Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 7:23 - ಕನ್ನಡ ಸಮಕಾಲಿಕ ಅನುವಾದ

23 “ಆಗ ಅವನು ನನಗೆ: ‘ಆ ನಾಲ್ಕನೆಯ ಮೃಗವು ಭೂಮಿಯ ಮೇಲಿರುವ ನಾಲ್ಕನೆಯ ರಾಜ್ಯವಾಗುವುದು. ಅದು ಎಲ್ಲಾ ರಾಜ್ಯಗಳಿಗಿಂತ ವ್ಯತ್ಯಾಸವಾಗಿಯೂ, ಭೂಮಿಯನ್ನೆಲ್ಲಾ ತುಳಿದು ತುಂಡುತುಂಡು ಮಾಡುವಂಥಾದ್ದಾಗಿಯೂ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆಗ ಅವನು ನನಗೆ, “ಆ ನಾಲ್ಕನೆಯ ಮೃಗವು ಲೋಕದಲ್ಲಿ ಉಂಟಾಗುವ ನಾಲ್ಕನೆಯ ರಾಜ್ಯ; ಅದು ಉಳಿದ ರಾಜ್ಯಗಳಿಗಿಂತ ವಿಲಕ್ಷಣವಾಗಿ ಲೋಕವನ್ನೆಲ್ಲಾ ನುಂಗಿ ತುಳಿದು ಚೂರುಚೂರು ಮಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಆಗ ಅವನು ನನಗೆ ಕೊಟ್ಟ ವಿವರ ಇದು: “ಆ ನಾಲ್ಕನೆಯ ಮೃಗ ಲೋಕದಲ್ಲಿ ತಲೆಯೆತ್ತುವ ನಾಲ್ಕನೆಯ ರಾಜ್ಯ. ಅದು ಮಿಕ್ಕ ರಾಜ್ಯಗಳಿಗಿಂತ ವಿಲಕ್ಷಣವಾದುದು. ಲೋಕವನ್ನೇ ಕಾಲಿನಿಂದ ತುಳಿದು ಚೂರುಚೂರು ಮಾಡಿ ಕಬಳಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಆಗ ಅವನು ನನಗೆ - ಆ ನಾಲ್ಕನೆಯ ಮೃಗವು ಲೋಕದಲ್ಲಿ ಉಂಟಾಗುವ ನಾಲ್ಕನೆಯ ರಾಜ್ಯ; ಅದು ವಿುಕ್ಕ ರಾಜ್ಯಗಳಿಗಿಂತ ವಿಲಕ್ಷಣವಾಗಿ ಲೋಕವನ್ನೆಲ್ಲಾ ನುಂಗಿ ತುಳಿದು ಚೂರುಚೂರು ಮಾಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 “ಅವನು ನನಗೆ ಈ ರೀತಿ ವಿವರಿಸಿದನು: ‘ನಾಲ್ಕನೆಯ ಮೃಗವು ಈ ಲೋಕದಲ್ಲಿ ಉಂಟಾಗುವ ನಾಲ್ಕನೆಯ ರಾಜ್ಯ. ಇದು ಬೇರೆಲ್ಲ ರಾಜ್ಯಗಳಿಂದ ಭಿನ್ನವಾಗಿರುತ್ತದೆ. ಆ ನಾಲ್ಕನೆಯ ರಾಜ್ಯವು ಜಗತ್ತಿನ ಜನರನ್ನೆಲ್ಲ ನಾಶಗೊಳಿಸುವುದು. ಇದು ಜಗತ್ತಿನ ಎಲ್ಲ ರಾಷ್ಟ್ರಗಳನ್ನು ತುಳಿದು ಪುಡಿಪುಡಿ ಮಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 7:23
5 ತಿಳಿವುಗಳ ಹೋಲಿಕೆ  

ಆಮೇಲೆ ನಾಲ್ಕನೆಯ ರಾಜ್ಯವು ಕಬ್ಬಿಣದ ಹಾಗೆ ಬಲವಾಗಿ ಇರುವುದು. ಏಕೆಂದರೆ ಕಬ್ಬಿಣವು ಸಮಸ್ತ ವಸ್ತುಗಳನ್ನು ವಶಮಾಡಿಕೊಂಡು, ಚೂರುಚೂರು ಮಾಡುತ್ತದೆ. ಕಬ್ಬಿಣವು ಹೇಗೆ ಎಲ್ಲವನ್ನು ಚೂರು ಮಾಡುವುದೋ, ಹಾಗೆಯೇ ಆ ರಾಜ್ಯವು ಇತರರೆಲ್ಲರನ್ನು ಚೂರುಚೂರಾಗಿ ಮಾಡಿ ಧ್ವಂಸ ಮಾಡುವುದು.


“ತರುವಾಯ ರಾತ್ರಿಯ ದರ್ಶನದಲ್ಲಿ ನಾನು ನೋಡಲಾಗಿ, ನಾಲ್ಕನೆಯ ಮೃಗವು ಭಯಂಕರವೂ, ಘೋರವೂ, ಬಹು ಬಲವುಳ್ಳದ್ದೂ ಆಗಿತ್ತು. ಅದಕ್ಕೆ ದೊಡ್ಡ ಕಬ್ಬಿಣದ ಹಲ್ಲುಗಳು ಇವೆ. ಅದು ತಿಂದು ತುಂಡುತುಂಡು ಮಾಡಿ, ಮಿಕ್ಕದ್ದನ್ನು ತನ್ನ ಕಾಲುಗಳ ಕೆಳಗೆ ಹಾಕಿ ತುಳಿಯಿತು. ಅದು ಮೊದಲಿನ ಎಲ್ಲಾ ಮೃಗಗಳಿಗಿಂತ ವ್ಯತ್ಯಾಸವುಳ್ಳದ್ದೂ, ಹತ್ತು ಕೊಂಬುಗಳುಳ್ಳದ್ದೂ ಆಗಿತ್ತು.


ಆ ದಿನಗಳಲ್ಲಿ ಇಡೀ ರೋಮನ್ ರಾಜ್ಯದಲ್ಲಿ ಜನಗಣತಿಯಾಗಬೇಕೆಂದು ಕೈಸರ್ ಔಗುಸ್ತನಿಂದ ಶಾಸನವು ಹೊರಟಿತು.


ಪುರಾತನ ಮನುಷ್ಯನು ಬಂದು ಮಹೋನ್ನತನ ಪರಿಶುದ್ಧರಿಗೆ ನ್ಯಾಯತೀರ್ಪು ಕೊಡುವವರೆಗೂ, ಪರಿಶುದ್ಧರು ರಾಜ್ಯವನ್ನು ವಶಪಡಿಸಿಕೊಳ್ಳುವ ಕಾಲದವರೆಗೂ ಅವರ ಮೇಲೆ ಜಯವನ್ನು ಹೊಂದಿತು.


ಆ ಹತ್ತು ಕೊಂಬುಗಳು ಆ ರಾಜ್ಯದೊಳಗೆ ಹುಟ್ಟುವ ಹತ್ತು ಅರಸರು. ಅನಂತರ ಇನ್ನೊಬ್ಬ ಅರಸನು ಹುಟ್ಟುವನು. ಅವನು ಮೊದಲಿನವರಿಗಿಂತ ವಿಲಕ್ಷಣವಾಗಿ ಮೂರು ಅರಸರನ್ನು ಅದುಮಿ ಬಿಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು