ದಾನಿಯೇಲ 6:10 - ಕನ್ನಡ ಸಮಕಾಲಿಕ ಅನುವಾದ10 ಶಾಸನಕ್ಕೆ ರುಜು ಹಾಕಿದ್ದಾಯಿತೆಂದು ದಾನಿಯೇಲನಿಗೆ ತಿಳಿದಾಗ, ಅವನು ತನ್ನ ಮನೆಗೆ ಹೋದನು. ಅವನ ಕೋಣೆಯಲ್ಲಿ ಕಿಟಕಿಗಳು ಯೆರೂಸಲೇಮಿಗೆ ಎದುರಾಗಿ ತೆರೆದಿರಲು, ಅವನು ಮೊದಲು ಮಾಡುತ್ತಿದ್ದ ಪ್ರಕಾರವೇ ದಿನಕ್ಕೆ ಮೂರು ಸಾರಿ ಮೊಣಕಾಲೂರಿ ತನ್ನ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆಯನ್ನೂ, ಸ್ತೋತ್ರವನ್ನೂ ಸಲ್ಲಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಶಾಸನಕ್ಕೆ ರುಜುವಾದದ್ದು ದಾನಿಯೇಲನಿಗೆ ತಿಳಿದಾಗ ಅವನು ತನ್ನ ಮನೆಗೆ ಹೋಗಿ ಯೆರೂಸಲೇಮಿನ ಕಡೆಗೆ ಕದವಿಲ್ಲದೆ ಕಿಟಕಿಗಳುಳ್ಳ ತನ್ನ ಮಹಡಿಯ ಕೋಣೆಯಲ್ಲಿ ವಾಡಿಕೆಯ ಪ್ರಕಾರ ದಿನಕ್ಕೆ ಮೂರಾವರ್ತಿ ಮೊಣಕಾಲೂರಿ ತನ್ನ ದೇವರಿಗೆ ಪ್ರಾರ್ಥನೆಮಾಡಿ ಸ್ತೋತ್ರ ಸಲ್ಲಿಸುತ್ತಿದ್ದನು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಶಾಸನಕ್ಕೆ ರುಜುವಾದ ವಿಷಯ ದಾನಿಯೇಲನಿಗೆ ತಿಳಿಯಿತು. ಆತ ತನ್ನ ಮನೆಗೆ ಹೊರಟುಹೋದನು. ಅಲ್ಲಿ ತನ್ನ ಮಹಡಿಯ ಕೊಠಡಿಯಲ್ಲಿನ ಕಿಟಕಿಗಳು ಜೆರುಸಲೇಮಿನ ಕಡೆಗೆ ತೆರೆದಿದ್ದವು. ವಾಡಿಕೆಯ ಪ್ರಕಾರ ದಿನಕ್ಕೆ ಮೂರಾವರ್ತಿ ಅಲ್ಲಿ ತನ್ನ ದೇವರಿಗೆ ಮೊಣಕಾಲೂರಿ ಪ್ರಾರ್ಥಿಸಿ ಸ್ತೋತ್ರ ಸಲ್ಲಿಸುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಶಾಸನಕ್ಕೆ ರುಜುವಾದದ್ದು ದಾನಿಯೇಲನಿಗೆ ತಿಳಿದಾಗ ಅವನು ತನ್ನ ಮನೆಗೆ ಹೋಗಿ ಯೆರೂಸಲೇವಿುನ ಕಡೆಗೆ ಕದವಿಲ್ಲದ ಕಿಟಕಿಗಳುಳ್ಳ ತನ್ನ ಮಹಡಿಯ ಕೋಣೆಯಲ್ಲಿ ಯಥಾಪ್ರಕಾರ ದಿನಕ್ಕೆ ಮೂರಾವರ್ತಿ ಮೊಣಕಾಲೂರಿ ತನ್ನ ದೇವರಿಗೆ ಪ್ರಾರ್ಥನೆಮಾಡಿ ಸ್ತೋತ್ರಸಲ್ಲಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ದಾನಿಯೇಲನು ಯಾವಾಗಲೂ ಪ್ರತಿದಿನ ಮೂರು ಸಲ ದೇವರಲ್ಲಿ ಪ್ರಾರ್ಥನೆಯನ್ನು ಮಾಡುತ್ತಿದ್ದನು. ದಾನಿಯೇಲನು ಮೊಣಕಾಲೂರಿ ದೇವರಲ್ಲಿ ಪ್ರಾರ್ಥಿಸುತ್ತಿದ್ದನು ಮತ್ತು ದೇವರನ್ನು ಸ್ತುತಿಸುತ್ತಿದ್ದನು. ಈ ಹೊಸ ಶಾಸನದ ಬಗ್ಗೆ ಕೇಳಿದ ಮೇಲೆ ದಾನಿಯೇಲನು ತನ್ನ ಮನೆಯ ಮಹಡಿಯ ಮೇಲಿದ್ದ ತನ್ನ ಕೋಣೆಗೆ ಹೋಗಿ ಜೆರುಸಲೇಮಿನ ಕಡೆಗೆ ತೆರೆದ ಕಿಟಕಿಯ ಬಳಿ ಮೊಣಕಾಲೂರಿ ಎಂದಿನಂತೆ ಪ್ರಾರ್ಥನೆಮಾಡಿದನು. ಅಧ್ಯಾಯವನ್ನು ನೋಡಿ |