Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 7:22 - ಕನ್ನಡ ಸಮಕಾಲಿಕ ಅನುವಾದ

22 ಪುರಾತನ ಮನುಷ್ಯನು ಬಂದು ಮಹೋನ್ನತನ ಪರಿಶುದ್ಧರಿಗೆ ನ್ಯಾಯತೀರ್ಪು ಕೊಡುವವರೆಗೂ, ಪರಿಶುದ್ಧರು ರಾಜ್ಯವನ್ನು ವಶಪಡಿಸಿಕೊಳ್ಳುವ ಕಾಲದವರೆಗೂ ಅವರ ಮೇಲೆ ಜಯವನ್ನು ಹೊಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ದೇವಭಕ್ತರೊಂದಿಗೆ ಯುದ್ಧಮಾಡಿ, ಮಹಾವೃದ್ಧನು ಬಂದು ಪರಾತ್ಪರನಾದ ದೇವರ ಭಕ್ತರಿಗಾಗಿ ನ್ಯಾಯತೀರಿಸಿ ಅವರಿಗೆ ರಾಜ್ಯವನ್ನು ದೊರಕಿಸುವ ತನಕ ಅವರನ್ನು ಗೆಲ್ಲುತ್ತಾ ಬಂದಿತ್ತು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಆ ಕೊಂಬು ಪವಿತ್ರ ಪ್ರಜೆಯೊಂದಿಗೆ ಯುದ್ಧಮಾಡುತ್ತಿತ್ತು. ಮಹಾವೃದ್ಧನು ಬಂದು ಮಹೋನ್ನತರ ಆ ಪವಿತ್ರ ಪ್ರಜೆಗೆ ನ್ಯಾಯತೀರಿಸಿ ಅವರಿಗೆ ರಾಜ್ಯವನ್ನು ದೊರಕಿಸುವ ತನಕ ಅವರನ್ನು ಗೆಲ್ಲುತ್ತಾ ಬಂದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಮಹಾವೃದ್ಧನು ಅಯ್ತಂದು ಪರಾತ್ಪರನ ಭಕ್ತರಿಗಾಗಿ ನ್ಯಾಯತೀರಿಸಿ ಅವರಿಗೆ ರಾಜ್ಯವನ್ನು ದೊರಕಿಸುವ ತನಕ ಅವರನ್ನು ಗೆಲ್ಲುತ್ತಾ ಬಂದು ಕಣ್ಣುಳ್ಳದ್ದಾಗಿ ಬಾಯಿಂದ ಬಡಾಯಿಕೊಚ್ಚಿಕೊಳ್ಳುತ್ತಾ ವಿುಕ್ಕ ಕೊಂಬುಗಳಿಗಿಂತ ಬಿರಸಾಗಿ ನೋಡುತ್ತಾ ಇತ್ತೋ ಆ ಕೊಂಬಿನ ವಿಷಯವಾಗಿಯೂ ಸತ್ಯಾರ್ಥವನ್ನು ತಿಳಿದುಕೊಳ್ಳಬೇಕೆಂದು ಅಪೇಕ್ಷಿಸಿ ವಿಚಾರಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಪುರಾತನ ರಾಜನು ಬಂದು ನ್ಯಾಯತೀರಿಸುವವರೆಗೂ ಆ ಚಿಕ್ಕಕೊಂಬು ದೇವಭಕ್ತರ ಕೊಲೆ ಮಾಡುತ್ತಿತ್ತು. ಪುರಾತನ ರಾಜನು ಈ ಚಿಕ್ಕ ಕೊಂಬಿನ ಬಗ್ಗೆ ತೀರ್ಪನ್ನು ಕೊಟ್ಟನು. ಈ ತೀರ್ಪು ದೇವಭಕ್ತರ ಪರವಾಗಿತ್ತು. ಆದ್ದರಿಂದ ಅವರು ಸಾಮ್ರಾಜ್ಯವನ್ನು ಪಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 7:22
17 ತಿಳಿವುಗಳ ಹೋಲಿಕೆ  

ಆದರೆ ಆ ಮಹೋನ್ನತನ ಪರಿಶುದ್ಧರು ರಾಜ್ಯವನ್ನು ವಶಪಡಿಸಿಕೊಂಡು, ಅದನ್ನು ಎಂದಿಗೂ ಎಂದೆಂದಿಗೂ ವಶಪಡಿಸಿಕೊಳ್ಳುವರು.’


ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಕುಳಿತಿದ್ದವರಿಗೆ ನ್ಯಾಯತೀರಿಸುವ ಅಧಿಕಾರವು ಕೊಡಲಾಯಿತು. ಇದಲ್ಲದೆ ಯೇಸುವಿನ ಸಾಕ್ಷಿಯ ನಿಮಿತ್ತವಾಗಿಯೂ ದೇವರ ವಾಕ್ಯದ ನಿಮಿತ್ತವಾಗಿಯೂ ಶಿರಚ್ಛೇದನ ಗೊಂಡವರ ಆತ್ಮಗಳನ್ನೂ ಮೃಗವನ್ನೂ ಅದರ ವಿಗ್ರಹವನ್ನೂ ಆರಾಧಿಸದೆ ತಮ್ಮ ಹಣೆಯ ಮೇಲೆ ಇಲ್ಲವೆ ಕೈಯ ಮೇಲೆ ಅದರ ಗುರುತುಹಾಕಿಸಿಕೊಳ್ಳದವರನ್ನೂ ನೋಡಿದೆನು. ಅವರು ಪುನಃ ಜೀವಿತರಾಗಿ ಎದ್ದು ಯೇಸುಕ್ರಿಸ್ತರೊಂದಿಗೆ ಸಾವಿರ ವರ್ಷ ಆಳಿದರು.


ಅವರನ್ನು ನಮ್ಮ ದೇವರಿಗೋಸ್ಕರ ರಾಜ್ಯವನ್ನಾಗಿಯೂ ಯಾಜಕರನ್ನಾಗಿಯೂ ಮಾಡಿದಿರಿ, ಅವರು ಭೂಮಿಯ ಮೇಲೆ ಆಳುವರು!” ಎಂದು ಹೇಳಿದರು.


ನಾನು ಜಯಹೊಂದಿ, ನನ್ನ ತಂದೆಯೊಡನೆ ಸಿಂಹಾಸನದಲ್ಲಿ ಕುಳಿತುಕೊಂಡ ಹಾಗೆ, ಜಯಶಾಲಿಯಾದವನನ್ನು ನನ್ನೊಡನೆ ಸಿಂಹಾಸನದಲ್ಲಿ ಕೂತುಕೊಳ್ಳುವಂತೆ ಮಾಡುವೆನು.


ಆಗ ಆ ನಿಯಮ ಮೀರುವವನು ಪ್ರತ್ಯಕ್ಷನಾಗುವನು. ಅವನನ್ನು ಕರ್ತ ಯೇಸು ತಮ್ಮ ಬಾಯಿಯ ಶ್ವಾಸದಿಂದ ಕೆಡವಿ, ತಮ್ಮ ಪ್ರತ್ಯಕ್ಷತೆಯ ಮಹಿಮೆಯಿಂದ ನಾಶಮಾಡಿಬಿಡುವರು.


ಯೇಸು ಅವರಿಗೆ, “ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಸಮಸ್ತವೂ ನವೀಕರಣವಾಗುವಾಗ, ಮನುಷ್ಯಪುತ್ರನಾದ ನಾನು ನನ್ನ ಮಹಿಮೆಯ ಸಿಂಹಾಸನದಲ್ಲಿ ಕುಳಿತುಕೊಂಡಿರಲು, ನನ್ನನ್ನು ಹಿಂಬಾಲಿಸಿದವರಾದ ನೀವು ಸಹ ಹನ್ನೆರಡು ಸಿಂಹಾಸನಗಳ ಮೇಲೆ ಕುಳಿತುಕೊಂಡು, ಇಸ್ರಾಯೇಲಿನ ಹನ್ನೆರಡು ಗೋತ್ರಗಳಿಗೆ ನ್ಯಾಯತೀರಿಸುವಿರಿ.


ನಮ್ಮನ್ನು ಒಂದು ರಾಜ್ಯವನ್ನಾಗಿಯೂ ತಮ್ಮ ತಂದೆಯಾದ ದೇವರಿಗೆ ಸೇವೆ ಸಲ್ಲಿಸುವ ಯಾಜಕರನ್ನಾಗಿಯೂ ಮಾಡಿರುವ ಕ್ರಿಸ್ತ ಯೇಸುವಿಗೆ ಯುಗಯುಗಾಂತರಗಳಲ್ಲಿಯೂ ಮಹಿಮೆಯು, ಬಲವು ಇರಲಿ ಆಮೆನ್.


ಏಕೆಂದರೆ ಮುಯ್ಯಿಗೆ ಮುಯ್ಯಿ ತೀರಿಸುವ ದಿವಸವು ನನ್ನ ಹೃದಯದಲ್ಲಿದೆ. ನಾನು ವಿಮೋಚಿಸಿದವರ ವರುಷವು ಬಂತು.


“ಆಗ ಅವನು ನನಗೆ: ‘ಆ ನಾಲ್ಕನೆಯ ಮೃಗವು ಭೂಮಿಯ ಮೇಲಿರುವ ನಾಲ್ಕನೆಯ ರಾಜ್ಯವಾಗುವುದು. ಅದು ಎಲ್ಲಾ ರಾಜ್ಯಗಳಿಗಿಂತ ವ್ಯತ್ಯಾಸವಾಗಿಯೂ, ಭೂಮಿಯನ್ನೆಲ್ಲಾ ತುಳಿದು ತುಂಡುತುಂಡು ಮಾಡುವಂಥಾದ್ದಾಗಿಯೂ ಇರುವುದು.


ಇಂಥಾ ಸನ್ಮಾನದಲ್ಲಿ ನಂಬಿಗಸ್ತರು ಸಂತೋಷಪಡಲಿ ಹಾಸಿಗೆಯಲ್ಲಿರುವಾಗಲೂ ಆನಂದಗಾನ ಹಾಡಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು