ದಾನಿಯೇಲ 6:16 - ಕನ್ನಡ ಸಮಕಾಲಿಕ ಅನುವಾದ16 ಆಗ ರಾಜನು ಆಜ್ಞಾಪಿಸಲು, ಅವರು ದಾನಿಯೇಲನನ್ನು ತಂದು ಸಿಂಹದ ಗುಹೆಯಲ್ಲಿ ಹಾಕಿದರು. ಅರಸನು ದಾನಿಯೇಲನಿಗೆ, “ನೀನು ಯಾವಾಗಲೂ ಸೇವಿಸುವ ನಿನ್ನ ದೇವರು ನಿನ್ನನ್ನು ಕಾಪಾಡಲಿ!” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ದಾನಿಯೇಲನನ್ನು ತಂದು ಸಿಂಹಗಳ ಗವಿಯಲ್ಲಿ ರಾಜನ ಅಪ್ಪಣೆಯಂತೆ ಹಾಕಿಬಿಟ್ಟರು. ಆಗ ರಾಜನು ದಾನಿಯೇಲನಿಗೆ, “ನೀನು ನಿತ್ಯವೂ ಆರಾಧಿಸುವ ದೇವರು ನಿನ್ನನ್ನುದ್ಧರಿಸಲಿ” ಎಂದು ಹರಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಈ ಕಾರಣ ರಾಜನು ಅಪ್ಪಣೆ ಕೊಡಲೇಬೇಕಾಯಿತು. ಕೂಡಲೆ ಅವರು ದಾನಿಯೇಲನನ್ನು ತಂದು ಸಿಂಹಗಳ ಗವಿಯಲ್ಲಿ ಹಾಕಿಯೇಬಿಟ್ಟರು. ಆಗ ರಾಜನು ದಾನಿಯೇಲನಿಗೆ, “ನೀನು ದಿನನಿತ್ಯವೂ ಆರಾಧಿಸುವ ದೇವರು ನಿನ್ನನ್ನು ಉದ್ಧರಿಸಲಿ!” ಎಂದು ಹರಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ದಾನಿಯೇಲನನ್ನು ತಂದು ಸಿಂಹಗಳ ಗವಿಯಲ್ಲಿ ಹಾಕಿಬಿಟ್ಟರು. ಆಗ ರಾಜನು ದಾನಿಯೇಲನಿಗೆ - ನೀನು ನಿತ್ಯವೂ ಭಜಿಸುವ ದೇವರು ನಿನ್ನನ್ನುದ್ಧರಿಸಲಿ ಎಂದು ಹರಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ರಾಜನಾದ ದಾರ್ಯಾವೆಷನು ಆಜ್ಞೆಯನ್ನು ಕೊಟ್ಟನು. ಅವರು ದಾನಿಯೇಲನನ್ನು ಸಿಂಹಗಳ ಗುಹೆಯಲ್ಲಿ ಎಸೆದರು. ಅರಸನು ದಾನಿಯೇಲನಿಗೆ, “ನೀನು ಸೇವೆ ಮಾಡುತ್ತಲೇ ಇರುವ ದೇವರು ನಿನ್ನನ್ನು ರಕ್ಷಿಸುವನೆಂದು ನನಗೆ ಗೊತ್ತಿದೆ” ಎಂದನು. ಅಧ್ಯಾಯವನ್ನು ನೋಡಿ |