Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 9:13 - ಕನ್ನಡ ಸಮಕಾಲಿಕ ಅನುವಾದ

13 ಮೋಶೆಯ ನಿಯಮದಲ್ಲಿ ಬರೆದಿರುವ ಪ್ರಕಾರ, ಈ ಎಲ್ಲಾ ವಿನಾಶ ನಮ್ಮ ಮೇಲೆ ಬಂದಿದೆ. ಆದರೂ ನಾವು ನಮ್ಮ ಅಕ್ರಮಗಳನ್ನು ಬಿಟ್ಟು, ತಿರುಗಿಕೊಂಡು ನಿಮ್ಮ ಸತ್ಯವನ್ನು ತಿಳಿದುಕೊಳ್ಳುವಂತೆ, ನಮ್ಮ ದೇವರಾದ ಯೆಹೋವ ದೇವರ ದಯೆಯನ್ನು ಬೇಡಿಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಮೋಶೆಯ ಧರ್ಮನಿಯಮಗಳಲ್ಲಿ ಬರೆದಂತೆಯೇ ಈ ವಿಪತ್ತೆಲ್ಲಾ ನಮ್ಮ ಮೇಲೆ ಬಂದಿದೆ; ಆದರೂ ನಾವು ನಮ್ಮ ದುರ್ಮಾರ್ಗಗಳನ್ನು ತೊರೆದುಬಿಟ್ಟು ನಿನ್ನ ಸತ್ಯೋಪದೇಶವನ್ನು ಗ್ರಹಿಸಿ ನಡೆಯುವಂತೆ ನಮ್ಮ ದೇವರಾದ ಯೆಹೋವನೆಂಬ ನಿನ್ನ ದಯೆಯನ್ನು ಬೇಡಿಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವಂತೆಯೇ ಈ ವಿಪತ್ತೆಲ್ಲಾ ನಮ್ಮ ಮೇಲೆ ಬಂದಿದೆ. ಆದರೂ ನಾವು ನಮ್ಮ ಧರ್ಮಮಾರ್ಗಗಳನ್ನು ತೊರೆದುಬಿಟ್ಟಿದ್ದೇವೆ. ನಿಮ್ಮ ಸತ್ಯೋಪದೇಶವನ್ನು ಗ್ರಹಿಸಿ ನಡೆಯುವಂತೆ ನಮ್ಮ ದೇವರಾದ ಸರ್ವೇಶ್ವರನೆಂಬ ನಿಮ್ಮ ದಯೆಯನ್ನು ಬೇಡಿಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಂತೆಯೇ ಈ ವಿಪತ್ತೆಲ್ಲಾ ನಮ್ಮ ಮೇಲೆ ಬಂದಿದೆ; ಆದರೂ ನಾವು ನಮ್ಮ ದುರ್ಮಾರ್ಗಗಳನ್ನು ತೊರೆದುಬಿಟ್ಟು ನಿನ್ನ ಸತ್ಯೋಪದೇಶವನ್ನು ಗ್ರಹಿಸಿ ನಡೆಯುವಂತೆ ನಮ್ಮ ದೇವರಾದ ಯೆಹೋವನೆಂಬ ನಿನ್ನ ದಯೆಯನ್ನು ಬೇಡಿಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆ ಕೇಡುಗಳೆಲ್ಲಾ ನಮಗೆ ಉಂಟಾದವು. ಇದೆಲ್ಲಾ ಮೋಶೆಯ ಧರ್ಮಶಾಸ್ತ್ರದಲ್ಲಿ ಹೇಳಿದಂತೆಯೇ ನಡೆದುಹೋಯಿತು. ಆದರೆ ಈವರೆಗೂ ನಾವು ನಿನ್ನ ಸಹಾಯವನ್ನು ಕೇಳಲಿಲ್ಲ. ಇಂದಿಗೂ ನಾವು ಪಾಪ ಮಾಡುವದನ್ನು ನಿಲ್ಲಿಸಲಿಲ್ಲ. ಯೆಹೋವನೇ, ಇನ್ನೂ ನಾವು ನಿನ್ನ ಸತ್ಯೋಪದೇಶದ ಕಡೆಗೆ ಗಮನ ಕೊಡುತ್ತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 9:13
35 ತಿಳಿವುಗಳ ಹೋಲಿಕೆ  

ಎಲ್ಲಾ ಇಸ್ರಾಯೇಲರು ನಿಮ್ಮ ನಿಯಮವನ್ನು ಮೀರಿ ನಿಮಗೆ ವಿಧೇಯರಾಗದೇ ತೊಲಗಿ ಹೋದರು. “ಆದ್ದರಿಂದ ಶಾಪವೂ, ದೇವರ ಸೇವಕನಾದ ಮೋಶೆಯು ನಿಯಮದಲ್ಲಿ ಬರೆದ ನ್ಯಾಯ ತೀರ್ಪುಗಳೂ ಅವರಿಗೆ ವಿರುದ್ಧವಾಗಿ ನಾವು ಮಾಡಿದ ಪಾಪದ ನಿಮಿತ್ತ, ನಮ್ಮ ಮೇಲೆ ಸುರಿಯಲಾಗಿದೆ.


“ನಾನು ನಿಮ್ಮ ಜನರನ್ನು ದಂಡಿಸಿದ್ದು ವ್ಯರ್ಥವಾಯಿತು. ಅವರು ಶಿಕ್ಷೆಯನ್ನು ತೆಗೆದುಕೊಳ್ಳಲಿಲ್ಲ. ನಿಮ್ಮ ಸ್ವಂತ ಖಡ್ಗವು ನಾಶಮಾಡುವ ಸಿಂಹದಂತೆ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿವೆ.


ಆದರೂ ಜನರು ತಮ್ಮನ್ನು ಶಿಕ್ಷಿಸಿದ ದೇವರ ಕಡೆಗೆ ತಿರುಗದೆಯೂ, ಸೇನಾಧೀಶ್ವರ ಯೆಹೋವ ದೇವರನ್ನು ಹುಡುಕದೆಯೂ ಇದ್ದರು.


ಇಸ್ರಾಯೇಲಿನ ಗರ್ವವು ಅವನಿಗೆ ವಿರುದ್ಧವಾಗಿ ಸಾಕ್ಷಿಕೊಡುತ್ತದೆ. ಆದರೂ ಅವರು ತಮ್ಮ ಯೆಹೋವ ದೇವರ ಕಡೆಗೆ ತಿರುಗದೆ ಇದ್ದಾರೆ. ಆತನನ್ನು ಹುಡುಕದೇ ಇದ್ದಾರೆ.


“ಎಫ್ರಾಯೀಮನು ಅಂಗಲಾಚುವುದನ್ನು ನಿಶ್ಚಯವಾಗಿ ಕೇಳಿದೆನು. ಹೇಗೆಂದರೆ, ‘ನೀನು ನನ್ನನ್ನು ಶಿಕ್ಷಿಸಿದೆ. ಪಳಗದ ಹೋರಿಗೆ ಆದ ಹಾಗೆ ನನಗೆ ಶಿಕ್ಷೆ ಆಯಿತು. ನನ್ನನ್ನು ತಿರುಗಿಸು, ಆಗ ತಿರುಗಿಕೊಳ್ಳುವೆನು. ಯೆಹೋವ ದೇವರೇ, ನೀವೇ ನನ್ನ ದೇವರಾಗಿದ್ದೀರಿ.


ಓ ಯೆಹೋವ ದೇವರೇ, ನಿಮ್ಮ ಕಣ್ಣುಗಳು ಸತ್ಯದ ಮೇಲೆ ಇವೆಯಲ್ಲವೋ? ಅವರನ್ನು ಹೊಡೆದಿರಿ, ಆದರೆ ಅವರಿಗೆ ದುಃಖವಾಗಲಿಲ್ಲ; ಅವರನ್ನು ತುಳಿದಿರಿ, ಆದರೆ ತಿದ್ದುಕೊಳ್ಳಲು ಒಪ್ಪಲಿಲ್ಲ. ತಮ್ಮ ಮುಖಗಳನ್ನು ಬಂಡೆಗಿಂತ ಕಠಿಣ ಮಾಡಿಕೊಂಡಿದ್ದಾರೆ. ಅವರು ಪಶ್ಚಾತ್ತಾಪಕ್ಕೆ ನಿರಾಕರಿಸಿದ್ದಾರೆ.


ನಿಮ್ಮ ಸೂತ್ರಗಳ ಮಾರ್ಗವನ್ನು ನಾನು ಅರ್ಥಮಾಡಿಕೊಳ್ಳಲು ಸಹಾಯಿಸಿರಿ, ಆಗ ನಿಮ್ಮ ಅದ್ಭುತಕಾರ್ಯಗಳನ್ನು ಧ್ಯಾನ ಮಾಡುವೆನು.


“ಹೃದಯದಲ್ಲಿ ಭಕ್ತಿಹೀನರಾಗಿರುವವರು ಕೋಪವನ್ನು ಕೂಡಿಸುವರು; ದೇವರು ಅವರನ್ನು ಬಂಧಿಸಿದರೂ, ಅವರು ದೇವರಿಗೆ ಮೊರೆ ಇಡುವುದಿಲ್ಲ.


ನಿಮ್ಮಲ್ಲಿ ಯಾರಿಗಾದರೂ ಜ್ಞಾನ ಕಡಿಮೆಯಾಗಿದ್ದರೆ, ಅವರು ದೇವರನ್ನು ಕೇಳಿಕೊಳ್ಳಲಿ, ಅದು ಅವರಿಗೆ ದೊರಕುವುದು. ದೇವರು ತಪ್ಪು ಕಂಡುಹಿಡಿಯದೆ ಎಲ್ಲರಿಗೂ ಉದಾರಮನಸ್ಸಿನಿಂದ ಕೊಡುವರು.


ನೀವು ಕ್ರಿಸ್ತನ ಬಗ್ಗೆ ಕೇಳಿ ಬೋಧನೆಯನ್ನು ಪಡೆದಾಗ, ಅದು ಯೇಸುವಿನಲ್ಲಿರುವ ಸತ್ಯಕ್ಕೆ ಅನುಸಾರವಾಗಿತ್ತು.


ದೇವರ ವಾಕ್ಯವನ್ನು ಪಡೆದವರು ದೇವರುಗಳೇ ಎಂದು ಆತನು ಕರೆದಿರುವುದಾದರೆ, ಪವಿತ್ರ ವೇದವು ಸುಳ್ಳಾಗಲಾರದು.


ಇದಲ್ಲದೆ ನೀವು ಸತ್ಯವನ್ನು ತಿಳಿದುಕೊಳ್ಳುವಿರಿ; ಸತ್ಯವು ನಿಮ್ಮನ್ನು ಸ್ವತಂತ್ರರಾಗಿ ಮಾಡುವುದು,” ಎಂದು ಹೇಳಿದರು.


‘ಅವರೆಲ್ಲರೂ ದೇವರಿಂದಲೇ ಬೋಧನೆ ಪಡೆಯುವರು,’ ಎಂದು ಪ್ರವಾದಿಗಳ ಗ್ರಂಥದಲ್ಲಿ ಬರೆದಿದೆ. ತಂದೆಯಿಂದ ಕೇಳಿ ಕಲಿತ ಪ್ರತಿಯೊಬ್ಬರೂ ನನ್ನ ಬಳಿಗೆ ಬರುತ್ತಾರೆ.


ತರುವಾಯ ಅವರು ಪವಿತ್ರ ವೇದಗಳನ್ನು ಅರ್ಥಮಾಡಿಕೊಳ್ಳುವಂತೆ ಯೇಸು ಅವರ ಬುದ್ಧಿಯನ್ನು ತೆರೆದರು.


ತಮ್ಮ ಹಾಸಿಗೆಯ ಮೇಲೆ ಗೋಳಾಡುವಾಗಲೂ, ಅವರು ತಮ್ಮ ಹೃದಯದಿಂದ ನನ್ನನ್ನು ಕೂಗಲಿಲ್ಲ. ಧಾನ್ಯ ಮತ್ತು ದ್ರಾಕ್ಷಾರಸಗಳ ನಿಮಿತ್ತ ಅವರು ತಮ್ಮ ದೇವರುಗಳಿಗೆ ಮನವಿ ಮಾಡುವಾಗ ತಮ್ಮನ್ನು ತಾವು ಗಾಯಗೊಳಿಸಿಕೊಳ್ಳುತ್ತಾರೆ, ಆದರೆ ಅವರು ನನ್ನಿಂದ ದೂರವಿರುತ್ತಾರೆ.


ಅವರೆಲ್ಲರೂ ಒಲೆಯ ಹಾಗೆ ಬಿಸಿಯಾಗಿದ್ದಾರೆ. ಅವರು ತಮ್ಮ ನ್ಯಾಯಾಧಿಪತಿಗಳನ್ನು ನುಂಗಿಬಿಡುತ್ತಾರೆ. ಅವರ ಅರಸರೆಲ್ಲರು ಬಿದ್ದು ಹೋಗಿದ್ದಾರೆ. ಅವರಲ್ಲಿ ಒಬ್ಬನಾದರೂ ನನ್ನನ್ನು ಕರೆಯುವುದಿಲ್ಲ.


ಯೆಹೋವ ದೇವರೇ, ನಾವು ನಿಮ್ಮ ಕಡೆ ಹಿಂದಿರುಗುವಂತೆ, ನಮ್ಮನ್ನು ನಿಮ್ಮ ಕಡೆಗೆ ಪುನಃ ಸ್ಥಾಪಿಸಿಕೊಳ್ಳಿ. ನಮ್ಮ ದಿನಗಳನ್ನು ಹಿಂದಿನಂತೆಯೇ ನವೀಕರಿಸಿರಿ.


ನಾನು ಒಳ್ಳೆಯದಕ್ಕಾಗಿ ಅಲ್ಲ; ಕೆಟ್ಟದ್ದಕ್ಕಾಗಿ ಅವರ ಮೇಲೆ ಎಚ್ಚರವಾಗಿರುವೆನು. ಈಜಿಪ್ಟ್ ದೇಶದಲ್ಲಿರುವ ಯೆಹೂದದ ಮನುಷ್ಯರೆಲ್ಲರೂ ಮುಗಿದು ಅಂತ್ಯವಾಗುವವರೆಗೆ ಖಡ್ಗದಿಂದಲೂ ಬರದಿಂದಲೂ ನಾಶವಾಗುವರು.


ನಿನ್ನ ಹೆಸರನ್ನು ಕರೆಯುವವನೂ, ನಿನ್ನನ್ನು ಹಿಡಿದುಕೊಳ್ಳುವುದಕ್ಕೆ ಎಚ್ಚರಗೊಳ್ಳುವವನು ಒಬ್ಬನೂ ಇಲ್ಲ. ಏಕೆಂದರೆ ನಿನ್ನ ಮುಖವನ್ನು ನಮಗೆ ಮರೆಮಾಡಿದ್ದೀ. ನಮ್ಮ ಪಾಪಗಳಿಗಾಗಿ ನಮ್ಮನ್ನು ಬಿಟ್ಟುಬಿಟ್ಟಿದ್ದೀರಿ.


ಇಗೋ, ಹಿಂದಿನವುಗಳು ನೆರವೇರಿವೆ. ಹೊಸ ಸಂಗತಿಗಳನ್ನು ಪ್ರಕಟಿಸುತ್ತೇನೆ. ಅವು ಹುಟ್ಟುವುದಕ್ಕಿಂತ ಮುಂಚೆಯೇ ನಾನು ಅವುಗಳನ್ನು ನಿಮಗೆ ತಿಳಿಸುತ್ತೇನೆ.


ನಿಮ್ಮ ಕೈಗಳು ನನ್ನನ್ನು ನಿರ್ಮಿಸಿ ರೂಪಿಸಿದವು; ನಿಮ್ಮ ಆಜ್ಞೆಗಳನ್ನು ಕಲಿತುಕೊಳ್ಳಲು ನನಗೆ ಅರಿವನ್ನು ನೀಡಿರಿ.


ನಿಮ್ಮ ನಿಯಮದೊಳಗಿನ ಅದ್ಭುತಗಳನ್ನು ಕಾಣುವಂತೆ ನನ್ನ ಕಣ್ಣುಗಳನ್ನು ತೆರೆಯಿರಿ.


ನಮ್ಮ ರಕ್ಷಕ ಆಗಿರುವ ದೇವರೇ, ನಮ್ಮನ್ನು ಪುನಃ ಸ್ಥಾಪಿಸಿರಿ, ನಮ್ಮ ಮೇಲಿರುವ ನಿಮ್ಮ ಅಸಂತೋಷವನ್ನು ತೊಲಗಿಸಿರಿ.


ಆದರೂ ಯೆಹೋವ ದೇವರು ಇಂದಿನವರೆಗೂ ತಿಳಿದುಕೊಳ್ಳುವ ಹೃದಯವನ್ನೂ ನೋಡುವ ಕಣ್ಣುಗಳನ್ನೂ ಕೇಳುವ ಕಿವಿಗಳನ್ನೂ ನಿಮಗೆ ಕೊಡಲಿಲ್ಲವಲ್ಲ!


ಸಹಾಯಕ್ಕಾಗಿ ಈಜಿಪ್ಟನ್ನು ಸೇರಿ, ಅಶ್ವಬಲವನ್ನು, ಆಶ್ರಯಿಸುವವರಿಗೆ ಕಷ್ಟ! ಏಕೆಂದರೆ ರಥಗಳು ಬಹಳವೆಂದೂ, ಅವರ ನಂಬಿಕೆಯು ರಥಗಳ ಮೇಲೆ ಏಕೆಂದರೆ ಅವರು ಅನೇಕರು, ಆದರೆ ಇಸ್ರಾಯೇಲಿನ ಪರಿಶುದ್ಧನ ಮೇಲೆ ದೃಷ್ಟಿ ಇಡುವುದಿಲ್ಲ. ಇಲ್ಲವೆ ಯೆಹೋವ ದೇವರಿಂದ ಸಹಾಯವನ್ನು ಬಯಸುವುದಿಲ್ಲ.


‘ನಾನು ಈ ಸ್ಥಳದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಯೆಹೂದದ ಅರಸನು ಓದಿದ ಗ್ರಂಥದಲ್ಲಿ ಬರೆದಿರುವ ಪ್ರತಿಯೊಂದರಂತೆ ಕೇಡನ್ನು ಬರಮಾಡುವೆನು.


“ಆದರೂ ಯಾಕೋಬೇ, ನೀನು ನನ್ನನ್ನು ಪ್ರಾರ್ಥಿಸಲಿಲ್ಲ. ಇಸ್ರಾಯೇಲೇ, ನನ್ನ ವಿಷಯದಲ್ಲಿ ನೀನು ಬೇಸರಗೊಂಡಿದ್ದೀ!


ನಾವೆಲ್ಲರೂ ಅಶುದ್ಧನ ಹಾಗೆ ಇದ್ದೇವೆ. ನಮ್ಮ ನೀತಿ ಕಾರ್ಯಗಳೆಲ್ಲಾ ಮೈಲಿಗೆ ವಸ್ತ್ರದ ಹಾಗೆ ಇವೆ. ನಾವೆಲ್ಲರೂ ಎಲೆಯ ಹಾಗೆ ಒಣಗಿಹೋಗಿದ್ದೇವೆ. ನಮ್ಮ ಪಾಪಗಳು ಗಾಳಿಯಂತೆ ನಮ್ಮನ್ನು ಬಡಿದುಕೊಂಡು ಹೋಗಿವೆ.


ನಿನ್ನ ಮಿತ್ರರೆಲ್ಲರು ನಿನ್ನನ್ನು ಮರೆತುಬಿಟ್ಟಿದ್ದಾರೆ, ನಿನ್ನನ್ನು ಹುಡುಕುವುದಿಲ್ಲ. ನಿನ್ನ ಅಕ್ರಮಗಳು ಬಹಳವೂ, ನಿನ್ನ ಪಾಪಗಳು ಪ್ರಬಲವೂ ಆಗಿರುವುದರಿಂದ ಶತ್ರುವಿನ ಗಾಯದಿಂದಲೂ, ಕ್ರೂರನ ಶಿಕ್ಷೆಯಿಂದಲೂ ನಾನು ನಿನ್ನನ್ನು ಗಾಯಪಡಿಸಿದ್ದೇನೆ;


ನೀವು ಧೂಪ ಸುಟ್ಟು, ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿ, ಯೆಹೋವ ದೇವರ ಮಾತನ್ನು ಕೇಳದೆ, ದೈವನಿಯಮವನ್ನೂ, ದೈವತೀರ್ಪುಗಳನ್ನೂ, ದೈವಷರತ್ತುಗಳನ್ನೂ ಅನುಸರಿಸದೆ, ದೇವರಿಗೆ ವಿಧೇಯರಾಗದೆ ಇದ್ದುದರಿಂದಲೇ, ಈ ಕೇಡು ಈ ದಿನ ನಿಮಗೆ ಸಂಭವಿಸಿದೆ,” ಎಂದನು.


“ ‘ನೀನು ನಿನ್ನ ಯೌವನದ ದಿವಸಗಳನ್ನು ಜ್ಞಾಪಕಮಾಡಿಕೊಳ್ಳದೆ, ಈ ಸಂಗತಿಗಳಿಂದ ನೀನು ನನಗೆ ಬೇಸರಪಡಿಸಿದ್ದರಿಂದ, ನಾನು ಸಹ ನಿನ್ನ ದುರ್ಮಾರ್ಗದ ಫಲವನ್ನು ನಿನ್ನ ತಲೆಗೆ ಕಟ್ಟುವೆನು, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ನಿನ್ನ ಇತರ ಎಲ್ಲಾ ಅಸಹ್ಯವಾದವುಗಳ ಜೊತೆಗೆ, ಈ ಅಪವಿತ್ರತೆಯನ್ನು ನೀನು ಮಾಡಲಿಲ್ಲವೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು