Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 8:2 - ಕನ್ನಡ ಸಮಕಾಲಿಕ ಅನುವಾದ

2 ಈ ದರ್ಶನದಲ್ಲಿ ನಾನು ನೋಡಿದ್ದೇನೆಂದರೆ: ನಾನು ಏಲಾಮ್ ಸೀಮೆಯಲ್ಲಿರುವ ಶೂಷನಿನ ಅರಮನೆಯಲ್ಲಿದ್ದೆನು. ಆ ದರ್ಶನದಲ್ಲಿ ನಾನು ಊಲಾ ನದಿಯ ದಡದ ಬಳಿಯಲ್ಲಿ ನಿಂತಿರುವ ಹಾಗೆ ತೋರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಾನು ಕಂಡ ಕನಸಿನಲ್ಲಿ ಏಲಾಮ್ ಸಂಸ್ಥಾನದ ಶೂಷನ್ ಕೋಟೆಯಲ್ಲಿದ್ದೆನು. ಕನಸಿನಲ್ಲಿ ಊಲಾ ಕಾಲುವೆಯ ದಡದ ಮೇಲೆ ನಿಂತುಕೊಂಡಿದ್ದ ಹಾಗೆ ತೋರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಈ ಕನಸಿನಲ್ಲಿ ಏಲಾಮ್ ಸಂಸ್ಥಾನದ ಶೂಷನ್ ಕೋಟೆಯಲ್ಲಿ ನಾನಿದ್ದೆ. ಊಲಾ ಕಾಲುವೆಯ ದಡದ ಮೇಲೆ ನಾನು ನಿಂತುಕೊಂಡಿದ್ದ ಹಾಗೆ ತೋರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನಾನು ಕಂಡ ಕನಸಿನಲ್ಲಿ ಏಲಾಮ್ ಸಂಸ್ಥಾನದ ಶೂಷನ್ ಕೋಟೆಯಲ್ಲಿದ್ದೆನು; ಕನಸಿನಲ್ಲಿ ಊಲಾ ಕಾಲುವೆಯ ದಡದ ಮೇಲೆ ನಿಂತುಕೊಂಡಿದ್ದ ಹಾಗೆ ತೋರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಈ ದರ್ಶನದಲ್ಲಿ ನಾನು ಶೂಷನ್ ನಗರದಲ್ಲಿದ್ದೆನು. ಶೂಷನ್ ನಗರವು ಏಲಾಮ್ ಸಂಸ್ಥಾನದ ರಾಜಧಾನಿಯಾಗಿತ್ತು. ನಾನು ಊಲಾ ನದಿಯ ದಡದ ಮೇಲೆ ನಿಂತುಕೊಂಡಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 8:2
24 ತಿಳಿವುಗಳ ಹೋಲಿಕೆ  

ಆ ದಿವಸಗಳಲ್ಲಿ ಅರಸನಾದ ಅಹಷ್ವೇರೋಷನು ರಾಜಧಾನಿಯಾದ ಶೂಷನಿನಲ್ಲಿ ಅರಮನೆಯಲ್ಲಿರುವ ತನ್ನ ರಾಜಸಿಂಹಾಸನದ ಮೇಲೆ ಕುಳಿತಿರುವಾಗ


ಹಕಲ್ಯನ ಮಗ ನೆಹೆಮೀಯನ ಮಾತುಗಳು: ಇಪ್ಪತ್ತನೆಯ ವರ್ಷದ, ಕಿಸ್ಲೇವ್ ಎಂಬ ಮಾರ್ಗಶಿರ ತಿಂಗಳಲ್ಲಿ ನಾನು ಶೂಷನ್ ಪಟ್ಟಣದ ಅರಮನೆಯಲ್ಲಿದ್ದೆನು.


“ಅಲ್ಲಿ ಏಲಾಮು ಮತ್ತು ಅದರ ಎಲ್ಲಾ ಸಮೂಹವು ಆಕೆಯ ಸಮಾಧಿಯ ಸುತ್ತಲೂ ಇದೆ. ಅವರೆಲ್ಲರೂ ಖಡ್ಗದಿಂದ ಹತರಾದವರೇ. ಸುನ್ನತಿಯಿಲ್ಲದವರಾಗಿ ಭೂಮಿಯ ಕೆಳಗಿನ ಭಾಗಗಳಿಗೆ ಇಳಿದು ಹೋದವರೇ. ಅವರು ಜೀವಿತರ ದೇಶದಲ್ಲಿ ಭಯಂಕರರಾಗಿದ್ದರೂ ಇಳಿಯುವವರ ಸಂಗಡ ತಮ್ಮ ನಿಂದೆಯನ್ನು ಹೊತ್ತುಕೊಂಡಿದ್ದಾರೆ.


ಜಿಮ್ರಿಯ ಅರಸರೆಲ್ಲರಿಗೂ, ಏಲಾಮಿನ ಅರಸರೆಲ್ಲರಿಗೂ, ಮೇದ್ಯದ ಅರಸರೆಲ್ಲರಿಗೂ,


ಅರಸನ ಮಾತನ್ನು ಮತ್ತು ಅವನ ಕಟ್ಟಳೆಯನ್ನು ಕೇಳಿದ ತರುವಾಯ ಶೂಷನಿನ ಅರಮನೆಯಲ್ಲಿ ಹೇಗೈಯನ ವಶಕ್ಕೆ ಅನೇಕ ಕನ್ಯೆಯರನ್ನು ಒಪ್ಪಿಸಲಾಯಿತು. ಎಸ್ತೇರಳು ಸಹ ಅರಸನ ಅರಮನೆಯಲ್ಲಿ ಸ್ತ್ರೀಯರ ಕಾವಲಿನವನಾದ ಹೇಗೈಯ ಜವಾಬ್ದಾರಿಕೆಯ ಕೋಣೆಯಲ್ಲಿ ಇದ್ದಳು.


ಶಿನಾರಿನ ಅರಸ ಅಮ್ರಾಫೆಲನು ಎಲ್ಲಸಾರಿನ ಅರಸ ಅರಿಯೋಕನು, ಏಲಾಮಿನ ಅರಸ ಕೆದೊರ್ಲಗೋಮರನು, ಗೋಯಿಮದ ಅರಸ ತಿದ್ಗಾಲನು ಇವರ ದಿನಗಳಲ್ಲಿ ಆದದ್ದೇನೆಂದರೆ:


ಶೇಮನ ಪುತ್ರರು: ಏಲಾಮ್, ಅಶ್ಯೂರ್, ಅರ್ಪಕ್ಷದ್, ಲೂದ್, ಅರಾಮ್.


ಆಗ ನಾನು ಕಣ್ಣೆತ್ತಿ ನೋಡಿದಾಗ, ಆ ನದಿಯ ಮುಂದೆ ಎರಡು ಕೊಂಬುಗಳುಳ್ಳ ಒಂದು ಟಗರು ನಿಂತಿತ್ತು. ಅದರ ಎರಡು ಕೊಂಬುಗಳು ಉದ್ದವಾಗಿದ್ದರೂ, ಇನ್ನೊಂದಕ್ಕಿಂತ ಒಂದು ಉದ್ದವಾಗಿದ್ದವು. ಆ ದೊಡ್ಡ ಕೊಂಬು ಚಿಕ್ಕ ಕೊಂಬು ಮೊಳೆತ ಮೇಲೆ ಮೊಳೆತದ್ದು.


“ದಾನಿಯೇಲನೆಂಬ ನಾನು ನನ್ನ ಆತ್ಮದಲ್ಲಿ ನೊಂದುಕೊಂಡೆನು. ನನ್ನ ಮನಸ್ಸಿನಲ್ಲಿ ಹಾದುಹೋದ ದರ್ಶನಗಳ ನಿಮಿತ್ತ ಕಳವಳಗೊಂಡೆನು.


ದಾನಿಯೇಲನು, “ನಾನು ರಾತ್ರಿ ಕಂಡ ಕನಸಿನಲ್ಲಿ ನಾಲ್ಕು ದಿಕ್ಕುಗಳಿಂದಲೂ ಗಾಳಿಯು ಮಹಾಸಾಗರವನ್ನು ಕಲಕುತ್ತಿದ್ದವು.


ಘೋರ ದರ್ಶನವು ನನಗೆ ತಿಳಿಯಬಂದಿದೆ: ಬಾಧಕನು ಬಾಧಿಸುತ್ತಿದ್ದಾನೆ. ಸೂರೆಗಾರನು ಸೂರೆಮಾಡುತ್ತಿದ್ದಾನೆ. ಏಲಾಮೇ, ಏಳು! ಮೇದ್ಯವೇ ಮುತ್ತಿಗೆ ಹಾಕು, ಅದರ ನಿಟ್ಟುಸಿರನ್ನೆಲ್ಲಾ ನಿಲ್ಲಿಸಿಬಿಟ್ಟಿದ್ದೇನೆ.


ಆ ದಿನದಲ್ಲಿ ಯೆಹೋವ ದೇವರು ಉಳಿದ ತಮ್ಮ ಜನರನ್ನು ಬಿಡಿಸಿಕೊಳ್ಳುವುದಕ್ಕೆ ಎರಡನೇ ಸಾರಿ ಕೈಹಾಕಿ ಅಸ್ಸೀರಿಯ, ಈಜಿಪ್ಟ್, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾತ್ ಮತ್ತು ಮೆಡಿಟರೇನಿಯನ್ ಸಮುದ್ರದ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವರು.


ಇದಲ್ಲದೆ ಶೂಷನಿನಲ್ಲಿರುವ ಯೆಹೂದ್ಯರು ಆದಾರ್ ಎಂಬ ಫಾಲ್ಗುನಮಾಸದ ಹದಿನಾಲ್ಕನೆಯ ದಿವಸದಲ್ಲಿ ಶೂಷನಿನಲ್ಲಿ ಒಟ್ಟಾಗಿ ಸೇರಿ ಮುನ್ನೂರು ಮಂದಿಗೆ ಮರಣದಂಡನೆಯನ್ನು ವಿಧಿಸಿದರು. ಆದರೆ ಅವರು ಸುಲಿಗೆಯನ್ನು ತೆಗೆದುಕೊಳ್ಳಲಿಲ್ಲ.


ಅದೇ ದಿವಸ ಶೂಷನಿನ ಅರಮನೆಯಲ್ಲಿ ಮರಣದಂಡನೆಯಾದವರ ಲೆಕ್ಕವು ಅರಸನ ಮುಂದೆ ಒಪ್ಪಿಸಲಾಯಿತು.


ಮೊರ್ದೆಕೈ ಶುಭ್ರವಾದ ನೀಲ ರಾಜವಸ್ತ್ರವನ್ನು ಧರಿಸಿ, ಬಂಗಾರದ ದೊಡ್ಡ ಕಿರೀಟವನ್ನು ಇಟ್ಟುಕೊಂಡು, ರಕ್ತವರ್ಣವುಳ್ಳ ನಯವಾದ ನಾರಿನ ಶಾಲನ್ನು ಹೊದ್ದುಕೊಂಡು ಅರಸನ ಸಮ್ಮುಖದಿಂದ ಹೊರಟುಹೋದನು. ಶೂಷನ್ ಪಟ್ಟಣವು ಸಂಭ್ರಮವೂ ಸಂತೋಷವೂ ಉಳ್ಳದ್ದಾಗಿತ್ತು.


ಯೆಹೋವ ದೇವರು ಅವರಿಗೆ ಹೀಗೆ ಹೇಳಿದನು, “ನನ್ನ ಮಾತುಗಳನ್ನು ಈಗ ಕೇಳಿರಿ: “ನಿಮ್ಮಲ್ಲಿ ಒಬ್ಬ ಪ್ರವಾದಿ ಇದ್ದರೆ ಯೆಹೋವ ದೇವರಾದ ನಾನು ದರ್ಶನದಲ್ಲಿ ಪ್ರಕಟಿಸುವೆನು, ಇಲ್ಲವೆ ಕನಸಿನಲ್ಲಿಯೂ ನಾನು ಅವನೊಡನೆ ಮಾತನಾಡುವೆನು.


ಗತಕಾಲದಲ್ಲಿ ನಮ್ಮ ಪಿತೃಗಳ ಸಂಗಡ ವಿವಿಧ ರೀತಿಯಲ್ಲಿಯೂ ಅನೇಕಬಾರಿ ಪ್ರವಾದಿಗಳ ಮುಖಾಂತರವೂ ಮಾತನಾಡಿದ ದೇವರು,


ಅದಕ್ಕೆ ಎಸ್ತೇರಳು, “ಆ ವೈರಿಯೂ ಹಗೆಗಾರನೂ ಬೇರೆ ಯಾರೂ ಅಲ್ಲ, ಈ ದುಷ್ಟ ಹಾಮಾನನೇ!” ಎಂದಳು. ಆಗ ಹಾಮಾನನು ಅರಸನ ಮುಂದೆಯೂ, ರಾಣಿಯ ಮುಂದೆಯೂ ಬೆಪ್ಪಾದನು.


ಅಂಚೆಯವರು ಅರಸನ ಆಜ್ಞೆಯಿಂದ ತ್ವರೆಯಾಗಿ ಹೊರಟು ಹೋದರು. ಶೂಷನಿನ ಅರಮನೆಯಲ್ಲಿಂದ ಆ ಆಜ್ಞೆಯು ಹೊರಡಿತು. ಅರಸನೂ ಹಾಮಾನನೂ ಮದ್ಯಪಾನ ಮಾಡಲು ಕುಳಿತುಕೊಂಡರು. ಆದರೆ ಶೂಷನ್ ಪಟ್ಟಣವೋ ತಳಮಳಗೊಂಡಿತ್ತು.


ನಾನು ನನ್ನ ದರ್ಶನದಲ್ಲಿ ಕುದುರೆಗಳನ್ನೂ ಸವಾರರನ್ನೂ ಕಂಡೆನು. ಅವರ ಕವಚಗಳು ಬೆಂಕಿಯ ಕೆಂಪು, ನೀಲಮಣಿ ಹಾಗೂ ಹಳದಿ ಬಣ್ಣದಂತೆಯೂ ಇದ್ದವು. ಕುದುರೆಗಳ ತಲೆಗಳು ಸಿಂಹದ ತಲೆಗಳಂತಿದ್ದವು. ಅವುಗಳ ಬಾಯೊಳಗಿಂದ ಬೆಂಕಿ, ಹೊಗೆ ಮತ್ತು ಗಂಧಕ ಹೊರಬಂದವು.


ನಾನು ಸೆರೆಯವರ ಜೊತೆ ಕೆಬಾರ್ ನದಿಯ ಬಳಿಯಲ್ಲಿರುವಾಗ ಮೂವತ್ತನೆಯ ವರ್ಷದ, ನಾಲ್ಕನೆಯ ತಿಂಗಳಿನ, ಐದನೆಯ ದಿನದಲ್ಲಿ ಆಕಾಶ ತೆರೆಯಿತು. ನಾನು ದೇವರ ದರ್ಶನಗಳನ್ನು ಕಂಡೆನು.


ಮೊದಲು ನನಗೆ ಕಾಣಿಸಿದ ದರ್ಶನವಲ್ಲದೆ ಅರಸನಾದ ಬೇಲ್ಯಚ್ಚರನ ಆಳ್ವಿಕೆಯ ಮೂರನೆಯ ವರ್ಷದಲ್ಲಿಯೂ, ಮೊದಲಿನ ದರ್ಶನದಂಥ ಇನ್ನೊಂದು ದರ್ಶನವೂ ದಾನಿಯೇಲನಾದ ನನಗೆ ಕಾಣಿಸಿತು.


ಮೊದಲನೆಯ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ, ನಾನು ಟೈಗ್ರಿಸ್ ಎಂಬ ಮಹಾನದಿಯ ದಡದ ಮೇಲೆ ಇರುವಾಗ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು