ದಾನಿಯೇಲ 7:18 - ಕನ್ನಡ ಸಮಕಾಲಿಕ ಅನುವಾದ18 ಆದರೆ ಆ ಮಹೋನ್ನತನ ಪರಿಶುದ್ಧರು ರಾಜ್ಯವನ್ನು ವಶಪಡಿಸಿಕೊಂಡು, ಅದನ್ನು ಎಂದಿಗೂ ಎಂದೆಂದಿಗೂ ವಶಪಡಿಸಿಕೊಳ್ಳುವರು.’ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಆದರೆ ರಾಜ್ಯವು ಪರಾತ್ಪರನಾದ ದೇವರ ಭಕ್ತರಿಗೆ ಲಭಿಸುವುದು, ಅವರೇ ಅದನ್ನು ತಲತಲಾಂತರಕ್ಕೂ ಶಾಶ್ವತವಾಗಿ ಅನುಭವಿಸುವರು’ ಎಂದು ಆ ವಿಷಯಗಳ ತಾತ್ಪರ್ಯವನ್ನು ವಿವರಿಸಿ ತಿಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಆದರೆ ರಾಜ್ಯಾಧಿಕಾರ ಲಭಿಸುವುದು ಮಹೋನ್ನತರ ಪವಿತ್ರ ಪ್ರಜೆಗೆ. ಅದನ್ನು ತಲತಲಾಂತರಕ್ಕೂ ಶಾಶ್ವತವಾಗಿ ಅನುಭವಿಸುವವರು ಅವರೇ,” ಎಂದು ಆ ವಿಷಯಗಳ ತಾತ್ಪರ್ಯವನ್ನು ವಿವರಿಸಿ ತಿಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಆದರೆ ರಾಜ್ಯವು ಪರಾತ್ಪರನ ಭಕ್ತರಿಗೆ ಲಭಿಸುವದು, ಅವರೇ ಅದನ್ನು ತಲತಲಾಂತರಕ್ಕೂ ಶಾಶ್ವತವಾಗಿ ಅನುಭವಿಸುವರು ಎಂದು ಆ ವಿಷಯಗಳ ತಾತ್ಪರ್ಯವನ್ನು ವಿವರಿಸಿ ತಿಳಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಆದರೆ ದೇವರ ವಿಶೇಷ ಜನರಿಗೆ ಆ ಸಾಮ್ರಾಜ್ಯಗಳು ದೊರೆಯುವವು. ಅವರು ಆ ಸಾಮ್ರಾಜ್ಯವನ್ನು ಶಾಶ್ವತವಾಗಿ ಅನುಭವಿಸುವರು’ ಎಂದು ಹೇಳಿದನು. ಅಧ್ಯಾಯವನ್ನು ನೋಡಿ |
ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಕುಳಿತಿದ್ದವರಿಗೆ ನ್ಯಾಯತೀರಿಸುವ ಅಧಿಕಾರವು ಕೊಡಲಾಯಿತು. ಇದಲ್ಲದೆ ಯೇಸುವಿನ ಸಾಕ್ಷಿಯ ನಿಮಿತ್ತವಾಗಿಯೂ ದೇವರ ವಾಕ್ಯದ ನಿಮಿತ್ತವಾಗಿಯೂ ಶಿರಚ್ಛೇದನ ಗೊಂಡವರ ಆತ್ಮಗಳನ್ನೂ ಮೃಗವನ್ನೂ ಅದರ ವಿಗ್ರಹವನ್ನೂ ಆರಾಧಿಸದೆ ತಮ್ಮ ಹಣೆಯ ಮೇಲೆ ಇಲ್ಲವೆ ಕೈಯ ಮೇಲೆ ಅದರ ಗುರುತುಹಾಕಿಸಿಕೊಳ್ಳದವರನ್ನೂ ನೋಡಿದೆನು. ಅವರು ಪುನಃ ಜೀವಿತರಾಗಿ ಎದ್ದು ಯೇಸುಕ್ರಿಸ್ತರೊಂದಿಗೆ ಸಾವಿರ ವರ್ಷ ಆಳಿದರು.