ದಾನಿಯೇಲ 8:8 - ಕನ್ನಡ ಸಮಕಾಲಿಕ ಅನುವಾದ8 ಆದ್ದರಿಂದ ಆ ಹೋತವು ಬಹಳವಾಗಿ ಬಲಗೊಂಡಿತು. ಆದರೆ ಅದು ಪ್ರಾಬಲ್ಯಕ್ಕೆ ಬಂದ ಮೇಲೆ ಅದರ ದೊಡ್ಡ ಕೊಂಬು ಮುರಿದುಹೋಯಿತು. ಅದರ ಸ್ಥಾನದಲ್ಲಿ ನಾಲ್ಕು ಅದ್ಭುತವಾದ ಕೊಂಬುಗಳು ಮೊಳೆತು, ಆಕಾಶದ ಚತುರ್ದಿಕ್ಕಿಗೆ ಚಾಚಿಕೊಂಡವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆ ಹೋತವು ತನ್ನನ್ನು ಬಹಳವಾಗಿ ಹೆಚ್ಚಿಸಿಕೊಂಡಿತು, ಆದರೆ ಅದು ಪ್ರಾಬಲ್ಯಕ್ಕೆ ಬಂದಾಗಲೇ ಅದರ ದೊಡ್ಡ ಕೊಂಬು ಮುರಿದು ಹೋಯಿತು. ಅದರ ಸ್ಥಾನದಲ್ಲಿ ನಾಲ್ಕು ಅದ್ಭುತವಾದ ಕೊಂಬುಗಳು ಮೊಳೆತು ಚತುರ್ದಿಕ್ಕುಗಳಿಗೆ ಚಾಚಿಕೊಂಡವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಆ ಹೋತಕ್ಕೆ ಅತ್ಯಧಿಕ ಹುಮ್ಮಸ್ಸು ಬಂದಿತು. ಆದರೆ ಅದು ಪ್ರಾಬಲ್ಯಕ್ಕೆ ಬರುವಾಗಲೇ ಅದರ ದೊಡ್ಡ ಕೊಂಬು ಮುರಿದುಹೋಯಿತು. ಅದರ ಸ್ಥಾನದಲ್ಲಿ ನಾಲ್ಕು ಪ್ರಸಿದ್ಧ ಕೊಂಬುಗಳು ಮೊಳೆತು ಚತುರ್ದಿಕ್ಕುಗಳಿಗೂ ಚಾಚಿಕೊಂಡವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಆ ಹೋತವು ತನ್ನನ್ನು ಬಹಳವಾಗಿ ಹೆಚ್ಚಿಸಿಕೊಂಡಿತು, ಆದರೆ ಅದು ಪ್ರಾಬಲ್ಯಕ್ಕೆ ಬಂದಾಗಲೇ ಅದರ ದೊಡ್ಡ ಕೊಂಬು ಮುರಿದುಹೋಯಿತು; ಅದರ ಸ್ಥಾನದಲ್ಲಿ ನಾಲ್ಕು ಅದ್ಭುತವಾದ ಕೊಂಬುಗಳು ಮೊಳೆತು ಚತುರ್ದಿಕ್ಕುಗಳಿಗೆ ಚಾಚಿಕೊಂಡವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಹೋತವು ಬಹಳ ಪ್ರಬಲವಾಯಿತು. ಆದರೆ ಅದು ಪ್ರಾಬಲ್ಯಕ್ಕೆ ಬಂದಾಗಲೇ ಅದರ ದೊಡ್ಡ ಕೊಂಬು ಮುರಿದುಹೋಯಿತು. ಆ ಒಂದು ದೊಡ್ಡ ಕೊಂಬು ಇದ್ದ ಸ್ಥಳದಲ್ಲಿ ನಾಲ್ಕು ಕೊಂಬುಗಳು ಮೊಳೆತವು. ಆ ಕೊಂಬುಗಳು ಸ್ಪಷ್ಟವಾಗಿ ಕಾಣಿಸುತ್ತಿದ್ದವು. ಆ ನಾಲ್ಕು ಕೊಂಬುಗಳು ನಾಲ್ಕು ಬೇರೆಬೇರೆ ದಿಕ್ಕುಗಳಲ್ಲಿ ಚಾಚಿಕೊಂಡವು. ಅಧ್ಯಾಯವನ್ನು ನೋಡಿ |