ದಾನಿಯೇಲ 9:16 - ಕನ್ನಡ ಸಮಕಾಲಿಕ ಅನುವಾದ16 ಕರ್ತದೇವರೇ, ನಿಮ್ಮ ಎಲ್ಲಾ ನೀತಿಗಳ ಪ್ರಕಾರ ನಿಮ್ಮ ಕೋಪವನ್ನು, ನಿಮ್ಮ ಉಗ್ರತ್ವವನ್ನು ನಿಮ್ಮ ಪಟ್ಟಣವಾದ ಯೆರೂಸಲೇಮಿನಿಂದಲೂ ನಿಮ್ಮ ಪರಿಶುದ್ಧ ಪರ್ವತದಿಂದಲೂ ತಿರುಗಿಸಿಬಿಡಿರಿ. ನಮ್ಮ ಪಾಪಗಳ ನಿಮಿತ್ತದಿಂದಲೂ, ನಮ್ಮ ಪಿತೃಗಳ ಅಕ್ರಮಗಳ ನಿಮಿತ್ತದಿಂದಲೂ ಯೆರೂಸಲೇಮ್ ಮತ್ತು ನಿಮ್ಮ ಜನರು ನೆರೆಹೊರೆಯವರೆಲ್ಲರ ನಿಂದೆಗೆ ಗುರಿಯಾಗಿವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಕರ್ತನೇ, ನಿನ್ನ ಸಮಸ್ತ ಧರ್ಮಕಾರ್ಯಗಳಿಗೆ ಅನುಸಾರವಾಗಿ ನಿನ್ನ ಪಟ್ಟಣವೂ ಮತ್ತು ನಿನ್ನ ಪವಿತ್ರ ಪರ್ವತವೂ ಆದ ಯೆರೂಸಲೇಮಿನ ಮೇಲೆ ನಿನಗಿರುವ ಕೋಪವನ್ನು, ನಿನ್ನ ರೋಷಾಗ್ನಿಯನ್ನು ದಯಮಾಡಿ ತೊಲಗಿಸಿಬಿಡು; ನಮ್ಮ ಮತ್ತು ನಮ್ಮ ಪೂರ್ವಿಕರ ಪಾಪಾಪರಾಧಗಳ ನಿಮಿತ್ತ ಯೆರೂಸಲೇಮೂ, ನಿನ್ನ ಜನವೂ ನೆರೆಹೊರೆಯವರೆಲ್ಲರ ನಿಂದೆಗೆ ಗುರಿಯಾಗಿವೆಯಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಸರ್ವೇಶ್ವರಾ, ನಿಮ್ಮ ಸಮಸ್ತ ಧರ್ಮಕಾರ್ಯಗಳಿಗೆ ಅನುಸಾರವಾಗಿ ನಿಮ್ಮ ನಗರವೂ ನಿಮ್ಮ ಪವಿತ್ರ ಪರ್ವತವೂ ಆದ ಜೆರುಸಲೇಮ್ ಮೇಲೆ ನಿಮಗಿರುವ ಕೋಪವನ್ನೂ ರೋಷಾಗ್ನಿಯನ್ನೂ ದಯಮಾಡಿ ತೊಲಗಿಸಿಬಿಡಿ. ನಮ್ಮ ಮತ್ತು ನಮ್ಮ ಪೂರ್ವಜರ ಪಾಪಾಪರಾಧಗಳ ನಿಮಿತ್ತ ಜೆರುಸಲೇಮ್ ಮತ್ತು ನಿಮ್ಮ ಜನತೆ ನೆರೆಹೊರೆಯವರೆಲ್ಲರ ನಿಂದೆಗೆ ಗುರಿಯಾಗಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಕರ್ತನೇ, ನಿನ್ನ ಸಮಸ್ತ ಧರ್ಮಕಾರ್ಯಗಳಿಗೆ ಅನುಸಾರವಾಗಿ ನಿನ್ನ ಪಟ್ಟಣವೂ ನಿನ್ನ ಪವಿತ್ರಪರ್ವತವೂ ಆದ ಯೆರೂಸಲೇವಿುನ ಮೇಲಣ ನಿನ್ನ ಕೋಪವನ್ನು, ನಿನ್ನ ರೋಷಾಗ್ನಿಯನ್ನು ದಯಮಾಡಿ ತೊಲಗಿಸಿಬಿಡು; ನಮ್ಮ ಮತ್ತು ನಮ್ಮ ಪಿತೃಗಳ ಪಾಪಾಪರಾಧಗಳ ನಿವಿುತ್ತ ಯೆರೂಸಲೇಮೂ ನಿನ್ನ ಜನವೂ ನೆರೆಹೊರೆಯವರೆಲ್ಲರ ನಿಂದೆಗೆ ಗುರಿಯಾಗಿವೆಯಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಯೆಹೋವನೇ, ನಾವು ಮತ್ತು ನಮ್ಮ ಪೂರ್ವಿಕರು ನಿನಗೆ ಪಾಪಮಾಡಿದ್ದರಿಂದ ಇದೆಲ್ಲಾ ಆಗುತ್ತಿದೆ. ಜೆರುಸಲೇಮಿನ ಮೇಲೆ ಕೋಪ ಮಾಡುವದನ್ನು ದಯವಿಟ್ಟು ನಿಲ್ಲಿಸು. ಜೆರುಸಲೇಮ್ ನಗರವು ನಿನ್ನ ಪವಿತ್ರವಾದ ಬೆಟ್ಟದ ಮೇಲೆ ಇದೆ. ನೀನು ಸರಿಯಾದದ್ದನ್ನು ಮಾಡುವೆ. ಆದ್ದರಿಂದ ಜೆರುಸಲೇಮಿನ ಮೇಲೆ ಕೋಪಗೊಳ್ಳುವದನ್ನು ದಯವಿಟ್ಟು ನಿಲ್ಲಿಸಿಬಿಡು. ನಮ್ಮ ಸುತ್ತಮುತ್ತಲಿನ ಜನರೆಲ್ಲ ನಮ್ಮನ್ನು ನಿಂದಿಸುವರು ಮತ್ತು ನಮ್ಮ ಜನರನ್ನು ಗೇಲಿ ಮಾಡುವರು. ಅಧ್ಯಾಯವನ್ನು ನೋಡಿ |