ದಾನಿಯೇಲ 9:2 - ಕನ್ನಡ ಸಮಕಾಲಿಕ ಅನುವಾದ2 ದಾನಿಯೇಲನಾದ ನಾನು ಪವಿತ್ರ ಗ್ರಂಥಗಳನ್ನು ಪರೀಕ್ಷಿಸಿ, ಯೆಹೋವ ದೇವರ ಪ್ರವಾದಿ ಯೆರೆಮೀಯನಿಗೆ ದಯಪಾಲಿಸಿದ ವಾಕ್ಯಾನುಸಾರ, ಯೆರೂಸಲೇಮ್ ಪಾಳುಬಿದ್ದಿರಬೇಕಾದ ಪೂರ್ಣ ಕಾಲಾವಧಿ ಎಪ್ಪತ್ತು ವರ್ಷಗಳೆಂದು ತಿಳಿದುಕೊಂಡೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ದಾನಿಯೇಲನಾದ ನಾನು ಪವಿತ್ರಗ್ರಂಥಗಳನ್ನು ಪರೀಕ್ಷಿಸಿ ಯೆಹೋವನು ಪ್ರವಾದಿಯಾದ ಯೆರೆಮೀಯನಿಗೆ ದಯಪಾಲಿಸಿದ ವಾಕ್ಯಾನುಸಾರ ಯೆರೂಸಲೇಮ್ ಹಾಳು ಬಿದ್ದಿರಬೇಕಾದ ಪೂರ್ಣಕಾಲದ ವರ್ಷಗಳ ಸಂಖ್ಯೆ ಎಪ್ಪತ್ತೆಂದು ತಿಳಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ದಾನಿಯೇಲನಾದ ನಾನು ಪವಿತ್ರಗ್ರಂಥಗಳನ್ನು ಪರೀಕ್ಷಿಸಿ, ಸರ್ವೇಶ್ವರಸ್ವಾಮಿ ಪ್ರವಾದಿ ಯೆರೆಮೀಯನಿಗೆ ದಯಪಾಲಿಸಿದ ವಾಕ್ಯಾನುಸಾರ ಜೆರುಸಲೇಮ್ ಪಾಳುಬಿದ್ದಿರಬೇಕಾದ ಪೂರ್ಣಕಾಲಾವಧಿ ಎಪ್ಪತ್ತು ವರ್ಷಗಳೆಂದು ತಿಳಿದುಕೊಂಡೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ದಾನಿಯೇಲನಾದ ನಾನು ಶಾಸ್ತ್ರಗಳನ್ನು ಪರೀಕ್ಷಿಸಿ ಯೆಹೋವನು ಪ್ರವಾದಿಯಾದ ಯೆರೆಮೀಯನಿಗೆ ದಯಪಾಲಿಸಿದ ವಾಕ್ಯಾನುಸಾರ ಯೆರೂಸಲೇಮು ಹಾಳುಬಿದ್ದಿರಬೇಕಾದ ಪೂರ್ಣಕಾಲದ ವರುಷಗಳ ಸಂಖ್ಯೆ ಎಪ್ಪತ್ತೆಂದು ತಿಳಿದು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ದಾರ್ಯಾವೆಷನ ಆಳ್ವಿಕೆಯ ಮೊದಲನೆಯ ವರ್ಷ ದಾನಿಯೇಲನೆಂಬ ನಾನು ಕೆಲವು ಧರ್ಮಗ್ರಂಥಗಳನ್ನು ಓದುತ್ತಿದ್ದೆ. ಎಪ್ಪತ್ತು ವರ್ಷಗಳ ತರುವಾಯ ಜೆರುಸಲೇಮಿನ ಪುನರ್ನಿರ್ಮಾಣವಾಗುವದೆಂದು ಯೆಹೋವನು ಯೆರೆಮೀಯನಿಗೆ ಹೇಳಿದ್ದು ನನಗೆ ಈ ಧರ್ಮಗ್ರಂಥಗಳಿಂದ ತಿಳಿಯಿತು. ಅಧ್ಯಾಯವನ್ನು ನೋಡಿ |