ದಾನಿಯೇಲ 7:4 - ಕನ್ನಡ ಸಮಕಾಲಿಕ ಅನುವಾದ4 “ಮೊದಲನೆಯದು ಸಿಂಹದ ಹಾಗಿತ್ತು, ಆದರೆ ಹದ್ದಿನ ರೆಕ್ಕೆಗಳುಳ್ಳದ್ದಾಗಿತ್ತು. ನಾನು ಗಮನಿಸಲು, ಅದರ ರೆಕ್ಕೆಗಳನ್ನು ಕಿತ್ತುಹಾಕಲಾಗಿ, ಅದು ನೆಲದಿಂದ ಎತ್ತರಕ್ಕೆ ಮನುಷ್ಯನಂತೆ ಕಾಲೂರಿ ನಿಂತಿತ್ತು. ಅದಕ್ಕೆ ಮನುಷ್ಯನ ಹೃದಯವು ಕೊಡಲಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಮೊದಲು ಕಾಣಿಸಿದ ಮೃಗವು ಸಿಂಹದ ಹಾಗಿತ್ತು, ಅದಕ್ಕೆ ಹದ್ದಿನಂತೆ ರೆಕ್ಕೆಗಳಿದ್ದವು; ನಾನು ನೋಡುತ್ತಿರುವಾಗಲೇ ಆ ರೆಕ್ಕೆಗಳು ಕೀಳಲ್ಪಟ್ಟವು; ಅದು ನೆಲದಿಂದ ಎತ್ತಲ್ಪಟ್ಟು ಮನುಷ್ಯನ ಹಾಗೆ ಎರಡು ಕಾಲುಗಳ ಮೇಲೆ ನಿಲ್ಲಿಸಲ್ಪಟ್ಟಿತು, ಅದಕ್ಕೆ ಮನುಷ್ಯನ ಹೃದಯವನ್ನು ಕೊಡಲ್ಪಟ್ಟಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಮೊದಲು ಕಾಣಿಸಿದ ಮೃಗ ಸಿಂಹದ ಹಾಗಿತ್ತು. ಆದರೆ ಅದಕ್ಕೆ ಹದ್ದಿನಂಥ ರೆಕ್ಕೆಗಳಿದ್ದವು. ನಾನು ನೋಡುತ್ತಿರುವಾಗಲೆ ಆ ರೆಕ್ಕೆಗಳು ಕೀಳಲ್ಪಟ್ಟವು. ಆ ಮೃಗವನ್ನು ನೆಲದಿಂದ ಮೇಲಕ್ಕೆತ್ತಿ ಮನುಷ್ಯನ ಹಾಗೆ ಎರಡು ಕಾಲುಗಳ ಮೇಲೆ ನಿಲ್ಲಿಸಲಾಯಿತು. ಅದಕ್ಕೆ ಮನುಷ್ಯನ ಹೃದಯ ಕೊಡಲಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಮೊದಲು ಕಾಣಿಸಿದ ಮೃಗವು ಸಿಂಹದ ಹಾಗಿತ್ತು, ಅದಕ್ಕೆ ಹದ್ದಿನಂತೆ ರೆಕ್ಕೆಗಳಿದ್ದವು; ನಾನು ನೋಡುತ್ತಿರುವಾಗಲೇ ಆ ರೆಕ್ಕೆಗಳು ಕೀಳಲ್ಪಟ್ಟವು; ಅದು ನೆಲದಿಂದ ಎತ್ತಲ್ಪಟ್ಟು ಮನುಷ್ಯನ ಹಾಗೆ ಎರಡು ಕಾಲುಗಳ ಮೇಲೆ ನಿಲ್ಲಿಸಲ್ಪಟ್ಟಿತು, ಅದಕ್ಕೆ ಮನುಷ್ಯನ ಹೃದಯವು ಕೊಡೋಣವಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 “ಮೊದಲು ಕಾಣಿಸಿದ ಮೃಗವು ಸಿಂಹದ ಹಾಗಿತ್ತು. ಅದಕ್ಕೆ ಹದ್ದಿನಂತೆ ರೆಕ್ಕೆಗಳಿದ್ದವು. ನಾನು ಈ ಮೃಗವನ್ನು ನೋಡುತ್ತಲೇ ಇರಲು ಅದರ ರೆಕ್ಕೆಗಳು ಕೀಳಲ್ಪಟ್ಟವು. ಅದು ನೆಲದಿಂದ ಎತ್ತಲ್ಪಟ್ಟು ಮನುಷ್ಯನ ಹಾಗೆ ಎರಡು ಕಾಲುಗಳ ಮೇಲೆ ನಿಲ್ಲಿಸಲ್ಪಟ್ಟಿತ್ತು. ಅದಕ್ಕೆ ಮನುಷ್ಯನ ಹೃದಯವನ್ನು ಕೊಡಲಾಯಿತು. ಅಧ್ಯಾಯವನ್ನು ನೋಡಿ |