ದಾನಿಯೇಲ 6:25 - ಕನ್ನಡ ಸಮಕಾಲಿಕ ಅನುವಾದ25 ಆಗ ಅರಸನಾದ ದಾರ್ಯಾವೆಷನು ಭೂಲೋಕದ ಎಲ್ಲಾ ಕಡೆಯಲ್ಲೂ ವಾಸವಾಗಿರುವ ಸಕಲ ಪ್ರಜೆ, ಜನಾಂಗ, ಭಾಷೆಗಳವರೆಗೆ ಬರೆದದ್ದೇನೆಂದರೆ, “ನೀವು ಅಪಾರವಾಗಿ ಸಮೃದ್ಧಿಗೊಳ್ಳಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಆಗ ರಾಜನಾದ ದಾರ್ಯಾವೆಷನು ಲೋಕದಲ್ಲೆಲ್ಲಾ ವಾಸಿಸುವ ಸಕಲ ಜನಾಂಗ, ಕುಲ, ಭಾಷೆಗಳವರಿಗೆ ಈ ಪ್ರಸಿದ್ಧ ಪತ್ರವನ್ನು ಬರೆಯಿಸಿ, ಅದನ್ನು ಅನುಸರಿಸಿ ನಡೆಯಲು ಆಜ್ಞೆಮಾಡಿದನು. ದಾನಿಯೇಲನ ದೇವರ ದಯೆಯಿಂದ ನಿಮಗೆ ಸುಖವು ಹೆಚ್ಚೆಚ್ಚಾಗಲಿ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಇದಾದ ಮೇಲೆ ರಾಜ ದಾರ್ಯಾವೆಷನು ಜಗದಲ್ಲಿ ವಾಸಿಸುವ ಸಕಲ ದೇಶ-ಕುಲ-ಭಾಷೆಗಳವರಿಗೆ ಈ ಪ್ರಸಿದ್ಧ ಪತ್ರವನ್ನು ಬರೆಯಿಸಿದನು: ನಿಮಗೆ ಹೆಚ್ಚೆಚ್ಚು ಸುಖಶಾಂತಿ ಲಭಿಸಲಿ!” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಆಗ ರಾಜನಾದ ದಾರ್ಯಾವೆಷನು ಲೋಕದಲ್ಲೆಲ್ಲಾ ವಾಸಿಸುವ ಸಕಲ ಜನಾಂಗ ಕುಲಭಾಷೆಗಳವರಿಗೆ ಈ ಪ್ರಸಿದ್ಧ ಪತ್ರವನ್ನು ಬರೆಯಿಸಿದನು - ನಿಮಗೆ ಸುಖವು ಹೆಚ್ಚೆಚ್ಚಾಗಲಿ! ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಆಗ ಅರಸನಾದ ದಾರ್ಯಾವೆಷನು ಲೋಕದಲ್ಲೆಲ್ಲಾ ವಾಸಿಸುವ ಸಕಲ ಜನಾಂಗ ಕುಲಭಾಷೆಗಳವರಿಗೆ ಈ ಪತ್ರವನ್ನು ಬರೆದನು: ಶುಭಾಶಯಗಳು. ಅಧ್ಯಾಯವನ್ನು ನೋಡಿ |
ಆಗ ಮೂರನೆಯ ತಿಂಗಳಾದ ಸಿವಾನ್ ಎಂಬ ಮಾಸದ ಇಪ್ಪತ್ತಮೂರನೆಯ ದಿನದಲ್ಲಿ ಅರಸನ ಲೇಖಕರನ್ನು ಕರೆಯಲಾಯಿತು. ಮೊರ್ದೆಕೈ ಆಜ್ಞಾಪಿಸಿದ ಎಲ್ಲಾದರ ಪ್ರಕಾರ, ಸಕಲ ಯೆಹೂದ್ಯರಿಗೂ ಹಿಂದೂ ದೇಶ ಮೊದಲುಗೊಂಡು ಇಥಿಯೋಪಿಯ ದೇಶದವರೆಗೂ ಇರುವ ನೂರ ಇಪ್ಪತ್ತೇಳು ಪ್ರಾಂತಗಳ ಉಪರಾಜರಿಗೂ, ದೇಶಾಧಿಪತಿಗಳಿಗೂ, ಅಧಿಕಾರಿಗಳಿಗೂ, ಅವರವರ ಪ್ರಾಂತದ ಲಿಪಿಯಲ್ಲಿಯೂ, ಅವರವರ ಭಾಷೆಯಲ್ಲಿಯೂ ಪತ್ರಗಳನ್ನು ಬರೆಯಲಾಯಿತು.
ಮೊದಲನೆಯ ತಿಂಗಳ ಹದಿಮೂರನೆಯ ದಿವಸದಲ್ಲಿ ಅರಸನ ಲೇಖಕರನ್ನು ಕರೆಸಲಾಯಿತು. ಹಾಮಾನನು ಆಜ್ಞಾಪಿಸಿದ್ದೆಲ್ಲದರ ಪ್ರಕಾರ ಪ್ರತಿ ಪ್ರಾಂತದ ಮೇಲಿರುವ ಅರಸನ ಕೈ ಕೆಳಗಿನ ಉಪ ರಾಜರುಗಳಿಗೂ ಅಧಿಪತಿಗಳಿಗೂ ಪ್ರತಿ ಪ್ರಾಂತದಲ್ಲಿ ಜನರ ಮೇಲಿರುವ ಅಧಿಕಾರಿಗೂ ಅವರವರ ಸ್ವದೇಶಿ ಲಿಪಿಗಳಲ್ಲಿಯೂ, ಭಾಷೆಗಳಲ್ಲಿಯೂ ಪತ್ರಗಳನ್ನು ಬರೆದರು. ಅರಸನಾದ ಅಹಷ್ವೇರೋಷನ ಹೆಸರಿನಲ್ಲಿಯೇ ಲಿಖಿತವಾದ ಈ ಪತ್ರಗಳು ಅರಸನ ಉಂಗುರದಿಂದ ಅಧಿಕೃತ ರಾಜಮುದ್ರೆಯನ್ನು ಹೊಂದಿದ್ದವು.