Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 7:16 - ಕನ್ನಡ ಸಮಕಾಲಿಕ ಅನುವಾದ

16 ನಾನು ಹತ್ತಿರ ನಿಂತವರಲ್ಲಿ ಒಬ್ಬನ ಬಳಿಗೆ ಬಂದು ಇವೆಲ್ಲವುಗಳ ಸತ್ಯಾರ್ಥವನ್ನು ಕೇಳಿದೆನು. “ಆಗ ಅವನು ಅದನ್ನು ನನಗೆ ಹೇಳಿ ಇವುಗಳ ಅರ್ಥವನ್ನು ನನಗೆ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಾನು ಹತ್ತಿರ ನಿಂತಿದ್ದವರಲ್ಲಿ ಒಬ್ಬನ ಬಳಿಗೆ ಹೋಗಿ ಇವುಗಳ ಸತ್ಯಾರ್ಥವೇನೆಂದು ವಿಚಾರಿಸಲು ಅವನು ನನಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಹತ್ತಿರದಲ್ಲೆ ನಿಂತಿದ್ದವರಲ್ಲಿ ಒಬ್ಬನ ಬಳಿಗೆ ಹೋಗಿ ಇವುಗಳ ಸರಿಯಾದ ಅರ್ಥ ಏನೆಂದು ವಿಚಾರಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನಾನು ಹತ್ತಿರ ನಿಂತಿದ್ದವರಲ್ಲಿ ಒಬ್ಬನ ಬಳಿಗೆ ಹೋಗಿ ಇವುಗಳ ಸತ್ಯಾರ್ಥವೇನೆಂದು ವಿಚಾರಿಸಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನಾನು ಅಲ್ಲಿ ನಿಂತಿದ್ದವರಲ್ಲಿ ಒಬ್ಬನ ಬಳಿಗೆ ಹೋದೆ. ಇದೆಲ್ಲದರ ಅರ್ಥವೇನೆಂದು ಅವನನ್ನು ಕೇಳಿದೆ. ಅವನು ಇವುಗಳ ಅರ್ಥವನ್ನು ವಿವರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 7:16
14 ತಿಳಿವುಗಳ ಹೋಲಿಕೆ  

ಹಿರಿಯರಲ್ಲಿ ಒಬ್ಬನು ನನಗೆ, “ಅಳಬೇಡ! ನೋಡು, ಯೂದ ಕುಲದಲ್ಲಿ ಜನಿಸಿದ ಸಿಂಹವೂ ದಾವೀದನ ವಂಶಜರೂ ಆಗಿರುವವರು ಆ ಸುರುಳಿಯನ್ನು ಅದರ ಏಳು ಮುದ್ರೆಗಳನ್ನು ಬಿಚ್ಚುವುದಕ್ಕೆ ಜಯವೀರರಾಗಿದ್ದಾರೆ,” ಎಂದು ಹೇಳಿದನು.


ನನ್ನ ಸಂಗಡ ಮಾತನಾಡಿದ ದೂತನು ಬರುತ್ತಿರಲು, ಇನ್ನೊಬ್ಬ ದೂತನು ಅವನನ್ನು ಎದುರುಗೊಂಡು,


ಆತನ ಸನ್ನಿಧಾನದಿಂದ ಅಗ್ನಿಪ್ರವಾಹವು ಹೊರಟುಬಂದು, ಸಹಸ್ರ ಸಹಸ್ರವಾಗಿ ಆತನಿಗೆ ಸೇವೆ ಮಾಡಿದವು. ಲಕ್ಷೋಪಲಕ್ಷ ಆತನ ಮುಂದೆ ನಿಂತಿದ್ದವು. ನ್ಯಾಯ ಸಭೆಯು ಕುಳಿತಿತ್ತು ಮತ್ತು ಪುಸ್ತಕಗಳು ತೆರೆದಿದ್ದವು.


“ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ನೀನು ನನ್ನ ಮಾರ್ಗಗಳಲ್ಲಿ ನಡೆದು ನನ್ನ ಆಜ್ಞೆಗಳನ್ನು ಕೈಗೊಂಡರೆ, ಆಗ ನೀನು ನನ್ನ ಆಲಯಕ್ಕೂ ನ್ಯಾಯತೀರಿಸಿ, ನನ್ನ ಅಂಗಳಗಳನ್ನೂ ಕಾಯುವೆ. ಇಲ್ಲಿ ನಿಂತವರ ಬಳಿಯಲ್ಲಿ ನಡೆದಾಡುವ ಹಕ್ಕನ್ನು ನಿನಗೆ ಕೊಡುವೆನು.’


ನನಗೆ, “ದಾನಿಯೇಲನೇ, ನಿನಗೆ ವಿವೇಕವನ್ನೂ, ಬುದ್ಧಿಯನ್ನೂ ಕೊಡುವುದಕ್ಕೆ ಈಗ ನಾನು ಬಂದಿದ್ದೇನೆ.


‘ಈ ದೊಡ್ಡ ಮೃಗಗಳು ಭೂಮಿಯಿಂದ ಹುಟ್ಟುವ ನಾಲ್ಕು ಅರಸರು.


ಅದರಂತೆ ಅವನು ನನ್ನ ಬಳಿಗೆ ಬಂದನು. ಅವನು ಬಂದಾಗ ನಾನು ಭಯಪಟ್ಟು ಮುಖ ಕೆಳಗಾಗಿ ಬಿದ್ದೆನು. ಆದರೆ ಅವನು ನನಗೆ, “ಮನುಷ್ಯಪುತ್ರನೇ, ಅಂತ್ಯಕಾಲದಲ್ಲಿ ನೆರವೇರುವ ದರ್ಶನವು ಎಂಬುದು ನಿನಗೆ ಮನದಟ್ಟಾಗಿರಲಿ,” ಎಂದನು.


ಆಗ ನನ್ನ ಸಂಗಡ ಮಾತನಾಡಿದ ದೂತನಿಗೆ ನಾನು, “ಇದೇನು?” ಎಂದೆನು. ಅದಕ್ಕೆ ಅವನು ನನಗೆ ಉತ್ತರಕೊಟ್ಟು, “ಇವು ಯೆಹೂದ, ಇಸ್ರಾಯೇಲ್, ಯೆರೂಸಲೇಮನ್ನೂ ಚದರಿಸಿದ ಕೊಂಬುಗಳು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು