Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 7:24 - ಕನ್ನಡ ಸಮಕಾಲಿಕ ಅನುವಾದ

24 ಆ ಹತ್ತು ಕೊಂಬುಗಳು ಆ ರಾಜ್ಯದೊಳಗೆ ಹುಟ್ಟುವ ಹತ್ತು ಅರಸರು. ಅನಂತರ ಇನ್ನೊಬ್ಬ ಅರಸನು ಹುಟ್ಟುವನು. ಅವನು ಮೊದಲಿನವರಿಗಿಂತ ವಿಲಕ್ಷಣವಾಗಿ ಮೂರು ಅರಸರನ್ನು ಅದುಮಿ ಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆ ಹತ್ತು ಕೊಂಬುಗಳ ವಿಷಯವೇನೆಂದರೆ ಆ ರಾಜ್ಯದಲ್ಲಿ ಹತ್ತು ಮಂದಿ ಅರಸರು ಉಂಟಾಗುವರು, ಅವರ ತರುವಾಯ ಮತ್ತೊಬ್ಬನು ತಲೆದೋರುವನು. ಅವನು ಮೊದಲಿನ ಅರಸರಿಗಿಂತ ವಿಲಕ್ಷಣನಾಗಿ ಮೂವರು ಅರಸರನ್ನು ಸದೆಬಡೆಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಆ ಹತ್ತು ಕೊಂಬುಗಳು ಅದೇ ರಾಜ್ಯವನ್ನು ಆಳುವ ಹತ್ತುಮಂದಿ ಅರಸರು. ಅವರ ತರುವಾಯ ಮತ್ತೊಬ್ಬನು ತಲೆದೋರುವನು. ಅವನು ಮುಂಚಿನ ಅರಸರಿಗಿಂತ ವಿಲಕ್ಷಣವಾಗಿರುವನು, ಆ ಮೂವರು ಅರಸರನ್ನು ಸದೆಬಡಿದುಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಆ ಹತ್ತು ಕೊಂಬುಗಳ ವಿಷಯವೇನಂದರೆ ಆ ರಾಜ್ಯದಲ್ಲಿ ಹತ್ತುಮಂದಿ ಅರಸರು ಉಂಟಾಗುವರು; ಅವರ ತರುವಾಯ ಮತ್ತೊಬ್ಬನು ತಲೆದೋರುವನು; ಅವನು ಮುಂಚಿನ ಅರಸರಿಗಿಂತ ವಿಲಕ್ಷಣನಾಗಿ ಮೂವರು ಅರಸರನ್ನು ಅದುವಿುಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಹತ್ತು ಕೊಂಬುಗಳು ಈ ನಾಲ್ಕನೆಯ ರಾಜ್ಯದ ಹತ್ತು ಜನ ಅರಸರನ್ನು ಸೂಚಿಸುತ್ತವೆ. ಆ ಹತ್ತು ಜನ ಅರಸರ ತರುವಾಯ ಮತ್ತೊಬ್ಬ ಅರಸನು ಬರುವನು. ಅವನು ತನಗಿಂತಲೂ ಮುಂಚೆ ರಾಜ್ಯಭಾರ ಮಾಡಿದ ಅರಸರಿಗಿಂತ ಭಿನ್ನನಾಗಿರುವನು. ಅವನು ಬೇರೆ ಅರಸರುಗಳಲ್ಲಿ ಮೂವರನ್ನು ಸೋಲಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 7:24
13 ತಿಳಿವುಗಳ ಹೋಲಿಕೆ  

ಅದರ ತಲೆಯಲ್ಲಿದ್ದ ಹತ್ತು ಕೊಂಬುಗಳ ವಿಷಯವಾಗಿಯೂ, ನಾನು ನೋಡುತ್ತಿದ್ದ ಹಾಗೆಯೇ ಯಾವ ಕೊಂಬು ಮೊಳೆತು ಮೂರು ಕೊಂಬುಗಳನ್ನು ಬೀಳಿಸಿ, ತನ್ನಲ್ಲಿಯೇ ಕಣ್ಣುಳ್ಳದ್ದಾಗಿ ಬಡಾಯಿ ಮಾತನಾಡಿದ ಬಾಯುಳ್ಳದ್ದಾಗಿ, ಮಿಕ್ಕ ಕೊಂಬುಗಳಿಗಿಂತ ಭಯಂಕರವಾಗಿ ಕಾಣಿಸುತ್ತಾ ಇದ್ದ ಆ ಕೊಂಬಿನ ವಿಷಯವಾಗಿ ಸತ್ಯಾರ್ಥವನ್ನು ತಿಳಿಯಬೇಕೆಂದಿದ್ದೇನೆ.


ಘಟಸರ್ಪವು ಸಮುದ್ರತೀರದ ಮರಳಿನ ಮೇಲೆ ನಿಂತನು. ಸಮುದ್ರದೊಳಗೆ ಒಂದು ಮೃಗವು ಏರಿಬರುವುದನ್ನು ಕಂಡೆನು. ಅದಕ್ಕೆ ಹತ್ತು ಕೊಂಬುಗಳೂ ಏಳು ತಲೆಗಳೂ ಕೊಂಬುಗಳ ಮೇಲೆ ಹತ್ತು ಮುಕುಟಗಳೂ ತಲೆಗಳ ಮೇಲೆ ದೇವದೂಷಣೆಯ ನಾಮಗಳೂ ಇದ್ದವು.


ಅರಸನು ತನ್ನ ಇಷ್ಟದ ಪ್ರಕಾರ ಮಾಡುವನು. ತನ್ನನ್ನು ತಾನೇ ಹೆಚ್ಚಿಸಿಕೊಂಡು, ತನ್ನನ್ನು ಎಲ್ಲಾ ದೇವರುಗಳಿಗಿಂತಲೂ ದೊಡ್ಡವನನ್ನಾಗಿ ಮಾಡಿಕೊಂಡು, ದೇವರುಗಳ ದೇವರಿಗೆ ವಿರೋಧವಾಗಿ ಆಶ್ಚರ್ಯವಾದ ಸಂಗತಿಗಳನ್ನು ಮಾತನಾಡಿ, ರೋಷವು ತೀರುವವರೆಗೂ ವೃದ್ಧಿಯಾಗಿರುವನು. ಹೀಗೆ ನಿಶ್ಚಯವಾದದ್ದು ನೆರವೇರಲೇಬೇಕು.


ಅನಂತರ ಅವನು ನನ್ನನ್ನು ಆತ್ಮನಲ್ಲಿ ಅರಣ್ಯಕ್ಕೆ ಒಯ್ದನು. ಅಲ್ಲಿ ಒಬ್ಬ ಸ್ತ್ರೀಯು, ಹತ್ತು ಕೊಂಬುಗಳೂ ಏಳು ತಲೆಗಳೂ ಇದ್ದು, ದೇವದೂಷಣೆಯ ಹೆಸರುಗಳಿಂದ ತುಂಬಿರುವ ಕಡುಗೆಂಪು ಬಣ್ಣದ ಮೃಗದ ಮೇಲೆ ಕುಳಿತಿರುವುದನ್ನು ಕಂಡೆನು.


ಪರಲೋಕದಲ್ಲಿ ಮತ್ತೊಂದು ಸೂಚನೆಯು ಕಾಣಿಸಿತು. ಕೆಂಪಾದ ಮಹಾ ಘಟಸರ್ಪವಿತ್ತು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಇದ್ದವು. ಅದರ ತಲೆಯ ಮೇಲೆ ಏಳು ಮುಕುಟಗಳಿದ್ದವು.


“ಆಗ ಅವನು ನನಗೆ: ‘ಆ ನಾಲ್ಕನೆಯ ಮೃಗವು ಭೂಮಿಯ ಮೇಲಿರುವ ನಾಲ್ಕನೆಯ ರಾಜ್ಯವಾಗುವುದು. ಅದು ಎಲ್ಲಾ ರಾಜ್ಯಗಳಿಗಿಂತ ವ್ಯತ್ಯಾಸವಾಗಿಯೂ, ಭೂಮಿಯನ್ನೆಲ್ಲಾ ತುಳಿದು ತುಂಡುತುಂಡು ಮಾಡುವಂಥಾದ್ದಾಗಿಯೂ ಇರುವುದು.


ಪಾದಗಳನ್ನೂ, ಕಾಲಿನ ಬೆರಳುಗಳನ್ನೂ ಅರ್ಧ ಮಣ್ಣಿನಿಂದಲೂ, ಅರ್ಧ ಕಬ್ಬಿಣದಿಂದಲೂ ಉಂಟಾದವೆಂದು ನೀನು ನೋಡಿದೆಯಲ್ಲಾ? ಅದೇ ರೀತಿ ಆ ರಾಜ್ಯವು ವಿಭಾಗವಾಗಿರುವುದು. ಆದರೆ ಅದರ ಬಲವು ನೀನು ಜೇಡಿಮಣ್ಣಿನ ಸಂಗಡ ಜೊತೆಗೂಡಿದ ಕಬ್ಬಿಣವನ್ನು ನೋಡಿದ ಹಾಗಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು