Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 4:18 - ಕನ್ನಡ ಸಮಕಾಲಿಕ ಅನುವಾದ

18 “ಈ ಕನಸನ್ನು ನೆಬೂಕದ್ನೆಚ್ಚರನೆಂಬ ಅರಸನಾದ ನಾನು ಕಂಡಿದ್ದೇನೆ. ಈಗ ಬೇಲ್ತೆಶಚ್ಚರನೆಂಬ ನೀನು ಅದರ ಅರ್ಥವನ್ನು ಹೇಳು. ಏಕೆಂದರೆ ನನ್ನ ರಾಜ್ಯದಲ್ಲಿರುವ ಸಕಲ ಜ್ಞಾನಿಗಳು ಅದರ ಅರ್ಥವನ್ನು ನನಗೆ ಹೇಳಲು ಶಕ್ತರಾದವರಲ್ಲ. ಆದರೆ ನಿನ್ನಲ್ಲಿ ಪರಿಶುದ್ಧ ದೇವರುಗಳ ಆತ್ಮವು ಇರುವುದರಿಂದ ನೀನು ಹೇಳಲು ಶಕ್ತನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ರಾಜನಾದ ನೆಬೂಕದ್ನೆಚ್ಚರನೆಂಬ ನಾನು ಈ ಕನಸನ್ನು ಕಂಡೆನು; ಬೇಲ್ತೆಶಚ್ಚರನೇ, ನನ್ನ ರಾಜ್ಯದ ಸಕಲ ವಿದ್ವಾಂಸರಲ್ಲಿ ಯಾರೂ ಅದರ ಅರ್ಥವನ್ನು ತಿಳಿಸಲಾರರು; ನೀನು ಅದನ್ನು ತಿಳಿಸು; ಪರಿಶುದ್ಧ ದೇವರುಗಳ ಆತ್ಮವು ನಿನ್ನಲ್ಲಿ ನೆಲೆಸಿರುವುದರಿಂದ ನೀನೇ ಅದಕ್ಕೆ ಶಕ್ತನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ‘ಇದೇ ನಾನು ಕಂಡ ಕನಸು. ಬೇಲ್ತೆಶಚ್ಚರನೇ, ನನ್ನ ರಾಜ್ಯದ ಸಕಲ ವಿದ್ವಾಂಸರಲ್ಲಿ ಯಾರಿಂದಲೂ ಇದರ ಅರ್ಥವನ್ನು ಹೇಳಲಾಗಲಿಲ್ಲ. ಅದನ್ನು ನೀನು ತಿಳಿಸು. ಪರಿಶುದ್ಧ ದೇವರ ಆತ್ಮ ನಿನ್ನಲ್ಲಿ ನೆಲೆಸಿರುವುದರಿಂದ ಇದು ನಿನ್ನಿಂದ ಸಾಧ್ಯ’,” ಎಂದನು ರಾಜ ನೆಬೂಕದ್ನೆಚ್ಚರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ರಾಜನಾದ ನೆಬೂಕದ್ನೆಚ್ಚರನೆಂಬ ನಾನು ಈ ಕನಸನ್ನು ಕಂಡೆನು; ಬೇಲ್ತೆಶಚ್ಚರನೇ, ನನ್ನ ರಾಜ್ಯದ ಸಕಲ ವಿದ್ವಾಂಸರಲ್ಲಿ ಯಾರೂ ಅದರ ಅರ್ಥವನ್ನು ತಿಳಿಸಲಾರರು; ನೀನು ಅದನ್ನು ತಿಳಿಸು; ಪರಿಶುದ್ಧದೇವರುಗಳ ಆತ್ಮವು ನಿನ್ನಲ್ಲಿ ನೆಲೆಸಿರುವದರಿಂದ ನೀನು ಶಕ್ತನೇ ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 “ಅರಸನಾದ ನೆಬೂಕದ್ನೆಚ್ಚರನೆಂಬ ನಾನು ಈ ಕನಸನ್ನು ಕಂಡೆನು. ಈಗ ನೀನು, ಬೇಲ್ತೆಶಚ್ಚರನೇ (ದಾನಿಯೇಲನೇ), ಇದರ ಅರ್ಥವನ್ನು ನನಗೆ ತಿಳಿಸು. ನನ್ನ ರಾಜ್ಯದಲ್ಲಿರುವ ವಿದ್ವಾಂಸರಲ್ಲಿ ಯಾರೂ ಇದರ ಅರ್ಥವನ್ನು ನನಗೆ ಹೇಳಲಾರರು. ಆದರೆ ನೀನು ಈ ಕನಸಿನ ಅರ್ಥವನ್ನು ತಿಳಿಸಬಲ್ಲೆ. ಏಕೆಂದರೆ ಪರಿಶುದ್ಧ ದೇವರುಗಳ ಆತ್ಮವು ನಿನ್ನಲ್ಲಿ ನೆಲೆಸಿರುವದು ನನಗೆ ತಿಳಿದದೆ” ಎಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 4:18
14 ತಿಳಿವುಗಳ ಹೋಲಿಕೆ  

ಈಗ ಈ ಬರಹವನ್ನು ಓದುವುದಕ್ಕೂ, ಅದರ ಅರ್ಥವನ್ನು ತಿಳಿಸುವುದಕ್ಕೂ ಜ್ಯೋತಿಷ್ಯರಾದ ಜ್ಞಾನಿಗಳು ನನ್ನ ಮುಂದೆ ಬಂದಿದ್ದಾರೆ. ಆದರೆ ಇದರ ಅರ್ಥವನ್ನು ಹೇಳಲಾರದೆ ಹೋದರು.


ಬೆಳಿಗ್ಗೆ ಅವನ ಮನಸ್ಸು ಕಳವಳಗೊಂಡಿತು. ಆದ್ದರಿಂದ ಅವನು ಈಜಿಪ್ಟಿನ ಎಲ್ಲಾ ಮಂತ್ರವಾದಿಗಳನ್ನೂ ಎಲ್ಲಾ ಜ್ಞಾನಿಗಳನ್ನೂ ಕರೆಕಳುಹಿಸಿದನು. ಫರೋಹನು ಅವರಿಗೆ ತನ್ನ ಕನಸನ್ನು ತಿಳಿಸಿದಾಗ, ಅವುಗಳ ಅರ್ಥವನ್ನು ಹೇಳುವವರು ಯಾರೂ ಇರಲಿಲ್ಲ.


ಆಗ ಅರಸನ ಎಲ್ಲಾ ಜ್ಞಾನಿಗಳು ಒಳಗೆ ಬಂದರು. ಆದರೆ ಆ ಬರಹವನ್ನು ಓದಲೂ, ಅದರ ಅರ್ಥವನ್ನು ಅರಸನಿಗೆ ತಿಳಿಸಲೂ ಅವರಿಗೆ ಆಗದೆ ಹೋಯಿತು.


ಆಗ ಫರೋಹನು ಯೋಸೇಫನಿಗೆ, “ನಾನು ಕನಸನ್ನು ಕಂಡಿದ್ದೇನೆ, ಅದರ ಅರ್ಥವನ್ನು ಹೇಳುವವರು ಯಾರೂ ಇಲ್ಲ. ನೀನು ಕನಸನ್ನು ಗ್ರಹಿಸಿ, ಅರ್ಥವನ್ನು ಹೇಳುತ್ತೀ ಎಂದು ನಿನ್ನ ವಿಷಯವಾಗಿ ನಾನು ಕೇಳಿದ್ದೇನೆ,” ಎಂದನು.


ನಿಶ್ಚಯವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ ತನ್ನ ಯೋಜನೆಗಳನ್ನು ತಿಳಿಸದೆ, ಸಾರ್ವಭೌಮ ಯೆಹೋವ ದೇವರು ಏನನ್ನೂ ಮಾಡುವುದಿಲ್ಲ.


ಅವರು ಮತ್ತೆ ಉತ್ತರವಾಗಿ, “ಅರಸನು ತನ್ನ ಸೇವಕರಿಗೆ ಕನಸನ್ನು ಮೊದಲು ಹೇಳಲಿ. ಆಗ ಅದರ ಅರ್ಥವನ್ನು ನಾವು ತಿಳಿಸುವೆವು,” ಎಂದರು.


ಈಜಿಪ್ಟಿನವರ ಮನಸ್ಸು ಭಯಗೊಳ್ಳುವುದು ಅವರ ಆಲೋಚನೆಯನ್ನು ಭಂಗಪಡಿಸುವೆನು. ಅಲ್ಲಿಯವರು ವಿಗ್ರಹಗಳನ್ನೂ, ಮಾಟಗಾರರನ್ನೂ, ಯಕ್ಷಣಿಗಾರರನ್ನೂ, ಮಂತ್ರವಾದಿಗಳನ್ನೂ ಆಶ್ರಯಿಸುವರು.


ಅದಕ್ಕೆ ಯೋಸೇಫನು, “ಅದರ ಅರ್ಥ ಏನೆಂದರೆ, ಆ ಮೂರು ಕೊಂಬೆಗಳು ಮೂರು ದಿನಗಳಾಗಿವೆ.


ಅರಸನು ಅವರ ಹತ್ತಿರ ವಿಚಾರಿಸಿದಾಗ ಸಮಸ್ತ ಜ್ಞಾನ ವಿವೇಕಗಳ ವಿಷಯದಲ್ಲಿ ತನ್ನ ರಾಜ್ಯದಲ್ಲಿರುವ ಎಲ್ಲಾ ಮಂತ್ರಗಾರರಿಗಿಂತಲೂ, ಜೋತಿಷ್ಯರಿಗಿಂತಲೂ ಇವರೇ ಹತ್ತರಷ್ಟು ಉತ್ತಮರೆಂದು ಕಂಡನು.


ಜನರನ್ನು, ಭೂಮಿಯ ಮೃಗಗಳನ್ನು, ಆಕಾಶದ ಪಕ್ಷಿಗಳನ್ನು, ಜೀವಿಸುವಂಥಾದ್ದೆಲ್ಲವನ್ನೂ ನಿನ್ನ ಕೈಯಲ್ಲಿ ಕೊಟ್ಟು, ಅವೆಲ್ಲವುಗಳಿಗೆ ನಿನ್ನನ್ನು ಆಳುವವನಾಗಿ ಮಾಡಿದ್ದಾರೆ. ಆ ಬಂಗಾರದ ತಲೆಯು ನೀನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು