ದಾನಿಯೇಲ 7:19 - ಕನ್ನಡ ಸಮಕಾಲಿಕ ಅನುವಾದ19 “ಆಮೇಲೆ ನಾಲ್ಕನೆಯ ಮೃಗವು ಎಲ್ಲದರಲ್ಲಿ ವ್ಯತ್ಯಾಸವಾಗಿಯೂ, ಅತಿ ಭಯಂಕರವಾಗಿಯೂ, ಕಬ್ಬಿಣದ ಹಲ್ಲುಗಳುಳ್ಳದ್ದಾಗಿಯೂ, ಕಂಚಿನ ಉಗುರುಗಳುಳ್ಳದ್ದಾಗಿಯೂ ತುಂಡುತುಂಡು ಮಾಡಿ, ತಿಂದು ಮಿಕ್ಕಿದ್ದನ್ನು ಕಾಲಿನ ಕೆಳಗೆ ಹಾಕಿ ತುಳಿಯುವಂಥದ್ದೂ ಆಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಆ ಮೇಲೆ ಕಬ್ಬಿಣದ ಹಲ್ಲು, ತಾಮ್ರದ ಉಗುರುಳ್ಳ ಮೃಗವು ಕೆಲವನ್ನು ನುಂಗಿ ಕೆಲವನ್ನು ಚೂರುಚೂರು ಮಾಡಿ ಉಳಿದದ್ದನ್ನು ಕಾಲುಗಳಿಂದ ತುಳಿದು, ಇತರ ಮೃಗಗಳಿಗಿಂತ ವಿಲಕ್ಷಣವಾಗಿ ಅತಿ ಭಯಂಕರವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಅದಾದ ಮೇಲೆ ಇತರ ಮೃಗಗಳಿಗಿಂತ ವಿಲಕ್ಷಣವಾಗಿಯೂ ಅತಿಭಯಂಕರವಾಗಿಯೂ ಕಬ್ಬಿಣದ ಹಲ್ಲು, ಕಂಚಿನ ಉಗುರು ಉಳ್ಳದ್ದಾಗಿಯೂ ತನ್ನ ಬಲಿಯನ್ನು ತುಂಡುತುಂಡಾಗಿಸಿ ಕಬಳಿಸುತ್ತಿದ್ದ ಹಾಗು ಮಿಕ್ಕದ್ದನ್ನು ಕಾಲಿನಿಂದ ತುಳಿಯುತ್ತಿದ್ದ ಆ ನಾಲ್ಕನೆಯ ಮೃಗದ ವಿಷಯವನ್ನು ತಿಳಿದುಕೊಳ್ಳಲು ಬಯಸಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಆಮೇಲೆ ಕಬ್ಬಿಣದ ಹಲ್ಲು, ತಾಮ್ರದ ಉಗುರು ಉಳ್ಳದ್ದಾಗಿ ಕೆಲವನ್ನು ನುಂಗಿ ಕೆಲವನ್ನು ಚೂರುಚೂರುಮಾಡಿ ವಿುಕ್ಕದ್ದನ್ನು ಕಾಲುಗಳಿಂದ ತುಳಿದು ಇತರ ಮೃಗಗಳಿಗಿಂತ ವಿಲಕ್ಷಣವಾಗಿ ಅತಿ ಭಯಂಕರವಾದ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 “ಆಮೇಲೆ ನಾನು, ‘ನಾಲ್ಕನೆಯ ಮೃಗ ಯಾವುದು? ಅದು ಏನನ್ನು ಸೂಚಿಸುತ್ತದೆ?’ ಎಂಬುದನ್ನು ತಿಳಿದುಕೊಳ್ಳಬಯಸಿದೆ. ನಾಲ್ಕನೆಯ ಮೃಗವು ಉಳಿದೆಲ್ಲ ಮೃಗಗಳಿಂದ ಭಿನ್ನವಾಗಿತ್ತು. ಅದು ಬಹಳ ಭಯಾನಕವಾಗಿತ್ತು. ಅದಕ್ಕೆ ಕಬ್ಬಿಣದ ಹಲ್ಲುಗಳು ಮತ್ತು ಕಂಚಿನ ಉಗುರುಗಳಿದ್ದವು. ಅದು ತಾನು ಬೇಟೆಯಾಡಿದ ಪಶುವನ್ನು ತುಂಡುತುಂಡು ಮಾಡಿ ಸಂಪೂರ್ಣವಾಗಿ ತಿಂದು ಮಿಕ್ಕಿದ್ದನ್ನು ಕಾಲಿನಿಂದ ತುಳಿದುಹಾಕುತ್ತಿತ್ತು. ಅಧ್ಯಾಯವನ್ನು ನೋಡಿ |