Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 7:10 - ಕನ್ನಡ ಸಮಕಾಲಿಕ ಅನುವಾದ

10 ಆತನ ಸನ್ನಿಧಾನದಿಂದ ಅಗ್ನಿಪ್ರವಾಹವು ಹೊರಟುಬಂದು, ಸಹಸ್ರ ಸಹಸ್ರವಾಗಿ ಆತನಿಗೆ ಸೇವೆ ಮಾಡಿದವು. ಲಕ್ಷೋಪಲಕ್ಷ ಆತನ ಮುಂದೆ ನಿಂತಿದ್ದವು. ನ್ಯಾಯ ಸಭೆಯು ಕುಳಿತಿತ್ತು ಮತ್ತು ಪುಸ್ತಕಗಳು ತೆರೆದಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನ್ಯಾಯಾಸನದ ಮುಂದೆ ಉರಿಯ ಪ್ರವಾಹವು ಉಕ್ಕಿ ಹರಿದು ಬಂದಿತು. ಲಕ್ಷೋಪಲಕ್ಷ ದೂತರು ಆತನ ಸೇವೆಗೆ ಸಿದ್ಧರಾಗಿದ್ದರು. ಕೋಟ್ಯಾನುಕೋಟಿ ಕಿಂಕರರು ಆತನ ಮುಂದೆ ನಿಂತುಕೊಂಡಿದ್ದರು. ನ್ಯಾಯಸಭೆಯವರು ಕುಳಿತುಕೊಂಡರು, ಪುಸ್ತಕಗಳು ತೆರೆಯಲ್ಪಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆ ಸಿಂಹಾಸನದ ಸಮ್ಮುಖದಿಂದ ಪ್ರಜ್ವಲ ಪ್ರವಾಹವೊಂದು ಉಕ್ಕಿ ಹರಿದುಬಂದಿತು. ಲಕ್ಷೋಪಲಕ್ಷ ದೂತರು ಆತನಿಗೆ ಸೇವೆಸಲ್ಲಿಸುತ್ತಿದ್ದರು. ಕೋಟ್ಯಾನುಕೋಟಿ ಕಿಂಕರರು ಆತನ ಮುಂದೆ ನಿಂತಿದ್ದರು. ನ್ಯಾಯಸಭೆಯವರು ತೀರ್ಪುನೀಡಲು ಕುಳಿತುಕೊಂಡರು. ಪಟ್ಟಿಪುಸ್ತಕಗಳನ್ನು ತೆರೆಯಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನ್ಯಾಯಾಸನದ ಮುಂದೆ ಉರಿಯ ಪ್ರವಾಹವು ಉಕ್ಕಿ ಹರಿದುಬಂತು; ಲಕ್ಷೋಪಲಕ್ಷ ದೂತರು ಆತನನ್ನು ಸೇವಿಸುತ್ತಿದ್ದರು, ಕೋಟ್ಯಾನುಕೋಟಿ ಕಿಂಕರರು ಆತನ ಮುಂದೆ ನಿಂತುಕೊಂಡಿದ್ದರು; ನ್ಯಾಯಸಭೆಯವರು ಕೂತುಕೊಂಡರು, ಪುಸ್ತಕಗಳು ತೆರೆಯಲ್ಪಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆ ಪುರಾತನ ರಾಜನ ಮುಂದೆ ಬೆಂಕಿಯ ನದಿಯೊಂದು ಹರಿಯುತ್ತಿತ್ತು. ಲಕ್ಷೋಪಲಕ್ಷ ದೂತರು ಆತನನ್ನು ಸೇವಿಸುತ್ತಿದ್ದರು. ಕೋಟ್ಯಾನುಕೋಟಿ ಪರಲೋಕ ಸಮೂಹದವರು ಆತನ ಮುಂದೆ ನಿಂತಿದ್ದರು. ನ್ಯಾಯಾಲಯವು ಪ್ರಾರಂಭವಾಗುವುದಕ್ಕೆ ಎಲ್ಲ ಸಿದ್ಧತೆಗಳು ಆಗಿದ್ದವು ಮತ್ತು ಪುಸ್ತಕಗಳು ತೆರೆಯಲ್ಪಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 7:10
26 ತಿಳಿವುಗಳ ಹೋಲಿಕೆ  

ಇಗೋ, ಯೆಹೋವ ದೇವರ ನಾಮವು ದೂರದಿಂದ ಬರುತ್ತದೆ. ಆತನ ಕೋಪವು ಉರಿಯುತ್ತದೆ. ಅದರಿಂದೇಳುವ ಹೊಗೆಯು ದಟ್ಟವಾಗಿದೆ. ಆತನ ತುಟಿಗಳು ರೋಷದಿಂದ ತುಂಬಿವೆ. ಆತನ ನಾಲಿಗೆಯು ದಹಿಸುವ ಅಗ್ನಿಯಂತಿದೆ.


“ಯೆಹೋವ ದೇವರು ಸೀನಾಯಿ ಬೆಟ್ಟದಿಂದ ಬಂದು, ಸೇಯೀರಿನಿಂದ ಅವರ ಮೇಲೆ ಉದಯಿಸಿದರು. ಪಾರಾನ್ ಬೆಟ್ಟದಿಂದ ಪ್ರಕಾಶಿಸಿದರು. ದೇವರು ದಕ್ಷಿಣದ ತಮ್ಮ ಪರ್ವತ ಶ್ರೇಣಿಯಿಂದ ಲಕ್ಷಾಂತರ ಪರಿಶುದ್ಧರ ಸಂಗಡ ಬಂದರು.


ಇದಲ್ಲದೆ ನಾನು ನೋಡಲಾಗಿ, ಸಿಂಹಾಸನದ ಜೀವಿಗಳ ಹಾಗೂ ಹಿರಿಯರ ಸುತ್ತಲೂ ಬಹುಮಂದಿ ದೇವದೂತರ ಧ್ವನಿಯನ್ನು ಕೇಳಿದೆನು. ಅವರ ಸಂಖ್ಯೆಯು ಲಕ್ಷೋಪಲಕ್ಷವಾಗಿಯೂ ಕೋಟ್ಯಾನುಕೋಟಿಯಾಗಿಯೂ ಇತ್ತು.


ನಮ್ಮ ದೇವರು ಬರುತ್ತಾರೆ, ಎಷ್ಟು ಮಾತ್ರವೂ ಮೌನವಾಗಿರುವುದಿಲ್ಲ. ಬೆಂಕಿಯು ಅವರ ಮುಂದೆ ಪ್ರಜ್ವಲಿಸುವುದು; ಅವರ ಸುತ್ತಲೂ ದೊಡ್ಡ ಬಿರುಗಾಳಿಯು ಬೀಸುವುದು.


ದೇವರಿಗೆ ಸಹಸ್ರಾರು ಮಾತ್ರವಲ್ಲ ಲಕ್ಷಾಂತರ ರಥಗಳು ಇವೆ. ಕರ್ತ ಆಗಿರುವ ಯೆಹೋವ ದೇವರು ಅವುಗಳ ಸಮೇತವಾಗಿ ಸೀನಾಯಿ ಬೆಟ್ಟದಲ್ಲಿದ್ದ ಹಾಗೆ ಪವಿತ್ರಾಲಯದಲ್ಲಿದ್ದಾರೆ.


ಇಂಥವರ ವಿಷಯದಲ್ಲಿಯೇ ಆದಾಮನಿಂದ ಏಳನೆಯವನಾದ ಹನೋಕನು ಸಹ, “ಇಗೋ, ಕರ್ತದೇವರು ತಮ್ಮ ಅಸಂಖ್ಯಾತ ಪರಿಶುದ್ಧರನ್ನು ಕೂಡಿಕೊಂಡು


“ಮನುಷ್ಯಪುತ್ರನಾದ ನಾನು ಮಹಿಮೆಯಲ್ಲಿ ಎಲ್ಲಾ ಪರಿಶುದ್ಧ ದೂತರೊಂದಿಗೆ ಬರುವಾಗ, ನನ್ನ ಮಹಿಮೆಯ ಸಿಂಹಾಸನದ ಮೇಲೆ ಕುಳಿತುಕೊಳ್ಳುವೆನು.


ಪೂರ್ವದಿಂದ ತೋಫೆತ್ ಸಿದ್ಧವಾಗಿದೆ. ಹೌದು, ಅದು ಆಳವಾಗಿಯೂ, ಅಗಲವಾಗಿಯೂ ಅರಸನಿಗೆ ಸಿದ್ಧವಾಗಿದೆ. ಅದರ ಚಿತೆಯೊಳಗೆ ಬೆಂಕಿಯೂ, ಬಹಳ ಕಟ್ಟಿಗೆಯೂ ತುಂಬಿರುವುದು. ಯೆಹೋವ ದೇವರ ಶ್ವಾಸವು ಗಂಧಕದ ಪ್ರವಾಹದಂತೆ ಅದನ್ನು ಉರಿಸುವುದು.


ಆಗ ಮೀಕಾಯನು, “ಆದ್ದರಿಂದ ಯೆಹೋವ ದೇವರ ವಾಕ್ಯವನ್ನು ಕೇಳು: ಯೆಹೋವ ದೇವರು ತಮ್ಮ ಸಿಂಹಾಸನದ ಮೇಲೆ ಕುಳಿತುಕೊಂಡಿರುವುದನ್ನೂ ಆಕಾಶದ ಸಮಸ್ತ ಸೈನ್ಯವು ಅವರ ಬಲಗಡೆ, ಎಡಗಡೆ ಮತ್ತು ಸುತ್ತಲೂ ನಿಂತಿರುವುದನ್ನೂ ನಾನು ಕಂಡೆನು.


ಪುರಾತನ ಮನುಷ್ಯನು ಬಂದು ಮಹೋನ್ನತನ ಪರಿಶುದ್ಧರಿಗೆ ನ್ಯಾಯತೀರ್ಪು ಕೊಡುವವರೆಗೂ, ಪರಿಶುದ್ಧರು ರಾಜ್ಯವನ್ನು ವಶಪಡಿಸಿಕೊಳ್ಳುವ ಕಾಲದವರೆಗೂ ಅವರ ಮೇಲೆ ಜಯವನ್ನು ಹೊಂದಿತು.


ಆದರೆ ನೀವು ಚೀಯೋನ್ ಪರ್ವತಕ್ಕೂ ಜೀವವುಳ್ಳ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇಮಿಗೂ ಆನಂದಭರಿತ ಅಸಂಖ್ಯಾತ ದೇವದೂತಗಣಗಳ ಬಳಿಗೂ


ನೀವು ಬೆಟ್ಟಗಳ ತಗ್ಗಿಗೆ ಓಡಿಹೋಗುವಿರಿ. ಏಕೆಂದರೆ ಬೆಟ್ಟಗಳ ತಗ್ಗು ಆಚೆಲಿನವರೆಗೂ ಮುಟ್ಟುವುದು. ಯೆಹೂದದ ಅರಸನಾದ ಉಜ್ಜೀಯನ ದಿವಸಗಳಲ್ಲಿ, ನೀವು ಭೂಕಂಪಕ್ಕೆ ಓಡಿ ಹೋದ ಹಾಗೆ, ಓಡಿಹೋಗುವಿರಿ. ನನ್ನ ದೇವರಾದ ಯೆಹೋವ ದೇವರು ಬರುವರು. ನಿಮ್ಮ ಸಂಗಡ ಪರಿಶುದ್ಧರೆಲ್ಲರು ಸಹ ಬರುವರು.


“ ‘ಆದರೆ ನ್ಯಾಯ ಸಭೆಯು ಕುಳಿತು ಅವನ ಅಧಿಕಾರವನ್ನು ತೆಗೆದುಹಾಕಿ, ಕೊನೆಯವರೆಗೂ ಅದನ್ನು ಸಂಹರಿಸಿ ನಾಶಪಡಿಸುವುದು.


ಈ ದೇವದೂತರೆಲ್ಲರೂ ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿಸಲಾದ ಸೇವೆಯ ಆತ್ಮಗಳು ಅಲ್ಲವೇ?


ರಾಷ್ಟ್ರಗಳು ಕೋಪಗೊಂಡವು, ನಿಮ್ಮ ರೋಷವು ಈಗ ಬಂದಿದೆ. ಸತ್ತವರು ತೀರ್ಪು ಹೊಂದುವ ಸಮಯ ಬಂದಿದೆ. ನೀವು ನಿಮ್ಮ ಸೇವಕರಾದ ಪ್ರವಾದಿಗಳಿಗೂ ದೇವಜನರಿಗೂ ನಿಮ್ಮ ನಾಮಕ್ಕೆ ಭಯಪಡುವ ದೊಡ್ಡವರಿಗೂ ಚಿಕ್ಕವರಿಗೂ ಪ್ರತಿಫಲವನ್ನು ಕೊಟ್ಟು, ಲೋಕ ನಾಶಕರನ್ನು ದಂಡಿಸುವಿರಿ.”


ಆಗ ಮೀಕಾಯನು, “ಆದ್ದರಿಂದ ಯೆಹೋವ ದೇವರ ವಾಕ್ಯವನ್ನು ಕೇಳು. ಯೆಹೋವ ದೇವರು ತಮ್ಮ ಸಿಂಹಾಸನದ ಮೇಲೆ ಕುಳಿತುಕೊಂಡಿರುವುದನ್ನೂ ಆಕಾಶದ ಸಮಸ್ತ ಸೈನ್ಯವು ಅವರ ಬಲಗಡೆ ಮತ್ತು ಎಡಗಡೆಯಲ್ಲಿ ನಿಂತಿರುವುದನ್ನೂ ನಾನು ಕಂಡೆನು.


ಮೂಗಿನಿಂದ ಹೊಗೆ ಬಂದಂತೆಯೂ ಬಾಯಿಯೊಳಗಿಂದ ದಹಿಸುವ ಅಗ್ನಿ ಹೊರಟಂತೆಯೂ; ಕೆಂಡಗಳು ಅದರಿಂದ ಜ್ವಾಲಿಸಿದಂತೆಯೂ ಇರಲು,


“ಆ ಕಾಲದಲ್ಲಿ ನಿನ್ನ ಜನರನ್ನು ಕಾಪಾಡುವುದಕ್ಕಾಗಿ ಮಹಾರಾಜಕುಮಾರನಾದ ಮೀಕಾಯೇಲನು ಏಳುವನು. ಮೊಟ್ಟಮೊದಲು ಜನಾಂಗ ಉಂಟಾದಂದಿನಿಂದ ಇಂದಿನವರೆಗೂ ಸಂಭವಿಸದಂತಹ ಸಂಕಟವು ಸಂಭವಿಸುವುದು. ಆಗ ನಿನ್ನ ಜನರೊಳಗೆ ಎಂದರೆ ಜೀವ ಪುಸ್ತಕದಲ್ಲಿ ಯಾರ ಹೆಸರು ಬರೆಯಲಾಗಿದೆಯೋ, ಅವರೆಲ್ಲರೂ ಬಿಡುಗಡೆಯಾಗುವರು.


ದೇವರ ಸೈನ್ಯಗಳಿಗೆ ಲೆಕ್ಕ ಉಂಟೋ? ಯಾರ ಮೇಲೆ ದೇವರ ಬೆಳಕು ಮೂಡುವುದಿಲ್ಲ?


ದೇವರ ಇಷ್ಟವನ್ನು ನಡೆಸುವ ಸೇವಕರೇ, ಅವರ ಎಲ್ಲಾ ಸೈನ್ಯಗಳೇ, ಯೆಹೋವ ದೇವರನ್ನು ಸ್ತುತಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು