ದಾನಿಯೇಲ 5:15 - ಕನ್ನಡ ಸಮಕಾಲಿಕ ಅನುವಾದ15 ಈಗ ಈ ಬರಹವನ್ನು ಓದುವುದಕ್ಕೂ, ಅದರ ಅರ್ಥವನ್ನು ತಿಳಿಸುವುದಕ್ಕೂ ಜ್ಯೋತಿಷ್ಯರಾದ ಜ್ಞಾನಿಗಳು ನನ್ನ ಮುಂದೆ ಬಂದಿದ್ದಾರೆ. ಆದರೆ ಇದರ ಅರ್ಥವನ್ನು ಹೇಳಲಾರದೆ ಹೋದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 “ಈಗ ಈ ಬರಹವನ್ನು ಓದಿ, ಇದರ ಅರ್ಥವನ್ನು ನನಗೆ ತಿಳಿಸುವುದಕ್ಕಾಗಿ ವಿದ್ವಾಂಸರನ್ನೂ ಮತ್ತು ಮಂತ್ರವಾದಿಗಳನ್ನೂ ಸಮ್ಮುಖಕ್ಕೆ ಬರಮಾಡಲು ಅವರು ಇದರ ಅರ್ಥವನ್ನು ವಿವರಿಸಲಾರದೆ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಈಗ ಈ ಬರಹವನ್ನು ಓದಿ ಇದರ ಅರ್ಥವನ್ನು ನನಗೆ ತಿಳಿಸುವುದಕ್ಕಾಗಿ ವಿದ್ವಾಂಸರನ್ನೂ ಮಂತ್ರವಾದಿಗಳನ್ನೂ ಸಮ್ಮುಖಕ್ಕೆ ಬರಮಾಡಿದೆ. ಅವರು ಇದರ ಅರ್ಥವನ್ನು ವಿವರಿಸಲಾರದೆಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಈಗ ಈ ಬರಹವನ್ನು ಓದಿ ಇದರ ಅರ್ಥವನ್ನು ನನಗೆ ತಿಳಿಸುವದಕ್ಕಾಗಿ ವಿದ್ವಾಂಸರನ್ನೂ ಮಂತ್ರವಾದಿಗಳನ್ನೂ ಸಮ್ಮುಖಕ್ಕೆ ಬರಮಾಡಲು ಅವರು ಇದರ ಅರ್ಥವನ್ನು ವಿವರಿಸಲಾರದೆ ಹೋದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಗೋಡೆಯ ಮೇಲಿನ ಈ ಬರಹವನ್ನು ಓದಲು ಮಂತ್ರವಾದಿಗಳನ್ನು, ವಿದ್ವಾಂಸರನ್ನು ಕರೆಸಲಾಯಿತು. ಅವರು ಆ ಬರಹದ ಅರ್ಥವನ್ನು ನನಗೆ ವಿವರಿಸಬೇಕೆಂದು ನನ್ನ ಉದ್ದೇಶವಾಗಿತ್ತು. ಆದರೆ ಗೋಡೆಯ ಮೇಲಿನ ಈ ಬರಹದ ಅರ್ಥವನ್ನು ಅವರು ನನಗೆ ಹೇಳಲು ಸಾಧ್ಯವಾಗಲಿಲ್ಲ. ಅಧ್ಯಾಯವನ್ನು ನೋಡಿ |