Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 5:20 - ಕನ್ನಡ ಸಮಕಾಲಿಕ ಅನುವಾದ

20 ಆದರೆ ಅವನ ಹೃದಯವು ಹೆಮ್ಮೆಯಿಂದ ಉಬ್ಬಿಕೊಂಡಾಗ ಮತ್ತು ಅವನ ಹೃದಯವು ಗಟ್ಟಿಯಾದಾಗ, ಅವನನ್ನು ಸಿಂಹಾಸನದಿಂದ ತೆಗೆದುಹಾಕಲಾಯಿತು ಮತ್ತು ಅವನ ಪ್ರತಿಷ್ಠೆಯನ್ನು ಕಿತ್ತುಕೊಳ್ಳಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 “ಹೀಗೆ ಅವನ ಹೃದಯವು ಉಬ್ಬಿ, ಅವನ ಸ್ವಭಾವವು ಕಠಿಣವಾಗಿ ಅವನಿಗೆ ಸೊಕ್ಕೇರಲು ಅವನನ್ನು ರಾಜಾಸನದಿಂದ ತಳ್ಳಿ, ಮಾನವನ್ನು ತೆಗೆದುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಹಾಗೆ ಅವರ ಎದೆ ಗರ್ವದಿಂದ ಉಬ್ಬಿಹೋಯಿತು. ಮನಸ್ಸಿಗೆ ಸೊಕ್ಕೇರಿಹೋಯಿತು. ಅವರನ್ನೂ ರಾಜಾಸ್ಥಾನದಿಂದ ತಳ್ಳಲಾಯಿತು. ಮಾನ ಕಳೆದುಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಹೀಗೆ ಅವನ ಹೃದಯವು ಉಬ್ಬಿ ಅವನ ಸ್ವಭಾವವು ಜಡವಾಗಿ ಅವನಿಗೆ ಸೊಕ್ಕೇರಲು ಅವನನ್ನು ರಾಜಾಸನದಿಂದ ತಳ್ಳಿ ಮಾನವನ್ನು ತೆಗೆದುಬಿಟ್ಟನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 “ಆದರೆ ನೆಬೂಕದ್ನೆಚ್ಚರನು ಬಹಳ ಅಹಂಕಾರಿಯಾಗಿದ್ದನು ಮತ್ತು ಹಟಮಾರಿಯಾಗಿದ್ದನು. ಆದ್ದರಿಂದ ಅವನ ಅಧಿಕಾರವನ್ನು ಕಸಿದುಕೊಳ್ಳಲಾಯಿತು. ರಾಜಸಿಂಹಾಸನದಿಂದ ಇಳಿಸಿ ಅವನ ಎಲ್ಲ ಘನತೆಗೌರವಗಳನ್ನು ಕಿತ್ತುಕೊಳ್ಳಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 5:20
27 ತಿಳಿವುಗಳ ಹೋಲಿಕೆ  

ನಿಮ್ಮಲ್ಲಿ ಯಾರೂ ಪಾಪದಿಂದ ಮೋಸಹೋಗಿ ಕಠಿಣರಾಗದಂತೆ, “ಈ ಹೊತ್ತು” ಎಂಬುದು ಇರುವವರೆಗೆ ಪ್ರತಿದಿನವೂ ಒಬ್ಬರನ್ನೊಬ್ಬರು ಪ್ರೋತ್ಸಾಹಿಸಿರಿ.


ರಾಜನಿಗೂ ರಾಜಮಾತೆಗೂ ಹೀಗೆ ಹೇಳಿರಿ, “ನೆಲದಲ್ಲಿ ಕೂತುಕೊಳ್ಳಿರಿ, ನಿಮ್ಮ ಅಂದದ ಕಿರೀಟವು ನಿಮ್ಮ ತಲೆಯಿಂದ ಕೆಳಗೆ ಬಿದ್ದಿದೆ.”


ಇದಲ್ಲದೆ ಅವನು ದೇವರ ಮೇಲೆ ಆಣೆ ಇಡುವಂತೆ ಮಾಡಿದ ಅರಸನಾದ ನೆಬೂಕದ್ನೆಚ್ಚರನಿಗೆ ತಿರುಗಿಬಿದ್ದನು. ಹೇಗೆಂದರೆ ಅವನು ಇಸ್ರಾಯೇಲಿನ ಯೆಹೋವ ದೇವರ ಕಡೆಗೆ ತಿರುಗದೆ, ಹಟಮಾರಿಯಾಗಿ ತನ್ನ ಹೃದಯವನ್ನು ಕಠಿಣ ಮಾಡಿಕೊಂಡನು.


ಆದರೆ ಅವರು ಕೇಳದೆ ತಮ್ಮ ದೇವರಾದ ಯೆಹೋವ ದೇವರಲ್ಲಿ ನಂಬಿಕೆ ಇಡದೆ ತಮ್ಮ ಪಿತೃಗಳಂತೆ ದೇವರ ಆಜ್ಞೆಗಳಿಗೆ ಮಣಿಯದೆ,


ನೀನು ಇನ್ನೂ ಅವರನ್ನು ಕಳುಹಿಸದೆ ನನ್ನ ಜನರಿಗೆ ವಿರೋಧವಾಗಿ ನಿನ್ನನ್ನು ನೀನೇ ಹೆಚ್ಚಿಸಿಕೊಳ್ಳುತ್ತೀಯೋ?


ನಾಶನಕ್ಕೆ ಮುಂದಾಗಿ ಗರ್ವ ಹೋಗುತ್ತದೆ. ಬೀಳುವಿಕೆಯ ಮುಂಚೆ ಜಂಬದ ಆತ್ಮ.


“ನಾನು ನಿಮಗೆ ಹೇಳುತ್ತೇನೆ, ಅವನಲ್ಲ, ಇವನೇ ನೀತಿವಂತನೆಂಬ ನಿರ್ಣಯ ಪಡೆದವನಾಗಿ ತನ್ನ ಮನೆಗೆ ಹೋದನು. ಏಕೆಂದರೆ, ಯಾರಾದರೂ ತಮ್ಮನ್ನು ತಾವೇ ಹೆಚ್ಚಿಸಿಕೊಳ್ಳುವರೋ ಅವರು ತಗ್ಗಿಸಲಾಗುವರು ಮತ್ತು ತಮ್ಮನ್ನು ತಾವೇ ತಗ್ಗಿಸಿಕೊಳ್ಳುವವರು ಹೆಚ್ಚಿಸಲಾಗುವರು,” ಎಂದರು.


“ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾನೆ: ‘ಇಗೋ, ನಾನು ಈ ಪಟ್ಟಣದ ಮೇಲೆಯೂ, ಅದರ ಎಲ್ಲಾ ಊರುಗಳ ಮೇಲೆಯೂ, ಅದಕ್ಕೆ ವಿರೋಧವಾಗಿ ಹೇಳಿದ ಕೇಡನ್ನೆಲ್ಲಾ ತರಿಸುತ್ತೇನೆ. ಏಕೆಂದರೆ ಅವರು ನನ್ನ ಮಾತುಗಳನ್ನು ಕೇಳದ ಹಾಗೆ ತಮ್ಮ ಹೃದಯಗಳನ್ನು ಕಠಿಣ ಮಾಡಿಕೊಂಡಿದ್ದಾರೆ, ಎಂಬುದೇ.’ ”


ಹೃದಯದಲ್ಲಿ ಗರ್ವಿಷ್ಠನಾದ ಪ್ರತಿಯೊಬ್ಬನೂ ಯೆಹೋವ ದೇವರಿಗೆ ಅಸಹ್ಯ. ದುಷ್ಟನಿಗೆ ಶಿಕ್ಷೆಯು ತಪ್ಪುವುದಿಲ್ಲ.


ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕದ ಅರಸರನ್ನು ಸ್ತುತಿಸಿ, ಹೆಚ್ಚಿಸಿ ಘನಪಡಿಸುತ್ತೇನೆ. ಅವರ ಕ್ರಿಯೆಗಳೆಲ್ಲಾ ಸತ್ಯವೇ. ಅವರ ಮಾರ್ಗಗಳು ನ್ಯಾಯವೇ. ಗರ್ವದಲ್ಲಿ ನಡೆಯುವವರನ್ನು ಅವರೇ ತಗ್ಗಿಸಬಲ್ಲರು.


“ ‘ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ಈಜಿಪ್ಟಿನ ಸಹಾಯಕರು ಬೀಳುವರು. ಅದರ ಶಕ್ತಿಯ ಮದವು ಇಳಿದುಹೋಗುವುದು. ಅಲ್ಲಿಯ ಜನರು ಮಿಗ್ದೋಲಿನಿಂದ ಸೆವೇನೆಯ ಗೋಪುರದವರೆಗೆ ಖಡ್ಗದಿಂದ ಹತರಾಗುವರು ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


“ದೀಬೋನಿನ ನಿವಾಸಿಯಾದ ಮಗಳೇ, ನಿನ್ನ ವೈಭವದಿಂದ ಇಳಿದು ಬಾ; ಒಣಭೂಮಿಯ ಬಾಯಾರಿದವಳಂತೆ ಕೂತುಕೋ, ಏಕೆಂದರೆ ಮೋವಾಬನ್ನು ವಿನಾಶ ಮಾಡುವವನು ನಿನ್ನ ಮೇಲೆ ಬರುವನು; ನಿನ್ನ ಬಲವಾದ ಕೋಟೆಗಳನ್ನು ಕೆಡಿಸಿಬಿಡುವನು.


ಬಾಬಿಲೋನಿನ ಪುತ್ರಿಯಾದ ಕನ್ನಿಕೆಯೇ, ಕೆಳಕ್ಕೆ ಇಳಿದುಬಂದು, ಧೂಳಿನಲ್ಲಿ ಕುಳಿತುಕೋ! ಕಸ್ದೀಯರ ಪುತ್ರಿಯೇ, ಸಿಂಹಾಸನರಹಿತಳಾಗಿ ನೆಲದ ಮೇಲೆ ಕುಳಿತುಕೋ. ಏಕೆಂದರೆ ಇನ್ನು ಮೇಲೆ ನಿನ್ನನ್ನು ಕೋಮಲೆ ಮತ್ತು ನಾಜೂಕಾದವಳು ಎಂದು ಕರೆಯುವುದಿಲ್ಲ.


ಈಜಿಪ್ಟಿನವರೂ, ಫರೋಹನೂ ತಮ್ಮ ಹೃದಯವನ್ನು ಕಠಿಣ ಮಾಡಿದ ಹಾಗೆ, ನೀವು ನಿಮ್ಮ ಹೃದಯವನ್ನು ಕಠಿಣಪಡಿಸುವುದೇನು? ದೇವರು ಅವರ ಮಧ್ಯದಲ್ಲಿ ಆಶ್ಚರ್ಯಕರವಾದ ಕ್ರಿಯೆಗಳನ್ನು ನಡಿಸಿದಾಗ, ಅವರು ಇಸ್ರಾಯೇಲರನ್ನು ಅವರು ಹೋಗುವಹಾಗೆ ಕಳುಹಿಸಲಿಲ್ಲವೋ?


ಎಲ್ಲಾ ದೇವರುಗಳಿಗಿಂತ ಯೆಹೋವ ದೇವರೇ ದೊಡ್ಡವರೆಂದು ಈಗ ನಾನು ತಿಳಿದುಕೊಂಡಿದ್ದೇನೆ. ಏಕೆಂದರೆ ಈಜಿಪ್ಟಿನವರು ಗರ್ವಪಟ್ಟಿದ್ದರಿಂದ ಯೆಹೋವ ದೇವರು ಅವರನ್ನು ತಗ್ಗಿಸಿದರು,” ಎಂದನು.


“ ‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ. ಅವನು ಎತ್ತರವಾಗಿ ಬೆಳೆದು ತನ್ನ ತುದಿ ಮೋಡಗಳನ್ನು ಮುಟ್ಟುವಷ್ಟು ನೀಳವಾಗಿದ್ದುದರ ಬಗ್ಗೆ ಗರ್ವಪಟ್ಟನು.


ಆದ್ದರಿಂದ ಆ ಹೋತವು ಬಹಳವಾಗಿ ಬಲಗೊಂಡಿತು. ಆದರೆ ಅದು ಪ್ರಾಬಲ್ಯಕ್ಕೆ ಬಂದ ಮೇಲೆ ಅದರ ದೊಡ್ಡ ಕೊಂಬು ಮುರಿದುಹೋಯಿತು. ಅದರ ಸ್ಥಾನದಲ್ಲಿ ನಾಲ್ಕು ಅದ್ಭುತವಾದ ಕೊಂಬುಗಳು ಮೊಳೆತು, ಆಕಾಶದ ಚತುರ್ದಿಕ್ಕಿಗೆ ಚಾಚಿಕೊಂಡವು.


ಅರಸನು ತನ್ನ ಇಷ್ಟದ ಪ್ರಕಾರ ಮಾಡುವನು. ತನ್ನನ್ನು ತಾನೇ ಹೆಚ್ಚಿಸಿಕೊಂಡು, ತನ್ನನ್ನು ಎಲ್ಲಾ ದೇವರುಗಳಿಗಿಂತಲೂ ದೊಡ್ಡವನನ್ನಾಗಿ ಮಾಡಿಕೊಂಡು, ದೇವರುಗಳ ದೇವರಿಗೆ ವಿರೋಧವಾಗಿ ಆಶ್ಚರ್ಯವಾದ ಸಂಗತಿಗಳನ್ನು ಮಾತನಾಡಿ, ರೋಷವು ತೀರುವವರೆಗೂ ವೃದ್ಧಿಯಾಗಿರುವನು. ಹೀಗೆ ನಿಶ್ಚಯವಾದದ್ದು ನೆರವೇರಲೇಬೇಕು.


ಫರೋಹನು ಆಳುಗಳನ್ನು ಕಳುಹಿಸಿ ನೋಡಿದಾಗ, ಇಸ್ರಾಯೇಲರ ಪಶುಗಳಲ್ಲಿ ಒಂದೂ ಸತ್ತಿರಲಿಲ್ಲ. ಆದರೆ ಫರೋಹನ ಹೃದಯವು ಕಠಿಣವಾಗಿದ್ದುದರಿಂದ ಅವನು ಜನರನ್ನು ಹೋಗಗೊಡಿಸಲಿಲ್ಲ.


ಆದರೆ ಹಿಜ್ಕೀಯನು ತನಗೆ ಆದ ಉಪಕಾರಕ್ಕೆ ತಕ್ಕಂತೆ ನಡೆಯದೆ ಹೋದನು. ಏಕೆಂದರೆ ಅವನ ಹೃದಯವು ಅಹಂಕಾರದಿಂದ ತುಂಬಿತ್ತು. ಆದ್ದರಿಂದ ಅವನ ಮೇಲೆಯೂ, ಯೆಹೂದ ಮತ್ತು ಯೆರೂಸಲೇಮಿನ ಮೇಲೆಯೂ ಯೆಹೋವ ದೇವರ ರೌದ್ರ ಉಂಟಾಯಿತು.


ಆ ಮರದ ಬೇರಿನ ಮೋಟನ್ನು ಉಳಿಸಬೇಕೆಂಬ ಆಜ್ಞೆಯ ಅರ್ಥ ಏನೆಂದರೆ, ಪರಲೋಕವು ಆಳುತ್ತದೆಂದು ನೀನು ತಿಳಿದುಕೊಂಡ ಮೇಲೆ ನಿನ್ನ ರಾಜ್ಯವು ನಿನಗೆ ಪುನಃಸ್ಥಾಪನೆಯಾಗುವುದು.


ಅರಸನಾದ ನೆಬೂಕದ್ನೆಚ್ಚರನಿಗೆ ಇದೆಲ್ಲವೂ ಸಂಭವಿಸಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು