ದಾನಿಯೇಲ 4:7 - ಕನ್ನಡ ಸಮಕಾಲಿಕ ಅನುವಾದ7 ಆಗ ಮಂತ್ರಗಾರರು, ಜೋತಿಷ್ಯರು, ಪಂಡಿತರು, ಶಕುನಗಾರರು ಒಳಗೆ ಬಂದರು. ನಾನು ಕನಸನ್ನು ಅವರಿಗೆ ತಿಳಿಸಿದೆನು. ಆದರೆ ಅವರು ಅದರ ಅರ್ಥವನ್ನು ನನಗೆ ತಿಳಿಸಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 “ಜೋಯಿಸರು, ಮಂತ್ರವಾದಿಗಳು, ಪಂಡಿತರು, ಶಾಕುನಿಕರು, ನನ್ನ ಸಮ್ಮುಖಕ್ಕೆ ಬಂದಾಗ ನಾನು ಆ ಕನಸನ್ನು ತಿಳಿಸಲು ಅವರು ಅದರ ಅಭಿಪ್ರಾಯವನ್ನು ವಿವರಿಸಲಾರದೆ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಜೋಯಿಸರು, ಮಂತ್ರವಾದಿಗಳು, ಪಂಡಿತರು, ಶಾಕುನಿಕರು ಇವರೆಲ್ಲರು ನನ್ನ ಸಮ್ಮುಖಕ್ಕೆ ಬಂದರು. ನಾನು ಕನಸನ್ನು ತಿಳಿಸಿದೆ. ಆದರೆ ಅದರ ಅರ್ಥವನ್ನು ಅವರಿಂದ ತಿಳಿಸಲಾಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಜೋಯಿಸರು, ಮಂತ್ರವಾದಿಗಳು, ಪಂಡಿತರು, ಶಾಕುನಿಕರು, ಇವರು ಸಮ್ಮುಖಕ್ಕೆ ಬಂದಾಗ ನಾನು ಆ ಕನಸನ್ನು ತಿಳಿಸಲು ಅವರು ಅದರ ಅಭಿಪ್ರಾಯವನ್ನು ವಿವರಿಸಲಾರದೆ ಹೋದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಮಂತ್ರವಾದಿಗಳು, ಜೋಯಿಸರು ಮತ್ತು ವಿದ್ವಾಂಸರು ಬಂದ ಮೇಲೆ ನಾನು ಅವರಿಗೆ ನನ್ನ ಕನಸಿನ ಬಗ್ಗೆ ಹೇಳಿದೆ. ಆದರೆ ಅವರಿಗೆ ಅರ್ಥವನ್ನು ತಿಳಿಸಲಾಗಲಿಲ್ಲ. ಅಧ್ಯಾಯವನ್ನು ನೋಡಿ |
ಶಾರೀರಿಕ ನ್ಯೂನತೆ ಇಲ್ಲದವರಾಗಿಯೂ, ಸುಂದರವಾಗಿಯೂ, ಅವರು ಎಲ್ಲಾ ರೀತಿಯ ವಿಷಯಗಳನ್ನು ಕಲಿಯುವ ಸಾಮರ್ಥ್ಯವನ್ನು ಹೊಂದಿರಬೇಕು. ಅವರು ವಿವೇಕವುಳ್ಳವರಾಗಿಯೂ ಮತ್ತು ತ್ವರಿತವಾಗಿ ಅರ್ಥಮಾಡಿಕೊಳ್ಳುವವರಾಗಿಯೂ, ಅರಸನ ಅರಮನೆಯಲ್ಲಿ ಸೇವೆ ಮಾಡಲು ಸಾಮರ್ಥ್ಯವುಳ್ಳವರಾಗಿಯೂ ಇರುವ ಯೌವನಸ್ಥರನ್ನು ತಂದು ಬಾಬಿಲೋನಿಯರ ವಿದ್ಯೆಯನ್ನೂ, ಭಾಷೆಯನ್ನೂ ಅವರಿಗೆ ಬೋಧಿಸಬೇಕೆಂದು ಆಜ್ಞಾಪಿಸಿದನು.