Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 9:10 - ಕನ್ನಡ ಸಮಕಾಲಿಕ ಅನುವಾದ

10 ನಾವು ನಮ್ಮ ದೇವರಾದ ಯೆಹೋವ ದೇವರಿಗೆ ವಿಧೇಯರಾಗಲಿಲ್ಲ, ಅವರು ತಮ್ಮ ಸೇವಕರಾದ ಪ್ರವಾದಿಗಳ ಮೂಲಕ ನಮಗೆ ನೀಡಿದ ನಿಯಮಗಳನ್ನು ಪಾಲಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಕರ್ತನಾದ ನಮ್ಮ ದೇವರ ಮಾತನ್ನು ಕೇಳಲಿಲ್ಲ, ತನ್ನ ಸೇವಕರಾದ ಪ್ರವಾದಿಗಳ ಮೂಲಕ ನಮಗೆ ಗೊತ್ತು ಮಾಡಿದ ಧರ್ಮಮಾರ್ಗದಲ್ಲಿ ನಡೆಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ನಮ್ಮ ದೇವರಾದ ಸರ್ವೇಶ್ವರನ ಮಾತನ್ನು ಕೇಳಲಿಲ್ಲ. ಅವರ ದಾಸರಾದ ಪ್ರವಾದಿಗಳ ಮುಖಾಂತರ ನಮಗೆ ಗೊತ್ತುಮಾಡಿದ ಸನ್ಮಾರ್ಗದಲ್ಲಿ ನಾವು ನಡೆಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಕರ್ತನಾದ ನಮ್ಮ ದೇವರ ಮಾತನ್ನು ಕೇಳಲಿಲ್ಲ, ತನ್ನ ಸೇವಕರಾದ ಪ್ರವಾದಿಗಳ ಮೂಲಕ ನಮಗೆ ಗೊತ್ತುಮಾಡಿದ ಧರ್ಮಮಾರ್ಗದಲ್ಲಿ ನಡೆಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನಾವು ನಮ್ಮ ದೇವರಾದ ಯೆಹೋವನ ಆಜ್ಞಾಪಾಲನೆ ಮಾಡಿಲ್ಲ. ಯೆಹೋವನು ತನ್ನ ಸೇವಕರಾದ ಪ್ರವಾದಿಗಳ ಮುಖಾಂತರ ನಮಗೆ ಕಟ್ಟಳೆಗಳನ್ನು ತಿಳಿಸಿದನು. ಆದರೆ ನಾವು ಆ ಕಟ್ಟಳೆಗಳನ್ನು ಪಾಲಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 9:10
8 ತಿಳಿವುಗಳ ಹೋಲಿಕೆ  

ನಿಮ್ಮ ಹೆಸರಿನಲ್ಲಿ ನಮ್ಮ ಅರಸರಿಗೂ, ನಮ್ಮ ರಾಜಕುಮಾರರಿಗೂ, ನಮ್ಮ ಪೂರ್ವಜರಿಗೂ ದೇಶದ ಎಲ್ಲಾ ಜನರಿಗೂ ಮಾತನಾಡಿದ ನಿಮ್ಮ ಸೇವಕರಾದ ಪ್ರವಾದಿಗಳಿಗೆ ಕಿವಿಗೊಡಲಿಲ್ಲ.


ಏಕೆಂದರೆ ಅವರು ತಮ್ಮ ದೇವರಾದ ಯೆಹೋವ ದೇವರ ಮಾತನ್ನು ಕೇಳದೆ, ಅವರ ಒಡಂಬಡಿಕೆಯನ್ನೂ, ಯೆಹೋವ ದೇವರ ಸೇವಕನಾದ ಮೋಶೆಯು ಆಜ್ಞಾಪಿಸಿದ್ದ ಸಮಸ್ತವನ್ನೂ ಮೀರಿದರು. ಅವರು ದೇವರ ಆಜ್ಞೆಗಳಿಗೆ ಕಿವಿಗೊಡಲಿಲ್ಲ, ಅವುಗಳಂತೆ ನಡೆಯಲಿಲ್ಲ.


ಗತಕಾಲದಲ್ಲಿ ನಮ್ಮ ಪಿತೃಗಳ ಸಂಗಡ ವಿವಿಧ ರೀತಿಯಲ್ಲಿಯೂ ಅನೇಕಬಾರಿ ಪ್ರವಾದಿಗಳ ಮುಖಾಂತರವೂ ಮಾತನಾಡಿದ ದೇವರು,


ಅವರು ಅದರಲ್ಲಿ ಸೇರಿ ಅದನ್ನು ಸ್ವಾಧೀನಪಡಿಸಿಕೊಂಡರು. ಆದರೆ ಅವರು ನಿಮ್ಮ ಮಾತಿಗೆ ಕಿವಿಗೊಡಲಿಲ್ಲ. ನಿಮ್ಮ ನಿಯಮದಲ್ಲಿ ನಡೆದುಕೊಳ್ಳಲಿಲ್ಲ. ಮಾಡಬೇಕೆಂದು ನೀವು ಅವರಿಗೆ ಆಜ್ಞಾಪಿಸಿದ್ದನ್ನೆಲ್ಲಾ ಮಾಡಲಿಲ್ಲ. ಆದ್ದರಿಂದ ಈ ಕೇಡನ್ನೆಲ್ಲಾ ಅವರಿಗೆ ಸಂಭವಿಸುವಂತೆ ಮಾಡಿದ್ದೀರಿ.


‘ನಿಮ್ಮ ಪಿತೃಗಳು ನನ್ನನ್ನು ಬಿಟ್ಟುಬಿಟ್ಟದ್ದರಿಂದಲೇ,’ ಎಂದು ಯೆಹೋವ ದೇವರು ಹೇಳುತ್ತಾರೆ. ‘ಅವರು ಬೇರೆ ದೇವರುಗಳನ್ನು ಹಿಂಬಾಲಿಸಿ, ಅವುಗಳನ್ನು ಸೇವಿಸಿ, ಅವುಗಳನ್ನು ಆರಾಧಿಸಿ, ನನ್ನನ್ನು ತೊರೆದುಬಿಟ್ಟು, ನನ್ನ ನಿಯಮವನ್ನು ಕೈಗೊಳ್ಳಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು