ದಾನಿಯೇಲ 7:28 - ಕನ್ನಡ ಸಮಕಾಲಿಕ ಅನುವಾದ28 “ಇಷ್ಟರಲ್ಲಿ ಇದರ ಪ್ರಸ್ತಾಪವು ಮುಗಿಯಿತು. ದಾನಿಯೇಲನೆಂಬ ನನಗೆ ನನ್ನ ಆಲೋಚನೆಗಳು ಬಹಳವಾಗಿ ಕಳವಳಪಡಿಸಿದವು. ನನ್ನ ಮುಖವು ಕಳೆಗುಂದಿತು. ಆದರೂ ಈ ಸಂಗತಿಯನ್ನು ನನ್ನ ಹೃದಯದಲ್ಲಿ ಇಟ್ಟುಕೊಂಡೆನು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಈ ಕನಸಿನ ಪ್ರಸ್ತಾಪವು ಇಲ್ಲಿಗೆ ಮುಗಿಯಿತು. ದಾನಿಯೇಲನಾದ ನಾನು ನನ್ನ ಯೋಚನೆಗಳಿಂದ ಬಹು ಕಳವಳಗೊಂಡೆ. ನನ್ನ ಮುಖವು ಕಳೆಗುಂದಿತು. ಆದರೂ ನಡೆದ ಸಂಗತಿಯನ್ನು ಮನಸ್ಸಿನಲ್ಲಿ ಇಟ್ಟುಕೊಂಡೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಇಲ್ಲಿಗೆ ಆ ಕನಸಿನ ವಿವರ ಮುಗಿಯಿತು. ದಾನಿಯೇಲನಾದ ನಾನು ನನ್ನ ಆಲೋಚನೆಗಳಿಂದ ಬಹಳ ಕಳವಳಗೊಂಡೆ. ನನ್ನ ಮುಖ ಬಾಡಿತು. ಆದರೂ ನಡೆದ ಸಂಗತಿಯನ್ನು ಮನಸ್ಸಿನಲ್ಲೇ ಇಟ್ಟುಕೊಂಡೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಈ ಕನಸಿನ ಪ್ರಸ್ತಾಪವು ಇಲ್ಲಿಗೆ ಮುಗಿಯಿತು. ದಾನಿಯೇಲನಾದ ನಾನು ನನ್ನ ಯೋಚನೆಗಳಿಂದ ಬಹು ಕಳವಳಗೊಂಡು ಮೊಗಗೆಟ್ಟೆನು; ಆದರೂ ನಡೆದ ಸಂಗತಿಯನ್ನು ಮನಸ್ಸಿನಲ್ಲಿ ಇಟ್ಟುಕೊಂಡೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 “ಇಲ್ಲಿಗೆ ಕನಸು ಮುಕ್ತಾಯವಾಯಿತು. ದಾನಿಯೇಲನೆಂಬ ಹೆಸರಿನ ನಾನು ಬಹಳ ಹೆದರಿದ್ದೆ. ಭಯದಿಂದ ನನ್ನ ಮುಖ ಬಿಳುಚಿ ಹೋಗಿತ್ತು. ಆದರೆ ನಾನು ನೋಡಿದ ಮತ್ತು ಕೇಳಿದ ವಿಷಯಗಳ ಬಗ್ಗೆ ಬೇರೆಯವರಿಗೆ ಹೇಳಲಿಲ್ಲ.” ಅಧ್ಯಾಯವನ್ನು ನೋಡಿ |