Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 7:1 - ಕನ್ನಡ ಸಮಕಾಲಿಕ ಅನುವಾದ

1 ಬಾಬಿಲೋನಿನ ಅರಸನಾದ ಬೇಲ್ಯಚ್ಚರನ ಮೊದಲನೆಯ ವರ್ಷದಲ್ಲಿ ದಾನಿಯೇಲನು ಹಾಸಿಗೆಯ ಮೇಲೆ ಮಲಗಿದ್ದಾಗ ಕನಸನ್ನೂ, ದರ್ಶನಗಳನ್ನೂ ಕಂಡು, ತನ್ನ ಕನಸಿನ ತಾತ್ಪರ್ಯವನ್ನು ಬರೆದಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಬಾಬೆಲಿನ ಅರಸನಾದ ಬೇಲ್ಶಚ್ಚರನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ದಾನಿಯೇಲನು ಮಲಗಿದ್ದಾಗ ಒಂದು ಸ್ವಪ್ನವಾಯಿತು. ಕೂಡಲೆ ಅವನು ಆ ಕನಸನ್ನೂ ಅದರ ಮುಖ್ಯಾಂಶಗಳನ್ನೂ ಬರೆದು ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಬಾಬಿಲೋನಿನ ಅರಸನಾದ ಬೇಲ್ಶಚ್ಚರನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ದಾನಿಯೇಲನು ಹಾಸಿಗೆಯ ಮೇಲೆ ಮಲಗಿದ್ದಾಗ ಒಂದು ಕನಸು ಕಂಡನು. ಅವನ ಮನಸ್ಸಿಗೆ ಒಂದು ದೃಶ್ಯ ಕಾಣಿಸಿತು. ಕೂಡಲೆ ಅವನು ಆ ಕನಸನ್ನೂ ಅದರ ಮುಖ್ಯಾಂಶಗಳನ್ನೂ ಬರೆದಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಬಾಬೆಲಿನ ಅರಸನಾದ ಬೇಲ್ಶಚ್ಚರನ ಆಳಿಕೆಯ ಮೊದಲನೆಯ ವರುಷದಲ್ಲಿ ದಾನಿಯೇಲನಿಗೆ ಹಾಸಿಗೆಯ ಮೇಲೆ ಸ್ವಪ್ನವಾಯಿತು, ಅವನ ಮನಸ್ಸಿನಲ್ಲಿ ಕನಸುಬಿತ್ತು; ಕೂಡಲೆ ಅವನು ಆ ಕನಸನ್ನೂ ಅದರ ಮುಖ್ಯಾಂಶಗಳನ್ನೂ ಬರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಬಾಬಿಲೋನಿನ ಅರಸನಾದ ಬೇಲ್ಶಚ್ಚರನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ದಾನಿಯೇಲನಿಗೆ ಒಂದು ದರ್ಶನವಾಯಿತು. ತನ್ನ ಹಾಸಿಗೆಯ ಮೇಲೆ ಮಲಗಿರುವಾಗ ದಾನಿಯೇಲನು ಈ ದರ್ಶನಗಳನ್ನು ಕಂಡನು. ದಾನಿಯೇಲನು ತನ್ನ ಕನಸಿನಲ್ಲಿ ಕಂಡದ್ದನ್ನು ಬರೆದಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 7:1
34 ತಿಳಿವುಗಳ ಹೋಲಿಕೆ  

ನಿಶ್ಚಯವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ ತನ್ನ ಯೋಜನೆಗಳನ್ನು ತಿಳಿಸದೆ, ಸಾರ್ವಭೌಮ ಯೆಹೋವ ದೇವರು ಏನನ್ನೂ ಮಾಡುವುದಿಲ್ಲ.


“ಆಮೇಲೆ ನಾನು, ನನ್ನ ಆತ್ಮನನ್ನು ಎಲ್ಲಾ ಮನುಷ್ಯರ ಮೇಲೆ ಸುರಿಸುವೆನು, ನಿಮ್ಮ ಗಂಡು ಹೆಣ್ಣುಮಕ್ಕಳು ಪ್ರವಾದಿಸುವರು. ನಿಮ್ಮ ಹಿರಿಯರಿಗೆ ಕನಸುಗಳು ಬೀಳುವುವು. ನಿಮ್ಮ ಯುವಜನರಿಗೆ ದರ್ಶನಗಳಾಗುವವು.


ಅರಸನಾದ ಬೇಲ್ಯಚ್ಚರನು ತನ್ನ ಪ್ರಧಾನರಲ್ಲಿ ಸಾವಿರ ಮಂದಿಗೆ ದೊಡ್ಡ ಔತಣವನ್ನು ಮಾಡಿಸಿ, ಅವರೊಂದಿಗೆ ಅವನು ದ್ರಾಕ್ಷಾರಸವನ್ನು ಕುಡಿದನು.


ನನ್ನನ್ನು ಭಯಪಡಿಸುವಂಥಹ ಒಂದು ಕನಸನ್ನು ಕಂಡೆನು. ನನ್ನ ಹಾಸಿಗೆಯ ಮೇಲೆ ಮಲಗಿದ್ದಾಗ, ನನ್ನ ಮನಸ್ಸಿನಲ್ಲಿ ಹಾದುಹೋದ ಚಿತ್ರಗಳು ಮತ್ತು ದರ್ಶನಗಳು ನನ್ನನ್ನು ಭಯಭೀತಗೊಳಿಸಿದವು.


ಈ ನಾಲ್ಕು ಯೌವನಸ್ಥರಿಗೆ ದೇವರು ಎಲ್ಲಾ ವಿದ್ಯೆಯಲ್ಲಿಯೂ, ಜ್ಞಾನದಲ್ಲಿಯೂ, ತಿಳುವಳಿಕೆಯನ್ನೂ, ವಿವೇಕವನ್ನೂ ಕೊಟ್ಟರು. ದಾನಿಯೇಲನು ಸಕಲ ದರ್ಶನಗಳಲ್ಲಿಯೂ, ಕನಸುಗಳಲ್ಲಿಯೂ ತಿಳುವಳಿಕೆಯುಳ್ಳವನಾಗಿದ್ದನು.


ಕನಸುಕಂಡ ಪ್ರವಾದಿಯು ಕನಸನ್ನು ತಿಳಿಸಿದರೆ ತಿಳಿಸಲಿ ಆದರೆ ನನ್ನ ವಾಕ್ಯವನ್ನು ಕೇಳಿದವನು ಅದನ್ನು ಯಥಾರ್ಥವಾಗಿ ನುಡಿಯಲಿ. ಹೊಟ್ಟನ್ನು ಕಾಳಿನೊಂದಿಗೆ ಹೋಲಿಸಲಾದೀತೆ?” ಎಂದು ಯೆಹೋವ ದೇವರು ಹೇಳುತ್ತಾರೆ.


“ಆದ್ದರಿಂದ ನೀನು ಕಂಡದ್ದವುಗಳನ್ನೂ ಈಗ ನಡೆಯುತ್ತಿರುವವುಗಳನ್ನೂ ಮುಂದೆ ಸಂಭವಿಸುವವುಗಳನ್ನೂ ಬರೆ.


ಆಗ ಯೆಹೋವ ದೇವರು ನನಗೆ ಉತ್ತರಕೊಟ್ಟರು. ಪ್ರಕಟನೆಯನ್ನು ಬರೆ. ಅದನ್ನು ಓದುವವನು ಶೀಘ್ರವಾಗಿ ಓದುವಂತೆ, ಅದನ್ನು ಹಲಗೆಗಳ ಮೇಲೆ ಕೆತ್ತು.


“ದಾನಿಯೇಲನೆಂಬ ನಾನು ನನ್ನ ಆತ್ಮದಲ್ಲಿ ನೊಂದುಕೊಂಡೆನು. ನನ್ನ ಮನಸ್ಸಿನಲ್ಲಿ ಹಾದುಹೋದ ದರ್ಶನಗಳ ನಿಮಿತ್ತ ಕಳವಳಗೊಂಡೆನು.


“ನಾನು ಕಂಡ ರಾತ್ರಿಯ ದರ್ಶನದಲ್ಲಿ ಮನುಷ್ಯಪುತ್ರನಂತಿರುವವನು ಆಕಾಶದ ಮೇಘಗಳ ಸಂಗಡ ಪುರಾತನ ಮನುಷ್ಯನ ಬಳಿಗೆ ಸಮೀಪಿಸಿದನು. ಅವನನ್ನು ಆತನ ಬಳಿಗೆ ತಂದರು.


ನೆಬೂಕದ್ನೆಚ್ಚರನ ಆಳಿಕೆಯ ಎರಡನೆಯ ವರ್ಷದಲ್ಲಿ ನೆಬೂಕದ್ನೆಚ್ಚರನು ಕನಸುಗಳನ್ನು ಕಂಡನು. ಅವನ ಆತ್ಮವು ಕಳವಳಗೊಂಡಿತು. ಅವನಿಗೆ ನಿದ್ರೆಯೇ ಬರಲಿಲ್ಲ.


ಯೆಹೋವ ದೇವರು ಅವರಿಗೆ ಹೀಗೆ ಹೇಳಿದನು, “ನನ್ನ ಮಾತುಗಳನ್ನು ಈಗ ಕೇಳಿರಿ: “ನಿಮ್ಮಲ್ಲಿ ಒಬ್ಬ ಪ್ರವಾದಿ ಇದ್ದರೆ ಯೆಹೋವ ದೇವರಾದ ನಾನು ದರ್ಶನದಲ್ಲಿ ಪ್ರಕಟಿಸುವೆನು, ಇಲ್ಲವೆ ಕನಸಿನಲ್ಲಿಯೂ ನಾನು ಅವನೊಡನೆ ಮಾತನಾಡುವೆನು.


ದೇವರು ಇಸ್ರಾಯೇಲನಿಗೆ ರಾತ್ರಿಯ ದರ್ಶನದಲ್ಲಿ ಮಾತನಾಡಿ, “ಯಾಕೋಬನೇ, ಯಾಕೋಬನೇ,” ಎಂದರು. ಅದಕ್ಕವನು, “ಇಗೋ, ಇದ್ದೇನೆ,” ಎಂದನು.


ಏಳು ಗುಡುಗುಗಳು ಮಾತನಾಡಿದಾಗ, ನಾನು ಬರೆಯಬೇಕೆಂದಿದ್ದೆನು. ಆದರೆ ಪರಲೋಕದಿಂದ ಬಂದ ಶಬ್ದವು, “ನೀನು ಆ ಏಳು ಗುಡುಗುಗಳು ಹೇಳಿರುವುದನ್ನು ಮುದ್ರೆಹಾಕಿ ಮುಚ್ಚಿಡು. ಅದನ್ನು ಬರೆಯಬೇಡ,” ಎಂದು ಹೇಳುವುದನ್ನು ಕೇಳಿದೆನು.


ನನ್ನ ಹೊಗಳಿಕೆಯಲ್ಲಿ ಪ್ರಯೋಜನವಿಲ್ಲದಿದ್ದರೂ ಅದು ಅವಶ್ಯವಾಗಿದೆ. ನಾನು ಈಗ ಕರ್ತ ಯೇಸುವಿನಿಂದ ಹೊಂದಿದ ದರ್ಶನಗಳನ್ನು ಮತ್ತು ಪ್ರಕಟನೆಗಳನ್ನು ಕುರಿತು ಹೇಳುತ್ತೇನೆ.


ಪವಿತ್ರ ವೇದದಲ್ಲಿ ಮುಂಚಿತವಾಗಿ ಬರೆದಿರುವುದೆಲ್ಲವೂ ನಮ್ಮ ಬೋಧನೆಗಾಗಿಯೇ ಬರೆಯಲಾಗಿದೆ. ನಾವು ಆ ಬೋಧನೆಗಳ ಮೂಲಕ ಸಹನೆಯನ್ನೂ ಉತ್ತೇಜನೆಯನ್ನೂ ಹೊಂದಿಕೊಂಡು ನಿರೀಕ್ಷೆಯುಳ್ಳವರಾಗಿರಬೇಕೆಂದು ಬರೆಯಲಾಗಿದೆ.


ಮೊದಲು ನನಗೆ ಕಾಣಿಸಿದ ದರ್ಶನವಲ್ಲದೆ ಅರಸನಾದ ಬೇಲ್ಯಚ್ಚರನ ಆಳ್ವಿಕೆಯ ಮೂರನೆಯ ವರ್ಷದಲ್ಲಿಯೂ, ಮೊದಲಿನ ದರ್ಶನದಂಥ ಇನ್ನೊಂದು ದರ್ಶನವೂ ದಾನಿಯೇಲನಾದ ನನಗೆ ಕಾಣಿಸಿತು.


“ತರುವಾಯ ರಾತ್ರಿಯ ದರ್ಶನದಲ್ಲಿ ನಾನು ನೋಡಲಾಗಿ, ನಾಲ್ಕನೆಯ ಮೃಗವು ಭಯಂಕರವೂ, ಘೋರವೂ, ಬಹು ಬಲವುಳ್ಳದ್ದೂ ಆಗಿತ್ತು. ಅದಕ್ಕೆ ದೊಡ್ಡ ಕಬ್ಬಿಣದ ಹಲ್ಲುಗಳು ಇವೆ. ಅದು ತಿಂದು ತುಂಡುತುಂಡು ಮಾಡಿ, ಮಿಕ್ಕದ್ದನ್ನು ತನ್ನ ಕಾಲುಗಳ ಕೆಳಗೆ ಹಾಕಿ ತುಳಿಯಿತು. ಅದು ಮೊದಲಿನ ಎಲ್ಲಾ ಮೃಗಗಳಿಗಿಂತ ವ್ಯತ್ಯಾಸವುಳ್ಳದ್ದೂ, ಹತ್ತು ಕೊಂಬುಗಳುಳ್ಳದ್ದೂ ಆಗಿತ್ತು.


ಅದೇ ರಾತ್ರಿಯಲ್ಲಿ ಕಸ್ದೀಯರ ಅರಸನಾದ ಬೇಲ್ಯಚ್ಚರನು ಹತನಾದನು.


“ಅವನ ಮಗ ಬೇಲ್ಯಚ್ಚರನೇ, ನೀನು ಇದನ್ನೆಲ್ಲಾ ತಿಳಿದುಕೊಂಡಿದ್ದರೂ ತಗ್ಗಿಸಿಕೊಳ್ಳದೆ


ನಾನು ಸೆರೆಯವರ ಜೊತೆ ಕೆಬಾರ್ ನದಿಯ ಬಳಿಯಲ್ಲಿರುವಾಗ ಮೂವತ್ತನೆಯ ವರ್ಷದ, ನಾಲ್ಕನೆಯ ತಿಂಗಳಿನ, ಐದನೆಯ ದಿನದಲ್ಲಿ ಆಕಾಶ ತೆರೆಯಿತು. ನಾನು ದೇವರ ದರ್ಶನಗಳನ್ನು ಕಂಡೆನು.


ಆಗ ಯೆರೆಮೀಯನು ನೇರೀಯನ ಮಗ ಬಾರೂಕನನ್ನು ಕರೆದನು. ಬಾರೂಕನು ಯೆರೆಮೀಯನ ಬಾಯಿಂದ ಯೆಹೋವ ದೇವರು ಅವನಿಗೆ ಹೇಳಿದ್ದ ಮಾತುಗಳನ್ನೆಲ್ಲಾ ಕೇಳಿ, ಗ್ರಂಥದ ಸುರುಳಿಯನ್ನು ಬರೆದನು.


ಅವನ ದೇಶಕ್ಕೆ ನಿಯಮಿತ ಕಾಲ ಬರುವ ತನಕ, ಎಲ್ಲ ರಾಷ್ಟ್ರಗಳು ಅವನಿಗೂ, ಅವನ ಮಗನಿಗೂ, ಮೊಮ್ಮಗನಿಗೂ ಅಡಿಯಾಳಾಗಿ ಇರಬೇಕು. ಆಮೇಲೆ ಅನೇಕ ರಾಷ್ಟ್ರಗಳೂ, ಮಹಾರಾಜರೂ ಅವನನ್ನೇ ಅಡಿಯಾಳನ್ನಾಗಿ ಮಾಡಿಕೊಳ್ಳುವರು,” ಎಂಬುದು.


ಈಗ ಹೋಗಿ ಇದನ್ನು ಅದರ ಮುಂದೆ ಹಲಗೆಯಲ್ಲಿ ಬರೆ. ಅದನ್ನು ಸುರುಳಿಯಲ್ಲಿ ಬರೆಯಿರಿ, ಮುಂದೆ ಬರುವ ನಿತ್ಯಕಾಲಕ್ಕಾಗಿ ಶಾಶ್ವತ ಸಾಕ್ಷಿಯಾಗಿರಲಿ.


ಯೆಹೋವ ದೇವರು, “ಒಂದು ದೊಡ್ಡ ಸುರುಳಿಯನ್ನು ತೆಗೆದುಕೊಂಡು ಸಾಮಾನ್ಯ ಲೇಖನಿಯಿಂದಲೇ ಮಹೇರ್ ಶಾಲಾಲ್ ಹಾಷ್ ಬಜ್, ಎಂದರೆ ಸೂರೆಗೆ ಆತುರ, ಕೊಳ್ಳೆಗೆ ಅವಸರ ಎಂದು ಬರೆ,” ಎಂಬುದಾಗಿ ನನಗೆ ಹೇಳಿದರು.


ರಾತ್ರಿ ಕನಸಿನ ಆಲೋಚನೆಗಳಲ್ಲಿಯೂ ಗಾಢನಿದ್ರೆಯು ಜನರಿಗೆ ಹತ್ತುವಾಗಲೂ


ಇವುಗಳಾದ ಮೇಲೆ ಯೆಹೋವ ದೇವರ ವಾಕ್ಯವು ಅಬ್ರಾಮನಿಗೆ ದರ್ಶನದಲ್ಲಿ ಉಂಟಾಗಿ ಹೇಳಿದ್ದೇನೆಂದರೆ: “ಅಬ್ರಾಮನೇ, ಭಯಪಡಬೇಡ. ನಾನು ನಿನಗೆ ಗುರಾಣಿಯಾಗಿದ್ದೇನೆ. ನಾನೇ ನಿನಗೆ ಅತ್ಯಧಿಕ ಬಹುಮಾನವಾಗಿದ್ದೇನೆ.”


ಆಗ ಯೆರೆಮೀಯನು ಮತ್ತೊಂದು ಸುರುಳಿಯನ್ನು ತೆಗೆದುಕೊಂಡು ನೇರೀಯನ ಮಗ ಲೇಖಕನಾದ ಬಾರೂಕನಿಗೆ ಕೊಟ್ಟನು. ಇವನು ಯೆಹೂದದ ಅರಸನಾದ ಯೆಹೋಯಾಕೀಮನು ಬೆಂಕಿಯಲ್ಲಿ ಸುಟ್ಟ ಸುರುಳಿಯ ವಾಕ್ಯಗಳನ್ನೆಲ್ಲಾ ಯೆರೆಮೀಯನ ಬಾಯಿಂದ ಬಂದ ಹಾಗೆ ಬರೆದನು. ಅವುಗಳ ಹಾಗಿರುವ ಅನೇಕ ವಾಕ್ಯಗಳು ಅವುಗಳ ಸಂಗಡ ಕೂಡಿಸಲಾದವು.


ದೇವರ ದರ್ಶನಗಳಲ್ಲಿ ಅವರು ನನ್ನನ್ನು ಇಸ್ರಾಯೇಲ್ ದೇಶಕ್ಕೆ ತಂದು ಅತಿ ಎತ್ತರವಾದ ಪರ್ವತಗಳ ಮೇಲೆ ನನ್ನನ್ನು ನಿಲ್ಲಿಸಿದರು. ಅದರ ಮೇಲೆ ದಕ್ಷಿಣದ ಕಡೆಯಲ್ಲಿ ಪಟ್ಟಣವು ಕಟ್ಟಿರುವಂತಿತ್ತು.


ಅರಸನು ಬೇಲ್ತೆಶಚ್ಚರನೆಂಬ ದಾನಿಯೇಲನನ್ನು ಕುರಿತು, “ನಾನು ಕಂಡ ಕನಸನ್ನೂ, ಅದರ ಅರ್ಥವನ್ನೂ ನನಗೆ ತಿಳಿಸುವ ಸಾಮರ್ಥ್ಯವು ನಿನಗಿದೆಯೋ?” ಎಂದನು.


“ನನ್ನ ಹಾಸಿಗೆಯ ಮೇಲೆ ಮಲಗಿದ್ದಾಗ, ದರ್ಶನಗಳನ್ನು ನಾನು ನೋಡಲಾಗಿ, ಒಬ್ಬ ದೂತನಾದ ಪರಿಶುದ್ಧನೊಬ್ಬನು ಪರಲೋಕದಿಂದ ಇಳಿದು ಬಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು