ದಾನಿಯೇಲ 6:22 - ಕನ್ನಡ ಸಮಕಾಲಿಕ ಅನುವಾದ22 ನನ್ನ ದೇವರು ತಮ್ಮ ದೂತನನ್ನು ಕಳುಹಿಸಿ, ನನಗೆ ಯಾವ ಹಾನಿಯೂ ಆಗದಂತೆ ಸಿಂಹಗಳ ಬಾಯಿಗಳನ್ನು ಮುಚ್ಚಿಹಾಕಿದ್ದಾರೆ. ಏಕೆಂದರೆ ಅವರ ಮುಂದೆ ನಾನು ಯಥಾರ್ಥನೆಂದು ಗೋಚರವಾಗಿದ್ದೇನೆ. ಅರಸನೇ, ನಿನ್ನ ಮುಂದೆಯೂ ಸಹ ನಾನು ಯಾರಿಗೂ ತಪ್ಪನ್ನು ಮಾಡಲಿಲ್ಲ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ನನ್ನ ದೇವರು ತನ್ನ ದೂತನನ್ನು ಕಳುಹಿಸಿ ಸಿಂಹಗಳ ಬಾಯಿಗಳನ್ನು ಬಂಧಿಸಿದನು. ಅವುಗಳಿಂದ ನನಗೆ ಯಾವ ಹಾನಿಯೂ ಆಗಲಿಲ್ಲ. ಏಕೆಂದರೆ ಆತನ ದೃಷ್ಟಿಗೆ ನಾನು ನಿರ್ಮಲನಾಗಿ ಕಂಡುಬಂದೆನು. ರಾಜನಾದ ನಿನಗೂ ಯಾವ ದ್ರೋಹವನ್ನೂ ಮಾಡಲಿಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ನನ್ನ ದೇವರು ತಮ್ಮ ದೂತನನ್ನು ಕಳಿಸಿ, ಸಿಂಹಗಳ ಬಾಯನ್ನು ಬಂಧಿಸಿದರು. ಅವುಗಳಿಂದ ನನಗೆ ಯಾವ ಹಾನಿಯೂ ಆಗಲಿಲ್ಲ. ಏಕೆಂದರೆ ಆ ದೇವರ ದೃಷ್ಟಿಯಲ್ಲಿ ನಾನು ನಿರ್ಮಲನು. ರಾಜರಾದ ತಮಗೂ ನಾನು ಯಾವ ದ್ರೋಹವನ್ನೂ ಮಾಡಲಿಲ್ಲ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ನನ್ನ ದೇವರು ತನ್ನ ದೂತನನ್ನು ಕಳುಹಿಸಿ ಸಿಂಹಗಳ ಬಾಯಿಗಳನ್ನು ಬಂಧಿಸಿದನು; ಅವುಗಳಿಂದ ನನಗೆ ಯಾವ ಹಾನಿಯೂ ಆಗಲಿಲ್ಲ; ಏಕೆಂದರೆ ಆತನ ದೃಷ್ಟಿಗೆ ನಾನು ನಿರ್ಮಲನಾಗಿ ಕಂಡುಬಂದೆನು, ರಾಜನಾದ ನಿನಗೂ ಯಾವ ದ್ರೋಹವನ್ನೂ ಮಾಡಲಿಲ್ಲ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ನನ್ನ ದೇವರು ನನ್ನನ್ನು ರಕ್ಷಿಸುವುದಕ್ಕಾಗಿ ತನ್ನ ದೂತನನ್ನು ಕಳುಹಿಸಿದನು. ಆ ದೇವದೂತನು ಸಿಂಹಗಳ ಬಾಯಿಯನ್ನು ಮುಚ್ಚಿದನು. ಸಿಂಹಗಳು ನನ್ನನ್ನು ಗಾಯಗೊಳಿಸಲಿಲ್ಲ. ಏಕೆಂದರೆ ನಾನು ತಪ್ಪಿತಸ್ಥನಲ್ಲವೆಂದು ನನ್ನ ದೇವರಿಗೆ ಗೊತ್ತುಂಟು. ರಾಜನೇ, ನಾನೆಂದೂ ನಿನಗೆ ತಪ್ಪು ಮಾಡಲಿಲ್ಲ” ಎಂದು ಉತ್ತರಿಸಿದನು. ಅಧ್ಯಾಯವನ್ನು ನೋಡಿ |