Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 8:13 - ಕನ್ನಡ ಸಮಕಾಲಿಕ ಅನುವಾದ

13 ಆಮೇಲೆ ಒಬ್ಬ ಪರಿಶುದ್ಧನು ಮಾತನಾಡುವುದನ್ನು ಕೇಳಿದೆನು. ಮಾತನಾಡಿದ ಆತನಿಗೆ ಮತ್ತೊಬ್ಬ ಪರಿಶುದ್ಧನು, “ನಿತ್ಯ ಯಜ್ಞವನ್ನು ನಿಲ್ಲಿಸುವುದೂ, ಹಾಳುಮಾಡುವ ಅಪರಾಧವನ್ನು ತಡೆಯುವುದೂ, ಪರಿಶುದ್ಧ ಸ್ಥಳವನ್ನೂ, ಯೆಹೋವ ದೇವರ ಸೈನ್ಯವನ್ನೂ ಕಾಲಡಿಯಲ್ಲಿ ತುಳಿಯುವ ಈ ದರ್ಶನ ನೆರವೇರಲು ಎಷ್ಟು ಕಾಲ ಬೇಕಾಗುವುದು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆಗ ಒಬ್ಬ ದೇವದೂತನು ಮಾತನಾಡುವುದನ್ನು ಕೇಳಿದೆನು. ಮಾತನಾಡುವವನನ್ನು ಮತ್ತೊಬ್ಬ ದೇವದೂತನು, “ನಿತ್ಯಹೋಮವನ್ನು ನಿಲ್ಲಿಸುವುದು, ಭಯಂಕರವಾದ ದೇವದ್ರೋಹ ಮಾಡುವುದು, ಪವಿತ್ರಾಲಯವನ್ನೂ, ದೇವಭಕ್ತ ಗಣವನ್ನು ತುಳಿಯುವುದು ಎಂಬ ಕನಸಿನ ಕಾರ್ಯಗಳು ಎಷ್ಟು ಕಾಲ ನಡೆಯುವುದು?” ಎಂದು ಪ್ರಶ್ನೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆಗ ಒಬ್ಬ ದೇವದೂತನು ಮಾತಾಡುವುದು ನನಗೆ ಕೇಳಿಸಿತು. ಮಾತಾಡುವವನನ್ನು ಮತ್ತೊಬ್ಬ ದೇವದೂತನು ಸಂಬೋಧಿಸಿ: “ಅನುದಿನದ ಬಲಿಯರ್ಪಣೆಯನ್ನು ನಿಲ್ಲಿಸುವುದು, ಭಯಂಕರವಾದ ದೇವದ್ರೋಹ ಮಾಡುವುದು, ಪವಿತ್ರಾಲಯವನ್ನೂ ದೇವಭಕ್ತಗಣವನ್ನೂ ತುಳಿಯುವುದೂ-ಕನಸಿನ ಇಂಥಾ ಕಾರ್ಯಗಳು ಎಷ್ಟುಕಾಲ ನಡೆಯುವುವು?” ಎಂದು ಪ್ರಶ್ನೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆಗ ಒಬ್ಬ ದೇವದೂತನು ಮಾತಾಡುವದನ್ನು ಕೇಳಿದೆನು; ಮಾತಾಡುವವನನ್ನು ಮತ್ತೊಬ್ಬ ದೇವದೂತನು ಸಂಬೋಧಿಸಿ - ನಿತ್ಯಹೋಮವನ್ನು ನಿಲ್ಲಿಸುವದು, ಭಯಂಕರವಾದ ದೇವದ್ರೋಹಮಾಡುವದು, ಪವಿತ್ರಾಲಯವನ್ನೂ ದೇವಭಕ್ತಗಣವನ್ನೂ ತುಳಿಯುವದು ಎಂಬ ಕನಸಿನ ಕಾರ್ಯಗಳು ಎಷ್ಟು ಕಾಲ ನಡೆಯುವವು ಎಂದು ಪ್ರಶ್ನೆ ಮಾಡಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆಗ ಒಬ್ಬ ಪವಿತ್ರನು ಮಾತನಾಡುವದನ್ನು ಕೇಳಿದೆ. ಮತ್ತೊಬ್ಬ ಪವಿತ್ರನು ಮೊದಲನೆಯ ಪವಿತ್ರನಿಗೆ ಉತ್ತರಿಸುವದನ್ನೂ ಕೇಳಿದೆ. ಮೊದಲನೆಯ ಪವಿತ್ರನು, “ಈ ದರ್ಶನ ನಿತ್ಯಹೋಮಗಳಿಗೆ ಏನಾಗುವದೆಂಬುದನ್ನು ತೋರಿಸುವದು. ಇದು ಆ ಭಯಾನಕ ಪಾಪದ ಕುರಿತಾಗಿದೆ. ಅಧಿಪತಿಯು ಆರಾಧಿಸಲ್ಪಡುವ ಪವಿತ್ರಾಲಯವನ್ನು ಜನರು ಹಾಳುಮಾಡಿದರೆ, ಜನರು ಆ ಸ್ಥಳವನ್ನು ತುಳಿದಾಡಿದರೆ, ಆ ನಕ್ಷತ್ರಗಳ ಮೇಲೆ ಜನರು ನಡೆದಾಡಿದರೆ ಏನಾಗುವದೆಂಬುದನ್ನು ಇದು ತೋರಿಸಿಕೊಡುತ್ತದೆ. ಆದರೆ ಇದೆಲ್ಲ ಎಷ್ಟು ದಿನ ನಡೆಯುವದು?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 8:13
38 ತಿಳಿವುಗಳ ಹೋಲಿಕೆ  

ಆಲಯಕ್ಕೆ ಹೊರಗಿರುವ ಅಂಗಳವನ್ನು ಅಳೆಯದೆ ಬಿಟ್ಟುಬಿಡು. ಏಕೆಂದರೆ ಅದು ಯೆಹೂದ್ಯರಲ್ಲದವರಿಗಾಗಿ ಬಿಟ್ಟಿದೆ. ಅವರು ಪರಿಶುದ್ಧ ಪಟ್ಟಣವನ್ನು ನಲವತ್ತೆರಡು ತಿಂಗಳು ತುಳಿದಾಡುವರು.


ಅವರು ಮಹಾಶಬ್ದದಿಂದ, “ಒಡೆಯನೇ, ಪವಿತ್ರನೇ, ಸತ್ಯವಂತನೇ ನಮ್ಮ ರಕ್ತ ಸುರಿಸಿದ ಲೋಕನಿವಾಸಿಗಳಿಗೆ ತೀರ್ಪನ್ನೂ ಪ್ರತಿದಂಡನೆಯನ್ನೂ ಮಾಡಲು ಇನ್ನೆಷ್ಟು ಸಮಯ ಬೇಕು?” ಎಂದು ಕೂಗಿದರು.


ಇದಲ್ಲದೆ ಅವರು ಖಡ್ಗಕ್ಕೆ ತುತ್ತಾಗಿ ಬೀಳುವರು ಮತ್ತು ಸೆರೆಯಾಗಿ ಎಲ್ಲಾ ರಾಷ್ಟ್ರಗಳಲ್ಲಿ ಒಯ್ಯುವರು. ಯೆಹೂದ್ಯರಲ್ಲದವರ ಕಾಲ ಪರಿಪೂರ್ಣವಾಗುವವರೆಗೆ ಅವರು ಯೆರೂಸಲೇಮನ್ನು ತುಳಿದುಹಾಕುವರು.


ಅವನು ಒಂದು ವಾರಕ್ಕಾಗಿ ಬಹಳ ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು. ವಾರದ ಅರ್ಧದಲ್ಲಿ ಯಜ್ಞವನ್ನೂ, ಅರ್ಪಣೆಯನ್ನೂ ನಿಲ್ಲಿಸುವನು. ದೇವಾಲಯದಲ್ಲಿ ಹಾಳುಮಾಡುವ ಅಸಹ್ಯ ವಸ್ತುವನ್ನು ಅವನು ಸ್ಥಾಪಿಸುವನು. ಇದು ಅವನ ಮೇಲೆ ನಿರ್ಣಯವಾದದ್ದು, ಸುರಿಯುವ ತನಕ ಇರುವುದು,” ಎಂದು ಹೇಳಿದನು.


ಅವನು ಕೂಡಿಸುವ ಸೈನ್ಯವು ಆಶ್ರಯದುರ್ಗವಾದ ಪವಿತ್ರಾಲಯವನ್ನು ಹೊಲಸುಮಾಡಿ, ನಿತ್ಯ ಯಜ್ಞವನ್ನು ನಿಲ್ಲಿಸುವುದು. ಹಾಳುಮಾಡುವ ಅಸಹ್ಯವಾದವುಗಳನ್ನು ಪ್ರತಿಷ್ಠಿಸುವುದು.


“ನನ್ನ ಹಾಸಿಗೆಯ ಮೇಲೆ ಮಲಗಿದ್ದಾಗ, ದರ್ಶನಗಳನ್ನು ನಾನು ನೋಡಲಾಗಿ, ಒಬ್ಬ ದೂತನಾದ ಪರಿಶುದ್ಧನೊಬ್ಬನು ಪರಲೋಕದಿಂದ ಇಳಿದು ಬಂದನು.


ತಮಗೋಸ್ಕರವಲ್ಲ ಆದರೆ ನಿಮಗೋಸ್ಕರ ಸೇವೆಮಾಡಿದರೆಂದು ಅವರಿಗೆ ಪ್ರಕಟವಾಯಿತು. ಅವರು ಮುಂದಾಗಿ ಹೇಳಿದ ಸಂಗತಿಗಳೇ ಈಗ ಸಂಭವಿಸಿದವು ಎಂಬ ವರ್ತಮಾನವು, ಪರಲೋಕದಿಂದ ಕಳುಹಿಸಲಾದ ಪವಿತ್ರಾತ್ಮ ದೇವರಿಂದ ನಿಮಗೆ ಸುವಾರ್ತೆಯನ್ನು ಸಾರಿದವರ ಮೂಲಕ ಪ್ರಸಿದ್ಧಿಮಾಡಲಾಗಿದೆ. ದೇವದೂತರು ಸಹ ಈ ಸಂಗತಿಗಳನ್ನು ಕಣ್ಣಿಟ್ಟು ನೋಡಬೇಕೆಂದು ಅಪೇಕ್ಷಿಸುತ್ತಾರೆ.


ಯಾವನು ದೇವಪುತ್ರರನ್ನೇ ತುಳಿದು ತನ್ನನ್ನು ಶುದ್ಧೀಕರಿಸಿದ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ ಕೃಪೆಯ ಪವಿತ್ರಾತ್ಮ ದೇವರನ್ನು ತಿರಸ್ಕಾರ ಮಾಡಿದ್ದಾನೋ, ಅವನು ಇನ್ನೂ ಎಷ್ಟೋ ಕ್ರೂರವಾದ ದಂಡನೆಗೆ ಪಾತ್ರನಾಗುವನೆಂಬುದನ್ನು ಯೋಚಿಸಿರಿ.


ನಮಗೆ ಕರ್ತ ಆಗಿರುವ ಯೇಸುವು ತಮ್ಮ ಎಲ್ಲಾ ಪರಿಶುದ್ಧರೊಂದಿಗೆ ಬರುವಾಗ, ನೀವು ತಂದೆ ದೇವರ ಮುಂದೆ ಪರಿಶುದ್ಧರೂ ನಿರ್ದೋಷಿಗಳೂ ಆಗಿರುವಂತೆ ನಿಮ್ಮ ಹೃದಯಗಳನ್ನು ಬಲಪಡಿಸಲಿ!


“ಸೈನ್ಯಗಳು ಯೆರೂಸಲೇಮಿಗೆ ಮುತ್ತಿಗೆ ಹಾಕುವುದನ್ನು ನೀವು ಕಾಣುವಾಗ ಅದು ಹಾಳಾಗುವ ಕಾಲವು ಸಮೀಪಿಸಿದೆ ಎಂದು ತಿಳಿದುಕೊಳ್ಳಿರಿ.


“ಆದರೆ ‘ಅಸಹ್ಯ ವಸ್ತು’ ನಿಲ್ಲಬಾರದ ಸ್ಥಳದಲ್ಲಿ ನಿಂತಿರುವುದನ್ನು ನೀವು ಕಾಣುವಾಗ ಓದುವವನು ತಿಳಿದುಕೊಳ್ಳಲಿ. ಆಗ ಯೂದಾಯದಲ್ಲಿ ಇರುವವರು ಬೆಟ್ಟಗಳಿಗೆ ಓಡಿಹೋಗಲಿ.


“ಆದ್ದರಿಂದ ಪ್ರವಾದಿ ದಾನಿಯೇಲನಿಂದ ಹೇಳಿದ ಹಾಗೆ ‘ಅಸಹ್ಯ ವಸ್ತು’ ಪವಿತ್ರ ಸ್ಥಳದಲ್ಲಿ ನಿಂತಿರುವುದನ್ನು ನೀವು ಕಾಣುವಾಗ, ಓದುವವನು ತಿಳಿದುಕೊಳ್ಳಲಿ.


ಸ್ವಲ್ಪಕಾಲ ಮಾತ್ರ ನಿಮ್ಮ ಪರಿಶುದ್ಧ ಜನರು ಅದನ್ನು ಸ್ವಾಧೀನಮಾಡಿಕೊಂಡರು. ನಮ್ಮ ಶತ್ರುಗಳು ನಿಮ್ಮ ಪವಿತ್ರಾಲಯವನ್ನು ತುಳಿದುಬಿಟ್ಟಿದ್ದಾರೆ.


ಆಗ ನಾನು, “ಯೆಹೋವ ದೇವರೇ, ಇದು ಎಷ್ಟರವರೆಗೆ?” ಎಂದೆನು. ಅದಕ್ಕೆ ಅವರು ಹೀಗೆ ಉತ್ತರಕೊಟ್ಟರು, “ಪಟ್ಟಣಗಳು ನಿವಾಸಿಗಳಿಲ್ಲದೆ, ಮನೆಗಳು ಮನುಷ್ಯನಿಲ್ಲದೆ, ಹೊಲಗಳು ಸಂಪೂರ್ಣವಾಗಿ ಹಾಳಾಗುವವರೆಗೂ,


ಯೆಹೋವ ದೇವರೇ ಎಷ್ಟರವರೆಗೆ ಕೋಪಗೊಂಡಿರುವಿರಿ? ಸತತವೂ ನೀವು ಕೋಪದಿಂದಿರುವಿರೋ? ಎಷ್ಟರವರೆಗೆ ನಿಮ್ಮ ರೋಷವು ಬೆಂಕಿಯಂತೆ ಉರಿಯುವುದು?


ಇಂಥವರ ವಿಷಯದಲ್ಲಿಯೇ ಆದಾಮನಿಂದ ಏಳನೆಯವನಾದ ಹನೋಕನು ಸಹ, “ಇಗೋ, ಕರ್ತದೇವರು ತಮ್ಮ ಅಸಂಖ್ಯಾತ ಪರಿಶುದ್ಧರನ್ನು ಕೂಡಿಕೊಂಡು


“ನನ್ನ ತಂದೆ ಎಲ್ಲವನ್ನೂ ನನಗೆ ಒಪ್ಪಿಸಿದ್ದಾರೆ. ತಂದೆಯ ಹೊರತು ಬೇರೆ ಯಾರೂ ಪುತ್ರನನ್ನು ಅರಿಯರು ಮತ್ತು ಪುತ್ರನು ಯಾರಿಗೆ ತಂದೆಯನ್ನು ಪ್ರಕಟಪಡಿಸಲು ಇಷ್ಟಪಡುತ್ತಾನೋ ಅವರೇ ಹೊರತು ಯಾರೂ ತಂದೆಯನ್ನು ಅರಿಯರು.


ನೀವು ಬೆಟ್ಟಗಳ ತಗ್ಗಿಗೆ ಓಡಿಹೋಗುವಿರಿ. ಏಕೆಂದರೆ ಬೆಟ್ಟಗಳ ತಗ್ಗು ಆಚೆಲಿನವರೆಗೂ ಮುಟ್ಟುವುದು. ಯೆಹೂದದ ಅರಸನಾದ ಉಜ್ಜೀಯನ ದಿವಸಗಳಲ್ಲಿ, ನೀವು ಭೂಕಂಪಕ್ಕೆ ಓಡಿ ಹೋದ ಹಾಗೆ, ಓಡಿಹೋಗುವಿರಿ. ನನ್ನ ದೇವರಾದ ಯೆಹೋವ ದೇವರು ಬರುವರು. ನಿಮ್ಮ ಸಂಗಡ ಪರಿಶುದ್ಧರೆಲ್ಲರು ಸಹ ಬರುವರು.


ಆಗ ನನ್ನ ಸಂಗಡ ಮಾತನಾಡಿದ ದೂತನಿಗೆ ನಾನು, “ಇದೇನು?” ಎಂದೆನು. ಅದಕ್ಕೆ ಅವನು ನನಗೆ ಉತ್ತರಕೊಟ್ಟು, “ಇವು ಯೆಹೂದ, ಇಸ್ರಾಯೇಲ್, ಯೆರೂಸಲೇಮನ್ನೂ ಚದರಿಸಿದ ಕೊಂಬುಗಳು,” ಎಂದನು.


“ಪ್ರತಿದಿನದ ಯಜ್ಞವು ಸಕಾಲಕ್ಕೆ ನಿಂತುಹೋಗುವುದು. ಆ ಹಾಳುಮಾಡುವ ಅಸಹ್ಯ ವಸ್ತುವು ಪ್ರತಿಷ್ಠಿತವಾದ ಮೇಲೆ, 1,290 ದಿನಗಳು ಕಳೆಯಬೇಕು.


“ಆಗ ಅವನು ನನಗೆ: ‘ಆ ನಾಲ್ಕನೆಯ ಮೃಗವು ಭೂಮಿಯ ಮೇಲಿರುವ ನಾಲ್ಕನೆಯ ರಾಜ್ಯವಾಗುವುದು. ಅದು ಎಲ್ಲಾ ರಾಜ್ಯಗಳಿಗಿಂತ ವ್ಯತ್ಯಾಸವಾಗಿಯೂ, ಭೂಮಿಯನ್ನೆಲ್ಲಾ ತುಳಿದು ತುಂಡುತುಂಡು ಮಾಡುವಂಥಾದ್ದಾಗಿಯೂ ಇರುವುದು.


ನಾನು ಹತ್ತಿರ ನಿಂತವರಲ್ಲಿ ಒಬ್ಬನ ಬಳಿಗೆ ಬಂದು ಇವೆಲ್ಲವುಗಳ ಸತ್ಯಾರ್ಥವನ್ನು ಕೇಳಿದೆನು. “ಆಗ ಅವನು ಅದನ್ನು ನನಗೆ ಹೇಳಿ ಇವುಗಳ ಅರ್ಥವನ್ನು ನನಗೆ ತಿಳಿಸಿದನು.


“ಪರಿಶುದ್ಧನಾದ ಒಬ್ಬನು ಪರಲೋಕದಿಂದ ಇಳಿದುಬಂದು, ‘ಮರವನ್ನು ಕಡಿದು ನಾಶಮಾಡಿರಿ. ಆದರೆ ಅದರ ಬೇರಿನ ಮೋಟನ್ನು ನೆಲದಲ್ಲಿ ಉಳಿಸಿ, ಮೋಟನ್ನು ಕಬ್ಬಿಣ ಮತ್ತು ಕಂಚುಗಳಿಂದ ಕಟ್ಟಿ, ಬಯಲಿನ ಎಳೆಯ ಹುಲ್ಲಿನಲ್ಲಿಯೂ, ಬೇರುಗಳನ್ನು ಭೂಮಿಯಲ್ಲಿಯೂ ಬಿಡಿರಿ. ಅವನು ಆಕಾಶದ ಮಂಜಿನಿಂದ ತೇವವಾಗಲಿ. ಏಳು ಕಾಲಗಳು ಕಳೆಯುವ ತನಕ ಅವನು ಕಾಡುಮೃಗಗಳ ಹಾಗೆ ಜೀವಿಸಲಿ, ಎಂದು ಸಾರುವುದನ್ನು ಅರಸನಾದ ನೀನು ನೋಡಿದೆಯಲ್ಲಾ.’


ಏಕೆಂದರೆ ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನನ್ನು ನಮಗಾಗಿ ಕೊಡಲಾಗಿದೆ. ಆಡಳಿತವು ಅವರ ಬಾಹುವಿನ ಮೇಲಿರುವುದು, ಅದ್ಭುತವಾದವರು ಸಮಾಲೋಚಕರು, ಪರಾಕ್ರಮಿಯಾದ ದೇವರು, ನಿತ್ಯರಾದ ತಂದೆ, ಸಮಾಧಾನದ ಪ್ರಭು, ಎಂಬುದು ಅವರ ಹೆಸರಾಗಿರುವುದು.


ದೇವರಿಂದ ನಮಗೆ ಅದ್ಭುತವಾದ ಸಂಕೇತಗಳು ಕೊಟ್ಟಿರುವುದಿಲ್ಲ. ಪ್ರವಾದಿಗಳು ನಮಗೆ ಉಳಿದಿರುವುದಿಲ್ಲ. ಇದು ಎಷ್ಟು ಕಾಲ ಎಂದು ನಾವ್ಯಾರೂ ತಿಳಿದಿರುವುದಿಲ್ಲ.


ಆದರೆ ಯೆಹೋವ ದೇವರ ದೂತನು ಅವನಿಗೆ, “ನನ್ನ ಹೆಸರು ಏನೆಂದು ನೀನು ಕೇಳುವುದೇನು? ಆ ಹೆಸರು ಆಶ್ಚರ್ಯಕರವಾದದ್ದು,” ಎಂದನು.


“ಯೆಹೋವ ದೇವರು ಸೀನಾಯಿ ಬೆಟ್ಟದಿಂದ ಬಂದು, ಸೇಯೀರಿನಿಂದ ಅವರ ಮೇಲೆ ಉದಯಿಸಿದರು. ಪಾರಾನ್ ಬೆಟ್ಟದಿಂದ ಪ್ರಕಾಶಿಸಿದರು. ದೇವರು ದಕ್ಷಿಣದ ತಮ್ಮ ಪರ್ವತ ಶ್ರೇಣಿಯಿಂದ ಲಕ್ಷಾಂತರ ಪರಿಶುದ್ಧರ ಸಂಗಡ ಬಂದರು.


ದೇವರನ್ನು ಯಾರೂ ಎಂದೂ ಕಂಡಿಲ್ಲ; ತಂದೆ ದೇವರ ಹೃದಯಕ್ಕೆ ಹತ್ತಿರವಾಗಿರುವ ಏಕೈಕ ಪುತ್ರ ಆಗಿರುವವರೂ ಸ್ವತಃ ದೇವರೂ ಆಗಿರುವವರೂ ತಂದೆಯನ್ನು ಪ್ರಕಟಪಡಿಸಿದ್ದಾರೆ.


“ನನ್ನ ತಂದೆ ಎಲ್ಲವನ್ನೂ ನನಗೆ ಒಪ್ಪಿಸಿದ್ದಾರೆ. ತಂದೆಯ ಹೊರತು ಯಾರೂ ಪುತ್ರನನ್ನು ಅರಿಯರು ಮತ್ತು ಪುತ್ರನು ಯಾರಿಗೆ ತಂದೆಯನ್ನು ಪ್ರಕಟಪಡಿಸಲು ಇಷ್ಟಪಡುತ್ತಾರೋ ಅವರೇ ಹೊರತು ಯಾರೂ ತಂದೆಯನ್ನು ಅರಿಯರು,” ಎಂದರು.


ದೇವರೇ, ವೈರಿಯು ನಿಂದಿಸುವುದು ಎಷ್ಟರವರೆಗೆ? ಶತ್ರುವು ನಿಮ್ಮ ಹೆಸರನ್ನು ಎಂದೆಂದಿಗೂ ದೂಷಿಸುವನೋ?


ಮರಣದೊಂದಿಗೆ ನೀವು ಮಾಡಿಕೊಂಡ ಒಡಂಬಡಿಕೆ ರದ್ದಾಗುವುದು. ಪಾತಾಳದ ಸಂಗಡ ನೀವು ಮಾಡಿಕೊಂಡ ಒಪ್ಪಂದವು ನಿಲ್ಲುವುದಿಲ್ಲ. ವಿಪರೀತ ಬಾಧೆಯು ಹಾದುಹೋಗುವಾಗ ನಿಮ್ಮನ್ನು ತುಳಿದುಹಾಕುವುದು.


ಅನೇಕ ಕುರುಬರು ನನ್ನ ದ್ರಾಕ್ಷಿತೋಟವನ್ನು ಕೆಡಿಸಿದ್ದಾರೆ; ನನ್ನ ಹೊಲವನ್ನು ತುಳಿದುಬಿಟ್ಟಿದ್ದಾರೆ; ನಾನು ಮೆಚ್ಚಿದ ಭಾಗವನ್ನು ಹಾಳಾದ ಮರುಭೂಮಿಯಾಗಿ ಮಾಡಿದ್ದಾರೆ.


ನಾನು ಅದನ್ನು ಕೇಳಿದೆನು, ಆದರೆ ಗ್ರಹಿಸಲಿಲ್ಲ. ಆಗ ನಾನು, “ನನ್ನ ಒಡೆಯನೇ, ಈ ಸಂಗತಿಗಳ ಅಂತ್ಯವೇನು?” ಎಂದು ಕೇಳಿದೆನು.


ಹಾಸಿಗೆಯಲ್ಲಿ ಮಲಗಿದ್ದಾಗ ನಾನು ಕಂಡ ದರ್ಶನಗಳು: ನಾನು ನೋಡಲಾಗಿ ಭೂಮಿಯ ಮಧ್ಯದಲ್ಲಿ ಒಂದು ಬಹಳ ಎತ್ತರವಾದ ಮರವು ಇತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು