ದಾನಿಯೇಲ 9:20 - ಕನ್ನಡ ಸಮಕಾಲಿಕ ಅನುವಾದ20 ನಾನು ಮಾತಾಡುತ್ತಾ, ಪ್ರಾರ್ಥನೆ ಮಾಡುತ್ತಾ ನನ್ನ ಪಾಪವನ್ನೂ, ನನ್ನ ಜನರಾದ ಇಸ್ರಾಯೇಲರ ಪಾಪವನ್ನೂ ಅರಿಕೆಮಾಡುತ್ತಾ, ನನ್ನ ದೇವರಾದ ಯೆಹೋವ ದೇವರ ಮುಂದೆ ಅವರ ಪರಿಶುದ್ಧ ಪರ್ವತಕ್ಕೋಸ್ಕರವಾಗಿ, ವಿಜ್ಞಾಪಿಸುತ್ತಿರಲಾಗಿ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ನಾನು ಬಾಯಿಬಿಟ್ಟು ಬೇಡಿಕೊಂಡು ನನ್ನ ಮತ್ತು ನನ್ನ ಜನರಾದ ಇಸ್ರಾಯೇಲರ ಪಾಪವನ್ನು ಅರಿಕೆ ಮಾಡುತ್ತಾ ನನ್ನ ದೇವರ ಪವಿತ್ರ ಪರ್ವತದ ವಿಷಯವಾಗಿ ನನ್ನ ದೇವರಾದ ಯೆಹೋವನಿಗೆ ಬಿನ್ನವಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ನಾನು ಬಾಯಿಬಿಟ್ಟು ಬೇಡಿಕೊಂಡೆ. ನನ್ನ ಮತ್ತು ನನ್ನ ಜನರಾದ ಇಸ್ರಯೇಲರ ಪಾಪವನ್ನು ಅರಿಕೆಮಾಡುತ್ತಾ ನನ್ನ ದೇವರ ಪವಿತ್ರ ಪರ್ವತದ ವಿಷಯವಾಗಿ ದೇವರಾದ ಸರ್ವೇಶ್ವರನಿಗೆ ಬಿನ್ನವಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ನಾನು ಬಾಯಿಬಿಟ್ಟು, ಬೇಡಿಕೊಂಡು ನನ್ನ ಮತ್ತು ನನ್ನ ಜನರಾದ ಇಸ್ರಾಯೇಲ್ಯರ ಪಾಪವನ್ನು ಅರಿಕೆಮಾಡುತ್ತಾ ನನ್ನ ದೇವರ ಪವಿತ್ರಪರ್ವತದ ವಿಷಯವಾಗಿ ನನ್ನ ದೇವರಾದ ಯೆಹೋವನಿಗೆ ಬಿನ್ನವಿಸಿ ಪ್ರಾರ್ಥಿಸುತ್ತಿರುವಾಗಲೇ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ನಾನು ಪ್ರಾರ್ಥನೆಯಲ್ಲಿ ನನ್ನ ಪಾಪಗಳ ಬಗ್ಗೆ ಮತ್ತು ಇಸ್ರೇಲರ ಪಾಪಗಳ ಬಗ್ಗೆ ಹೇಳಿಕೊಂಡೆ. ನಾನು ನನ್ನ ದೇವರಾದ ಯೆಹೋವನ ಪವಿತ್ರ ಪರ್ವತಕ್ಕಾಗಿ ಪ್ರಾರ್ಥನೆ ಮಾಡುತ್ತಿದ್ದೆ. ಅಧ್ಯಾಯವನ್ನು ನೋಡಿ |