Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 4:19 - ಕನ್ನಡ ಸಮಕಾಲಿಕ ಅನುವಾದ

19 ಆಗ ಬೇಲ್ತೆಶಚ್ಚರನೆಂಬ ಹೆಸರುಳ್ಳ ದಾನಿಯೇಲನು ಒಂದು ಗಳಿಗೆ ವಿಸ್ಮಿತನಾಗಿ ತನ್ನ ಆಲೋಚನೆಗಳಲ್ಲಿ ಕಳವಳಗೊಂಡನು. ಆಗ ಅರಸನು ಮಾತನಾಡಿ, “ಬೇಲ್ತೆಶಚ್ಚರನೇ, ಕನಸಾದರೂ, ಅದರ ಅರ್ಥವಾದರೂ ನಿನ್ನನ್ನು ಕಳವಳಪಡಿಸದಿರಲಿ,” ಎಂದನು. ಬೇಲ್ತೆಶಚ್ಚರನು ಉತ್ತರವಾಗಿ, “ನನ್ನ ಒಡೆಯನೇ, ಆ ಕನಸು ನಿನ್ನ ವೈರಿಗಳಿಗೂ, ಅದರ ಅರ್ಥವು ನಿನ್ನ ಶತ್ರುಗಳಿಗೂ ಆಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆಗ ಬೇಲ್ತೆಶಚ್ಚರನೆಂಬ ಅಡ್ಡಹೆಸರಿನ ದಾನಿಯೇಲನು ತನ್ನ ಬುದ್ಧಿಗೆ ತೋರಿದ್ದನ್ನು ಕಂಡು ಭಯಪಟ್ಟು ಸ್ವಲ್ಪ ಸಮಯ ಸ್ತಬ್ಧನಾದನು. ರಾಜನು ಇದನ್ನು ನೋಡಿ, “ಬೇಲ್ತೆಶಚ್ಚರನೇ, ನನ್ನ ಕನಸಾಗಲಿ, ಅದರ ಅರ್ಥವಾಗಲಿ ನಿನ್ನನ್ನು ಹೆದರಿಸದಿರಲಿ” ಎಂದು ಹೇಳಲು ಬೇಲ್ತೆಶಚ್ಚರನು, “ನನ್ನ ಒಡೆಯನೇ, ಆ ಕನಸು ನಿನ್ನ ಶತ್ರುಗಳಿಗೆ ಫಲಿಸಲಿ, ಅದರ ಅರ್ಥವು ನಿನ್ನ ವಿರೋಧಿಗಳ ಅನುಭವಕ್ಕೆ ಬರಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಇದನ್ನು ಕೇಳಿದ ಬೇಲ್ತೆಶಚ್ಚರನೆಂದು ಹೆಸರುಗೊಂಡಿದ್ದ ದಾನಿಯೇಲನು ತುಸು ಹೊತ್ತು ಸ್ತಬ್ದನಾದ. ಅವನ ಬುದ್ಧಿಗೆ ಹೊಳೆದ ವಿಷಯ ಅವನಲ್ಲಿ ದಿಗಿಲನ್ನು ಉಂಟುಮಾಡಿತು. ರಾಜನು ಇದನ್ನು ಅರಿತು, “ಬೇಲ್ತೆಶಚ್ಚರನೇ, ನನ್ನ ಕನಸಾಗಲಿ, ಅದರ ಅರ್ಥವಾಗಲಿ ನಿನ್ನನ್ನು ಹೆದರಿಸದಿರಲಿ,” ಎಂದು ಧೈರ್ಯಹೇಳಿದ. ಆಗ ಬೇಲ್ತೆಶಚ್ಚರನು: "ನನ್ನೊಡೆಯಾ, ಈ ಕನಸು ನಿನ್ನ ವೈರಿಗಳಿಗೆ ಬರಲಿ! ಅದರ ಅರ್ಥ ನಿನ್ನ ವಿರೋಧಿಗಳಿಗೆ ತಗಲಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆಗ ಬೇಲ್ತೆಶಚ್ಚರನೆಂಬ ಅಡ್ಡಹೆಸರಿನ ದಾನಿಯೇಲನು ತನ್ನ ಬುದ್ಧಿಗೆ ತೋರಿದ್ದಕ್ಕೆ ದಿಗಿಲುಪಟ್ಟು ತುಸುಹೊತ್ತು ಸ್ತಬ್ಧನಾದನು. ರಾಜನು ಇದನ್ನು ನೋಡಿ - ಬೇಲ್ತೆಶಚ್ಚರನೇ, ನನ್ನ ಕನಸಾಗಲಿ ಅದರ ಅರ್ಥವಾಗಲಿ ನಿನ್ನನ್ನು ಹೆದರಿಸದಿರಲಿ ಎಂದು ಹೇಳಲು ಬೇಲ್ತೆಶಚ್ಚರನು - ಎನ್ನೊಡೆಯನೇ, ಆ ಕನಸು ನಿನ್ನ ಹಗೆಗಳಿಗೆ ಫಲಿಸಲಿ, ಅದರ ಅರ್ಥವು ನಿನ್ನ ವಿರೋಧಿಗಳ ಅನುಭವಕ್ಕೆ ಬರಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆಗ ದಾನಿಯೇಲನು (ಬೇಲ್ತೆಶಚ್ಚರನು) ಸುಮಾರು ಒಂದು ಗಂಟೆಯವರೆಗೆ ಮೌನವಾಗಿದ್ದನು. ಅವನ ಬುದ್ಧಿಗೆ ತೋರಿದ ವಿಷಯಗಳು ಅವನನ್ನು ಗಾಬರಿಪಡಿಸಿದವು. ಆಗ ರಾಜನು, “ಬೇಲ್ತೆಶಚ್ಚರನೇ, ಕನಸು ಅಥವಾ ಕನಸಿನ ಅರ್ಥವು ನಿನ್ನನ್ನು ಭಯಗೊಳಿಸದಿರಲಿ” ಎಂದು ಧೈರ್ಯ ಹೇಳಿದನು. ಆಗ ಬೇಲ್ತೆಶಚ್ಚರನು ಅರಸನಿಗೆ, “ನನ್ನ ಒಡೆಯನೇ, ಈ ಕನಸು ನಿನ್ನ ವಿರೋಧಿಗಳಿಗೆ ಫಲಿಸಲಿ. ಇದರ ಅರ್ಥವು ನಿನ್ನ ವಿರೋಧಿಗಳ ಅನುಭವಕ್ಕೆ ಬರಲಿ ಎಂದು ನಾನು ಹಾರೈಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 4:19
27 ತಿಳಿವುಗಳ ಹೋಲಿಕೆ  

ದಾನಿಯೇಲನಾದ ನಾನು ಬಳಲಿ ಕೆಲವು ದಿನಗಳವರೆಗೂ ಅಸ್ವಸ್ಥನಾದೆನು. ಅನಂತರ ನಾನು ಎದ್ದು, ಅರಸನ ಕೆಲಸ ಕಾರ್ಯಗಳನ್ನು ಮಾಡಿದೆನು. ನಾನು ಆ ದರ್ಶನದ ಬಗ್ಗೆ ಬೆಚ್ಚಿಬೆರಗಾದೆನು. ಅದರ ಅರ್ಥವನ್ನೇ ಗ್ರಹಿಸಿಕೊಳ್ಳಲಾಗಲಿಲ್ಲ.


“ಇಷ್ಟರಲ್ಲಿ ಇದರ ಪ್ರಸ್ತಾಪವು ಮುಗಿಯಿತು. ದಾನಿಯೇಲನೆಂಬ ನನಗೆ ನನ್ನ ಆಲೋಚನೆಗಳು ಬಹಳವಾಗಿ ಕಳವಳಪಡಿಸಿದವು. ನನ್ನ ಮುಖವು ಕಳೆಗುಂದಿತು. ಆದರೂ ಈ ಸಂಗತಿಯನ್ನು ನನ್ನ ಹೃದಯದಲ್ಲಿ ಇಟ್ಟುಕೊಂಡೆನು.”


“ಅರಸನೇ, ಇದರ ವ್ಯಾಖ್ಯಾನವು ಏನೆಂದರೆ, ನನ್ನ ಒಡೆಯನಾದ ಅರಸನ ಮೇಲೆ ಬಂದಂಥ ಮಹೋನ್ನತನ ನಿರ್ಣಯವು ಹೀಗಿದೆ:


ಓ, ನನ್ನ ಕರುಳು, ನನ್ನ ಕರುಳು! ನಾನು ನೋವಿನಿಂದ ನರಳುತ್ತೇನೆ. ನನ್ನ ಹೃದಯವು ನನ್ನಲ್ಲಿ ತಳಮಳಗೊಂಡಿದೆ. ನಾನು ಮೌನವಾಗಿರಲಾರೆನು; ಓ ನನ್ನ ಪ್ರಾಣವೇ, ತುತೂರಿ ಶಬ್ದವನ್ನೂ, ಯುದ್ಧದ ಆರ್ಭಟವನ್ನೂ ಕೇಳುತ್ತಿರುವೆ.


ಏಲಿಯು ಅವನಿಗೆ, “ಅವರು ನಿನಗೆ ಹೇಳಿದ ಮಾತೇನು? ನನಗೆ ಅದನ್ನು ಮರೆಮಾಡಬೇಡ. ಅವರು ನಿನಗೆ ಹೇಳಿದ ಸಕಲ ವಾರ್ತೆಗಳಲ್ಲಿ ನೀನು ಯಾವುದನ್ನಾದರೂ ನನಗೆ ಮರೆಮಾಡಿದರೆ, ದೇವರು ನಿನ್ನನ್ನು ದಂಡಿಸಲಿ,” ಎಂದನು.


ಬೆಟ್ಟಗಳು ನಿನ್ನನ್ನು ಕಂಡು ನಡುಗಿದವು; ಜಲಪ್ರವಾಹವು ಹಾದುಹೋಯಿತು; ಸಾಗರವು ಗರ್ಜಿಸಿ; ತನ್ನ ತೆರೆಗಳನ್ನು ಮೇಲಕ್ಕೆ ಎತ್ತುತ್ತದೆ.


“ದಾನಿಯೇಲನೆಂಬ ನಾನು ನನ್ನ ಆತ್ಮದಲ್ಲಿ ನೊಂದುಕೊಂಡೆನು. ನನ್ನ ಮನಸ್ಸಿನಲ್ಲಿ ಹಾದುಹೋದ ದರ್ಶನಗಳ ನಿಮಿತ್ತ ಕಳವಳಗೊಂಡೆನು.


ಏಕೆಂದರೆ ಬೇಲ್ತೆಶಚ್ಚರನೆಂಬ ಹೆಸರನ್ನು ಅರಸನಿಂದ ಪಡೆದ ಆ ದಾನಿಯೇಲನಲ್ಲಿ ಕನಸುಗಳ ಅರ್ಥವನ್ನು ಹೇಳುವುದಕ್ಕೂ, ಕಠಿಣವಾದ ಸಂಗತಿಗಳನ್ನು ತಿಳಿಸುವುದಕ್ಕೂ, ಒಗಟುಗಳನ್ನು ವಿವರಿಸುವುದಕ್ಕೂ ಕಷ್ಟಕರವಾದ ಸಮಸ್ಯೆಗಳನ್ನು ಪರಿಹರಿಸುವುದಕ್ಕೂ ಉತ್ತಮ ಆತ್ಮವೂ, ಜ್ಞಾನವೂ, ವಿವೇಕವೂ ಸಿಕ್ಕಿದವು. ಈಗ ಆ ದಾನಿಯೇಲನನ್ನು ಕರೆಯಿಸಿದರೆ, ಅವನು ಈ ಬರಹದ ಅರ್ಥವನ್ನು ವಿವರಿಸುವನು,” ಎಂದಳು.


ಅರಸನು ಬೇಲ್ತೆಶಚ್ಚರನೆಂಬ ದಾನಿಯೇಲನನ್ನು ಕುರಿತು, “ನಾನು ಕಂಡ ಕನಸನ್ನೂ, ಅದರ ಅರ್ಥವನ್ನೂ ನನಗೆ ತಿಳಿಸುವ ಸಾಮರ್ಥ್ಯವು ನಿನಗಿದೆಯೋ?” ಎಂದನು.


ಇವರಿಗೆ ಕಂಚುಕಿಯರ ಯಜಮಾನನು ದಾನಿಯೇಲನಿಗೆ ಬೇಲ್ತೆಶಚ್ಚರ್ ಎಂದೂ, ಹನನ್ಯನಿಗೆ ಶದ್ರಕ್ ಎಂದೂ, ಮೀಶಾಯೇಲನಿಗೆ ಮೇಶಕ್ ಎಂದೂ, ಅಜರ್ಯನಿಗೆ ಅಬೇದ್‌ನೆಗೋ ಎಂಬ ಹೆಸರಿಟ್ಟನು.


ನಾನು ನಿಮ್ಮನ್ನು ಸೆರೆಯಾಗಿ ಒಯ್ದ ಪಟ್ಟಣದ ಸಮಾಧಾನ ಮತ್ತು ಸಮೃದ್ಧಿಯನ್ನು ಹುಡುಕಿರಿ. ಅದಕ್ಕೋಸ್ಕರ ಯೆಹೋವ ದೇವರಿಗೆ ಪ್ರಾರ್ಥನೆಮಾಡಿರಿ. ಏಕೆಂದರೆ ಅದರ ಸಮಾಧಾನದಿಂದ ನಿಮಗೆ ಸಮಾಧಾನವಾಗುವುದು.”


ಓಬದ್ಯನು ಮಾರ್ಗದಲ್ಲಿ ಹೋಗುತ್ತಿರುವಾಗ, ಎಲೀಯನು ಅವನನ್ನು ಸಂಧಿಸಿದನು. ಓಬದ್ಯನು ಅವನನ್ನು ಗುರುತಿಸಿ ಸಾಷ್ಟಾಂಗ ನಮಸ್ಕಾರಮಾಡಿ, “ನೀನು ನನ್ನ ಒಡೆಯನಾದ ಎಲೀಯನಲ್ಲವೋ?” ಎಂದನು.


ಆಗ ದಾವೀದನು ಅಬ್ನೇರನಿಗೆ, “ನೀನು ಪರಾಕ್ರಮಶಾಲಿಯಲ್ಲವೇ? ಇಸ್ರಾಯೇಲಿನಲ್ಲಿ ನಿನಗೆ ಸಮಾನನಾದವನು ಯಾರು? ಆದರೆ ನೀನು ನಿನ್ನ ಒಡೆಯನಾದ ಅರಸನನ್ನು ಕಾಯದೆ ಹೋದದ್ದೇನು? ಜನರಲ್ಲಿ ಒಬ್ಬನು ನಿನ್ನ ಒಡೆಯನಾದ ಅರಸನನ್ನು ಸಂಹರಿಸುವುದಕ್ಕೆ ಬಂದಿದ್ದನು.


ತರುವಾಯ ದಾವೀದನು ಎದ್ದು ಗವಿಯಿಂದ ಹೊರಗೆ ಬಂದು ಸೌಲನಿಗೆ, “ಅರಸನೇ, ನನ್ನ ಒಡೆಯನೇ,” ಎಂದು ಕೂಗಿದನು. ಸೌಲನು ಹಿಂದಿರುಗಿ ನೋಡಿದಾಗ, ದಾವೀದನು ನೆಲದವರೆಗೆ ಬಗ್ಗಿ ವಂದಿಸಿದನು.


ಅದಕ್ಕೆ ಹನ್ನಳು ಅವನಿಗೆ ಉತ್ತರವಾಗಿ, “ನನ್ನ ಒಡೆಯನೇ, ಹಾಗಲ್ಲ. ನಾನು ದುಃಖದ ಆತ್ಮವುಳ್ಳ ಸ್ತ್ರೀಯಾಗಿದ್ದೇನೆ. ನಾನು ದ್ರಾಕ್ಷಾರಸವನ್ನಾದರೂ ಮದ್ಯಪಾನವನ್ನಾದರೂ ಕುಡಿದವಳಲ್ಲ. ನಾನು ಯೆಹೋವ ದೇವರ ಮುಂದೆ ನನ್ನ ಮನೋವೇದನೆಯನ್ನೆಲ್ಲಾ ತೋಡಿಕೊಳ್ಳುತ್ತಾ ಇದ್ದೇನೆ.


ಆದರೂ ಈಗ ನೀವು ಅವರ ಪಾಪವನ್ನು ಕ್ಷಮಿಸಬೇಕು. ಇಲ್ಲವಾದರೆ ನೀವು ಬರೆದ ಗ್ರಂಥದಿಂದ ನನ್ನ ಹೆಸರನ್ನು ಅಳಿಸಿಬಿಡಿ,” ಎಂದು ಬೇಡಿಕೊಂಡನು.


ನೀನು ಅವನಿಗೆ, ‘ಇವು ನಿನ್ನ ದಾಸನಾದ ಯಾಕೋಬನವುಗಳೇ, ಇದು ನನ್ನ ಯಜಮಾನನಾದ ಏಸಾವನಿಗೆ ಕಳುಹಿಸಲಾದ ಕಾಣಿಕೆ, ಅವನೂ ನಮ್ಮ ಹಿಂದೆ ಇದ್ದಾನೆ,’ ಎಂದು ಅವನಿಗೆ ಹೇಳಬೇಕು,” ಎಂದು ಆಜ್ಞಾಪಿಸಿದನು.


ರಾಹೇಲಳು ತನ್ನ ತಂದೆಗೆ, “ಅಪ್ಪಾ, ನಾನು ನಿನ್ನ ಮುಂದೆ ಎದ್ದು ನಿಂತುಕೊಳ್ಳದೇ ಇರುವುದರಿಂದ, ನನ್ನ ಮೇಲೆ ಕೋಪಬಾರದೆ ಇರಲಿ. ಏಕೆಂದರೆ ನಾನು ಮುಟ್ಟಾಗಿದ್ದೇನೆ,” ಎಂದಳು. ಅವನು ಹುಡುಕಿ ಆ ವಿಗ್ರಹಗಳನ್ನು ಕಂಡುಕೊಳ್ಳದೆ ಹೋದನು.


ಅದಕ್ಕೆ ಯೋಸೇಫನು, “ಅದರ ಅರ್ಥ ಏನೆಂದರೆ, ಆ ಮೂರು ಕೊಂಬೆಗಳು ಮೂರು ದಿನಗಳಾಗಿವೆ.


ಅರಸನೇ, ನೀನು ಅರಸರಿಗೆ ಅರಸನಾಗಿರುವೆ. ಏಕೆಂದರೆ ಪರಲೋಕದ ದೇವರು ನಿನಗೆ ರಾಜ್ಯವನ್ನೂ, ಬಲವನ್ನೂ, ಅಧಿಕಾರವನ್ನೂ, ಘನವನ್ನೂ ಕೊಟ್ಟಿದ್ದಾರೆ.


“ಅರಸನೇ, ಮಹೋನ್ನತರಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನಿಗೆ ಸಾರ್ವಭೌಮತ್ವವನ್ನೂ, ಮಹತ್ತನ್ನೂ, ಕೀರ್ತಿಯನ್ನೂ, ಘನವನ್ನೂ ಕೊಟ್ಟರು.


ಅವರು ಅವನಿಗೆ ಕೊಟ್ಟ ಮಹತ್ತಿನ ನಿಮಿತ್ತ ಸಕಲ ಪ್ರಜೆಗಳೂ, ಜನಾಂಗಗಳೂ, ಭಾಷೆಯವರೂ ಅವನ ಮುಂದೆ ಹೆದರಿ ನಡುಗಿದರು. ತನಗೆ ಬೇಕಾದವರನ್ನು ಬದುಕಿಸಿ ಬೇಡವಾದವರನ್ನು ಕೊಂದನು. ಇಷ್ಟವಿದ್ದವರನ್ನು ಸುಸ್ಥಿತಿಗೆ ಏರಿಸಿ, ಇಷ್ಟವಿಲ್ಲದವರನ್ನು ಕೆಳಕ್ಕಿಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು