ದಾನಿಯೇಲ 8:5 - ಕನ್ನಡ ಸಮಕಾಲಿಕ ಅನುವಾದ5 ನಾನು ಇದರ ಬಗ್ಗೆ ಆಲೋಚಿಸಲಾಗಿ ಕೂಡಲೆ, ಪಶ್ಚಿಮದಿಂದ ಒಂದು ಹೋತವು ನೆಲವನ್ನು ಸೋಕದೆ ಭೂಮಂಡಲವನ್ನೆಲ್ಲಾ ದಾಟಿಕೊಂಡು ಬಂದಿತು. ಆ ಹೋತಕ್ಕೆ ಕಣ್ಣುಗಳ ಮಧ್ಯೆ ವಿಶೇಷವಾದ ಕೊಂಬು ಇತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನಾನು ಗಮನಿಸುತ್ತಿರುವಾಗ ಇಗೋ, ಒಂದು ಹೋತವು ಪಶ್ಚಿಮದಿಂದ ಭೂಮಂಡಲವನ್ನೆಲ್ಲಾ ದಾಟಿಕೊಂಡು ನೆಲವನ್ನು ಮುಟ್ಟದೆ ಓಡಿ ಬಂತು. ಅದರ ಕಣ್ಣುಗಳ ನಡುವೆ ವಿಶೇಷವಾದ ಒಂದು ಕೊಂಬಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ನಾನು ಅದನ್ನು ಗಮನಿಸುತ್ತಿರುವಾಗಲೇ ಹೋತವೊಂದು ಪಶ್ಚಿಮದಿಂದ ಹೊರಟುಬಂದಿತು. ಅದು ಜಗವೆಲ್ಲವನ್ನು ದಾಟಿಕೊಂಡು ನೆಲವನ್ನು ಸೋಕದೆ, ಅಲ್ಲಿಗೆ ಧಾವಿಸಿತು. ಅದರ ಕಣ್ಣುಗಳ ನಡುವೆ ವಿಶೇಷವಾದ ಒಂದು ಕೊಂಬಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ನಾನು ಗಮನಿಸುತ್ತಿರುವಾಗ ಇಗೋ, ಒಂದು ಹೋತವು ಪಡುವಲಿಂದ ಭೂಮಂಡಲವನ್ನೆಲ್ಲಾ ದಾಟಿಕೊಂಡು ನೆಲವನ್ನು ಸೋಕದೆ ಓಡಿಬಂತು; ಅದರ ಕಣ್ಣುಗಳ ನಡುವೆ ವಿಶೇಷವಾದ ಒಂದು ಕೊಂಬಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ನಾನು ಈ ಟಗರಿನ ಬಗ್ಗೆ ಯೋಚಿಸಿದೆ. ನಾನು ಯೋಚನೆ ಮಾಡುತ್ತಿರುವಾಗಲೇ ಪಶ್ಚಿಮ ದಿಕ್ಕಿನಿಂದ ಒಂದು ಹೋತವು ಬರುವುದನ್ನು ಕಂಡೆ. ಈ ಹೋತವು ಇಡೀ ಭೂಮಂಡಲದ ಮೇಲೆಲ್ಲಾ ಓಡಾಡಿತು. ಅದು ತನ್ನ ಕಾಲುಗಳು ನೆಲಕ್ಕೆ ಸೋಕದಂತೆ ಓಡುತ್ತಿತ್ತು. ಈ ಹೋತಕ್ಕೆ ಎದ್ದುಕಾಣುವ ಒಂದು ದೊಡ್ಡ ಕೊಂಬು ಇತ್ತು. ಆ ಕೊಂಬು ಸರಿಯಾಗಿ ಆ ಹೋತದ ಎರಡು ಕಣ್ಣುಗಳ ಮಧ್ಯದಲ್ಲಿತ್ತು. ಅಧ್ಯಾಯವನ್ನು ನೋಡಿ |