ದಾನಿಯೇಲ 5:11 - ಕನ್ನಡ ಸಮಕಾಲಿಕ ಅನುವಾದ11 ನಿನ್ನ ರಾಜ್ಯದಲ್ಲಿ ಪರಿಶುದ್ಧ ದೇವರುಗಳ ಆತ್ಮವುಳ್ಳ ಒಬ್ಬ ಮನುಷ್ಯನಿದ್ದಾನೆ. ದೇವರುಗಳ ಜ್ಞಾನಕ್ಕೆ ಸಮಾನವಾದ ಜ್ಞಾನವೂ, ವಿವೇಕವೂ, ಬುದ್ಧಿಯೂ, ಪ್ರಕಾಶವೂ ನಿನ್ನ ತಂದೆಯ ಕಾಲದಲ್ಲಿ ಅವನೊಳಗೆ ಕಂಡುಬಂದವು. ನಿನ್ನ ತಂದೆ ನೆಬೂಕದ್ನೆಚ್ಚರ ಅರಸನು ಅವನನ್ನು ಮಂತ್ರಗಾರರಿಗೂ, ಜ್ಯೋತಿಷ್ಯರಿಗೂ, ಪಂಡಿತರಿಗೂ, ಶಕುನಗಾರರಿಗೂ ಅಧಿಕಾರಿಯನ್ನಾಗಿ ನೇಮಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 “ಪರಿಶುದ್ಧ ದೇವರುಗಳ ಆತ್ಮವು ನೆಲೆಸಿರುವ ಒಬ್ಬನು ನಿನ್ನ ರಾಜ್ಯದಲ್ಲಿ ಇದ್ದಾನೆ; ದೇವರುಗಳ ಜ್ಞಾನಕ್ಕೆ ಸಮಾನವಾದ ಜ್ಞಾನವೂ, ವಿವೇಕವೂ, ಬುದ್ಧಿ ಪ್ರಕಾಶವೂ ನಿನ್ನ ತಂದೆಯ ಕಾಲದಲ್ಲಿ ಅವನೊಳಗೆ ಕಂಡುಬಂದವು. ನಿನ್ನ ತಂದೆಯಾದ ನೆಬೂಕದ್ನೆಚ್ಚರ ರಾಜನು ಅವನನ್ನು ಜೋಯಿಸರು, ಮಂತ್ರವಾದಿಗಳು, ಪಂಡಿತರು, ಶಾಕುನಿಕರು ಇವರಿಗೆ ಅಧ್ಯಕ್ಷನನ್ನಾಗಿ ನೇಮಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ನಿಮ್ಮ ತಂದೆಯ ಕಾಲದಲ್ಲಿ ಬುದ್ಧಿವಂತಿಕೆ, ತಿಳುವಳಿಕೆ, ದೇವರುಗಳಿಗೆ ಸಮಾನವಾದ ಜ್ಞಾನ ಅವನಲ್ಲಿ ಕಂಡುಬಂದುವು. ನಿಮ್ಮ ತಂದೆ ರಾಜ ನೆಬೂಕದ್ನೆಚ್ಚರನು, ಅವನನ್ನು ಜೋಯಿಸರಿಗೂ ಮಂತ್ರವಾದಿಗಳಿಗೂ ಪಂಡಿತರಿಗೂ ಶಾಕುನಿಕರಿಗೂ ಅಧ್ಯಕ್ಷನನ್ನಾಗಿ ನೇಮಿಸಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಪರಿಶುದ್ಧದೇವರುಗಳ ಆತ್ಮವು ನೆಲೆಸಿರುವ ಒಬ್ಬನು ನಿನ್ನ ರಾಜ್ಯದಲ್ಲಿ ಇದ್ದಾನೆ; ದೇವರುಗಳ ಜ್ಞಾನಕ್ಕೆ ಸಮಾನವಾದ ಜ್ಞಾನವೂ ವಿವೇಕವೂ ಬುದ್ಧಿಪ್ರಕಾಶವೂ ನಿನ್ನ ತಂದೆಯ ಕಾಲದಲ್ಲಿ ಅವನೊಳಗೆ ಕಂಡುಬಂದವು; ನಿನ್ನ ತಂದೆಯಾದ ನೆಬೂಕದ್ನೆಚ್ಚರ ರಾಜನು ಅವನನ್ನು ಜೋಯಿಸರು ಮಂತ್ರವಾದಿಗಳು ಪಂಡಿತರು ಶಾಕುನಿಕರು ಇವರಿಗೆ ಅಧ್ಯಕ್ಷನನ್ನಾಗಿ ನೇವಿುಸಿದನು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಪರಿಶುದ್ಧ ದೇವರುಗಳ ಆತ್ಮವು ನೆಲೆಸಿರುವ ಒಬ್ಬನು ನಿನ್ನ ರಾಜ್ಯದಲ್ಲಿ ಇದ್ದಾನೆ. ದೇವರ ಜ್ಞಾನಕ್ಕೆ ಸಮಾನವಾದ ಜ್ಞಾನವೂ ಬುದ್ಧಿಯೂ ರಹಸ್ಯವನ್ನು ತಿಳಿದುಕೊಳ್ಳುವ ಶಕ್ತಿಯೂ ತನಗಿರುವುದಾಗಿ ಅವನು ನಿನ್ನ ತಂದೆಯ ಕಾಲದಲ್ಲಿಯೇ ತೋರಿಸಿಕೊಟ್ಟಿದ್ದಾನೆ. ನಿನ್ನ ತಂದೆಯಾದ ನೆಬೂಕದ್ನೆಚ್ಚರನು ಈ ಮನುಷ್ಯನನ್ನು ಎಲ್ಲ ವಿದ್ವಾಂಸರ ಅಧ್ಯಕ್ಷನನ್ನಾಗಿ ನೇಮಿಸಿದ್ದನು. ಎಲ್ಲ ಜೋಯಿಸರಿಗೆ, ಮಂತ್ರವಾದಿಗಳಿಗೆ, ಶಾಕುನಿಕರಿಗೆ ಮತ್ತು ಪಂಡಿತರಿಗೆ ಇವನು ಮುಖ್ಯಸ್ಥನಾಗಿದ್ದನು. ಅಧ್ಯಾಯವನ್ನು ನೋಡಿ |
ಶಾರೀರಿಕ ನ್ಯೂನತೆ ಇಲ್ಲದವರಾಗಿಯೂ, ಸುಂದರವಾಗಿಯೂ, ಅವರು ಎಲ್ಲಾ ರೀತಿಯ ವಿಷಯಗಳನ್ನು ಕಲಿಯುವ ಸಾಮರ್ಥ್ಯವನ್ನು ಹೊಂದಿರಬೇಕು. ಅವರು ವಿವೇಕವುಳ್ಳವರಾಗಿಯೂ ಮತ್ತು ತ್ವರಿತವಾಗಿ ಅರ್ಥಮಾಡಿಕೊಳ್ಳುವವರಾಗಿಯೂ, ಅರಸನ ಅರಮನೆಯಲ್ಲಿ ಸೇವೆ ಮಾಡಲು ಸಾಮರ್ಥ್ಯವುಳ್ಳವರಾಗಿಯೂ ಇರುವ ಯೌವನಸ್ಥರನ್ನು ತಂದು ಬಾಬಿಲೋನಿಯರ ವಿದ್ಯೆಯನ್ನೂ, ಭಾಷೆಯನ್ನೂ ಅವರಿಗೆ ಬೋಧಿಸಬೇಕೆಂದು ಆಜ್ಞಾಪಿಸಿದನು.