Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 5:19 - ಕನ್ನಡ ಸಮಕಾಲಿಕ ಅನುವಾದ

19 ಅವರು ಅವನಿಗೆ ಕೊಟ್ಟ ಮಹತ್ತಿನ ನಿಮಿತ್ತ ಸಕಲ ಪ್ರಜೆಗಳೂ, ಜನಾಂಗಗಳೂ, ಭಾಷೆಯವರೂ ಅವನ ಮುಂದೆ ಹೆದರಿ ನಡುಗಿದರು. ತನಗೆ ಬೇಕಾದವರನ್ನು ಬದುಕಿಸಿ ಬೇಡವಾದವರನ್ನು ಕೊಂದನು. ಇಷ್ಟವಿದ್ದವರನ್ನು ಸುಸ್ಥಿತಿಗೆ ಏರಿಸಿ, ಇಷ್ಟವಿಲ್ಲದವರನ್ನು ಕೆಳಕ್ಕಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಈ ಮಹತ್ವದ ನಿಮಿತ್ತ ಸಕಲ ಜನಾಂಗ, ಕುಲ, ಭಾಷೆಗಳವರು ಅವನ ಮುಂದೆ ಬೆಚ್ಚಿಬೆದರಿದರು; ತನಗೆ ಬೇಕಾದವರನ್ನು ಕೊಲ್ಲಿಸಿದನು, ತನಗೆ ಬೇಕಾದವರನ್ನು ಉಳಿಸಿದನು, ಮನಸ್ಸು ಬಂದವರನ್ನು ಅಭಿವೃದ್ಧಿಮಾಡಿದನು, ಮನಸ್ಸು ಬಂದವರನ್ನು ಇಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಇಂಥ ಮಹತ್ವ ವರದ ನಿಮಿತ್ತ ಸಕಲ ದೇಶ-ಕುಲ-ಭಾಷೆಗಳವರು ಅವರ ಮುಂದೆ ಭಯದಿಂದ ನಡುಗುತ್ತಿದ್ದರು. ತಮಗೆ ಇಷ್ಟಬಂದ ಹಾಗೆ ಒಬ್ಬನನ್ನು ಬದುಕಿಸಿದರು, ಇನ್ನೊಬ್ಬನನ್ನು ಕೊಲ್ಲಿಸಿದರು. ಮನಸ್ಸಿಗೆ ಬಂದಹಾಗೆ ಒಬ್ಬನನ್ನು ಮೇಲೇರಿಸಿದರು, ಇನ್ನೊಬ್ಬನನ್ನು ಕೆಳಕ್ಕಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಈ ಮಹತ್ವ ವರದ ನಿವಿುತ್ತ ಸಕಲ ಜನಾಂಗಕುಲಭಾಷೆಗಳವರು ಅವನ ಮುಂದೆ ಬೆಚ್ಚಿಬೆದರಿದರು; ಬೇಕುಬೇಕಾದವರನ್ನು ಕೊಲ್ಲಿಸಿದನು, ಬೇಕುಬೇಕಾದವರನ್ನು ಉಳಿಸಿದನು, ಮನಸ್ಸುಬಂದವರನ್ನು ಏರಿಸಿದನು, ಮನಸ್ಸುಬಂದವರನ್ನು ಇಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಹಲವಾರು ಜನಾಂಗದ ಮತ್ತು ಭಾಷೆಯ ಜನರು ಅವನಿಗೆ ತುಂಬ ಹೆದರುತ್ತಿದ್ದರು. ಏಕೆಂದರೆ ಮಹೋನ್ನತನಾದ ದೇವರು ಅವನನ್ನು ಬಹುದೊಡ್ಡ ರಾಜನನ್ನಾಗಿ ಮಾಡಿದ್ದನು. ನೆಬೂಕದ್ನೆಚ್ಚರನು ಯಾರನ್ನಾದರೂ ಕೊಲ್ಲಬೇಕೆಂದು ಇಚ್ಛಿಸಿದರೆ ಅವನನ್ನು ಕೊಲ್ಲಿಸಿಬಿಡುತ್ತಿದ್ದನು; ತನಗೆ ಬೇಕಾದವರನ್ನು ಉಳಿಸುತ್ತಿದ್ದನು; ತನ್ನ ಮನಸ್ಸಿಗೆ ಬಂದವರನ್ನು ಏರಿಸುತ್ತಿದ್ದನು; ತನ್ನ ಮನಸ್ಸಿಗೆ ಬಂದವರನ್ನು ಇಳಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 5:19
22 ತಿಳಿವುಗಳ ಹೋಲಿಕೆ  

ಯಾರು ಅಡ್ಡಬೀಳದೆ, ನಮಸ್ಕರಿಸದೆ ಇರುವರೋ ಅಂಥವರನ್ನು ಅದೇ ಗಳಿಗೆಯಲ್ಲಿ ಉರಿಯುವ ಬೆಂಕಿಯ ಕುಲುಮೆಯಲ್ಲಿ ಹಾಕಲಾಗುವುದು. ಇದು ರಾಜಾಜ್ಞೆ,” ಎಂದನು.


ಆಗ ಘೋಷಣೆ ಮಾಡುವವರು ಗಟ್ಟಿಯಾಗಿ ಕೂಗಿ, “ಪ್ರಜೆಗಳೇ, ಜನಾಂಗಗಳೇ, ವಿವಿಧ ಭಾಷೆಯವರೇ


ಪ್ರತಿಯೊಬ್ಬನೂ ಮೇಲಧಿಕಾರಿಗಳಿಗೆ ಅಧೀನನಾಗಿರಬೇಕು, ಏಕೆಂದರೆ ದೇವರು ನೇಮಿಸಿದ ಅಧಿಕಾರದ ಹೊರತು ಬೇರೆ ಯಾವದೂ ಇರುವುದಿಲ್ಲ. ಇರುವ ಅಧಿಕಾರಗಳು ದೇವರಿಂದಲೇ ನೇಮಕಗೊಂಡಿವೆ.


ಅದಕ್ಕೆ ಯೇಸು, “ಪರಲೋಕದಿಂದ ನಿನಗೆ ಕೊಟ್ಟ ಹೊರತು ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಿನ ಪಾಪವಿದೆ,” ಎಂದು ಉತ್ತರಕೊಟ್ಟರು.


ಇದಲ್ಲದೆ ದ್ರಾಕ್ಷಾರಸವು ಮೋಸಕರ. ಅವನು ಅಹಂಕಾರಿ, ಎಂದಿಗೂ ವಿಶ್ರಾಂತಿ ಹೊಂದನು. ಪಾತಾಳದ ಹಾಗೆ ತನ್ನ ಆಶೆಯನ್ನು ದೊಡ್ಡದಾಗಿ ಮಾಡಿಕೊಳ್ಳುತ್ತಾನೆ. ಮರಣದ ಹಾಗಿದ್ದಾನೆ, ತೃಪ್ತಿಯಾಗುವುದಿಲ್ಲ; ಎಲ್ಲಾ ಜನಾಂಗಗಳನ್ನು ತನಗಾಗಿ ಕೂಡಿಸುತ್ತಾನೆ; ಎಲ್ಲಾ ಜನರನ್ನು ತನ್ನ ಸೆರೆಯಾಳುಗಳಾಗಿ ಮಾಡಿಕೊಳ್ಳುತ್ತಾನೆ.


ಅರಸನೇ, ಆ ಮರವು ನೀನೇ ಆಗಿರುವೆ. ನೀನು ಬೆಳೆದು ಬಲವಾಗಿರುವೆ. ಹೌದು, ನಿನ್ನ ಮಹತ್ತು ಬೆಳೆದು ಆಕಾಶಕ್ಕೂ, ನಿನ್ನ ಅಧಿಕಾರವು ಭೂಮಿಯ ಅಂತ್ಯದವರೆಗೂ ಮುಟ್ಟುವುದು.


ಆದ್ದರಿಂದ ಸಕಲ ಪ್ರಜೆ, ಜನಾಂಗ, ಭಾಷೆಗಳಲ್ಲಿ ಯಾರು ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬುವರ ದೇವರಿಗೆ ವಿರೋಧವಾಗಿ ದೂಷಣೆ ಮಾಡುವರೋ, ಅವರನ್ನು ತುಂಡುತುಂಡಾಗಿ ಮಾಡಿರಿ, ಅವರ ಮನೆಗಳು ತಿಪ್ಪೆ ಗುಂಡಿಗಳಾಗಿ ಮಾಡಿರಿ, ಎಂದು ನಾನು ರಾಜಾಜ್ಞೆಯನ್ನು ವಿಧಿಸುತ್ತೇನೆ. ಏಕೆಂದರೆ ಈ ವಿಧವಾಗಿ ರಕ್ಷಿಸುವ ದೇವರು ಇನ್ಯಾರೂ ಇರುವುದಿಲ್ಲ,” ಎಂದನು.


ಅರಸನ ಕೋಪವು ಮೃತ್ಯುವಿನ ದೂತರಂತೆ ಇರುತ್ತದೆ, ಆದರೆ ಜ್ಞಾನಿಯು ಅದನ್ನು ಶಮನಪಡಿಸುವನು.


ಅವರು ಹೊಸಹಾಡನ್ನು ಹಾಡುತ್ತಾ, “ನೀವು ಸುರುಳಿಯನ್ನು ತೆಗೆದುಕೊಂಡು ಅದರ ಮುದ್ರೆಗಳನ್ನು ಒಡೆಯುವುದಕ್ಕೆ ಯೋಗ್ಯರಾಗಿದ್ದೀರಿ. ಏಕೆಂದರೆ ನೀವು ವಧಿತರಾಗಿ, ನಿಮ್ಮ ರಕ್ತದಿಂದ ಸಕಲ ಕುಲ, ಭಾಷೆ, ಪ್ರಜೆ, ರಾಷ್ಟ್ರಗಳವರಿಂದ ಮನುಷ್ಯರನ್ನು ದೇವರಿಗಾಗಿ ಕೊಂಡುಕೊಂಡಿರುವಿರಿ.


ಇದಲ್ಲದೆ ಅವನ ಸಂಗಡ ಪ್ರೀತಿಯಿಂದ ಮಾತನಾಡಿ, ತನ್ನ ಸಂಗಡ ಬಾಬೆಲಿನಲ್ಲಿದ್ದ ಎಲ್ಲಾ ಅರಸರಿಗಿಂತ ಅವನಿಗೆ ಉನ್ನತಸ್ಥಾನವನ್ನು ಕೊಟ್ಟನು.


ಆದ್ದರಿಂದ ನಾನು ಅವನನ್ನು ಜನಾಂಗಗಳಲ್ಲಿ ಶೂರನಾದ ಒಬ್ಬನ ಕೈಗೆ ಕೊಟ್ಟಿದ್ದೇನೆ. ಇವನು ನಿಶ್ಚಯವಾಗಿ ಅದನ್ನು ದಂಡಿಸುತ್ತಾನೆ ಅದರ ದುಷ್ಟತ್ವದ ನಿಮಿತ್ತ ನಾನು ಅದನ್ನು ತಳ್ಳಿಹಾಕಿದ್ದೇನೆ.


“ ‘ಈ ತೀರ್ಮಾನವು ದೂತರಿಂದ ಪ್ರಕಟವಾಯಿತು, ಪರಿಶುದ್ಧರು ಅಂತಿಮ ನಿರ್ಣಯವನ್ನು ಘೋಷಿಸುವರು, ಮಹೋನ್ನತರು ಜನರ ರಾಜ್ಯಗಳ ಮೇಲೆ ಸರ್ವಾಧಿಕಾರಿಯಾಗಿರುವರೆಂದೂ, ರಾಜ್ಯಗಳನ್ನು ತಮ್ಮ ಮನಸ್ಸಿಗೆ ಬಂದವರಿಗೆ ಕೊಡುವರೆಂದೂ, ಅವುಗಳ ಮೇಲೆ ಕೀಳಾದವರನ್ನು ನೇಮಿಸುವರೆಂದೂ ಇದರಿಂದ ಜೀವಿತರು ತಿಳಿದುಕೊಳ್ಳುವರು.’


ಆಗ ಬಲವುಳ್ಳ ಒಬ್ಬ ಅರಸನು ಉದಯಿಸುವನು. ಅವನು ಮಹಾಅಧಿಕಾರದಿಂದ ಆಳುವನು ಮತ್ತು ತನ್ನ ಇಷ್ಟದ ಪ್ರಕಾರ ಮಾಡುವನು.


ಆದರೆ ಅವನಿಗೆ ಎದುರಾಗಿ ಬರುವವನು ತನ್ನ ಇಷ್ಟದ ಪ್ರಕಾರ ಮಾಡುವನು. ಯಾರೂ ಅವನ ಮುಂದೆ ನಿಲ್ಲಲಾರರು. ಅವನು ರಮ್ಯವಾದ ದೇಶದಲ್ಲಿ ನಿಲ್ಲುವನು. ಅದನ್ನು ನಾಶಮಾಡುವ ಅಧಿಕಾರ ಹೊಂದಿರುವನು.


ಅರಸನು ತನ್ನ ಇಷ್ಟದ ಪ್ರಕಾರ ಮಾಡುವನು. ತನ್ನನ್ನು ತಾನೇ ಹೆಚ್ಚಿಸಿಕೊಂಡು, ತನ್ನನ್ನು ಎಲ್ಲಾ ದೇವರುಗಳಿಗಿಂತಲೂ ದೊಡ್ಡವನನ್ನಾಗಿ ಮಾಡಿಕೊಂಡು, ದೇವರುಗಳ ದೇವರಿಗೆ ವಿರೋಧವಾಗಿ ಆಶ್ಚರ್ಯವಾದ ಸಂಗತಿಗಳನ್ನು ಮಾತನಾಡಿ, ರೋಷವು ತೀರುವವರೆಗೂ ವೃದ್ಧಿಯಾಗಿರುವನು. ಹೀಗೆ ನಿಶ್ಚಯವಾದದ್ದು ನೆರವೇರಲೇಬೇಕು.


ಅರಸನನ್ನು ಬಿಟ್ಟುಹೋಗುವುದಕ್ಕೆ ಆತುರ ಪಡಬೇಡಿರಿ. ಅರಸನು ತನಗೆ ಇಷ್ಟಬಂದದ್ದನ್ನೆಲ್ಲಾ ಮಾಡುತ್ತಾನೆ. ನೀವು ಕೆಟ್ಟ ಕಾರ್ಯಕ್ಕಾಗಿ ನಿಲ್ಲಬೇಡಿರಿ.


ಆಗ ಬೇಲ್ತೆಶಚ್ಚರನೆಂಬ ಹೆಸರುಳ್ಳ ದಾನಿಯೇಲನು ಒಂದು ಗಳಿಗೆ ವಿಸ್ಮಿತನಾಗಿ ತನ್ನ ಆಲೋಚನೆಗಳಲ್ಲಿ ಕಳವಳಗೊಂಡನು. ಆಗ ಅರಸನು ಮಾತನಾಡಿ, “ಬೇಲ್ತೆಶಚ್ಚರನೇ, ಕನಸಾದರೂ, ಅದರ ಅರ್ಥವಾದರೂ ನಿನ್ನನ್ನು ಕಳವಳಪಡಿಸದಿರಲಿ,” ಎಂದನು. ಬೇಲ್ತೆಶಚ್ಚರನು ಉತ್ತರವಾಗಿ, “ನನ್ನ ಒಡೆಯನೇ, ಆ ಕನಸು ನಿನ್ನ ವೈರಿಗಳಿಗೂ, ಅದರ ಅರ್ಥವು ನಿನ್ನ ಶತ್ರುಗಳಿಗೂ ಆಗಲಿ.


ಆ ಮಹಾ ಸೈನ್ಯವನ್ನು ಅವನು ತೆಗೆದುಹಾಕಿದ ಮೇಲೆ, ಅವನ ಹೃದಯವು ಹೆಚ್ಚಳ ಪಡುವುದು. ಸಹಸ್ರಾರು ಸೈನಿಕರನ್ನು ಬೀಳಿಸಿದ್ದರೂ, ಪ್ರಾಬಲ್ಯಕ್ಕೆ ಬರುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು