ದಾನಿಯೇಲ 6:8 - ಕನ್ನಡ ಸಮಕಾಲಿಕ ಅನುವಾದ8 ರಾಜನೇ, ಈಗ ನೀನು ಈ ನಿಬಂಧನೆಯನ್ನು ವಿಧಿಸಿ, ಇದು ಬದಲಾಗದ ಮೇದ್ಯರ ಮತ್ತು ಪಾರಸಿಯರ ನಿಯಮಗಳ ಪ್ರಕಾರ ಇದು ರದ್ದಾಗದಂತೆ ನಿರ್ಣಯವನ್ನು ರೂಪಿಸಿ, ಶಾಸನಕ್ಕೆ ರುಜುಹಾಕು,” ಎಂದು ವಿನಂತಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ರಾಜನೇ, ಈಗ ನೀನು ಈ ನಿಬಂಧನೆಯನ್ನು ವಿಧಿಸಿ, ಇದು ಮೇದ್ಯರ ಮತ್ತು ಪಾರಸಿಯರ ಧರ್ಮವಿಧಿಗಳಂತೆ ಎಂದಿಗೂ ರದ್ದಾಗದ ಧರ್ಮವಿಧಿಗಳ ಪ್ರಕಾರ ಬೇರೆಯಾಗದಂತೆ ಶಾಸನಕ್ಕೆ ಹಸ್ತಾಕ್ಷರ ಮಾಡು” ಎಂದು ಬಿನ್ನವಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ರಾಜರೇ, ಈ ಶಾಸನಕ್ಕೆ ನೀವು ಇದೀಗಲೇ ಹಸ್ತಾಕ್ಷರಗಳಿಂದ ರುಜುಹಾಕಬೇಕು. ಆಗ ಅದು ಮೇದ್ಯದ ಮತ್ತು ಪರ್ಷಿಯದ ಧರ್ಮವಿಧಿಗಳಂತೆ ಎಂದಿಗೂ ರದ್ದಾಗದೆ ಊರ್ಜಿತವಾಗುವುದು,” ಎಂದು ವಿನಂತಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ರಾಜನೇ, ಈಗ ನೀನು ಈ ನಿಬಂಧನೆಯನ್ನು ವಿಧಿಸಿ ಇದು ನಿಂತುಹೋಗದೆ ಮೇದ್ಯಯರ ಮತ್ತು ಪಾರಸಿಯರ ಎಂದಿಗೂ ರದ್ದಾಗದ ಧರ್ಮವಿಧಿಗಳ ಪ್ರಕಾರ ಊರ್ಜಿತವಾಗುವಂತೆ ಶಾಸನಕ್ಕೆ ಹಸ್ತಾಕ್ಷರಮಾಡು ಎಂದು ಬಿನ್ನವಿಸಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಅರಸನೇ, ಈ ನಿಬಂಧನೆಯನ್ನು ಬರೆದ ಕಾಗದಕ್ಕೆ ನಿನ್ನ ಹಸ್ತಾಕ್ಷರ ಹಾಕಿ ಅದನ್ನು ಶಾಸನವನ್ನಾಗಿ ಮಾಡು. ಹೀಗೆ ಮಾಡಿದರೆ ಶಾಸನವನ್ನು ಬದಲಾಯಿಸಲಾಗುವುದಿಲ್ಲ. ಏಕೆಂದರೆ ಮೇದ್ಯಯರ ಮತ್ತು ಪಾರಸಿಯರ ಶಾಸನಗಳು ಎಂದಿಗೂ ರದ್ದಾಗುವದಿಲ್ಲ ಮತ್ತು ಅವುಗಳನ್ನು ಬದಲಾಯಿಸಲಾಗುವುದಿಲ್ಲ.” ಅಧ್ಯಾಯವನ್ನು ನೋಡಿ |
ಅನಂತರ ಅವರು ಅರಸನ ಮುಂದೆ ಬಂದು ರಾಜಾಜ್ಞೆಯ ವಿಷಯವಾಗಿ: “ಅರಸನೇ ಯಾರಾದರೂ ಮೂವತ್ತು ದಿವಸಗಳವರೆಗೂ ನಿನ್ನನ್ನು ಬಿಟ್ಟು ಬೇರೆ ಯಾವ ದೇವರಿಗಾಗಲಿ, ಮನುಷ್ಯರಿಗಾಗಲಿ ವಿಜ್ಞಾಪನೆ ಮಾಡುವರೋ, ಅವರನ್ನು ಸಿಂಹದ ಗವಿಯಲ್ಲಿ ಹಾಕಲಾಗುವುದು ಎಂಬ ಶಾಸನಕ್ಕೆ ನೀನು ರುಜು ಹಾಕಲಿಲ್ಲವೇ?” ಎಂದರು. ಅದಕ್ಕೆ ಅರಸನು ಉತ್ತರವಾಗಿ, “ಮೇದ್ಯ, ಪಾರಸಿಯರ ಬದಲಾಗದಂಥ ಧರ್ಮವಿಧಿಗಳ ಪ್ರಕಾರ ಅದು ಸ್ಥಿರವಾದ ನಿಬಂಧನೆ” ಎಂದನು.
ಮೊದಲನೆಯ ತಿಂಗಳ ಹದಿಮೂರನೆಯ ದಿವಸದಲ್ಲಿ ಅರಸನ ಲೇಖಕರನ್ನು ಕರೆಸಲಾಯಿತು. ಹಾಮಾನನು ಆಜ್ಞಾಪಿಸಿದ್ದೆಲ್ಲದರ ಪ್ರಕಾರ ಪ್ರತಿ ಪ್ರಾಂತದ ಮೇಲಿರುವ ಅರಸನ ಕೈ ಕೆಳಗಿನ ಉಪ ರಾಜರುಗಳಿಗೂ ಅಧಿಪತಿಗಳಿಗೂ ಪ್ರತಿ ಪ್ರಾಂತದಲ್ಲಿ ಜನರ ಮೇಲಿರುವ ಅಧಿಕಾರಿಗೂ ಅವರವರ ಸ್ವದೇಶಿ ಲಿಪಿಗಳಲ್ಲಿಯೂ, ಭಾಷೆಗಳಲ್ಲಿಯೂ ಪತ್ರಗಳನ್ನು ಬರೆದರು. ಅರಸನಾದ ಅಹಷ್ವೇರೋಷನ ಹೆಸರಿನಲ್ಲಿಯೇ ಲಿಖಿತವಾದ ಈ ಪತ್ರಗಳು ಅರಸನ ಉಂಗುರದಿಂದ ಅಧಿಕೃತ ರಾಜಮುದ್ರೆಯನ್ನು ಹೊಂದಿದ್ದವು.