Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 7:25 - ಕನ್ನಡ ಸಮಕಾಲಿಕ ಅನುವಾದ

25 ಅವನು ಮಹೋನ್ನತ ದೇವರಿಗೆ ವಿರೋಧವಾಗಿ ಕೊಚ್ಚಿಕೊಂಡು ಮಾತುಗಳನ್ನಾಡಿ, ಪರಿಶುದ್ಧರನ್ನು ಬಾಧಿಸಿ, ಕಾಲ ನಿಯಮಗಳನ್ನು ಬದಲಾಯಿಸುವುದಕ್ಕೆ ಪ್ರಯತ್ನಿಸುವನು. ಪರಿಶುದ್ಧರು ಒಂದುಕಾಲ, ಎರಡುಕಾಲ, ಅರ್ಧಕಾಲದ ತನಕ ಅವರು ಅವನ ಕೈವಶವಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಪರಾತ್ಪರನಾದ ದೇವರಿಗೆ ವಿರುದ್ಧವಾಗಿ ಕೊಚ್ಚಿಕೊಂಡು ಪರಾತ್ಪರನಾದ ದೇವರ ಭಕ್ತರನ್ನು ಬಾಧಿಸಿ ಕಟ್ಟಳೆಯ ಕಾಲಗಳನ್ನೂ, ಧರ್ಮವಿಧಿಗಳನ್ನೂ ಮಾರ್ಪಡಿಸಲು ಮನಸ್ಸು ಮಾಡುವನು; ಆ ಭಕ್ತರು ಒಂದುಕಾಲ, ಎರಡುಕಾಲ, ಅರ್ಧಕಾಲ ಅವನ ಕೈವಶವಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಅವನು ಮಹೋನ್ನತ ದೇವರಿಗೆ ವಿರುದ್ಧವಾಗಿ ಕೊಚ್ಚಿಕೊಳ್ಳುವನು. ಮಹೋನ್ನತರ ಪವಿತ್ರ ಪ್ರಜೆಯನ್ನು (ಸಂತರನ್ನು) ಶೋಷಣೆಗೆ ಗುರಿಮಾಡುವನು. ಆ ಪ್ರಜೆ ಅವನಿಗೆ ಮೂರುವರೆ ವರ್ಷ ಅಧೀನರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಪರಾತ್ಪರನಿಗೆ ವಿರುದ್ಧವಾಗಿ ಕೊಚ್ಚಿಕೊಂಡು ಪರಾತ್ಪರನ ಭಕ್ತರನ್ನು ಸವೆಯಿಸಿ ಕಟ್ಟಳೆಯ ಕಾಲಗಳನ್ನೂ ಧರ್ಮವಿಧಿಗಳನ್ನೂ ಮಾರ್ಪಡಿಸಲು ಮನಸ್ಸುಮಾಡುವನು; ಆ ಭಕ್ತರು ಒಂದುಕಾಲ ಎರಡುಕಾಲ ಅರ್ಧಕಾಲ ಅವನ ಕೈವಶವಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಈ ಪುರಾತನ ರಾಜನು ಮಹೋನ್ನತನಾದ ದೇವರ ವಿರುದ್ಧ ಮಾತನಾಡುವನು. ಆ ರಾಜನು ದೇವರ ಪರಮ ಭಕ್ತರಿಗೆ ತೊಂದರೆ ಕೊಡುವನು ಮತ್ತು ಕೊಲೆ ಮಾಡುವನು. ಆ ರಾಜನು ರೂಢಿಯಲ್ಲಿದ್ದ ಧರ್ಮವಿಧಿಗಳನ್ನು ಮಾರ್ಪಡಿಸುವ ಪ್ರಯತ್ನ ಮಾಡುವನು. ಆ ಭಕ್ತರು ಒಂದು ಕಾಲ, ಎರಡು ಕಾಲ, ಅರ್ಧಕಾಲ ಅವನ ಕೈವಶವಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 7:25
36 ತಿಳಿವುಗಳ ಹೋಲಿಕೆ  

ಆ ಸ್ತ್ರೀಯು ಅರಣ್ಯದಲ್ಲಿದ್ದ ತನ್ನ ಸ್ಥಳಕ್ಕೆ ಹಾರಿಹೋಗುವುದಕ್ಕಾಗಿ ಆಕೆಗೆ ದೊಡ್ಡ ಹದ್ದಿನ ಎರಡು ರೆಕ್ಕೆಗಳು ಕೊಡಲಾದವು. ಅಲ್ಲಿ ಆಕೆಯು ಒಂದುಕಾಲ, ಎರಡುಕಾಲ ಮತ್ತು ಅರ್ಧಕಾಲ ಸರ್ಪನಿಗೆ ಸಿಗದಂತೆ ಪೋಷಣೆ ಹೊಂದಿದಳು.


ದೇವರೆಣಿಸಿಕೊಳ್ಳುವ ಎಲ್ಲವನ್ನೂ ಆರಾಧಿಸಲಾಗುವ ಪ್ರತಿಯೊಂದನ್ನೂ ಅವನು ವಿರೋಧಿಸಿ ನಿಲ್ಲುವನು. ದೇವರಿಗೆ ಸಂಬಂಧಿಸಿದ ಇವೆಲ್ಲವುಗಳ ಮೇಲೆ ತನ್ನನ್ನು ಹೆಚ್ಚಿಸಿಕೊಳ್ಳುವನು. ತಾನೇ ದೇವರೆಂದು ಘೋಷಿಸಿ ದೇವರ ಆಲಯದಲ್ಲಿ ಕೂತುಕೊಳ್ಳುವನು.


ನದಿಯ ನೀರಿನ ಮೇಲೆ ನಿಂತು ನಾರುಬಟ್ಟೆಯನ್ನು ಧರಿಸಿ ನಿಂತಿದ್ದ ಮನುಷ್ಯನು ತನ್ನ ಎಡಗೈಯನ್ನೂ ಬಲಗೈಯನ್ನೂ ಆಕಾಶದ ಕಡೆಗೆ ಎತ್ತಿ ಸದಾಕಾಲ ಜೀವಂತರಾಗಿರುವವರ ಮೇಲೆ ಆಣೆಯಿಟ್ಟು, “ಅದು ಒಂದುಕಾಲ, ಎರಡುಕಾಲ, ಅರ್ಧಕಾಲ ಕಳೆಯಬೇಕು; ಕೊನೆಗೆ ಪರಿಶುದ್ಧರ ಬಲವನ್ನು ಮುರಿದ ಮೇಲೆ ಈ ಕಾರ್ಯಗಳೆಲ್ಲ ಮುಕ್ತಾಯವಾಗುವುವು,” ಎಂಬುದಾಗಿ ನನ್ನ ಕಿವಿಗೆ ಬೀಳುವಂತೆ ಹೇಳಿದನು.


ಆ ಸ್ತ್ರೀಯು ಅರಣ್ಯಕ್ಕೆ ಓಡಿ ಹೋದಳು. ಅಲ್ಲಿ ಆಕೆಗೆ ಸಾವಿರದ ಇನ್ನೂರ ಅರವತ್ತು ದಿನಗಳವರೆಗೆ ಪೋಷಣೆಯಾಗಬೇಕೆಂದು ದೇವರು ಸ್ಥಳವನ್ನು ಸಿದ್ಧಮಾಡಿದ್ದರು.


ಅವರು ಕಾಲವನ್ನೂ, ಸಮಯವನ್ನೂ ಬದಲಾಯಿಸುತ್ತಾ ಅವರು ಅರಸರನ್ನು ಕಡೆಗಣಿಸುತ್ತಾರೆ ಮತ್ತು ಇತರರನ್ನು ಮೇಲಕ್ಕೆತ್ತುತ್ತಾರೆ. ಜ್ಞಾನಿಗಳಿಗೆ ಜ್ಞಾನವನ್ನೂ, ಬುದ್ಧಿವಂತರಿಗೆ ತಿಳುವಳಿಕೆಯನ್ನೂ ಕೊಡುವರು.


ಆಕೆಯಲ್ಲಿ ಪ್ರವಾದಿಗಳ ಮತ್ತು ಪರಿಶುದ್ಧರ ರಕ್ತವೂ ಮತ್ತು ಭೂಮಿಯ ಮೇಲೆ ಕೊಲೆಯಾದವರ ರಕ್ತವೂ ಸಿಕ್ಕಿತು,” ಎಂದು ಹೇಳಿದನು.


ಅದರ ತಲೆಯಲ್ಲಿದ್ದ ಹತ್ತು ಕೊಂಬುಗಳ ವಿಷಯವಾಗಿಯೂ, ನಾನು ನೋಡುತ್ತಿದ್ದ ಹಾಗೆಯೇ ಯಾವ ಕೊಂಬು ಮೊಳೆತು ಮೂರು ಕೊಂಬುಗಳನ್ನು ಬೀಳಿಸಿ, ತನ್ನಲ್ಲಿಯೇ ಕಣ್ಣುಳ್ಳದ್ದಾಗಿ ಬಡಾಯಿ ಮಾತನಾಡಿದ ಬಾಯುಳ್ಳದ್ದಾಗಿ, ಮಿಕ್ಕ ಕೊಂಬುಗಳಿಗಿಂತ ಭಯಂಕರವಾಗಿ ಕಾಣಿಸುತ್ತಾ ಇದ್ದ ಆ ಕೊಂಬಿನ ವಿಷಯವಾಗಿ ಸತ್ಯಾರ್ಥವನ್ನು ತಿಳಿಯಬೇಕೆಂದಿದ್ದೇನೆ.


ನೀನು ಯಾರನ್ನು ನಿಂದಿಸಿ ಯಾರನ್ನು ದೂಷಿಸಿದೆ? ಯಾರಿಗೆ ವಿರೋಧವಾಗಿ ನಿನ್ನ ಧ್ವನಿಯನ್ನು ಎತ್ತಿದ್ದೀ? ನಿನ್ನ ಕಣ್ಣುಗಳು ಗರ್ವದಿಂದ ನೋಡಿದ್ದು ಯಾರನ್ನು? ಇಸ್ರಾಯೇಲಿನ ಪರಿಶುದ್ಧ ದೇವರಿಗೆ ವಿರೋಧವಾಗಿಯಲ್ಲವೇ?


“ಆ ಕೊಂಬುಗಳ ಬಗ್ಗೆ ನಾನು ಆಲೋಚಿಸುತ್ತಿರುವಾಗ ಇಗೋ, ಮತ್ತೊಂದು ಚಿಕ್ಕ ಕೊಂಬು ಅವುಗಳಲ್ಲಿ ಎದ್ದು ಕಾಣುತ್ತಿದೆ. ಇದರ ಮುಂದೆ ಮೊದಲಿನ ಕೊಂಬುಗಳಲ್ಲಿ ಮೂರನ್ನು ಬೇರುಸಹಿತ ಕೀಳಲಾಯಿತು. ಈ ಕೊಂಬಿನಲ್ಲಿ ಮನುಷ್ಯರ ಕಣ್ಣುಗಳ ಹಾಗೆ ಕಣ್ಣುಗಳೂ, ಬಡಾಯಿ ಕೊಚ್ಚುವ ಬಾಯಿಯೂ ಇದ್ದವು.


ಆ ಸ್ತ್ರೀಯು ಪರಿಶುದ್ಧರ ರಕ್ತವನ್ನೂ ಮತ್ತು ಯೇಸುವಿನ ಸಾಕ್ಷಿಗಳಾಗಿದ್ದವರ ರಕ್ತವನ್ನೂ ಕುಡಿದಿರುವುದನ್ನು ನಾನು ಕಂಡೆನು. ಆಕೆಯನ್ನು ನಾನು ಕಂಡಾಗ, ಬಹು ಆಶ್ಚರ್ಯಗೊಂಡೆನು.


ಇದಕ್ಕಾಗಿಯೇ ದೇವರ ಆಜ್ಞೆಗಳನ್ನೂ ಯೇಸುವಿನಲ್ಲಿ ನಂಬಿಕೆಯನ್ನೂ ಕಾಪಾಡುವ ದೇವಜನರ ತಾಳ್ಮೆಯ ಸಹಿಷ್ಣುತೆ ಇದರಲ್ಲಿದೆ.


ಆಗ ಉತ್ತರದ ಅರಸನು ಮಹಾ ಐಶ್ವರ್ಯದೊಂದಿಗೆ ಸ್ವದೇಶಕ್ಕೆ ಹಿಂದಿರುಗುವನು, ಆದರೆ ಅವನ ಹೃದಯವು ಪರಿಶುದ್ಧ ಒಡಂಬಡಿಕೆಗೆ ವಿರೋಧವಾಗಿರುವುದು; ಅವನು ಇದಕ್ಕೆ ವಿರುದ್ಧವಾಗಿ ಕಾರ್ಯಸಾಧಿಸಿ, ಸ್ವಂತ ದೇಶಕ್ಕೆ ಹಿಂದಿರುಗುವನು.


ಅವರು ನಿಮ್ಮ ಭಕ್ತರ ಮತ್ತು ನಿಮ್ಮ ಪ್ರವಾದಿಗಳ ರಕ್ತವನ್ನು ಸುರಿಸಿದ್ದಾರೆ. ನೀವು ಅವರಿಗೆ ಕುಡಿಯುವುದಕ್ಕೆ ರಕ್ತವನ್ನೇ ಕೊಟ್ಟಿರುವಿರಿ. ಅವರು ಅದಕ್ಕೆ ಪಾತ್ರರು.” ಎಂದು ಹೇಳುವುದನ್ನು ಕೇಳಿದೆನು.


ನಿನ್ನನ್ನು ಮನುಷ್ಯರೊಳಗಿಂದ ಬಹಿಷ್ಕರಿಸಿ ಬಿಡುವರು. ನಿನ್ನ ನಿವಾಸವು ಕಾಡುಮೃಗಗಳ ಸಂಗಡ ಇರುವುದು. ಪಶುಗಳಂತೆ ನೀನು ಹುಲ್ಲನ್ನು ತಿನ್ನುವೆ. ಆಕಾಶದ ಮಂಜಿನಿಂದ ನಿನ್ನನ್ನು ತೋಯಿಸುವುದು. ಮಹೋನ್ನತರು ಮನುಷ್ಯರ ರಾಜ್ಯವನ್ನು ಆಳುವರೆಂದೂ, ತಮಗೆ ಬೇಕಾದವರಿಗೆ ಅದನ್ನು ಕೊಡುತ್ತಾರೆಂದೂ ನೀನು ತಿಳಿಯುವವರೆಗೂ, ಆ ಏಳು ಕಾಲಗಳು ಕಳೆದುಹೋಗುವುವು.


ನೀನು ಮಾನವ ಸಮಾಜದಿಂದ ಬಹುಷ್ಕೃತನಾಗುವೆ. ಕಾಡುಮೃಗಗಳ ನಡುವೆ ವಾಸಿಸುವೆ. ನೀನು ದನಗಳ ಹಾಗೆ ಹುಲ್ಲನ್ನು ಮೇಯುವೆ. ಮಹೋನ್ನತರು ಮನುಷ್ಯರ ರಾಜ್ಯವನ್ನಾಳುವರೆಂದು ತಮ್ಮ ಮನಸ್ಸಿಗೆ ಸರಿ ಬಂದವರಿಗೆ ಅದನ್ನು ಕೊಡುವೆರೆಂದು ನೀನು ತಿಳಿಯುವಷ್ಟರಲ್ಲಿ ಏಳು ಕಾಲಗಳು ನಿನ್ನನ್ನು ದಾಟಿ ಹೋಗುವುವು,” ಎಂಬುದೇ.


ನಿಮ್ಮನ್ನು ಯಾರೂ ಯಾವ ವಿಧದಲ್ಲಿಯೂ ವಂಚಿಸದಿರಲಿ. ಏಕೆಂದರೆ ವಿಶ್ವಾಸದಿಂದ ಬಿದ್ದುಹೋಗುವಿಕೆಯು ಸಂಭವಿಸಿ, ನಾಶಕ್ಕೆ ನೇಮಕವಾಗಿರುವ ನಿಯಮ ಮೀರುವ ಮನುಷ್ಯನು ಬರುವುದಕ್ಕೆ ಮುಂಚೆ ಕರ್ತ ಯೇಸುವಿನ ದಿನವು ಬರುವುದಿಲ್ಲ!


ಆಗ ಆ ನಿಯಮ ಮೀರುವವನು ಪ್ರತ್ಯಕ್ಷನಾಗುವನು. ಅವನನ್ನು ಕರ್ತ ಯೇಸು ತಮ್ಮ ಬಾಯಿಯ ಶ್ವಾಸದಿಂದ ಕೆಡವಿ, ತಮ್ಮ ಪ್ರತ್ಯಕ್ಷತೆಯ ಮಹಿಮೆಯಿಂದ ನಾಶಮಾಡಿಬಿಡುವರು.


ಆಗ ನೆಬೂಕದ್ನೆಚ್ಚರನು ಧಗಧಗನೆ ಉರಿಯುತ್ತಿರುವ ಬೆಂಕಿಯ ಕುಲುಮೆಯ ಬಾಯಿಯ ಸಮೀಪಕ್ಕೆ ಬಂದು, “ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬವರೇ, ಮಹೋನ್ನತ ದೇವರ ಸೇವಕರೇ, ಹೊರಗೆ ಬನ್ನಿರಿ,” ಎಂದನು. ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬವರು ಬೆಂಕಿಯೊಳಗಿಂದ ಹೊರಗೆ ಬಂದರು.


ಮಹೋನ್ನತ ದೇವರು ನನ್ನ ವಿಷಯದಲ್ಲಿ ನಡೆಸಿರುವ ಸೂಚಕಕಾರ್ಯಗಳನ್ನೂ, ಅದ್ಭುತಗಳನ್ನೂ ಪ್ರಚುರಪಡಿಸಬೇಕೆಂದು ನನಗೆ ವಿಹಿತವಾಗಿ ತೋರಿ ಬಂದಿದೆ.


“ ‘ಈ ತೀರ್ಮಾನವು ದೂತರಿಂದ ಪ್ರಕಟವಾಯಿತು, ಪರಿಶುದ್ಧರು ಅಂತಿಮ ನಿರ್ಣಯವನ್ನು ಘೋಷಿಸುವರು, ಮಹೋನ್ನತರು ಜನರ ರಾಜ್ಯಗಳ ಮೇಲೆ ಸರ್ವಾಧಿಕಾರಿಯಾಗಿರುವರೆಂದೂ, ರಾಜ್ಯಗಳನ್ನು ತಮ್ಮ ಮನಸ್ಸಿಗೆ ಬಂದವರಿಗೆ ಕೊಡುವರೆಂದೂ, ಅವುಗಳ ಮೇಲೆ ಕೀಳಾದವರನ್ನು ನೇಮಿಸುವರೆಂದೂ ಇದರಿಂದ ಜೀವಿತರು ತಿಳಿದುಕೊಳ್ಳುವರು.’


ಆದರೆ ಆ ಮಹೋನ್ನತನ ಪರಿಶುದ್ಧರು ರಾಜ್ಯವನ್ನು ವಶಪಡಿಸಿಕೊಂಡು, ಅದನ್ನು ಎಂದಿಗೂ ಎಂದೆಂದಿಗೂ ವಶಪಡಿಸಿಕೊಳ್ಳುವರು.’


ಅವನು ನನಗೆ, “ಎರಡು ಸಾವಿರದ ಮುನ್ನೂರು ಸಾಯಂಕಾಲ ಹಾಗೂ ಪ್ರಾತಃಕಾಲದವರೆಗೂ ನಡೆಯುವುವು. ಅನಂತರ ಪರಿಶುದ್ಧ ಸ್ಥಳವು ಪುನಃ ನ್ಯಾಯಸ್ಥಾಪನೆಯಾಗುವುದು,” ಎಂದು ಹೇಳಿದನು.


ಅವರು ಮಹೋನ್ನತನಾದಾತನ ಕಡೆಗೆ ತಿರುಗಿಕೊಳ್ಳುವುದಿಲ್ಲ. ಅವರು ಮೋಸದ ಬಿಲ್ಲಿನ ಹಾಗೆ ಇದ್ದಾರೆ. ಅವರ ನಾಯಕರು ನಾಲಿಗೆಯ ಹುಚ್ಚು ಕೂಗಾಟದಿಂದ, ಖಡ್ಗದಿಂದ ಬೀಳುವರು. ಇದೇ ಈಜಿಪ್ಟ್ ದೇಶದಲ್ಲಿ ಅವರಿಗಿರುವ ನಿಂದೆಯಾಗಿದೆ.


ಅವುಗಳ ಒಂದರೊಳಗಿಂದ ಚಿಕ್ಕ ಕೊಂಬು ಮೊಳೆತು, ಬಹಳ ದೊಡ್ಡದಾಗಿ ಬೆಳೆದು, ದಕ್ಷಿಣದ ಕಡೆಗೂ, ಪೂರ್ವದ ಕಡೆಗೂ, ರಮ್ಯ ದೇಶದ ಕಡೆಗೂ ಪ್ರಬಲವಾಯಿತು.


ಅದು ಯೆಹೋವ ದೇವರ ಸೈನ್ಯದ ಅಧಿಪತಿಗೆ ವಿರೋಧವಾಗಿ ಬಲಗೊಂಡು, ನಿತ್ಯ ಯಜ್ಞವನ್ನು ಯೆಹೋವ ದೇವರಿಗೆ ಸಲ್ಲದಂತೆ ಮಾಡಿ, ಅವನ ಪವಿತ್ರ ಸ್ಥಾನವನ್ನು ಕೆಡವಿ ಹಾಕಲಾಯಿತು.


ಅವನು ಒಂದು ವಾರಕ್ಕಾಗಿ ಬಹಳ ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು. ವಾರದ ಅರ್ಧದಲ್ಲಿ ಯಜ್ಞವನ್ನೂ, ಅರ್ಪಣೆಯನ್ನೂ ನಿಲ್ಲಿಸುವನು. ದೇವಾಲಯದಲ್ಲಿ ಹಾಳುಮಾಡುವ ಅಸಹ್ಯ ವಸ್ತುವನ್ನು ಅವನು ಸ್ಥಾಪಿಸುವನು. ಇದು ಅವನ ಮೇಲೆ ನಿರ್ಣಯವಾದದ್ದು, ಸುರಿಯುವ ತನಕ ಇರುವುದು,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು