ದಾನಿಯೇಲ 6:2 - ಕನ್ನಡ ಸಮಕಾಲಿಕ ಅನುವಾದ2 ಇವರ ಮೇಲೆ ಮೂವರು ದೇಶಾಧಿಪತಿಗಳನ್ನು ನೇಮಿಸುವುದು ದಾರ್ಯಾವೆಷನಿಗೆ ಹಿತವೆಂದು ತೋಚಿತು. ಇದರಿಂದ ರಾಜನಿಗೆ ಯಾವ ನಷ್ಟವಾಗದಂತೆ ಲೆಕ್ಕ ಒಪ್ಪಿಸಲಾಯಿತು. ಇವರಲ್ಲಿ ದಾನಿಯೇಲನು ಒಬ್ಬನಾಗಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ರಾಜರಿಗೆ ನಷ್ಟವಾಗದಂತೆ ಆ ದೇಶಾಧಿಪತಿಗಳ ಮೇಲೆ ಅವರಿಂದ ಲೆಕ್ಕ ತೆಗೆದುಕೊಳ್ಳುವ ಮೂವರು ಮುಖ್ಯಾಧಿಕಾರಿಗಳನ್ನೂ ನೇಮಿಸಬೇಕೆಂದು ನಿಶ್ಚಯಿಸಿಕೊಂಡನು; ಆ ಮುಖ್ಯಾಧಿಕಾರಿಗಳಲ್ಲಿ ದಾನಿಯೇಲನು ಒಬ್ಬನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಇವರ ಮೇಲ್ವಿಚಾರಣೆಗಾಗಿಯೂ ತನ್ನ ಹಿತಾಸಕ್ತಿಯ ದೃಷ್ಟಿಯಿಂದಲೂ ಮೂವರು ಮುಖ್ಯಾಧಿಕಾರಿಗಳನ್ನು ನೇಮಿಸಲು ನಿಶ್ಚಯಿಸಿದನು. ಈ ಮೂವರು ಮುಖ್ಯಸ್ಥರಲ್ಲಿ ದಾನಿಯೇಲನು ಒಬ್ಬನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ರಾಜನಿಗೆ ನಷ್ಟವಾಗದಂತೆ ಆ ದೇಶಾಧಿಪತಿಗಳ ಮೇಲೆ ಅವರಿಂದ ಲೆಕ್ಕ ತೆಗೆದುಕೊಳ್ಳುವ ಮೂವರು ಮುಖ್ಯಾಧಿಕಾರಿಗಳನ್ನೂ ನೇವಿುಸಬೇಕೆಂದು ನಿಶ್ಚಯಿಸಿಕೊಂಡನು; ಆ ಮುಖ್ಯಾಧಿಕಾರಿಗಳಲ್ಲಿ ದಾನಿಯೇಲನು ಒಬ್ಬನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಆ ನೂರಿಪ್ಪತ್ತು ಜನರ ಮೇಲೆ ಮೂರು ಜನ ಮುಖ್ಯಾಧಿಕಾರಿಗಳನ್ನು ನೇಮಿಸಿದನು. ದಾನಿಯೇಲನು ಈ ಮೂರು ಜನ ಮುಖ್ಯಾಧಿಕಾರಿಗಳಲ್ಲೊಬ್ಬನಾಗಿದ್ದನು. ಯಾರೊಬ್ಬರೂ ತನಗೆ ಮೋಸ ಮಾಡದಂತೆ ಮತ್ತು ತನ್ನ ರಾಜ್ಯಕ್ಕೆ ನಷ್ಟವಾಗದಂತೆ ನೋಡಿಕೊಳ್ಳಲು ರಾಜನು ಈ ಮೂವರನ್ನು ನೇಮಿಸಿದ್ದನು. ಅಧ್ಯಾಯವನ್ನು ನೋಡಿ |
ಈಗ ನೀನು ಅರ್ಥಗಳನ್ನು ವಿವರಿಸಿ, ಕಷ್ಟಕರವಾದ ಸಮಸ್ಯೆಗಳನ್ನು ಬಗೆಹರಿಸಲು ಸಮರ್ಥನೆಂದು ನಾನು ನಿನ್ನ ವಿಷಯವಾಗಿ ಕೇಳಿದ್ದೇನೆ. ಹೀಗಾದರೆ ಈ ಬರಹವನ್ನು ಓದುವುದಕ್ಕೂ, ಅದರ ಅರ್ಥವನ್ನು ತಿಳಿಸುವುದಕ್ಕೂ ನಿನ್ನಿಂದ ಸಾಧ್ಯವಾದರೆ, ನಿನಗೆ ಧೂಮ್ರವಸ್ತ್ರವನ್ನು ಹೊದಿಸಿ, ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ, ರಾಜ್ಯದ ಮೂರನೆಯ ಅಧಿಕಾರಿಯನ್ನಾಗಿ ನೇಮಿಸುವೆನು,” ಎಂದು ಹೇಳಿದನು.
“ಆದ್ದರಿಂದ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ, ‘ನಿನ್ನ ಮನೆಯವರೂ ನಿನ್ನ ತಂದೆಯ ಮನೆಯವರೂ ಎಂದೆಂದಿಗೂ ನನ್ನ ಸನ್ನಿಧಿಯಲ್ಲಿ ನಡೆದುಕೊಳ್ಳುವರೆಂದು ನಾನು ನಿಜವಾಗಿ ಹೇಳಿದ್ದೆನು. ಆದರೆ ಈಗ ಯೆಹೋವ ದೇವರು ಹೇಳುವುದೇನೆಂದರೆ: ನನಗೆ ಅದು ದೂರವಾಗಿರಲಿ. ಏಕೆಂದರೆ ನನ್ನನ್ನು ಸನ್ಮಾನಿಸುವವರನ್ನು ನಾನು ಸನ್ಮಾನಿಸುವೆನು. ನನ್ನನ್ನು ತಿರಸ್ಕರಿಸುವವರನ್ನು ನಾನು ತಿರಸ್ಕರಿಸುವೆನು.