ದಾನಿಯೇಲ 4:27 - ಕನ್ನಡ ಸಮಕಾಲಿಕ ಅನುವಾದ27 ಆದ್ದರಿಂದ ಅರಸನೇ, ನನ್ನ ಆಲೋಚನೆಯು ನಿನಗೆ ಸರಿಯಾದದ್ದಾಗಿರಲಿ. ಸರಿಯಾದದ್ದನ್ನು ಮಾಡುವುದರಿಂದ ನಿನ್ನ ಪಾಪಗಳನ್ನು ಬಿಟ್ಟುಬಿಡು. ದಬ್ಬಾಳಿಕೆಯಾದವರಿಗೆ ದಯೆ ತೋರುವುದರಿಂದ ನಿನ್ನ ದುಷ್ಟತ್ವವನ್ನು ಬಿಟ್ಟುಬಿಡು. ಹೀಗಾದರೆ ಒಂದು ವೇಳೆ ನಿನ್ನ ಸಮೃದ್ಧಿ ಮುಂದುವರಿಯುವುದು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಆದಕಾರಣ, ಅರಸನೇ, ಈ ನನ್ನ ಬುದ್ಧಿವಾದವು ನಿನಗೆ ಒಪ್ಪಿಗೆಯಾಗಲಿ, ನೀನು ಧರ್ಮವನ್ನು ಆಚರಿಸಿ ನಿನ್ನ ಪಾಪಗಳನ್ನು ನಾಶಗೊಳಿಸು, ಬಡವರಿಗೆ ಕರುಣೆಯನ್ನು ತೋರಿಸಿ ನಿನ್ನ ಅಪರಾಧಗಳನ್ನು ಧ್ವಂಸಮಾಡು; ಇದರಿಂದ ನಿನ್ನ ನೆಮ್ಮದಿಯ ಕಾಲವು ಹೆಚ್ಚಾದೀತು” ಎಂದು ಅರಿಕೆ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಆದಕಾರಣ ಅರಸರೇ, ಈ ನನ್ನ ಬುದ್ಧಿಮಾತು ತಮಗೆ ಒಪ್ಪಿಗೆಯಾಗಲಿ: ಸದಾಚಾರದ ಮೂಲಕ ನಿಮ್ಮ ಪಾಪಗಳನ್ನು ಅಳಿಸಿಬಿಡಿ. ದೀನದಲಿತರಿಗೆ ದಯೆತೋರಿ. ನಿಮ್ಮ ಅಪರಾಧಗಳನ್ನು ನೀಗಿಸಿಕೊಳ್ಳಿ. ಇದರಿಂದ ಬಹುಶಃ ನಿಮ್ಮ ನೆಮ್ಮದಿಕಾಲ ಹೆಚ್ಚಾದೀತು,” ಎಂದು ಅರಿಕೆಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಆದಕಾರಣ, ಅರಸೇ, ಈ ನನ್ನ ಬುದ್ಧಿವಾದವು ನಿನಗೆ ಒಪ್ಪಿಗೆಯಾಗಲಿ - ನೀನು ಧರ್ಮವನ್ನು ಆಚರಿಸಿ ನಿನ್ನ ಪಾಪಗಳನ್ನು ನಾಶಗೊಳಿಸು, ಬಡವರಿಗೆ ಕರುಣೆಯನ್ನು ತೋರಿಸಿ ನಿನ್ನ ಅಪರಾಧಗಳನ್ನು ಧ್ವಂಸಮಾಡು; ಇದರಿಂದ ನಿನ್ನ ನೆಮ್ಮದಿಯ ಕಾಲವು ಹೆಚ್ಚಾದೀತು ಎಂದರಿಕೆ ಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಆದ್ದರಿಂದ ರಾಜನೇ, ನನ್ನ ಬುದ್ಧಿವಾದವನ್ನು ದಯವಿಟ್ಟು ಒಪ್ಪಿಕೊ. ನೀನು ಪಾಪಕೃತ್ಯಗಳನ್ನು ಮಾಡಬೇಡ. ನೀತಿಯನ್ನು ಅನುಸರಿಸು; ಕೆಟ್ಟದ್ದನ್ನು ಮಾಡಬೇಡ. ಬಡಜನರಿಗೆ ಕರುಣೆಯನ್ನು ತೋರು. ಇದರಿಂದ ನಿನ್ನ ನೆಮ್ಮದಿಯ ಕಾಲವು ಹೆಚ್ಚಾಗುವುದು. ಇದೇ ನನ್ನ ಬುದ್ಧಿವಾದ” ಎಂದು ಅರಿಕೆ ಮಾಡಿದನು. ಅಧ್ಯಾಯವನ್ನು ನೋಡಿ |