ನೆಚ್ಚರನ ಪ್ರಕಟನೆ, “ನಿಮಗೆ ಸುಖವು ಹೆಚ್ಚೆಚ್ಚಾಗಲಿ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಜಗದಲ್ಲಿ ವಾಸಿಸುವ ಎಲ್ಲಾ ಜನಾಂಗದವರಿಗೂ ಕುಲದವರಿಗೂ ಭಾಷೆಯವರಿಗೂ ರಾಜ ನೆಬೂಕದ್ನೆಚ್ಚರನು ಹೊರಡಿಸಿದ ಪ್ರಕಟಣೆ - “ನಿಮಗೆ ಹೆಚ್ಚೆಚ್ಚು ಸುಖಶಾಂತಿ ಲಭಿಸಲಿ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಲೋಕದಲ್ಲೆಲ್ಲಾ ವಾಸಿಸುವ ಸಕಲ ಜನಾಂಗಕುಲಭಾಷೆಗಳವರಿಗೆ ರಾಜನಾದ ನೆಬೂಕದ್ನೆಚ್ಚರನ ಪ್ರಕಟನೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಲೋಕದಲ್ಲೆಲ್ಲ ವಾಸಿಸುವ ಸಕಲ ಜನಾಂಗ, ಕುಲ, ಭಾಷೆಗಳ ಜನರಿಗೆ ಅರಸನಾದ ನೆಬೂಕದ್ನೆಚ್ಚರನು ಈ ಪತ್ರವನ್ನು ಕಳುಹಿಸಿದನು. ಶುಭಾಶಯಗಳು, ಅಧ್ಯಾಯವನ್ನು ನೋಡಿ |
ಆಗ ಮೂರನೆಯ ತಿಂಗಳಾದ ಸಿವಾನ್ ಎಂಬ ಮಾಸದ ಇಪ್ಪತ್ತಮೂರನೆಯ ದಿನದಲ್ಲಿ ಅರಸನ ಲೇಖಕರನ್ನು ಕರೆಯಲಾಯಿತು. ಮೊರ್ದೆಕೈ ಆಜ್ಞಾಪಿಸಿದ ಎಲ್ಲಾದರ ಪ್ರಕಾರ, ಸಕಲ ಯೆಹೂದ್ಯರಿಗೂ ಹಿಂದೂ ದೇಶ ಮೊದಲುಗೊಂಡು ಇಥಿಯೋಪಿಯ ದೇಶದವರೆಗೂ ಇರುವ ನೂರ ಇಪ್ಪತ್ತೇಳು ಪ್ರಾಂತಗಳ ಉಪರಾಜರಿಗೂ, ದೇಶಾಧಿಪತಿಗಳಿಗೂ, ಅಧಿಕಾರಿಗಳಿಗೂ, ಅವರವರ ಪ್ರಾಂತದ ಲಿಪಿಯಲ್ಲಿಯೂ, ಅವರವರ ಭಾಷೆಯಲ್ಲಿಯೂ ಪತ್ರಗಳನ್ನು ಬರೆಯಲಾಯಿತು.
ಮೊದಲನೆಯ ತಿಂಗಳ ಹದಿಮೂರನೆಯ ದಿವಸದಲ್ಲಿ ಅರಸನ ಲೇಖಕರನ್ನು ಕರೆಸಲಾಯಿತು. ಹಾಮಾನನು ಆಜ್ಞಾಪಿಸಿದ್ದೆಲ್ಲದರ ಪ್ರಕಾರ ಪ್ರತಿ ಪ್ರಾಂತದ ಮೇಲಿರುವ ಅರಸನ ಕೈ ಕೆಳಗಿನ ಉಪ ರಾಜರುಗಳಿಗೂ ಅಧಿಪತಿಗಳಿಗೂ ಪ್ರತಿ ಪ್ರಾಂತದಲ್ಲಿ ಜನರ ಮೇಲಿರುವ ಅಧಿಕಾರಿಗೂ ಅವರವರ ಸ್ವದೇಶಿ ಲಿಪಿಗಳಲ್ಲಿಯೂ, ಭಾಷೆಗಳಲ್ಲಿಯೂ ಪತ್ರಗಳನ್ನು ಬರೆದರು. ಅರಸನಾದ ಅಹಷ್ವೇರೋಷನ ಹೆಸರಿನಲ್ಲಿಯೇ ಲಿಖಿತವಾದ ಈ ಪತ್ರಗಳು ಅರಸನ ಉಂಗುರದಿಂದ ಅಧಿಕೃತ ರಾಜಮುದ್ರೆಯನ್ನು ಹೊಂದಿದ್ದವು.