ದಾನಿಯೇಲ 9:24 - ಕನ್ನಡ ಸಮಕಾಲಿಕ ಅನುವಾದ24 “ಅಕ್ರಮಗಳನ್ನು ಮುಗಿಸುವುದಕ್ಕೂ, ಪಾಪಗಳನ್ನು ಮುಚ್ಚುವುದಕ್ಕೂ, ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡುವುದಕ್ಕೂ, ನಿತ್ಯವಾದ ನೀತಿಯನ್ನು ಬರಮಾಡುವುದಕ್ಕೂ, ಆ ದರ್ಶನಕ್ಕೂ, ಪ್ರವಾದಿಯ ನುಡಿಗೆ ಮುದ್ರೆಹಾಕುವುದಕ್ಕೂ, ಮಹಾಪರಿಶುದ್ಧ ಸ್ಥಳವನ್ನು ಅಭಿಷೇಕ ಮಾಡುವುದಕ್ಕೂ ನಿನ್ನ ಜನರ ಮೇಲೆಯೂ, ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಅಧರ್ಮವನ್ನು ಕೊನೆಗಾಣಿಸುವುದು, ಪಾಪಗಳನ್ನು ತೀರಿಸುವುದು, ಅಪರಾಧವನ್ನು ನಿವಾರಿಸುವುದು, ಸನಾತನ ಧರ್ಮವನ್ನು ಸ್ಥಾಪಿಸುವುದು, ಕನಸನ್ನೂ ಮತ್ತು ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವುದಕ್ಕೆ, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವುದು, ಇವೆಲ್ಲಾ ನೆರವೇರುವುದಕ್ಕೆ ಮೊದಲು ನಿನ್ನ ಜನಕ್ಕೂ, ನಿನ್ನ ಪರಿಶುದ್ಧ ಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 “ಅಧರ್ಮವನ್ನು ಕೊನೆಗಾಣಿಸುವುದಕ್ಕೆ ಪಾಪಗಳನ್ನು ತೀರಿಸುವುದಕ್ಕೆ, ಅಪರಾಧವನ್ನು ನಿವಾರಿಸುವುದಕ್ಕೆ, ಸನಾತನ ಧರ್ಮವನ್ನು ಸ್ಥಾಪಿಸುವುದಕ್ಕೆ, ದರ್ಶನವನ್ನೂ ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥ ಮಾಡುವುದಕ್ಕೆ, ಅತಿಪರಿಶುದ್ಧವಾದುದನ್ನು ಅಭಿಷೇಕಿಸುವುದಕ್ಕೆ ನಿನ್ನ ಜನಕ್ಕೂ ನಿನ್ನ ಪವಿತ್ರನಗರಕ್ಕೂ ಏಳೆಪ್ಪತ್ತು ವರ್ಷಗಳು ಕಳೆಯಬೇಕೆಂದು ನಿಷ್ಕರ್ಷೆಯಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಅಧರ್ಮವನ್ನು ಕೊನೆಗಾಣಿಸುವದು, ಪಾಪಗಳನ್ನು ತೀರಿಸುವದು, ಅಪರಾಧವನ್ನು ನಿವಾರಿಸುವದು, ಸನಾತನ ಧರ್ಮವನ್ನು ಸ್ಥಾಪಿಸುವದು, ಕನಸನ್ನೂ ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವದು, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವದು, ಇವೆಲ್ಲಾ ನೆರವೇರುವದಕ್ಕೆ ಮೊದಲು ನಿನ್ನ ಜನಕ್ಕೂ ನಿನ್ನ ಪರಿಶುದ್ಧಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 “ದಾನಿಯೇಲನೇ, ನಿಮ್ಮ ಜನರಿಗೆ ಮತ್ತು ನಿಮ್ಮ ಪವಿತ್ರ ನಗರಕ್ಕೆ ದೇವರು ಎಪ್ಪತ್ತು ವಾರಗಳ ಅವಧಿಯನ್ನು ಗೊತ್ತುಮಾಡಿದ್ದಾನೆ. ಅಧರ್ಮವನ್ನು ಕೊನೆಗಾಣಿಸುವದು, ಪಾಪಗಳನ್ನು ತಡೆಯುವುದು, ಅಪರಾಧಗಳನ್ನು ನಿವಾರಿಸುವುದು, ಜನರನ್ನು ಪರಿಶುದ್ಧಗೊಳಿಸುವುದು, ಎಂದೆಂದಿಗೂ ಉಳಿಯುವ ಧರ್ಮವನ್ನು ಸ್ಥಾಪಿಸುವುದು, ದರ್ಶನಗಳಿಗೆ ಮತ್ತು ಪ್ರವಾದಿಯ ನುಡಿಗಳಿಗೆ ಮುದ್ರೆಹಾಕಿ ಕಾರ್ಯರೂಪಕ್ಕೆ ತರುವುದು, ಪವಿತ್ರ ಸ್ಥಳವನ್ನು ಪ್ರತಿಷ್ಠಿಸುವುದು, ಇವೆಲ್ಲವುಗಳಿಗಾಗಿ ಈ ಎಪ್ಪತ್ತು ವಾರಗಳ ಅವಧಿಯನ್ನು ಗೊತ್ತು ಮಾಡಲಾಗಿದೆ. ಅಧ್ಯಾಯವನ್ನು ನೋಡಿ |