Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 8:4 - ಕನ್ನಡ ಸಮಕಾಲಿಕ ಅನುವಾದ

4 ಆ ಟಗರು ಪಶ್ಚಿಮಕ್ಕೂ, ಉತ್ತರಕ್ಕೂ, ದಕ್ಷಿಣಕ್ಕೂ ಕಾದಾಡುತ್ತಿರುವುದನ್ನು ನಾನು ನೋಡಿದೆನು. ಮೃಗಗಳಲ್ಲಿ ಯಾವುದೂ ಅದರೆದುರಿಗೆ ನಿಲ್ಲಲಾರದೇ ಹೋಯಿತು. ಅದರ ಕೈಯಿಂದ ತಪ್ಪಿಸಿಕೊಳ್ಳಲು ಯಾವುದಕ್ಕೂ ಸಾಧ್ಯವಾಗುವಂತಿರಲಿಲ್ಲ. ಆದರೆ ಅದು ತನ್ನ ಮನಸ್ಸಿಗೆ ಬಂದಂತೆ ಮಾಡಿ, ತನ್ನನ್ನು ಹೆಚ್ಚಿಸಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಾನು ನೋಡುತ್ತಿದ್ದ ಹಾಗೆ ಆ ಟಗರು ಪಶ್ಚಿಮಕ್ಕೂ, ಉತ್ತರಕ್ಕೂ, ದಕ್ಷಿಣಕ್ಕೂ ಹಾರಾಡುತ್ತಿತ್ತು. ಯಾವ ಜಂತುವೂ ಅದರೆದುರಿಗೆ ನಿಲ್ಲಲಾರದೆ ಹೋಯಿತು. ಅದರಿಂದ ಬಿಡಿಸಲು ಯಾವ ಪ್ರಾಣಿಗೂ ಶಕ್ತಿಯಿರಲಿಲ್ಲ. ಅದು ಮನಸ್ಸು ಬಂದಂತೆ ನಡೆದು ತನ್ನನ್ನು ಹೆಚ್ಚಿಸಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನಾನು ನೋಡುತ್ತಿದ್ದ ಹಾಗೆ ಆ ಟಗರು ಪಶ್ಚಿಮಕ್ಕೂ ಉತ್ತರಕ್ಕೂ ದಕ್ಷಿಣಕ್ಕೂ ಹಾದಾಡುತ್ತಿತ್ತು. ಯಾವ ಪ್ರಾಣಿಯೂ ಅದರ ಎದುರಿಗೆ ನಿಲ್ಲಲಾರದೆಹೋಯಿತು. ಅದರ ಕೈಯಿಂದ ಬಿಡಿಸಲು ಯಾವ ಮೃಗಕ್ಕೂ ಶಕ್ತಿಯಿರಲಿಲ್ಲ. ಅದು ಇಷ್ಟಬಂದಂತೆ ನಡೆದು ತನ್ನ ಶಕ್ತಿಯನ್ನು ಹೆಚ್ಚಿಸಿಕೊಂಡಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಾನು ನೋಡುತ್ತಿದ್ದ ಹಾಗೆ ಆ ಟಗರು ಪಡುವಲಿಗೂ ಬಡಗಲಿಗೂ ತೆಂಕಲಿಗೂ ಹಾದಾಡುತ್ತಿತ್ತು; ಯಾವ ಜಂತುವೂ ಅದರೆದುರಿಗೆ ನಿಲ್ಲಲಾರದೆ ಹೋಯಿತು; ಅದರ ಕೈಯಿಂದ ಬಿಡಿಸಲು ಯಾವ ಪ್ರಾಣಿಗೂ ಶಕ್ತಿಯಿರಲಿಲ್ಲ; ಅದು ಮನಸ್ಸು ಬಂದಂತೆ ನಡೆದು ತನ್ನನ್ನು ಹೆಚ್ಚಿಸಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆ ಟಗರು ತನ್ನ ಕೊಂಬುಗಳಿಂದ ಎಲ್ಲ ಕಡೆಗೂ ಹಾಯುತ್ತಿತ್ತು. ಆ ಟಗರು ಪಶ್ಚಿಮಕ್ಕೂ ಉತ್ತರಕ್ಕೂ ದಕ್ಷಿಣಕ್ಕೂ ಜಿಗಿದಾಡುತ್ತಿತ್ತು. ಯಾವ ಪ್ರಾಣಿಗೂ ಆ ಟಗರನ್ನು ತಡೆಯಲಾಗಲಿಲ್ಲ. ಮಿಕ್ಕ ಪ್ರಾಣಿಗಳನ್ನು ರಕ್ಷಿಸುವುದು ಯಾರಿಂದಲೂ ಆಗಲಿಲ್ಲ. ಆ ಟಗರು ತನ್ನ ಮನಸ್ಸಿಗೆ ಬಂದಂತೆ ಮಾಡಲು ಸಾಧ್ಯವಾಯಿತು. ಆ ಟಗರು ಬಹಳ ಪ್ರಬಲವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 8:4
18 ತಿಳಿವುಗಳ ಹೋಲಿಕೆ  

ಆದರೆ ಅವನಿಗೆ ಎದುರಾಗಿ ಬರುವವನು ತನ್ನ ಇಷ್ಟದ ಪ್ರಕಾರ ಮಾಡುವನು. ಯಾರೂ ಅವನ ಮುಂದೆ ನಿಲ್ಲಲಾರರು. ಅವನು ರಮ್ಯವಾದ ದೇಶದಲ್ಲಿ ನಿಲ್ಲುವನು. ಅದನ್ನು ನಾಶಮಾಡುವ ಅಧಿಕಾರ ಹೊಂದಿರುವನು.


ಅರಸನು ತನ್ನ ಇಷ್ಟದ ಪ್ರಕಾರ ಮಾಡುವನು. ತನ್ನನ್ನು ತಾನೇ ಹೆಚ್ಚಿಸಿಕೊಂಡು, ತನ್ನನ್ನು ಎಲ್ಲಾ ದೇವರುಗಳಿಗಿಂತಲೂ ದೊಡ್ಡವನನ್ನಾಗಿ ಮಾಡಿಕೊಂಡು, ದೇವರುಗಳ ದೇವರಿಗೆ ವಿರೋಧವಾಗಿ ಆಶ್ಚರ್ಯವಾದ ಸಂಗತಿಗಳನ್ನು ಮಾತನಾಡಿ, ರೋಷವು ತೀರುವವರೆಗೂ ವೃದ್ಧಿಯಾಗಿರುವನು. ಹೀಗೆ ನಿಶ್ಚಯವಾದದ್ದು ನೆರವೇರಲೇಬೇಕು.


ಅದು ಟಗರಿನ ಹತ್ತಿರ ಬರುವುದನ್ನು ನಾನು ನೋಡಿದೆನು. ಅದರ ಮೇಲಿನ ಕ್ರೋಧದಿಂದ ಅದನ್ನು ಹಾದು, ಅದರ ಎರಡು ಕೊಂಬುಗಳನ್ನು ಮುರಿದು ಬಿಟ್ಟಿತು. ಅದರ ಮುಂದೆ ನಿಲ್ಲುವುದಕ್ಕೆ ಟಗರಿಗೆ ಏನೂ ಶಕ್ತಿಯಿರಲಿಲ್ಲ. ಆದರೆ ಹೋತವು ಟಗರನ್ನು ನೆಲಕ್ಕೆ ಉರುಳಿಸಿ ತುಳಿಯಿತು. ಟಗರನ್ನು ಹೋತದ ಹಿಡಿತದಿಂದ ಬಿಡಿಸುವವರು ಯಾರೂ ಇರಲಿಲ್ಲ.


ಯಾಕೋಬನ ಜನಶೇಷವು ದೇಶದೇಶಗಳೊಳಗೆ ಅನೇಕ ಜನಾಂಗಗಳ ಮಧ್ಯದಲ್ಲಿ, ಅಡವಿಯ ಮೃಗಗಳಲ್ಲಿ ಸಿಂಹದಂತೆಯೂ ಕುರಿಮಂದೆಗಳಲ್ಲಿ ಪ್ರಾಯದ ಸಿಂಹದಂತೆಯೂ ಇರುವುದು. ಅದು ಹಾದುಹೋದರೆ ಇಳಿದುಬಿಟ್ಟು ಹರಿದುಬಿಡುತ್ತದೆ, ಯಾರೂ ಬಿಡಿಸಲಾರರು,


“ಇದಲ್ಲದೆ, ಎರಡನೆಯ ಮೃಗವು ಕರಡಿಯ ಹಾಗಿರುವಂಥದ್ದನ್ನು ಕಂಡೆನು. ಒಂದು ಹೆಗಲನ್ನು ಮೇಲಕ್ಕೆ ಎತ್ತಿಕೊಂಡಿತ್ತು. ಇದರ ಬಾಯಿಯ ಹಲ್ಲುಗಳ ಮಧ್ಯದಲ್ಲಿ ಮೂರು ಪಕ್ಕೆಲುಬುಗಳನ್ನು ಕಚ್ಚಿಕೊಂಡಿದ್ದವು. ಅದಕ್ಕೆ, ‘ಎದ್ದೇಳು, ಹೆಚ್ಚು ಮಾಂಸವನ್ನು ತಿನ್ನು,’ ಎಂದು ಹೇಳಿದರು.


ಅದೇ ರಾತ್ರಿಯಲ್ಲಿ ಕಸ್ದೀಯರ ಅರಸನಾದ ಬೇಲ್ಯಚ್ಚರನು ಹತನಾದನು.


ಅವರು ಅವನಿಗೆ ಕೊಟ್ಟ ಮಹತ್ತಿನ ನಿಮಿತ್ತ ಸಕಲ ಪ್ರಜೆಗಳೂ, ಜನಾಂಗಗಳೂ, ಭಾಷೆಯವರೂ ಅವನ ಮುಂದೆ ಹೆದರಿ ನಡುಗಿದರು. ತನಗೆ ಬೇಕಾದವರನ್ನು ಬದುಕಿಸಿ ಬೇಡವಾದವರನ್ನು ಕೊಂದನು. ಇಷ್ಟವಿದ್ದವರನ್ನು ಸುಸ್ಥಿತಿಗೆ ಏರಿಸಿ, ಇಷ್ಟವಿಲ್ಲದವರನ್ನು ಕೆಳಕ್ಕಿಳಿಸಿದನು.


ಏಕೆಂದರೆ ನೀವು ಅವುಗಳನ್ನು ಪಕ್ಕೆ ಮತ್ತು ಹೆಗಲುಗಳಿಂದ ನೂಕುತ್ತಾ ದುರ್ಬಲವಾದವುಗಳನ್ನು ಕೊಂಬುಗಳಿಂದ ಹಾಯುತ್ತಾ ನನ್ನ ಮಂದೆಯನ್ನು ದೂರ ಚದುರಿಸಿಬಿಟ್ಟಿರಿ.


“ದೇವರನ್ನು ಮರೆತು ಬಿಡುವವರೇ, ಇದನ್ನು ನಿಮ್ಮ ಮನಸ್ಸಿಗೆ ತಂದುಕೊಳ್ಳಿರಿ. ಇಲ್ಲವಾದರೆ ಎಚ್ಚರಿಕೆಯಾಗಿರಿ. ನನ್ನ ಕೈಯಿಂದ ಬಿಡಿಸುವವರು ಯಾರೂ ಇರುವುದಿಲ್ಲವೆಂಬುದನ್ನು ಗ್ರಹಿಸಿಕೊಳ್ಳಿರಿ.


ಇಲ್ಲದಿದ್ದರೆ, ನನ್ನನ್ನು ಸಿಂಹದಂತೆ ಅವರು ಹರಿದುಬಿಡುವರು ರಕ್ಷಿಸಲು ಯಾರೂ ಇಲ್ಲವೆಂದು ನನ್ನನ್ನು ನಾಶಮಾಡಿಬಿಡುವರು.


ನಾನು ಅಪರಾಧಿಯಲ್ಲವೆಂದು ನಿಮಗೆ ಗೊತ್ತಿದೆ, ನಿಮ್ಮ ಕೈಯಿಂದ ತಪ್ಪಿಸುವವರು ಯಾರೂ ಇಲ್ಲವೆಂದೂ ನಿಮಗೆ ಗೊತ್ತಿದೆಯಲ್ಲವೇ?


ಅವನ ವೈಭವವು ಚೊಚ್ಚಲ ಹೋರಿಯಂತೆ ಇರುವುದು, ಅವನ ಕೊಂಬುಗಳು ಕಾಡುಕೋಣಗಳ ಕೊಂಬುಗಳಂತೆ ಇರುವುದು. ಇವುಗಳಿಂದ ಜನಾಂಗಗಳನ್ನೆಲ್ಲಾ ಇರಿದು ಒಟ್ಟಿಗೆ ಭೂಮಿಯ ಅಂಚಿನವರೆಗೆ ಓಡಿಸುವನು. ಎಫ್ರಾಯೀಮ್ ಕುಲದ ಹತ್ತು ಸಾವಿರ ಜನರೂ ಇಂಥವರೇ. ಮನಸ್ಸೆ ಕುಲದ ಸಹಸ್ರ ಜನರೂ ಇಂಥವರೇ ಆಗಿದ್ದಾರೆ.”


ಆಗ ಕೆನಾನನ ಮಗನಾದ ಚಿದ್ಕೀಯನು, “ತನಗೆ ಕಬ್ಬಿಣದ ಕೊಂಬುಗಳನ್ನು ಮಾಡಿಕೊಂಡು, ‘ಇವುಗಳಿಂದ ನೀನು ಅರಾಮ್ಯರನ್ನು ನಿರ್ಮೂಲ ಮಾಡುವವರೆಗೂ ಇರಿದು ಹಾಕುವೆ,’ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದನು.


ನಿಮ್ಮಿಂದ ನಮ್ಮ ವೈರಿಗಳನ್ನು ದಬ್ಬುವೆವು; ನಿಮ್ಮ ಹೆಸರಿನಲ್ಲಿ ನಮ್ಮ ಎದುರಾಳಿಗಳನ್ನು ತುಳಿಯುವೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು