Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 7:5 - ಕನ್ನಡ ಸಮಕಾಲಿಕ ಅನುವಾದ

5 “ಇದಲ್ಲದೆ, ಎರಡನೆಯ ಮೃಗವು ಕರಡಿಯ ಹಾಗಿರುವಂಥದ್ದನ್ನು ಕಂಡೆನು. ಒಂದು ಹೆಗಲನ್ನು ಮೇಲಕ್ಕೆ ಎತ್ತಿಕೊಂಡಿತ್ತು. ಇದರ ಬಾಯಿಯ ಹಲ್ಲುಗಳ ಮಧ್ಯದಲ್ಲಿ ಮೂರು ಪಕ್ಕೆಲುಬುಗಳನ್ನು ಕಚ್ಚಿಕೊಂಡಿದ್ದವು. ಅದಕ್ಕೆ, ‘ಎದ್ದೇಳು, ಹೆಚ್ಚು ಮಾಂಸವನ್ನು ತಿನ್ನು,’ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಹಾ, ಇನ್ನೊಂದು ಮೃಗ ಎರಡನೆಯದು; ಅದು ಕರಡಿಯ ಹಾಗಿತ್ತು, ಒಂದು ಹೆಗಲನ್ನು ಮೇಲಕ್ಕೆ ಎತ್ತಿಕೊಂಡಿತ್ತು. ತನ್ನ ಬಾಯಲ್ಲಿ ಹಲ್ಲುಗಳ ನಡುವೆ ಮೂರು ಪಕ್ಕೆಲುಬುಗಳನ್ನು ಕಚ್ಚಿಕೊಂಡಿತ್ತು; ನೀನೆದ್ದು ಬೇಕಾದಷ್ಟು ಮಾಂಸವನ್ನು ತಿನ್ನು ಎಂದು ಅದಕ್ಕೆ ಹೇಳೋಣವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಬಳಿಕ ಎರಡನೆಯ ಇನ್ನೊಂದು ಮೃಗವನ್ನು ಕಂಡೆ. ಅದು ಕರಡಿಯ ಹಾಗಿತ್ತು. ಒಂದು ಹೆಗಲನ್ನು ಮೇಲಕ್ಕೆ ಎತ್ತಿಕೊಂಡಿತ್ತು. ತನ್ನ ಬಾಯಲ್ಲಿನ ಹಲ್ಲುಗಳ ನಡುವೆ ಮೂರು ಪಕ್ಕೆಲುಬುಗಳನ್ನು ಕಚ್ಚಿಕೊಂಡಿತ್ತು. “ನೀನೆದ್ದು ಬೇಕಾದಷ್ಟು ಮಾಂಸವನ್ನು ತಿನ್ನು,” ಎಂದು ಅದಕ್ಕೆ ಹೇಳಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆಹಾ, ಇನ್ನೊಂದು ಮೃಗ, ಎರಡನೇದು; ಅದು ಕರಡಿಯ ಹಾಗಿತ್ತು, ಒಂದು ಹೆಗಲನ್ನು ಮೇಲಕ್ಕೆ ಎತ್ತಿಕೊಂಡಿತ್ತು, ತನ್ನ ಬಾಯಲ್ಲಿ ಹಲ್ಲುಗಳ ನಡುವೆ ಮೂರು ಪಕ್ಕೆಲುಬುಗಳನ್ನು ಕಚ್ಚಿಕೊಂಡಿತ್ತು; ನೀನೆದ್ದು ಬಹು ಮಾಂಸವನ್ನು ತಿನ್ನು ಎಂದು ಅದಕ್ಕೆ ಹೇಳೋಣವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 “ಆಮೇಲೆ ನಾನು ಎರಡನೆ ಮೃಗವನ್ನು ಕಂಡೆ. ಆ ಮೃಗವು ಕರಡಿಯ ಹಾಗೆ ಕಾಣಿಸಿತು. ಅದು ಒಂದು ಭಾಗವನ್ನು ಮೇಲೆತ್ತಿಕೊಂಡಿತ್ತು. ತನ್ನ ಬಾಯಲ್ಲಿ ಹಲ್ಲುಗಳ ನಡುವೆ ಮೂರು ಪಕ್ಕೆಲುಬುಗಳನ್ನು ಕಚ್ಚಿಕೊಂಡಿತ್ತು. ‘ಎದ್ದು ನಿನಗೆ ಬೇಕಾದಷ್ಟು ಮಾಂಸವನ್ನು ತಿನ್ನು’ ಎಂದು ಅದಕ್ಕೆ ಹೇಳಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 7:5
14 ತಿಳಿವುಗಳ ಹೋಲಿಕೆ  

“ನಿನ್ನ ತರುವಾಯ ನಿನಗಿಂತ ಕನಿಷ್ಠವಾದ ಇನ್ನೊಂದು ರಾಜ್ಯ ಏಳುವುದು. ಅನಂತರ ಮೂರನೆಯ ಕಂಚಿನ ರಾಜ್ಯ ಬರುವುದು. ಅದು ಸಮಸ್ತ ಭೂಮಿಯ ಮೇಲೂ ದೊರೆತನ ನಡೆಸುವುದು.


ನಾನು ಮರಿಯನ್ನು ಕಳೆದುಕೊಂಡ ಕರಡಿಯಂತೆ ಅವರನ್ನು ಎದುರುಗೊಳ್ಳುವೆನು. ಅವರ ಹೃದಯದ ಪೊರೆಯನ್ನು ಹರಿದುಬಿಡುವೆನು. ನಾನು ಸಿಂಹದ ಹಾಗೆ ಅವರನ್ನು ನುಂಗುವೆನು. ಕಾಡುಮೃಗವು ಅವರನ್ನು ಸೀಳಿ ಹಾಕುವುದು.


ನಾನು ಈಗ ಸತ್ಯವನ್ನು ತಿಳಿಸುತ್ತೇನೆ. ಪಾರಸಿಯ ದೇಶದಲ್ಲಿ ಇನ್ನೂ ಮೂರು ಅರಸರು ಏಳುವರು. ನಾಲ್ಕನೆಯವನು ಅವರೆಲ್ಲರಿಗಿಂತಲೂ ಬಹಳ ಐಶ್ವರ್ಯವಂತನಾಗಿರುವನು. ಅವನು ತನ್ನ ಐಶ್ವರ್ಯದಿಂದಾಗುವ ಸಾಮರ್ಥ್ಯದಿಂದ ಗ್ರೀಕ್ ರಾಜ್ಯಕ್ಕೆ ವಿರೋಧವಾಗಿ ಎಲ್ಲರನ್ನೂ ಹುರಿದುಂಬಿಸುವನು.


“ಫರ್ಸಿನ್ ಎಂದರೆ ನಿನ್ನ ರಾಜ್ಯವು ವಿಭಿನ್ನವಾಗಿ ಮೇದ್ಯರಿಗೂ, ಪಾರಸಿಯರಿಗೂ ಕೊಡಲಾಗಿದೆ,” ಎಂಬದಾಗಿ ಅರಿಕೆಮಾಡಿದನು.


ಅರಣ್ಯದ ಸಕಲ ಮೃಗಗಳೇ, ಕಾಡಿನ ಎಲ್ಲಾ ಮೃಗಗಳೇ, ನುಂಗಿಬಿಡುವುದಕ್ಕೆ ಬನ್ನಿರಿ.


ತನ್ನ ಮೂಢತೆಯಲ್ಲಿರುವ ಬುದ್ಧಿಹೀನನನ್ನು ಸಂಧಿಸುವುದಕ್ಕಿಂತ ಮರಿಗಳನ್ನು ಕಳೆದುಕೊಂಡ ಕರಡಿಯನ್ನು ಸಂಧಿಸುವುದು ಮೇಲು.


ಅವನು ಹಿಂದಿರುಗಿ ಅವರನ್ನು ನೋಡಿ, ಯೆಹೋವ ದೇವರ ಹೆಸರಿನಲ್ಲಿ ಅವರನ್ನು ಶಪಿಸಿದನು. ಆಗ ಅಡವಿಯಿಂದ ಎರಡು ಕರಡಿಗಳು ಹೊರಟು, ಅವರಲ್ಲಿ ನಾಲ್ವತ್ತೆರಡು ಹುಡುಗರನ್ನು ಸೀಳಿಬಿಟ್ಟವು.


ನಾನು ಕಂಡ ಮೃಗವು ಚಿರತೆಯಂತಿತ್ತು. ಅದರ ಕಾಲುಗಳು ಕರಡಿಯ ಕಾಲುಗಳಂತೆಯೂ ಅದರ ಬಾಯಿ ಸಿಂಹದ ಬಾಯಂತೆಯೂ ಇದ್ದವು. ಅದಕ್ಕೆ ಘಟಸರ್ಪನು ತನ್ನ ಶಕ್ತಿಯನ್ನೂ ಸಿಂಹಾಸನವನ್ನೂ ಮಹಾ ಅಧಿಕಾರವನ್ನೂ ಕೊಟ್ಟನು.


“ಮೊದಲನೆಯದು ಸಿಂಹದ ಹಾಗಿತ್ತು, ಆದರೆ ಹದ್ದಿನ ರೆಕ್ಕೆಗಳುಳ್ಳದ್ದಾಗಿತ್ತು. ನಾನು ಗಮನಿಸಲು, ಅದರ ರೆಕ್ಕೆಗಳನ್ನು ಕಿತ್ತುಹಾಕಲಾಗಿ, ಅದು ನೆಲದಿಂದ ಎತ್ತರಕ್ಕೆ ಮನುಷ್ಯನಂತೆ ಕಾಲೂರಿ ನಿಂತಿತ್ತು. ಅದಕ್ಕೆ ಮನುಷ್ಯನ ಹೃದಯವು ಕೊಡಲಾಯಿತು.


“ಇದಾದ ಮೇಲೆ ನಾನು ನೋಡಲಾಗಿ, ಚಿರತೆಯ ಹಾಗಿರುವ ಇನ್ನೊಂದು ಮೃಗವಿತ್ತು. ಇದರ ಬೆನ್ನಿನ ಮೇಲೆ ಪಕ್ಷಿಯ ರೆಕ್ಕೆಗಳು ನಾಲ್ಕು ಇವೆ. ಈ ಮೃಗಕ್ಕೆ ನಾಲ್ಕು ತಲೆಗಳು ಸಹ ಇವೆ. ಇದಕ್ಕೆ ಆಳುವ ಅಧಿಕಾರವು ಕೊಡಲಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು