Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 6:6 - ಕನ್ನಡ ಸಮಕಾಲಿಕ ಅನುವಾದ

6 ಆಗ ಉಪರಾಜರೂ, ದೇಶಾಧಿಪತಿಯೂ ಅರಸನ ಬಳಿಯಲ್ಲಿ ಕೂಡಿಬಂದು, “ಅರಸನಾದ ದಾರ್ಯಾವೆಷನೇ, ನಿರಂತರವಾಗಿ ಬಾಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಹೀಗೆ ಆ ಮುಖ್ಯಾಧಿಕಾರಿಗಳೂ, ದೇಶಾಧಿಪತಿಗಳೂ ರಾಜನ ಸಮ್ಮುಖದಲ್ಲಿ ನೆರೆದುಬಂದು ಅವನಿಗೆ, “ಅರಸನಾದ ದಾರ್ಯಾವೆಷನೇ, ಚಿರಂಜೀವಿಯಾಗಿರು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಬಳಿಕ ಆ ಮುಖ್ಯಾಧಿಕಾರಿಗಳೂ ಪ್ರಾಂತ್ಯಾಧಿಪತಿಗಳೂ ರಾಜನ ಸಮ್ಮುಖದಲ್ಲಿ ಕೂಡಿಬಂದು ಅವನಿಗೆ, “ದಾರ್ಯಾವೆಷ ರಾಜರೇ, ಚಿರಂಜೀವಿಯಾಗಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಹೀಗೆ ಮುಖ್ಯಾಧಿಕಾರಿಗಳೂ ದೇಶಾಧಿಪತಿಗಳೂ ರಾಜನ ಸಮ್ಮುಖದಲ್ಲಿ ನೆರೆದುಬಂದು ಅವನಿಗೆ - ಅರಸನಾದ ದಾರ್ಯಾವೆಷನೇ, ಚಿರಂಜೀವಿಯಾಗಿರು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆ ಇಬ್ಬರು ಮುಖ್ಯಾಧಿಕಾರಿಗಳು ಮತ್ತು ದೇಶಾಧಿಪತಿಗಳು ಒಟ್ಟಿಗೆ ಸೇರಿ ಅರಸನ ಬಳಿಗೆ ಹೋದರು. ಅವರು, “ಅರಸನಾದ ದಾರ್ಯಾವೆಷನೇ, ಚಿರಂಜೀವಿಯಾಗಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 6:6
13 ತಿಳಿವುಗಳ ಹೋಲಿಕೆ  

ಆಗ ಪಂಡಿತರು ಅರಸನಿಗೆ ಅರಮಾಯ ಭಾಷೆಯಲ್ಲಿ, “ಅರಸನೇ, ನಿರಂತರವಾಗಿ ಬಾಳು! ಕನಸನ್ನು ನಿನ್ನ ಸೇವಕರಿಗೆ ಹೇಳು, ಆಗ ನಾವು ಅದರ ಅರ್ಥವನ್ನು ತಿಳಿಸುವೆವು,” ಎಂದು ಹೇಳಿದರು.


ಆಗ ದಾನಿಯೇಲನು ಅರಸನಿಗೆ, “ಅರಸನೇ, ನೀನು ನಿರಂತರವಾಗಿ ಬಾಳು.


“ಅರಸನು ಎಂದೆಂದಿಗೂ ಬಾಳಲಿ. ನನ್ನ ತಂದೆಗಳ ಸಮಾಧಿಗಳಿರುವ ಸ್ಥಳವಾದ ಆ ಪಟ್ಟಣವು ಹಾಳಾಗಿದ್ದು, ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟುಹೋಗಿರುವಾಗ ನನ್ನ ಮುಖವು ದುಃಖವಿಲ್ಲದೆ ಇರಲು ಸಾಧ್ಯವೇ?” ಎಂದು ಹೇಳಿದೆನು.


ಆಗ ಅರಸನ ಮತ್ತು ಅವನ ಪ್ರಧಾನರ ಮಾತುಗಳನ್ನು ಕೇಳಿ ರಾಣಿಯು ಔತಣದ ಮನೆಗೆ ಬಂದಳು. ಆಗ ಮಾತನಾಡಿ, “ಅರಸನೇ, ನಿರಂತರವಾಗಿ ಬಾಳು! ನಿನ್ನ ಆಲೋಚನೆಗಳು ನಿನ್ನನ್ನು ಕಳವಳಪಡಿಸದಿರಲಿ. ನಿನ್ನ ಮುಖವು ಕಳೆಗುಂದದಿರಲಿ!


ಪೌಲನನ್ನು ಒಳಗೆ ಕರೆದುಕೊಂಡು ಬಂದಾಗ, ಟೆರ್ಟುಲಸನು ಫೇಲಿಕ್ಸನ ಮುಂದೆ ತಪ್ಪು ಹೊರಿಸಲು ಪ್ರಾರಂಭಿಸಿ, “ಸನ್ಮಾನಿತ ಫೇಲಿಕ್ಸರೇ, ನಿಮ್ಮ ಮೂಲಕ ಬಹಳ ದಿನಗಳಿಂದ ಶಾಂತಿಯನ್ನು ಅನುಭವಿಸುತ್ತಿದ್ದೇವೆ. ನಿಮ್ಮ ಮುಂದಾಲೋಚನೆಯಿಂದ ದೇಶಗಳಿಗೆ ಅನೇಕ ಸುಧಾರಣೆಗಳನ್ನು ತಂದಿರುವಿರಿ.


ಆಮೇಲೆ ಆ ಮನುಷ್ಯರೆಲ್ಲಾ ಕೂಡಿಬಂದು ದಾನಿಯೇಲನು ತನ್ನ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆಯನ್ನೂ, ವಿಜ್ಞಾಪನೆಯನ್ನೂ ಮಾಡುತ್ತಿರುವುದನ್ನು ಕಂಡರು.


ಅರಸನಾದ ನೆಬೂಕದ್ನೆಚ್ಚರನಿಗೆ, “ಅರಸನೇ, ನೀನು ನಿರಂತರವಾಗಿ ಬಾಳು.


ಹಾನಿಮಾಡುವವರೇ, ಎಷ್ಟರವರೆಗೆ ನೀವು ದಾಳಿಮಾಡುವಿರಿ. ಬಾಗುವ ಗೋಡೆಯಂತೆಯೂ, ಅಲ್ಲಾಡುವ ಬೇಲಿಯಂತೆಯೂ ನನ್ನನ್ನು ಕೆಡವಲು ಯತ್ನಿಸುವಿರಾ?


ಅವರು ಕೂಡಿಕೊಂಡು ಹೊಂಚುಹಾಕುತ್ತಾರೆ. ನನ್ನ ಪ್ರಾಣ ತೆಗೆಯಲು ಕುತೂಹಲದಿಂದ ನನ್ನ ಹೆಜ್ಜೆಗಳನ್ನು ಗುರುತಿಸುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು