ದಾನಿಯೇಲ 5:16 - ಕನ್ನಡ ಸಮಕಾಲಿಕ ಅನುವಾದ16 ಈಗ ನೀನು ಅರ್ಥಗಳನ್ನು ವಿವರಿಸಿ, ಕಷ್ಟಕರವಾದ ಸಮಸ್ಯೆಗಳನ್ನು ಬಗೆಹರಿಸಲು ಸಮರ್ಥನೆಂದು ನಾನು ನಿನ್ನ ವಿಷಯವಾಗಿ ಕೇಳಿದ್ದೇನೆ. ಹೀಗಾದರೆ ಈ ಬರಹವನ್ನು ಓದುವುದಕ್ಕೂ, ಅದರ ಅರ್ಥವನ್ನು ತಿಳಿಸುವುದಕ್ಕೂ ನಿನ್ನಿಂದ ಸಾಧ್ಯವಾದರೆ, ನಿನಗೆ ಧೂಮ್ರವಸ್ತ್ರವನ್ನು ಹೊದಿಸಿ, ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ, ರಾಜ್ಯದ ಮೂರನೆಯ ಅಧಿಕಾರಿಯನ್ನಾಗಿ ನೇಮಿಸುವೆನು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನೀನು, ಗೂಢಾರ್ಥಗಳನ್ನು ವಿವರಿಸಿ ಕಠಿಣವಾದ ಸಂಗತಿಗಳನ್ನು ಬಿಡಿಸಿ ತಿಳಿಸುವವನಾಗಿದ್ದೀ ಎಂಬ ಸಮಾಚಾರವು ನನಗೆ ಮುಟ್ಟಿದೆ; ಈ ಬರಹವನ್ನು ಓದಿ ಇದರ ಅಭಿಪ್ರಾಯವನ್ನು ನನಗೆ ತಿಳಿಸಲು ನಿನ್ನಿಂದಾದರೆ ನಾನೀಗ ನಿನಗೆ ಧೂಮ್ರವಸ್ತ್ರವನ್ನು ಹೊದಿಸಿ, ನಿನ್ನ ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ, ನಿನ್ನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುವೆನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ನೀನು ಗೂಡಾರ್ಥಗಳನ್ನು ವಿವರಿಸಬಲ್ಲವನೂ ಗುಂಜುಗಂಟುಗಳನ್ನು ಬಿಚ್ಚಬಲ್ಲವನೂ ಎಂಬ ಸಮಾಚಾರ ನನಗೆ ಮುಟ್ಟಿದೆ. ಈ ಬರಹವನ್ನು ಓದಿ, ಇದರ ಅಭಿಪ್ರಾಯವನ್ನು ನನಗೆ ತಿಳಿಸಿದೆಯಾದರೆ ನಿನಗೆ ಕೆನ್ನೀಲಿ ರಾಜವಸ್ತ್ರವನ್ನು ಹೊದಿಸಿ, ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ, ನಿನ್ನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುವೆನು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ನೀನೋ ಗೂಢಾರ್ಥಗಳನ್ನು ವಿವರಿಸಿ ಗುಂಜುಗಂಟುಗಳನ್ನು ಬಿಚ್ಚಬಲ್ಲವನಾಗಿದ್ದೀ ಎಂಬ ಸಮಾಚಾರವು ನನಗೆ ಮುಟ್ಟಿದೆ; ಈ ಬರಹವನ್ನು ಓದಿ ಇದರ ಅಭಿಪ್ರಾಯವನ್ನು ನನಗೆ ತಿಳಿಸಲು ನಿನ್ನಿಂದಾದರೆ ನಾನೀಗ ನಿನಗೆ ಧೂಮ್ರವಸ್ತ್ರವನ್ನು ಹೊದಿಸಿ ನಿನ್ನ ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ ನಿನ್ನನ್ನು ರಾಜ್ಯದ - ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇವಿುಸುವೆನು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ನಾನು ನಿನ್ನ ಬಗ್ಗೆ ಕೇಳಿದ್ದೇನೆ. ನೀನು ಗೂಢಾರ್ಥವನ್ನು ತಿಳಿದುಕೊಳ್ಳಬಲ್ಲೆ ಮತ್ತು ಕಠಿಣವಾದ ಸಮಸ್ಯೆಗಳಿಗೆ ಪರಿಹಾರ ಹೇಳಬಲ್ಲೆ ಎಂದು ನಾನು ಕೇಳಿದ್ದೇನೆ. ನೀನು ಗೋಡೆಯ ಮೇಲಿನ ಈ ಬರಹವನ್ನು ಓದಿ ಅದರ ಅರ್ಥವನ್ನು ನನಗೆ ವಿವರಿಸಿದರೆ, ನಾನು ನಿನಗೆ ಕಂದುಬಣ್ಣದ ಬಟ್ಟೆಗಳನ್ನು ಕೊಡುತ್ತೇನೆ. ನಿನ್ನ ಕತ್ತಿಗೆ ಚಿನ್ನದ ಹಾರವನ್ನು ಹಾಕುತ್ತೇನೆ; ನಿನ್ನನ್ನು ನನ್ನ ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುತ್ತೇನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |