Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 6:14 - ಕನ್ನಡ ಸಮಕಾಲಿಕ ಅನುವಾದ

14 ಅರಸನು ಯಾವಾಗ ಈ ಮಾತುಗಳನ್ನು ಕೇಳಿದನೋ, ಆಗ ತನ್ನಲ್ಲಿಯೇ ಬಹಳವಾಗಿ ಬೇಸರಗೊಂಡು ದಾನಿಯೇಲನನ್ನು ಅದರಿಂದ ತಪ್ಪಿಸಬೇಕೆಂದು ತನ್ನ ಹೃದಯದಲ್ಲಿ ತಿಳಿದು, ಸೂರ್ಯಾಸ್ತಮಾನದವರೆಗೂ ಪ್ರಯತ್ನಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆದರೆ ರಾಜನು ಈ ಮಾತುಗಳನ್ನು ಕೇಳಿ ಬಹಳ ವ್ಯಸನಗೊಂಡು ದಾನಿಯೇಲನನ್ನು ಇದರಿಂದ ತಪ್ಪಿಸಬೇಕೆಂದು ಮನಸ್ಸುಮಾಡಿ ಇವನನ್ನು ಹೇಗೆ ರಕ್ಷಿಸಲಿ ಎಂದು ಸೂರ್ಯಾಸ್ತಮಾನದ ತನಕ ಆಲೋಚಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಆದರೆ ರಾಜನು ಈ ಮಾತುಗಳನ್ನು ಕೇಳಿ ಬಹಳ ವ್ಯಸನಗೊಂಡನು. ದಾನಿಯೇಲನನ್ನು ಈ ಇಕ್ಕಟ್ಟಿನಿಂದ ತಪ್ಪಿಸಲು ಮನಸ್ಸು ಮಾಡಿಕೊಂಡನು. ಆದರೆ ಹೇಗೆ ರಕ್ಷಿಸುವುದೆಂದು ಸೂರ್ಯಾಸ್ತಮದವರೆಗೂ ಆಲೋಚಿಸುತ್ತಾ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ರಾಜನು ಈ ಮಾತುಗಳನ್ನು ಕೇಳಿ ಬಹಳ ವ್ಯಸನಗೊಂಡು ದಾನಿಯೇಲನನ್ನು ತಪ್ಪಿಸಬೇಕೆಂದು ಮನಸ್ಸುಮಾಡಿ ಇವನನ್ನು ಹೇಗೆ ರಕ್ಷಿಸಲಿ ಎಂದು ಸೂರ್ಯಾಸ್ತಮಾನದ ತನಕ ಪ್ರಯಾಸಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಇದನ್ನು ಕೇಳಿ ಅರಸನಿಗೆ ದುಃಖವೂ ವ್ಯಸನವೂ ಆಯಿತು. ದಾನಿಯೇಲನನ್ನು ರಕ್ಷಿಸಲು ಉಪಾಯವೊಂದನ್ನು ಕಂಡುಹಿಡಿಯಲು ಸಾಯಂಕಾಲದವರೆಗೆ ಯೋಚಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 6:14
10 ತಿಳಿವುಗಳ ಹೋಲಿಕೆ  

ಇದರಿಂದ ಅರಸನಿಗೆ ಬಹಳ ದುಃಖವಾದರೂ ತನ್ನ ಪ್ರಮಾಣದ ನಿಮಿತ್ತವಾಗಿ ಮತ್ತು ಭೋಜನಕ್ಕೆ ಬಂದ ಅತಿಥಿಗಳ ನಿಮಿತ್ತವಾಗಿ ಆಕೆಯ ಕೋರಿಕೆಯನ್ನು ನಿರಾಕರಿಸಲಿಲ್ಲ.


ನೆಬೂಕದ್ನೆಚ್ಚರನು ಉಗ್ರಕೋಪವುಳ್ಳವನಾಗಿ ಶದ್ರಕ್, ಮೇಶಕ್, ಅಬೇದ್‌ನೆಗೋ ಅವರನ್ನು ಹಿಡಿದು ತರಬೇಕೆಂದು ಆಜ್ಞಾಪಿಸಿದನು. ಹಾಗೆಯೇ ಆ ಮನುಷ್ಯರನ್ನು ಅರಸನ ಮುಂದೆ ಕರೆತಂದರು.


ದಾನನವರಲ್ಲಿ 28,600 ಮಂದಿ ಯುದ್ಧ ನಿಪುಣರು.


ಆಗ ಹಾಮಾನನು ಅರಸನಾದ ಅಹಷ್ವೇರೋಷನಿಗೆ, “ನಿನ್ನ ರಾಜ್ಯದ ಸಕಲ ಪ್ರಾಂತಗಳಲ್ಲಿರುವ ಜನರೊಳಗೆ ಚದರಿ ಬಂದು ವಾಸಿಸುವ ಪ್ರತ್ಯೇಕವಾದ ಜನಾಂಗದ ಜನರಿದ್ದಾರೆ. ಅವರ ರೀತಿನೀತಿಗಳು ಎಲ್ಲಾ ಜನರಿಗಿಂತಲೂ ಬೇರೆಯಾಗಿರುತ್ತವೆ. ಈ ಜನರು ಅರಸನ ನಿಯಮಗಳನ್ನು ಕೈಗೊಳ್ಳುವುದೇ ಇಲ್ಲ. ಆದಕಾರಣ ಇಂಥವರನ್ನು ಸುಮ್ಮನೇ ಬಿಡುವುದು ಅರಸನ ಪ್ರಯೋಜನಕ್ಕೆ ತಕ್ಕದ್ದಲ್ಲ.


ಇವರಲ್ಲಿ ಯೆಹೂದದಿಂದ ದಾನಿಯೇಲ, ಹನನ್ಯ, ಮೀಶಾಯೇಲ್, ಅಜರ್ಯ ಎಂಬವರಿದ್ದರು.


ಆದರೆ ನೀನು ಬಾಬಿಲೋನಿನ ಪ್ರಾಂತದ ಕೆಲಸಗಳ ಮೇಲೆ ಇಟ್ಟಿರುವ ಯೆಹೂದ್ಯರಾದ ಕೆಲವರು ಎಂದರೆ ಶದ್ರಕ್, ಮೇಶಕ್, ಅಬೇದ್‌ನೆಗೋ ಅವರು ನಿನ್ನನ್ನು ಲಕ್ಷಿಸುವುದಿಲ್ಲ. ಅವರು ನಿನ್ನ ದೇವರುಗಳನ್ನಾಗಲಿ, ನೀನು ನಿಲ್ಲಿಸಿರುವ ಬಂಗಾರದ ಪ್ರತಿಮೆಯನ್ನಾದರೂ ಆರಾಧಿಸುವುದಿಲ್ಲ,” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು