Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 9:4 - ಕನ್ನಡ ಸಮಕಾಲಿಕ ಅನುವಾದ

4 ನಾನು ನನ್ನ ದೇವರಾದ ಯೆಹೋವ ದೇವರಿಗೆ ಪ್ರಾರ್ಥಿಸಿ, ಅರಿಕೆಮಾಡಿದೆನು: “ಕರ್ತನೇ, ಮಹೋನ್ನತ ಮತ್ತು ಅದ್ಭುತ ದೇವರೇ, ನಿಮ್ಮನ್ನು ಪ್ರೀತಿಮಾಡಿ, ನಿಮ್ಮ ಆಜ್ಞೆಗಳನ್ನು ಕೈಗೊಂಡು ನಡೆಯುವವರಿಗೆ ಒಡಂಬಡಿಕೆಯ ಪ್ರೀತಿಯನ್ನೂ ಇಟ್ಟು ನೆರವೇರಿಸುವವರೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನನ್ನ ದೇವರಾದ ಯೆಹೋವನಿಗೆ ಹೀಗೆ ಪಾಪವನ್ನು ಅರಿಕೆ ಮಾಡಿ ಬಿನ್ನವಿಸಿದೆನು, “ಓ ಕರ್ತನೇ, ಮಹೋನ್ನತನೂ, ಭಯಂಕರನೂ ಆದ ದೇವರೇ, ನಿನ್ನನ್ನು ಪ್ರೀತಿಸಿ ನಿನ್ನ ಆಜ್ಞೆಗಳನ್ನು ಅನುಸರಿಸುವವರಿಗೆ ಮಾಡಿದ ಕೃಪಾ ವಾಗ್ದಾನಗಳನ್ನು ನೆರವೇರಿಸುವವನೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಪಾಪವನ್ನು ಅರಿಕೆಮಾಡಿ ನನ್ನ ದೇವರಾದ ಸರ್ವೇಶ್ವರನಿಗೆ ಹೀಗೆಂದು ಬಿನ್ನವಿಸಿದೆ: “ಹೇ ಸರ್ವೇಶ್ವರಾ, ಮಹೋನ್ನತರೂ ಭಯಭಕ್ತಿಗೆ ಪಾತ್ರರೂ ಆದ ದೇವರೇ, ನಿಮ್ಮನ್ನು ಪ್ರೀತಿಸಿ, ನಿಮ್ಮ ಆಜ್ಞೆಗಳನ್ನು ಅನುಸರಿಸುವವರಿಗೆ ನೀವು ಮಾಡಿದ ವಾಗ್ದಾನಗಳನ್ನು ಪ್ರೀತಿಯಿಂದ ನೆರವೇರಿಸುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನನ್ನ ದೇವರಾದ ಯೆಹೋವನಿಗೆ ಹೀಗೆ ಪಾಪವನ್ನರಿಕೆ ಮಾಡಿ ಬಿನ್ನವಿಸಿದೆನು - ಓ ಕರ್ತನೇ, ಮಹೋನ್ನತನೂ ಭಯಂಕರನೂ ಆದ ದೇವರೇ, ನಿನ್ನನ್ನು ಪ್ರೀತಿಸಿ ನಿನ್ನ ಆಜ್ಞೆಗಳನ್ನು ಅನುಸರಿಸುವವರಿಗೆ ಮಾಡಿದ ಕೃಪಾವಾಗ್ದಾನಗಳನ್ನು ನೆರವೇರಿಸುವವನೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಾನು ಯೆಹೋವನಾದ ನನ್ನ ದೇವರನ್ನು ಪ್ರಾರ್ಥಿಸಿದೆ. ನಾನು ನನ್ನ ಎಲ್ಲ ಪಾಪಗಳ ಬಗ್ಗೆ ಆತನಿಗೆ ಹೇಳಿದೆ. ನಾನು, “ಯೆಹೋವನೇ, ನೀನು ಭಯಂಕರನಾಗಿರುವೆ. ನಿನ್ನನ್ನು ಪ್ರೀತಿಸಿ ನಿನ್ನ ಆಜ್ಞೆಗಳನ್ನು ಅನುಸರಿಸುವವರಿಗೆ, ಮಾಡಿದ ಪ್ರೀತಿಯ ಮತ್ತು ಕರುಣೆಯ ವಾಗ್ದಾನಗಳನ್ನು ನೀನು ನೆರವೇರಿಸುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 9:4
30 ತಿಳಿವುಗಳ ಹೋಲಿಕೆ  

ದೇವರನ್ನು ಪ್ರೀತಿಸಿ ದೇವರ ಉದ್ದೇಶಕ್ಕೆ ಅನುಸಾರವಾಗಿ ಕರೆಹೊಂದಿದವರಿಗೆ ಸಕಲವನ್ನು ಒಳ್ಳೆಯದಕ್ಕಾಗಿಯೇ ದೇವರು ಮಾಡುವರು, ಎಂದು ನಮಗೆ ಗೊತ್ತಿದೆ.


ನನ್ನನ್ನು ಪ್ರೀತಿಸಿ, ನನ್ನ ಆಜ್ಞೆಗಳನ್ನು ಕೈಗೊಳ್ಳುವವರಿಗೆ, ಸಾವಿರ ತಲೆಗಳವರೆಗೆ ಪ್ರೀತಿ ತೋರಿಸುತ್ತೇನೆ.


ಆದರೆ ನನ್ನನ್ನು ಪ್ರೀತಿಸಿ, ನನ್ನ ಆಜ್ಞೆಗಳನ್ನು ಕೈಗೊಳ್ಳುವವರಿಗೆ, ಸಾವಿರ ತಲೆಗಳವರೆಗೆ ಪ್ರೀತಿ ತೋರಿಸುತ್ತೇನೆ.


ನನ್ನ ಹೆಸರಿನಿಂದ ಕರೆಯಲಾದ ನನ್ನ ಜನರು ತಮ್ಮನ್ನು ತಗ್ಗಿಸಿಕೊಂಡು ಪ್ರಾರ್ಥನೆಮಾಡಿ, ನನ್ನನ್ನು ಹುಡುಕಿ ತಮ್ಮ ದುರ್ಮಾರ್ಗಗಳಿಂದ ತಿರುಗಿದರೆ, ಆಗ ನಾನು ಪರಲೋಕದಿಂದ ಕೇಳಿ ಅವರ ಪಾಪವನ್ನು ಮನ್ನಿಸಿ, ಅವರ ದೇಶವನ್ನು ಗುಣ ಮಾಡುವೆನು.


“ಆದಕಾರಣ ನಮ್ಮ ದೇವರೇ, ಪ್ರೀತಿಯ ಒಡಂಬಡಿಕೆಯನ್ನು ಕೈಗೊಳ್ಳುವಂಥ ಮಹಾ ಪರಾಕ್ರಮವುಳ್ಳ ಭಯಭಕ್ತಿಗೆ ಕಾರಣರಾದ ದೇವರೇ, ಅಸ್ಸೀರಿಯದ ಅರಸರ ಕಾಲ ಮೊದಲ್ಗೊಂಡು ಇಂದಿನವರೆಗೆ ನಮ್ಮ ಮೇಲೆಯೂ, ನಮ್ಮ ಅರಸರ ಮೇಲೆಯೂ, ನಮ್ಮ ಪ್ರಧಾನರ ಮೇಲೆಯೂ, ನಮ್ಮ ಯಾಜಕರ ಮೇಲೆಯೂ, ನಮ್ಮ ಪ್ರವಾದಿಗಳ ಮೇಲೆಯೂ, ನಮ್ಮ ಪಿತೃಗಳ ಮೇಲೆಯೂ, ನಿಮ್ಮ ಸಮಸ್ತ ಜನರ ಮೇಲೆಯೂ ಬಂದ ಇವೆಲ್ಲಾ ಕಷ್ಟಸಂಕಟಗಳು ನಿಮಗೆ ಅಲ್ಪವಾಗಿ ಕಾಣದಿರಲಿ.


ಹೀಗಿರುವುದರಿಂದ ನಿಮ್ಮ ದೇವರಾದ ಯೆಹೋವ ದೇವರು ಒಬ್ಬರೇ ದೇವರು; ಅವರೇ ನಂಬಿಗಸ್ತರಾದ ದೇವರು; ತಮ್ಮನ್ನು ಪ್ರೀತಿಸಿ, ತಮ್ಮ ಆಜ್ಞೆಗಳನ್ನು ಕೈಗೊಳ್ಳುವವರಿಗೆ, ಅವರು ತಮ್ಮ ಒಡಂಬಡಿಕೆಯ ಪ್ರೀತಿಯನ್ನು ಸಾವಿರ ತಲೆಗಳವರೆಗೂ ತೋರಿಸುವರು.


ಹೀಗೆ ಪ್ರಾರ್ಥಿಸಿದನು: “ಇಸ್ರಾಯೇಲಿನ ದೇವರಾದ ಯೆಹೋವ ದೇವರೇ, ಮೇಲಿರುವ ಆಕಾಶದಲ್ಲಾದರೂ, ಕೆಳಗಿರುವ ಭೂಮಿಯಲ್ಲಾದರೂ ನಿಮ್ಮ ಹಾಗೆ ದೇವರು ಯಾರೂ ಇಲ್ಲ. ಸಂಪೂರ್ಣ ಹೃದಯದಿಂದ ನಿಮಗೆ ನಡೆದುಕೊಳ್ಳುವಂಥ ಸೇವಕರ ಬಗ್ಗೆ ನೀವು ನಿಮ್ಮ ಒಡಂಬಡಿಕೆಯನ್ನು ನೆರವೇರಿಸಿ ಕೃಪೆಯನ್ನು ತೋರಿಸುವವರೇ,


ನನ್ನ ಪಾಪವನ್ನು ನಿಮಗೆ ತಿಳಿಸಿ, ನನ್ನ ಅನ್ಯಾಯವನ್ನು ಮರೆಮಾಡದೆ, “ನನ್ನ ಉಲ್ಲಂಘನೆಗಳನ್ನು ಯೆಹೋವ ದೇವರಿಗೆ ಅರಿಕೆ ಮಾಡುವೆನು,” ಎಂದು ಹೇಳಿದೆನು; ಆಗ, ನೀವು ನನ್ನ ಪಾಪದ ಅಪರಾಧವನ್ನು ಪರಿಹರಿಸಿದಿರಿ.


ಅವರಿಗೆ ಹೆದರಬೇಡಿರಿ. ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ಭಯಭಕ್ತಿಗೆ ಯೋಗ್ಯರಾದ ಮಹಾ ದೇವರಾಗಿ ನಿಮ್ಮ ಮಧ್ಯದಲ್ಲಿದ್ದಾರೆ.


ನನ್ನ ಪ್ರಿಯರೇ, ಕೇಳಿರಿ, ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರನ್ನಾಗಿಯೂ ತಮ್ಮನ್ನು ಪ್ರೀತಿಸುವವರಿಗೆ ತಾವು ವಾಗ್ದಾನಮಾಡಿದ ರಾಜ್ಯಕ್ಕೆ ಬಾಧ್ಯರನ್ನಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?


ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು. ಅವನು ಪರಿಶೋಧಿತನಾದ ಮೇಲೆ ಕರ್ತದೇವರು ತಮ್ಮನ್ನು ಪ್ರೀತಿಸುವವರಿಗೆ ವಾಗ್ದಾನಮಾಡಿದ ಜೀವದ ಕಿರೀಟವನ್ನು ಹೊಂದುವನು.


ನಮ್ಮ ಪಿತೃಗಳಿಗೆ ಕರುಣೆ ತೋರಿಸುವಂತೆಯೂ ನಮ್ಮ ಪಿತೃವಾದ ಅಬ್ರಹಾಮನಿಗೆ ಆಣೆಯಿಟ್ಟು ಪ್ರಮಾಣ ಮಾಡಿದಂತೆಯೂ ತಮ್ಮ ಪವಿತ್ರ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡವನಾಗಿಯೂ


ನಿನ್ನ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ದ್ರೋಹ ಮಾಡಿ, ಒಂದೊಂದು ಹಸುರು ಮರದ ಕೆಳಗೆ ನಿನ್ನ ಮಾರ್ಗಗಳನ್ನು ಅನ್ಯ ದೇವರುಗಳಿಗೆ ಚದರಿಸಿ, ನನ್ನ ಶಬ್ದಕ್ಕೆ ಕಿವಿಗೊಡಲಿಲ್ಲವೆಂಬ ನಿನ್ನ ಅಕ್ರಮವನ್ನು ಮಾತ್ರ ಅರಿಕೆ ಮಾಡು,’ ” ಎಂದು ಯೆಹೋವ ದೇವರು ಹೇಳುತ್ತಾರೆ.


ನಾನು ನನ್ನ ಪ್ರಾರ್ಥನೆಯಲ್ಲಿ: “ಪರಲೋಕ ದೇವರಾದ ಯೆಹೋವ ದೇವರೇ, ನೀವು ಮಹೋನ್ನತರೂ ಭಯಭಕ್ತಿಗೆ ಪಾತ್ರರೂ ಆಗಿದ್ದೀರಿ. ನಿಮ್ಮನ್ನು ಪ್ರೀತಿಸಿ ನಿಮ್ಮ ಆಜ್ಞೆಗಳಿಗೆ ವಿಧೇಯರಾಗಿರುವವರೊಂದಿಗೆ, ನಿಮ್ಮ ಪ್ರೀತಿಯ ಒಡಂಬಡಿಕೆಯನ್ನು ನೆರವೇರಿಸುವವರೇ, ಭಯಭಕ್ತಿಗೆ ಪಾತ್ರರಾದ ದೇವರೇ,


ಎಜ್ರನು ಪ್ರಾರ್ಥಿಸಿ ಅರಿಕೆಮಾಡಿ ಅತ್ತು ದೇವರ ಆಲಯದ ಮುಂದೆ ಅಡ್ಡಬಿದ್ದ ತರುವಾಯ ಇಸ್ರಾಯೇಲರಲ್ಲಿ ಸ್ತ್ರೀಯರೂ, ಪುರುಷರೂ, ಮಕ್ಕಳು ಮಹಾಕೂಟವಾಗಿ ಅವನ ಬಳಿಯಲ್ಲಿ ಕೂಡಿಕೊಂಡು ಬಂದರು. ಜನರು ಬಹಳವಾಗಿ ಅತ್ತರು.


ಶಾಸನಕ್ಕೆ ರುಜು ಹಾಕಿದ್ದಾಯಿತೆಂದು ದಾನಿಯೇಲನಿಗೆ ತಿಳಿದಾಗ, ಅವನು ತನ್ನ ಮನೆಗೆ ಹೋದನು. ಅವನ ಕೋಣೆಯಲ್ಲಿ ಕಿಟಕಿಗಳು ಯೆರೂಸಲೇಮಿಗೆ ಎದುರಾಗಿ ತೆರೆದಿರಲು, ಅವನು ಮೊದಲು ಮಾಡುತ್ತಿದ್ದ ಪ್ರಕಾರವೇ ದಿನಕ್ಕೆ ಮೂರು ಸಾರಿ ಮೊಣಕಾಲೂರಿ ತನ್ನ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆಯನ್ನೂ, ಸ್ತೋತ್ರವನ್ನೂ ಸಲ್ಲಿಸಿದನು.


ಆದ್ದರಿಂದ ನಾನು ಉಪವಾಸದಿಂದ ಗೋಣಿತಟ್ಟನ್ನು ಸುತ್ತಿಕೊಂಡು, ಬೂದಿಯನ್ನು ಬಳಿದುಕೊಂಡು, ಪ್ರಾರ್ಥನೆಗಳಿಂದ ಮತ್ತು ವಿಜ್ಞಾಪನೆಗಳಿಂದ ಕರ್ತರಾದ ದೇವರ ಕಡೆಗೆ ನನ್ನ ಮುಖವನ್ನು ತಿರುಗಿಸಿದೆನು.


ನೀವು ಈ ನ್ಯಾಯಗಳನ್ನು ಕೇಳಿ ಕಾಪಾಡಿ ನಡೆದುಕೊಂಡರೆ, ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಒಡಂಬಡಿಕೆಯನ್ನೂ, ಕರುಣೆಯನ್ನೂ ನಿಮಗೋಸ್ಕರ ನೆರವೇರಿಸುವರು.


ಅವರು ಅದರಲ್ಲಿ ಸೇರಿ ಅದನ್ನು ಸ್ವಾಧೀನಪಡಿಸಿಕೊಂಡರು. ಆದರೆ ಅವರು ನಿಮ್ಮ ಮಾತಿಗೆ ಕಿವಿಗೊಡಲಿಲ್ಲ. ನಿಮ್ಮ ನಿಯಮದಲ್ಲಿ ನಡೆದುಕೊಳ್ಳಲಿಲ್ಲ. ಮಾಡಬೇಕೆಂದು ನೀವು ಅವರಿಗೆ ಆಜ್ಞಾಪಿಸಿದ್ದನ್ನೆಲ್ಲಾ ಮಾಡಲಿಲ್ಲ. ಆದ್ದರಿಂದ ಈ ಕೇಡನ್ನೆಲ್ಲಾ ಅವರಿಗೆ ಸಂಭವಿಸುವಂತೆ ಮಾಡಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು